ಬೆಂ.ಗ್ರಾ.ಜಿಲ್ಲೆ: ದೇವನಹಳ್ಳಿ ತಾಲ್ಲೂಕಿನ ಕನ್ನಮಂಗಲ ಗ್ರಾಮ ಪಂಚಾಯಿತಿಗೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (National Human Rights) ಪಂಚಾಯತ್ ರಾಜ್ ಹಾಗೂ ಸ್ಥಳೀಯ ಸರ್ಕಾರದ ವಿಶೇಷ ಮಾನಿಟರ್ ಆಗಿರುವ ಉಮಾಕಾಂತ್ ಅವರು ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶಿವಕುಮಾರ್ ಹಾಗೂ ದೇವನಹಳ್ಳಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಾಥಗೌಡ ಇವರ ನೇತೃತ್ವದಲ್ಲಿ ಸ್ಥಳೀಯ ಸರ್ಕಾರಗಳ ಆಡಳಿತ ವೈಖರಿ, ಯೋಜನೆಗಳ ಅನುಷ್ಠಾನ, ಸ್ಥಳೀಯ ಸರ್ಕಾರದ ಮುಖೇನ ಸಂವಿಧಾನದ ಧೇಯೋದ್ದೇಶಗಳನ್ನು ಸಾಕಾರಗೊಳಿಸುವಲ್ಲಿ ಎದುರಾಗುತ್ತಿರುವ ಸವಾಲುಗಳು ಹಾಗೂ ಇತ್ಯಾದಿಗಳ ಕುರಿತು ಅಧ್ಯಯನವನ್ನು ನಡೆಸಿದರು.
ಈ ವೇಳೆ ಬೆಂಗಳೂರು ನಗರ ಯೋಜನಾ ನಿರ್ದೇಶಕರಾದ ಮೋಹನ್ ಕುಮಾರ್, ನೋಮೇಶ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್, ಗ್ರಾಮ ಪಂಚಾಯತ್ ಕಾರ್ಯದರ್ಶಿ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.