Postponement of Doddaballapur Shobhayatra..!

ದೊಡ್ಡಬಳ್ಳಾಪುರ ಶೋಭಾಯಾತ್ರೆ ಮುಂದೂಡಿಕೆ..!; ನ್ಯಾಯಾಲಯದ ಮೊರೆ ಹೋಗಲು ಹಿಂದೂಪರ ಸಂಘಟನೆಗಳ ತೀರ್ಮಾನ

ದೊಡ್ಡಬಳ್ಳಾಪುರ: ಶೋಭಾಯಾತ್ರೆಯಲ್ಲಿ (ShobhaYatre) ಡಿಜೆ (DJ) ಬಳಸಲು ಅನುಮತಿ ‌ನೀಡುವಂತೆ ವಿಶ್ವ ಹಿಂದೂ ಪರಿಷತ್ತು ಬಜರಂಗದಳದ ಕಾರ್ಯಕರ್ತರು ನಡೆಸುತ್ತಿದ್ದ ಪ್ರತಿಭಟನೆಯನ್ನು ಕೈಬಿಡಲಾಗಿದ್ದು, ನ್ಯಾಯಾಲಯದಿಂದ ಆದೇಶದ ಬಳಿಕ ಶೋಭಾಯಾತ್ರೆ ನಡೆಸಲು ತೀರ್ಮಾನಿಸಲಾಗಿದೆ.

ನಾಳೆ ನಡೆಸಬೇಕಿದ್ದ ಶೋಭಾಯಾತ್ರೆ ಹಿನ್ನೆಲೆಯಲ್ಲಿ ನಗರದ ಪೊಲೀಸ್ ಕಚೇರಿಯಲ್ಲಿ ಹಿಂದೂಪರ ಸಂಘಟನೆಗಳೊಂದಿಗೆ ಪೊಲೀಸ್ ಅಧಿಕಾರಿಗಳು ಸಭೆ ನಡೆಸಿದ್ದು, ಈ ವೇಳೆ ನಿನ್ನೆ ನಡೆದ ಬೈಕ್ ರ್ಯಾಲಿಯ ವೇಳೆ ಕೆಲ ಯುವಕರ ಅತಿರೇಖದ ವರ್ತನೆ ಕುರಿತು ಆಕ್ಷೇಪ ವ್ಯಕ್ತಪಡಿಸಿದರು. ಅಲ್ಲದೆ ಜಿಲ್ಲಾಧಿಕಾರಿ ಆದೇಶದಂತೆ ಡಿಜೆ ಬಳಸದೆ ಶಾಂತಿಯುತ ಕಾರ್ಯಕ್ರಮ ನಡೆಸುವಂತೆ ಮನವಿ ಮಾಡಿದರು‌.

ಈ ವೇಳೆ ಹಿಂದೂಪರ ಕಾರ್ಯಕರ್ತರು 11 ವರ್ಷಗಳಿಂದ ಯಾವುದೇ ಅಹಿತಕರ ಘಟನೆಯಾಗದಂತೆ ಶಾಂತಿಯುತವಾಗಿ ಮಾಡಲಾಗಿದ್ದು, ಅನುಮತಿ ನೀಡುವಂತೆ ಮನವಿ ಮಾಡಿದರು. ಆದರೆ ಜಿಲ್ಲಾಧಿಕಾರಿ ಆದೇಶವಾಗಿರುವ ಕಾರಣ ಅನುಮತಿ ನೀಡಲು ಸಾಧ್ಯವಿಲ್ಲ ಎಂದರು.

ಇದಕ್ಕೆ ಒಪ್ಪದ ಹಿಂದೂಪರ ಸಂಘಟನೆಗಳು ಅನುಮತಿ ನೀಡುವವರೆಗೆ ಪ್ರತಿಭಟನೆ ನಿಲ್ಲಿಸುವುದಿಲ್ಲವೆಂದು ಪಟ್ಟು ಹಿಡಿದು ಸಮಾರು ಮೂರು ಗಂಟೆಗಳ ಕಾಲ ಪ್ರತಿಭಟನೆ ನಡೆಸಿದರು‌.

ಆದರೆ ಜಿಲ್ಲಾಧಿಕಾರಿ ಆದೇಶಕ್ಕೆ ಬದ್ದರಾಗಬೇಕು. ಇಲ್ಲವಾದಲ್ಲಿ ಅಕ್ರಮಕೂಟವೆಂದು ಪರಿಗಣಸಿ, ಪೊಲೀಸ್ ಠಾಣೆ ಮುಂದೆ ಕೂತು, ಸಾರ್ವಜನಿಕರಿಗಡ ಹಾಗೂ ಪೊಲೀಸರ ಕರ್ತವ್ಯಕ್ಕೆ ಅಡ್ಡಿಯುಂಟು ಮಾಡುತ್ತಿರುವ ಕಾರಣ ಕಾನೂನು ಕ್ರಮಕೈಗೊಳ್ಳಲಾಗುವುದೆಂದು ಎಚ್ಚರಿಕೆ ನೀಡಿದರು‌.

