ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ (IPL) ಕ್ರಿಕೆಟ್ ಟೂರ್ನಿಯ ಪಂದ್ಯಾವಳಿ ವೀಕ್ಷಣೆಗೆ ಟಿಕೆಟ್ ಖರೀದಿಸುವ ಸಂದರ್ಭದಲ್ಲಿ ನಕಲಿ ಲಿಂಕ್ಗಳ ಬಗ್ಗೆ ಕ್ರಿಕೆಟ್ ಪ್ರೇಮಿಗಳು ಎಚ್ಚರ ವಹಿಸುವಂತೆ ಈಶಾನ್ಯ ವಿಭಾಗದ ಪೊಲೀಸರು ಮನವಿ ಮಾಡಿದ್ದಾರೆ.

ಐಪಿಎಲ್ ಟೂರ್ನಿ ಸದ್ಯದಲ್ಲೇ ಆರಂಭ ಆಗಲಿದೆ. ಈ ಸಂದರ್ಭದಲ್ಲಿ ಟಿಕೆಟ್ ಖರೀದಿಸುವಾಗ ವಂಚನೆಗಳೂ ನಡೆಯುವ ಸಾಧ್ಯತೆಯಿದೆ.
ನಕಲಿ ಲಿಂಕ್ಗಳು ಅಥವಾ ಕೊನೆ ಕ್ಷಣದ ವ್ಯವಹಾರದ ವಂಚನೆಗಳ ಜಾಲಕ್ಕೆ ಬೀಳದಿರಿ. ಐಪಿಎಲ್ ಟಿಕೆಟ್ಗಳನ್ನು ಕೇವಲ ಅಧಿಕೃತ ಸ್ಥಳ ಅಥವಾ ವೆಬ್ಸೈಟ್ ಮೂಲಕವೇ ಪಡೆದುಕೊಳ್ಳಿ.
ನೀವು ಹಣ ಪಾವತಿಸುವ ಮುನ್ನ ಪರಿಶೀಲಿಸಿಕೊಳ್ಳಿ. ತುರ್ತು ಸಂದರ್ಭಗಳಲ್ಲಿ 112 ಸಂಖ್ಯೆಗೆ ಕರೆ ಮಾಡಿ, ದೂರು ಸಲ್ಲಿಸಿ ಎಂದು ಎಕ್ಸ್ ಖಾತೆಯಲ್ಲಿ ಈಶಾನ್ಯ ವಿಭಾಗದ ಪೊಲೀಸರು ತಿಳಿಸಿದ್ದಾರೆ.