Countdown to IPL.. MLAs lose dignity by not asking for tickets

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

RCB ವಿಜಯೋತ್ಸವದ ವೇಳೆ ಉಂಟಾದ ಕಾಲ್ತುಳಿತ ಘಟನೆಯ ಬಳಿಕ ಸುಮಾರು 9 ತಿಂಗಳು ಸೂತಕದ ವಾತಾವರಣವಿದ್ದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇದೀಗ ಪಿಎಲ್ ರಂಗು ಕಾಣಿಸಿಕೊಂಡಿದೆ.

ಕಾಲ್ತುಳಿತ ಘಟನೆಯಲ್ಲಿ ಮೃತಪಟ್ಟವರ ಸ್ಮರಣಾರ್ಥ 11 ಸೀಟುಗಳನ್ನು ಶಾಶ್ವತವಾಗಿ ಖಾಲಿ ಬಿಡಲು ತೀರ್ಮಾನಿಸಿರುವ ಕೆಎಸ್‌ಸಿಎ ಮತ್ತು ಆರ್‌ಸಿಬಿ, ಉದ್ಘಾಟನಾ ಪಂದ್ಯದಲ್ಲಿ ಯಾವುದೇ ಮನರಂಜನಾ ಕಾಠ್ಯಕ್ರಮಗಳಿಲ್ಲದೆ ಸರಳವಾಗಿ ಪಂದ್ಯವನ್ನು ಆರಂಭಿಸಲು ನಿರ್ಧರಿಸಿದೆ.

ಕಳೆದ ಜೂನ್ ತಿಂಗಳಲ್ಲಿ ನಡೆದ ದುರಂತದಿಂದ ಎಚ್ಚೆತ್ತು ಕೊಂಡಿರುವ ಬೆಂಗಳೂರು ನಗರ ಪೊಲೀಸರು ಶನಿವಾರದ ಪಂದ್ಯಾವಳಿಗೆ ಬರೋಬ್ಬರಿ 2 ಸಾವಿರ ಪೊಲೀಸರ ಸರ್ಪಗಾವಲು ಹಾಕಿದ್ದಾರೆ. ರಾತ್ರಿ 7.30ಕ್ಕೆ ಪಂದ್ಯ ಆರಂಭವಾ ಗಲಿದ್ದು 4 ಗಂಟೆ ಮುಂಚಿತವಾಗಿ ಟಿಕೆಟ್‌ಹೊಂದಿದವರು ಪ್ರವೇಶ ಪಡೆಯಲು ಅವಕಾಶ ಕಲ್ಪಿಸಲಾಗಿದೆ.

ಬಿಟ್ಟಿ ಟಿಕೆಟ್ ಕೇಳಿ ಮರ್ಯಾದೆ ಕಳೆದುಕೊಂಡ ಶಾಸಕರು

ಐಪಿಎಲ್‌ಗೆ ನೋಡಲು ವಿಐಪಿ ಟ್ರೀಟ್‌ಮೆಂಟ್ ಕೇಳಿದ್ದ, ಮನೆಮಂದಿಗೆಲ್ಲ ನೋಡಲು ಐದು ಟಿಕೆಟ್‌ಗೆ ವಿಧಾನಸಭೆಯಲ್ಲಿ ಬೇಡಿಕೊಂಡಿದ್ದ ಶಾಸಕರ ಒತ್ತಾಯಕ್ಕೆ ಸಾರ್ವಜನಿಕ ವಲಯದಲ್ಲಿ ಹಾಗೂ ರಾಜಕೀಯ ವಲಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ.

ವಿಧಾನಸಭೆಯ ಕಲಾಪದಲ್ಲಿ ಪ್ರತಿಪಕ್ಷ ನಾಯಕ ಆರ್.ಅಶೋಕ್ ಸೇರಿದಂತೆ ಹಲವು ಶಾಸಕರು ಐಪಿಎಲ್ ನೋಡಲು ಐದು ಟಿಕೆಟ್ ಕೊಡಿಸಬೇಕು, ಶಾಸಕರಿಗಾಗಿ ವಿಐಪಿ ಜಾಗ ಮಾಡಬೇಕು ಎಂದು ಸ್ಪೀಕರ್‌ಗೆ ದುಂಬಾಲು ಬಿದ್ದ ಘಟನೆ ಹಾಗೂ ಐದು ಟಿಕೆಟ್ ಕೊಡಿಸುವಂತೆ ಸರಕಾರಕ್ಕೆ ಸೂಚನೆ ನೀಡಿರುವ ನಡೆ ತೀವ್ರ ಅಕ್ಷೇಪಕ್ಕೆ ಕಾರಣವಾಗಿದೆ.