ಬಳಿಕ ಪ್ರತಿಭಟನೆ ಕೈಬಿಟ್ಟ ಹಿಂದೂಪರ ಸಂಘಟನೆಗಳು, ನ್ಯಾಯಾಲಯದ ಮೊರೆ ಹೋಗಿ, ಪ್ರತಿ ವರ್ಷದಂತೆ ಅದ್ದೂರಿಯಾಗಿ ಶೋಭಾಯಾತ್ರೆ ನಡೆಸಲು ಅನುಮತಿ ಪಡೆದು ಮತ್ತೊಂದು ದಿನಾಂಕ ಗೊತ್ತುಪಡಿಸಲಾಗುವುದೆಂದು ನರೇಶ್ ರೆಡ್ಡಿ ತಿಳಿಸಿದರು.

ಎಸ್ಪಿ ಮನವಿ

ಶೋಭಾತ್ರೆಯಲ್ಲಿ ಡಿಜೆ ಹಾಗೂ ಇತರೆ ಹೆಚ್ಚಿನ ಶಬ್ದ ಬರುವಂತಹ ಯಾವುದೇ ಸಲಕರಣೆಗಳನ್ನು ಬಳಸದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆದೇಶಿಸಿದ್ದು, ತಪ್ಪಿದಲ್ಲಿ ಕಾನೂನು ಕ್ರಮಕೈಗೊಳ್ಳಲಾಗುವುದೆಂದು ಬೆಂಗಳೂರು ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಲಾಗಿದ್ದು, ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಸಹ ರಾಮನವಮಿಯ ಅಂಗವಾಗಿ ಬೃಹತ್ ಶೋಭ ಯಾತ್ರೆಯನ್ನು ಆಯೋಜಿಸುತ್ತಿರುವುದು ಸಂತಸ ಮತ್ತು ಶುಭದಾಯಕವಾದ ವಿಚಾರ. ಆದರೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳು ಕಾರ್ಯಕ್ರಮದಲ್ಲಿ ಶಾಂತಿ ಮತ್ತು ಕಾಪಾಡುವ ಸಲುವಾಗಿ ಡಿಜೆ ಅಥವಾ ಹೆಚ್ಚಿನ ಶಬ್ದ ಬರುವಂತಹ ಯಾವುದೇ ಸಲಕರಣೆಗಳನ್ನು ಈ ಬಾರಿ ನಿಷೇಧಿಸಲಾಗಿದೆ.

ಈಗಾಗಲೇ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಅಂತಿಮ ಘಟ್ಟದಲ್ಲಿ ಇರುತ್ತವೆ. 8, 9ನೇ ತರಗತಿಯ ಹಾಗೂ ಪ್ರಥಮ ಪಿಯುಸಿ ಪರೀಕ್ಷೆಗಳು ಸಹ ಚಾಲ್ತಿಯಲ್ಲಿರುತ್ತವೆ. ಇದಲ್ಲದೆ 60 ವಯಸ್ಸಿನ ಮೇಲ್ಪಟ್ಟಂತಹ ಹಲವಾರು ವೃದ್ಧರು 18 ವರ್ಷದೊಳಗಿನ ಮಕ್ಕಳು ಸಾವಿರಾರು ಸಾವಿರಾರು ಸಂಖ್ಯೆಯಲ್ಲಿ ದೊಡ್ಡಬಳ್ಳಾಪುರದಲ್ಲಿ ಇರುತ್ತಾರೆ.

ಇಂತಹ ಸಂದರ್ಭದಲ್ಲಿ ಅವರುಗಳ ಆರೋಗ್ಯದ ದೃಷ್ಟಿಯಿಂದ ಹಾಗೂ 20 ರಿಂದ 25 ಸಾವಿರಕ್ಕೂ ಹೆಚ್ಚು ಜನಸಂದಣಿ ಯಾಗುವ ಈ ಕಾರ್ಯಕ್ರಮದಲ್ಲಿ ಕಾನೂನು ವ್ಯವಸ್ಥೆ ಪಾಲನೆಯಾಗುವ ದೃಷ್ಟಿಯಿಂದ ಡಿಜೆ ಮತ್ತು ಇತರೆ ಹೆಚ್ಚಿನ ಶಬ್ದ ಬರುವಂತಹ ಹೆಚ್ಚಿನ ಡಿಸಿಬಲ್ ಇರುವಂತಹ ಯಾವುದೇ ಸಲಕರಣೆಗಳನ್ನು ಕಾರ್ಯಕ್ರಮದಲ್ಲಿ ನಿಷೇಧಿಸಲಾಗಿದೆ.

