Drink & Drive: Driver fined Rs. 12,500!

ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ..!

ದೊಡ್ಡಬಳ್ಳಾಪುರ: ಡಕಾಯಿತಿ ಮತ್ತು ಕೊಲೆ ಪ್ರಕರಣದ ಆರೋಪಿಗಳ ಬಂಧನಕ್ಕೆ ತೆರಳಿದ್ದ ಪೊಲೀಸರ (Police) ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗಳಿಗೆ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಠಿಣ ಶೈಲು ಶಿಕ್ಷೆ (Prison sentence) ಹಾಗೂ 15 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.

ಘಟನೆ ವಿವರ

ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ 2020ರಲ್ಲಿ ಡಕಾಯಿತಿ ಮತ್ತು ಕೊಲೆ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ರಚಿಸಲಾಗಿದ್ದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡ ಆರೋಪಿಗಳಾದ ಹೇಮಂತ್ ಕುಮಾರ್ ಹಾಗೂ ಸೋನು ಅವರನ್ನು ಬಂಧಿಸಲು ತೆರಳಿದ್ದರು.

ಆರೋಪಿಗಳು ಕಾರಿನಲ್ಲಿ ದೊಡ್ಡಬಳ್ಳಾಪುರ – ಡಾಬಸ್ ಪೇಟೆ ಮೂಲಕ ತುಮಕೂರು ಕಡೆಗೆ ಹೋಗುತ್ತಿರುತ್ತಾರೆಂದು ಬಂದ ಮಾಹಿತಿ ಮೇರೆಗೆ, ಪೊಲೀಸರು ಸರ್ಕಾರಿ ವಾಹನಗಳಲ್ಲಿ ಕೊಡಿಗೇಹಳ್ಳಿ ಕಡೆಯಿಂದ ಆರೋಪಿಗಳನ್ನು ಹಿಂಬಾಲಿಸಿಕೊಂಡು ಬಂದು ಕೆಸ್ತೂರು ಗ್ರಾಮದ ಬಳಿ ಬಂಡಿಜಾಡು ರಸ್ತೆಯಲ್ಲಿ ಆರೋಪಿಗಳ ಕಾರನ್ನು ಅಡ್ಡ ಹಾಕಿದ್ದಾರೆ.

ಈ ವೇಳೆ ಬಂಧಿಸಲು ಹೋದಾಗ ಇಬ್ಬರೂ ಆರೋಪಿತರುಗಳು ಕೈಗಳಲ್ಲಿ ಚಾಕುಗಳನ್ನು ಹಿಡಿದುಕೊಂಡು ಬಂದು, ಹತ್ತಿರ ಬಂದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕುತ್ತಾ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಿಡಿದುಕೊಳ್ಳಲು ಹೋದ ಪೊಲೀಸರಿಗೆ ಚಾಕುವಿನಿಂದ ಚುಚ್ಚಿ ಹಲ್ಲೆ ಮಾಡಿ ರಕ್ತಗಾಯಗೊಳಿಸಿ ಕೊಲೆ ಮಾಡಲು ಪ್ರಯತ್ನಿಸಿದ್ದರಂತೆ. ಈ ಕುರಿತು ಆರೋಪಿಗಳ ವಿರುದ್ಧ ಅಂದಿನ ತನಿಖಾಧಿಕಾರಿಗಳಾಗಿದ್ದ ಪೊಲೀಸ್ ಇನ್ಸೆಕ್ಟರ್ ಕುಮಾರ್ ಎ.ವಿ ಅವರು ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು.

ಸದರಿ ಪ್ರಕರಣವು ದೊಡ್ಡಬಳ್ಳಾಪುರದ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದ್ದು, ಸದರಿ ಪ್ರಕರಣದಲ್ಲಿ ಆರೋಪಿತರು ಅಪರಾಧ ಎಸಗಿರುವುದು ಸಾಭೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ನಿರ್ಮಲ. ಕೆ ಅವರು ಪ್ರಕರಣದ ಇಬ್ಬರೂ ಆರೋಪಿತರಿಗೆ ಶಿಕ್ಷೆ ವಿಧಿಸಿದ್ದಾರೆ.

