ದೊಡ್ಡಬಳ್ಳಾಪುರ: ನಗರದಲ್ಲಿ ವಿಶ್ವ ಹಿಂದೂ ಪರಿಷದ್ ಬಜರಂಗದ ವತಿಯಿಂದ ಮೂರು ದಿನಗಳ ಕಾಲ ಹಮ್ಮಿಕೊಂಡಿರುವ ಬೃಹತ್ ಶ್ರೀರಾಮ ಶೋಭಾಯಾತ್ರೆ (Sri Rama Sobhayatre) ಹಿನ್ನಲೆಯಲ್ಲಿ ಮೊದಲ ದಿನ ಪೂರ್ವಭಾವಿಯಾಗಿ ಬೈಕ್ ರ್ಯಾಲಿ ನಡೆಸುವ ಮೂಲಕ ಶೋಭಾ ಯಾತ್ರೆಯ ಪ್ರಚಾರ ಕೈಗೊಳ್ಳಲಾಯಿತು.

ನಗರದ ಹೊರವಲಯದ ಪಾಲನಜೋಗಹಳ್ಳಿಯ ವಿನಾಯಕ ದೇವಾಲಯದ ಮುಂಭಾಗದಿಂದ ಬೈಕ್, ಕಾರು ಸೇರಿದಂತೆ ವಿವಿಧ ವಾಹನಗಳ ಜಾಥಾ ನಗರದ ಪ್ರಮುಖ ಬೀದಿಗಳಲ್ಲಿ ನಡೆಯಿತು.
ರಾಮೋತ್ಸವ ಅಂಗವಾಗಿ ಮಾ.28 ರಂದು ಬೆಳಿಗ್ಗೆ 9.30ಕ್ಕೆ ಗಣಪತಿ ಹೋಮ, ಉಚಿತ ಸಂಜೀವಿನಿ ಆರೋಗ್ಯ ತಪಾಸಣಾ ಮತ್ತು ಶಸ್ತ್ರ ಚಿಕಿತ್ಸೆ ಶಿಬಿರ ನಡೆಯಲಿದೆ. ಸಂಜೆ 5ಗಂಟೆಗೆ ಆನಂದ ಗುರೂಜಿ ನೇತೃತ್ವದಲ್ಲಿ ದೀಪ ಲಕ್ಷ್ಮಿ ಪೂಜೆ ನಡೆಯಲಿದ್ದು, 500ಕ್ಕೂ ಹೆಚ್ಚು ಮಹಿಳೆಯರು ಭಾಗವಹಿಸಲಿದ್ದಾರೆ.
ಸಂಜೆ ಮಹಾಮಂಗಳಾರತಿ ಪ್ರಸಾದ ವಿನಿಯೋಗ ನಡೆಯಲಿದೆ.
ಮಾ.29ರಂದು ಮಧ್ಯಾಹ್ನ 11.30ಕ್ಕೆ ಭಗತ್ಸಿಂಗ್ ಕ್ರೀಡಾಂಗಣದಿಂದ ಬೃಹತ್ ಶೋಭಾ ಯಾತ್ರೆ ನಡೆಯಲಿದೆ. ಮೆರವಣಿಗೆಯಲ್ಲಿ ಭಾರತ ಮಾತೆ, ಶ್ರೀರಾಮ, ಹನುಮ, ಶಿವ, ಅಂಬೇಡ್ಕರ್, ಇಮ್ಮಡಿ ಪುಲಿಕೇಶಿ ಪ್ರತಿಮೆಗಳೊಂದಿಗೆ ವಿವಿಧ ಕಲಾತಂಡಗಳು ಭಾಗವಹಿಸಲಿವೆ. ವಿವಿಧ ದೇವರುಗಳ ಬೃಹತ್ ಶೋಭಾ ಯಾತ್ರೆ ನಡೆಯಲಿದೆ. ಈ ಬಾರಿ ವಿಶೇಷವಾಗಿ ಶೋಭಾಯಾತ್ರೆಗೆ ಹೆಲಿಕ್ಯಾಪ್ಟರ್ ಮೂಲಕ ಪುಷ್ಪ ವೃಷ್ಟಿ ನಡೆಯಲಿದೆ.
ನಂತರ ದಕ್ಷಿಣ ಪ್ರಾಂತ ಬಜರಂಗ ದಳ ಸಂಯೋಜಕ್ ಬೌದ್ದಿಕ್. ಪ್ರಭಂಜನ್ ಸೂರ್ಯ ಅವರಿಂದ ದಿಕ್ಸೂಚಿ ಭಾಷಣವಿದೆ. ಸಂಜೆ ಭಗತ್ಸಿಂಗ್ ಕ್ರೀಡಾಂಗಣದಲ್ಲಿ ಲೇಸರ್ ಶೋ, ಬೃಹತ್ ರಾವಣ ದಹನ ಮತ್ತು ಆಕರ್ಷಕ ಸಿಡಿಮದ್ದುಗಳ ಪ್ರದರ್ಶನ ಕಾರ್ಯಕ್ರಮಗಳಿವೆ.