ಇದರ ಬದಲಾಗಿ ಸಂಸ್ಕೃತಿ ಸಂಪ್ರದಾಯಗಳನ್ನು ಸಾರುವಂತಹ ಈ ಬೃಹತ್ ಕಾರ್ಯಕ್ರಮದಲ್ಲಿ ಚಂಡೆ, ಮದ್ದಳೆ, ತಮಟೆ, ತವಿಲ್ ವೀಣೆ. ಶಹನಾಯಿ, ನಗಾರಿ, ಸ್ಥಳೀಯ ಬ್ಯಾಂಡುಗಳಂತಹ ಯಾವುದೇ ಭಾರತೀಯ ಸಂಸ್ಕೃತಿಯನ್ನು ಹೆಚ್ಚಿಗೆ ಪ್ರತಿನಿಧಿಸುವಂತಹ ವಾದ್ಯಗಳನ್ನು ಬಳಸುವ ಮೂಲಕ ಕಾರ್ಯಕ್ರಮಕ್ಕೆ ಹೆಚ್ಚಿನ ಮೆರೆಗನ್ನು ತರಲು ಕೋರಿದ್ದಾರೆ.

ಇದಕ್ಕೆ ದೊಡ್ಡಬಳ್ಳಾಪುರ ತಾಲೂಕಿನ ಎಲ್ಲಾ ಜನಪ್ರತಿನಿಧಿಗಳು ವಿವಿಧ ಕನ್ನಡ ಪರ ಸಂಘಟನೆಗಳು, ಎಲ್ಲಾ ಪತ್ರಿಕಾ ಮಾಧ್ಯಮದವರು, ಕಾರ್ಮಿಕ ಸಂಘಟನೆಗಳು ಸಹಕರಿಸುವಂತೆ ಮನವಿ ಮಾಡಿದ್ದಾರೆ.

ಇನ್ನೊಮ್ಮೆ ಇದು ಕಟ್ಟುನಿಟ್ಟಿನ ಸೂಚನೆ. ಇದನ್ನು ಹೊರತುಪಡಿಸಿಯೂ ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಪ್ರಥಮ ವರ್ತಮಾನ ವರದಿ ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳುವುದು ಅನಿವಾರ್ಯ ಮತ್ತು ಕಾನೂನುಬದ್ದವೂ ಆಗುತ್ತದೆಂದು ಹೇಳಿದ್ದಾರೆ.

ರಾಜಕೀಯ

ಅಚ್ಚರಿಯ ಬೆಳವಣಿಗೆ: ನಾಳೆಯೇ ದೊಡ್ಡಬಳ್ಳಾಪುರದಲ್ಲಿ ಶೋಭಾಯಾತ್ರೆ..!

ಅಚ್ಚರಿಯ ಬೆಳವಣಿಗೆ: ನಾಳೆಯೇ ದೊಡ್ಡಬಳ್ಳಾಪುರದಲ್ಲಿ ಶೋಭಾಯಾತ್ರೆ..!

ಕೆಲವೇ‌ ನಿಮಿಷಗಳ ಹಿಂದಷ್ಟೇ ಮುಂದೂಡಲಾಗಿದ್ದ ಶೋಭಾಯಾತ್ರೆಯನ್ನು (Sobhayatre) ಅಚ್ಚರಿಯ ಬೆಳವಣಿಗೆಯಲ್ಲಿ ನಾಳೆಯೇ ನಡೆಸಲು ತೀರ್ಮಾನಿಸಲಾಗಿದೆ.

[ccc_my_favorite_select_button post_id="120543"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಮದುವೆ ನಿಶ್ಚಯವಾಗಿದ್ದ ಜೋಡಿಯೊಂದರ ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆಂದು (photoshoot) ತೆರಳಿದ್ದ ಫೋಟೋಗ್ರಾಫರ್‌ಗಳ (Photographers) ಮೇಲೆ ಸ್ಥಳೀಯ ಕೆಲವರು ಹಲ್ಲೆ ನಡೆಸಿರುವ ಘಟನೆ ಸಕಲೇಶಪುರ ತಾಲೂಕಿನ ಬೆಟ್ಟದ ಭೈರವೇಶ್ವರ ದೇವಾಲಯದ ಆವರಣದಲ್ಲಿ ನಡೆದಿದೆ.

[ccc_my_favorite_select_button post_id="120523"]
ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ಶ್ರೀರಾಮನವಮಿ ಹಬ್ಬಕ್ಕೆಂದು ತಮ್ಮನ ಮನೆಗೆ ಬರುತ್ತಿದ್ದ ಮಹಿಳೆಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಹಮಾಮ್ ಗೇಟ್ ಬಳಿ ಗುರುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120487"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!