Successful capture of three bears

ಮೂರು ಕರಡಿಗಳ ಯಶಸ್ವಿ ಸೆರೆ

ಬಳ್ಳಾರಿ: ಸಂಡೂರು ತಾಲ್ಲೂಕಿನ ತೋರಣಗಲ್ಲಿನ ಜಿಂದಾಲ್ ವಿದ್ಯಾನಗರ ಟೌನ್‌ಶಿಪ್ ವ್ಯಾಪ್ತಿಯಲ್ಲಿ ಕಳೆದ ಹತ್ತು ತಿಂಗಳಿನಿಂದ ಬೀಡುಬಿಟ್ಟಿದ್ದ ತಾಯಿ ಕರಡಿ ಹಾಗೂ ಎರಡು ಮರಿಗಳನ್ನು (Bears) ಅರಣ್ಯ ಇಲಾಖೆ ಅಧಿಕಾರಿಗಳು ಗುರುವಾರ ಯಶಸ್ವಿಯಾಗಿ ಸೆರೆಹಿಡಿದಿದ್ದಾರೆ.

ಈ ಕಾರ್ಯಾಚರಣೆಯಲ್ಲಿ ಮೊದಲ ಬಾರಿಗೆ ಅತ್ಯಾಧುನಿಕ ‘ಆಟೋಮ್ಯಾಟಿಕ್ ಮೊಬೈಲ್ ಆಪ್ ಆಧಾರಿತ ಕೇಜ್ ಲಾಕಿಂಗ್ ಸಿಸ್ಟಮ್’ ಬಳಸುವ ಮೂಲಕ ಮೂರೂ ಕರಡಿಗಳನ್ನು ಏಕಕಾಲಕ್ಕೆ ಬಂಧಿಸಿರುವುದು ವಿಶೇಷವಾಗಿದೆ.

ಕಳೆದ ಸುಮಾರು 10 ತಿಂಗಳಿನಿಂದ ಈ ಕರಡಿಗಳ ಕುಟುಂಬ ಜಿಂದಾಲ್ ವಿದ್ಯಾನಗರ ಟೌನ್‌ಶಿಪ್‌ನಲ್ಲಿ ಕಾಣಿಸಿಕೊಳ್ಳುತ್ತಿತ್ತು. ಇದರಿಂದ ನಿವಾಸಿಗಳಲ್ಲಿ ಭೀತಿ ಉಂಟಾಗಿದ್ದರೂ, ಅರಣ್ಯ ಇಲಾಖೆಯ ಮುನ್ನೆಚ್ಚರಿಕೆಯಿಂದಾಗಿ ಯಾವುದೇ ಅಹಿತಕರ ಘಟನೆ ಸಂಭವಿಸಿರಲಿಲ್ಲ.

ವನ್ಯಜೀವಿ ವಿಭಾಗದ ಪಿಸಿಸಿಎಫ್ ಅವರ ಆದೇಶದನ್ವಯ, ಬಳ್ಳಾರಿ ಡಿಸಿಎಫ್ ಕೆ.ಎನ್.ಬಸವರಾಜ್ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆಸಲಾಯಿತು.

ಎಸಿಎಫ್ ಶರಣ್ ಕುಮಾರ್, ಆರ್‌ಎಫ್‌ಒಗಳಾದ ಸಯ್ಯದ್ ದಾದಾ ಖಲಂದರ್ ಮತ್ತು ಮಂಜುನಾಥ್, ಡಿಆರ್‌ಎಫ್‌ಒಗಳಾದ ಮೋಹನ್ ಹಾಗೂ ಗುರುಸ್ವಾಮಿ, ಬಿಎಫ್‌ಒಗಳಾದ ವೆಂಕಟೇಶ್ ಮತ್ತು ಶ್ರೀಧರ್ ಅವರ ತಂಡ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿತ್ತು. ಇವರಿಗೆ ಪಶುವೈದ್ಯರಾದ ಡಾ. ಪ್ರಕೃತಿ ಹಾಗೂ ವೈಲ್ಡ್ ಲೈಫ್ ಎಸ್‌ಒಎಸ್ ಎನ್‌ಜಿಒ ಸಂಸ್ಥೆಯವರು ಸಾಥ್ ನೀಡಿದ್ದರು.
ಸೆರೆಹಿಡಿದ ತಾಯಿ ಕರಡಿಗೆ ಮುಂದಿನ ದಿನಗಳಲ್ಲಿ ಅದರ ಚಲನವಲನದ ಮೇಲೆ ನಿಗಾ ಇಡಲು ‘ರೇಡಿಯೋ ಕಾಲರ್’ ಅಳವಡಿಸಲಾಗಿದೆ.

ನಂತರ ಮೇಲಾಧಿಕಾರಿಗಳ ಸೂಚನೆಯಂತೆ, ಸುರಕ್ಷಿತ ಅರಣ್ಯ ಪ್ರದೇಶದಲ್ಲಿ ತಾಯಿ ಹಾಗೂ ಮರಿಗಳನ್ನು ಬಿಡುಗಡೆಗೊಳಿಸಲಾಗಿದೆ ಎಂದು ಬಳ್ಳಾರಿ ವಲಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆ.ಎನ್.ಬಸವರಾಜ್ ಅವರು ತಿಳಿಸಿದ್ದಾರೆ.

ರಾಜಕೀಯ

ಮಹತ್ವದ ಸಭೆಗೆ ಪ್ರಧಾನಿ ಮೋದಿ ಗೈರು..! ವಿಪಕ್ಷಗಳ ಆಕ್ರೋಶ

ಮಹತ್ವದ ಸಭೆಗೆ ಪ್ರಧಾನಿ ಮೋದಿ ಗೈರು..! ವಿಪಕ್ಷಗಳ ಆಕ್ರೋಶ

ಪಶ್ಚಿಮ ಏಷ್ಯಾ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಪ್ರಮುಖ ಸಂಸತ್ತಿನ ಕಲಾಪಗಳು ಮತ್ತು ಸರ್ವಪಕ್ಷ ಸಭೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಗೈರುಹಾಜರಿ ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾಗಿದೆ, ಅವರು ಅವರು ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ

[ccc_my_favorite_select_button post_id="120446"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

ಐಪಿಎಲ್‌ (IPL) ಅತ್ಯಂತ ಜನಪ್ರಿಯ ಫ್ರಾಂಚೈಸಿ ಆರ್‌ಸಿಬಿಯನ್ನು (RCB) ಆದಿತ್ಯ ಬಿರ್ಲಾ ಗ್ರೂಪ್ ಮತ್ತು ಟೈಮ್ಸ್ ಆಫ್ ಇಂಡಿಯಾ ನೇತೃತ್ವದ ಒಕ್ಕೂಟವು ಖರೀದಿಸಿದೆ.

[ccc_my_favorite_select_button post_id="120461"]
ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ..!

ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು

ಡಕಾಯಿತಿ ಮತ್ತು ಕೊಲೆ ಪ್ರಕರಣದ ಆರೋಪಿಗಳ ಬಂಧನಕ್ಕೆ ತೆರಳಿದ್ದ ಪೊಲೀಸರ (Police) ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗಳಿಗೆ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು ಶಿಕ್ಷೆ (Prison sentence) ಹಾಗೂ 15 ಸಾವಿರ

[ccc_my_favorite_select_button post_id="120420"]
ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ಶ್ರೀರಾಮನವಮಿ ಹಬ್ಬಕ್ಕೆಂದು ತಮ್ಮನ ಮನೆಗೆ ಬರುತ್ತಿದ್ದ ಮಹಿಳೆಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಹಮಾಮ್ ಗೇಟ್ ಬಳಿ ಗುರುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120487"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!