ಶಾಸಕರಾಗಿದ್ದವರು, ಕ್ಷೇತ್ರದ ಸಮಸ್ಯೆ ಬಗ್ಗೆ ಮಾತನಾಡುವುದು ಬಿಟ್ಟು, ಈ ರೀತಿ ಟಿಕೆಟ್ ಕೊಡಿಸುವಂತೆ ಒತ್ತಡ ಹೇರಲು ಸದನವನ್ನು ಬಳಸಿಕೊಂಡಿರುವುದು ಸರಿಯಲ್ಲ. ಅದರಲ್ಲಿಯೂ ಜನಪ್ರತಿನಿಧಿಗಳಾದವರು ಜನ ರೊಂದಿಗೆ ಕುಳಿತು ಕ್ರಿಕೆಟ್‌ ನೋಡುವುದರಲ್ಲಿ ತಪ್ಪೇನಿದೆ ಎನ್ನುವ ಪ್ರಶ್ನೆಯನ್ನು ನೆಟ್ಟಿಗರು ಎತ್ತಿದ್ದಾರೆ.

ಶಾಸಕರು ಇರುವುದು ಶಾಸನ ಮಾಡುವುದಕ್ಕೆ, ಸವಾರಿ ಮಾಡಲು ಅಲ್ಲ. ಬೆಟ್ಟಿಂಗ್ ದಂಧೆ ಮಾಡಿ ಶಾಸಕರಾದವರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ? ಟಿಕೆಟ್‌ಗೆ ಹೀಗೆ ಅಂಗಲಾಚುವ ಶಾಸಕರಿಂದ ಕ್ಷೇತ್ರದ ಸಮಸ್ಯೆಗೆ ಪರಿಹಾರ ಸಾಧ್ಯವೇ? ಎನ್ನುವ ಆಕ್ರೋಶದ ಮಾತುಗಳನ್ನು ಸಾಮಾಜಿಕ ಜಾಲತಾಣದಲ್ಲಿ ಕಂಡುಬಂದಿದೆ.

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ ಬೃಹತ್ ಶ್ರೀರಾಮ ಶೋಭಾಯಾತ್ರೆ: ಪೂರ್ವಭಾವಿಯಾಗಿ ಅಬ್ಬರದ ಬೈಕ್ ರ‍್ಯಾಲಿ

ದೊಡ್ಡಬಳ್ಳಾಪುರದಲ್ಲಿ ಬೃಹತ್ ಶ್ರೀರಾಮ ಶೋಭಾಯಾತ್ರೆ: ಪೂರ್ವಭಾವಿಯಾಗಿ ಅಬ್ಬರದ ಬೈಕ್ ರ‍್ಯಾಲಿ

ವಿಶ್ವ ಹಿಂದೂ ಪರಿಷದ್ ಬಜರಂಗದ ವತಿಯಿಂದ ಮೂರು ದಿನಗಳ ಕಾಲ ಹಮ್ಮಿಕೊಂಡಿರುವ ಬೃಹತ್ ಶ್ರೀರಾಮ ಶೋಭಾಯಾತ್ರೆ (Sri Rama Sobhayatre) ಹಿನ್ನಲೆಯಲ್ಲಿ ಮೊದಲ ದಿನ ಪೂರ್ವಭಾವಿಯಾಗಿ ಬೈಕ್ ರ‍್ಯಾಲಿ ನಡೆಸುವ ಮೂಲಕ ಶೋಭಾ ಯಾತ್ರೆಯ

[ccc_my_favorite_select_button post_id="120514"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಮದುವೆ ನಿಶ್ಚಯವಾಗಿದ್ದ ಜೋಡಿಯೊಂದರ ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆಂದು (photoshoot) ತೆರಳಿದ್ದ ಫೋಟೋಗ್ರಾಫರ್‌ಗಳ (Photographers) ಮೇಲೆ ಸ್ಥಳೀಯ ಕೆಲವರು ಹಲ್ಲೆ ನಡೆಸಿರುವ ಘಟನೆ ಸಕಲೇಶಪುರ ತಾಲೂಕಿನ ಬೆಟ್ಟದ ಭೈರವೇಶ್ವರ ದೇವಾಲಯದ ಆವರಣದಲ್ಲಿ ನಡೆದಿದೆ.

[ccc_my_favorite_select_button post_id="120523"]
ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ಶ್ರೀರಾಮನವಮಿ ಹಬ್ಬಕ್ಕೆಂದು ತಮ್ಮನ ಮನೆಗೆ ಬರುತ್ತಿದ್ದ ಮಹಿಳೆಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಹಮಾಮ್ ಗೇಟ್ ಬಳಿ ಗುರುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120487"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!