ಇದರ ಅನ್ವಯ ಆರೋಪಿಗಳಿಗೆ ಐ.ಪಿ.ಸಿ ಕಲಂ;307 ರ ಅಪರಾಧಕ್ಕಾಗಿ 10 ವರ್ಷಗಳ ಕಠಿಣ ಕಾರಾಗೃಹ ವಾಸ ಹಾಗೂ ತಲಾ 10,000 ರೂ ದಂಡ. ಐ.ಪಿ.ಸಿ ಕಲಂ;332 ರ ಅಪರಾಧಕ್ಕಾಗಿ 3 ವರ್ಷ ಕಠಿಣ ಕಾರಾಗೃಹ ವಾಸ ಹಾಗೂ ತಲಾ 5,000 ರೂ ದಂಡ. ಮತ್ತು ಐ.ಪಿ.ಸಿ ಕಲಂ; 353 ಅಪರಾಧಕ್ಕಾಗಿ 2 ವರ್ಷ ಕಠಿಣ ಕಾರಾಗೃಹ ವಾಸ ಶಿಕ್ಷೆ ವಿಧಿಸಿ ನ್ಯಾಯಾಧೀಶರು ಆದೇಶಿಸಿದ್ದಾರೆ.

ಸರ್ಕಾರದ ಪರವಾಗಿ ಅಭಿಯೋಜನೆ ಇಲಾಖೆ ವತಿಯಿಂದ ಸರ್ಕಾರಿ ಅಭಿಯೋಜಕರಾದ ಟಿ.ಎನ್ ನಟರಾಜ ಅವರು ವಾದ ಮಂಡಿಸಿದ್ದರು.

ರಾಜಕೀಯ

ಬೆಂಗಳೂರು ಬ್ರ್ಯಾಂಡ್‌ ಆಗಿಲ್ಲ: ಆರ್‌.ಅಶೋಕ ಆಕ್ರೋಶ

ಬೆಂಗಳೂರು ಬ್ರ್ಯಾಂಡ್‌ ಆಗಿಲ್ಲ: ಆರ್‌.ಅಶೋಕ ಆಕ್ರೋಶ

ಬೆಂಗಳೂರು ಅಭಿವೃದ್ಧಿ ಮಾಡಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ (D.K. Shivakumar) ʼಬ್ರ್ಯಾಂಡ್‌ ಬೆಂಗಳೂರುʼ ಘೋಷಿಸಿದ್ದರು. ಆದರೆ ಈಗ ಇ-ಖಾತಾ ಹೆಸರಲ್ಲಿ ಪಾಲಿಕೆ ಅಧಿಕಾರಿಗಳು ದಂಧೆ ಮಾಡುತ್ತಿದ್ದಾರೆ. ಇ ಖಾತಾ ಹೆಸರಲ್ಲಿ ಮಾಫಿಯಾ ಸೃಷ್ಟಿಯಾಗಿದೆ. ತೆರಿಗೆ ಪಾವತಿಸಿದರೂ

[ccc_my_favorite_select_button post_id="120417"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಕ್ರಿಕೆಟ್ ಟೂರ್ನಿಯ ಪಂದ್ಯಾವಳಿ ವೀಕ್ಷಣೆಗೆ ಟಿಕೆಟ್ ಖರೀದಿಸುವ ಸಂದರ್ಭದಲ್ಲಿ ನಕಲಿ ಲಿಂಕ್‌ಗಳ ಬಗ್ಗೆ ಕ್ರಿಕೆಟ್ ಪ್ರೇಮಿಗಳು ಎಚ್ಚರ ವಹಿಸುವಂತೆ ಈಶಾನ್ಯ ವಿಭಾಗದ ಪೊಲೀಸರು ಮನವಿ ಮಾಡಿದ್ದಾರೆ.

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ..!

ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು

ಡಕಾಯಿತಿ ಮತ್ತು ಕೊಲೆ ಪ್ರಕರಣದ ಆರೋಪಿಗಳ ಬಂಧನಕ್ಕೆ ತೆರಳಿದ್ದ ಪೊಲೀಸರ (Police) ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗಳಿಗೆ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಠಿಣ ಶೈಲು ಶಿಕ್ಷೆ (Prison sentence) ಹಾಗೂ 15 ಸಾವಿರ

[ccc_my_favorite_select_button post_id="120420"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!