ದೊಡ್ಡಬಳ್ಳಾಪುರ: ಶ್ರೀರಾಮನವಮಿ ಹಬ್ಬಕ್ಕೆಂದು ತಮ್ಮನ ಮನೆಗೆ ಬರುತ್ತಿದ್ದ ಮಹಿಳೆಗೆ, ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಹಮಾಮ್ ಗೇಟ್ ಬಳಿ ಗುರುವಾರ ರಾತ್ರಿ ನಡೆದಿದೆ.

ಮೃತ ಮಹಿಳೆಯನ್ನು ಕೋಲಾರದ ಲಕ್ಷ್ಮೀದೇವಮ್ಮ (59 ವರ್ಷ) ಎಂದು ಗುರುತಿಸಲಾಗಿದೆ.
ಮೃತ ಮಹಿಳೆ ಕೋಲಾರದಿಂದ ಬಾಶೆಟ್ಟಿಹಳ್ಳಿಯಲ್ಲಿರುವ ತಮ್ಮನ ಮನೆಗೆ ಶ್ರೀರಾಮನವಮಿ ಹಬ್ಬಕ್ಕೆಂದು ಗುರುವಾರ ರಾತ್ರಿ ಬಸ್ ಇಳಿದು, ಹಮಾಮ್ ಗೇಟ್ ಬಳಿ ರಸ್ತೆ ದಾಟುವ ವೇಳೆ ಕ್ಯಾಂಟರ್ ಡಿಕ್ಕಿ ಹೊಡೆದಿದೆ.
ಪರಿಣಾಮ ಲಕ್ಷ್ಮೀದೇವಮ್ಮ ಸ್ಥಳದಲ್ಲಿಯೇ ಸಾವನಪ್ಪಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ಕ್ಯಾಂಟರ್ ವಶಕ್ಕೆ ಪಡೆದಿದ್ದಾರೆ.