ಭೂ ಸ್ವಾಧೀನಕ್ಕೆ ವಿರೋಧ: ನೂರಾರು ಟ್ರ್ಯಾಕ್ಟರ್‌ಗಳಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕಚೇರಿಗೆ ರೈತರ ಮುತ್ತಿಗೆ..!

Opposition to land acquisition: Farmers siege Doddaballapur Taluk office in tractors..!

ದೊಡ್ಡಬಳ್ಳಾಪುರ: ತಾಲ್ಲೂಕಿನ ದೊಡ್ಡಬೆಳವಂಗಲ ಹೋಬಳಿಯ ಸುತ್ತ ಮುತ್ತ ನಡೆಯುತ್ತಿರುವ 2,100 ಎಕರೆ ಫಲವತ್ತಾದ ಕೃಷಿ ಭೂಸ್ವಾಧೀನ (Land acquisition) ಖಂಡಿಸಿ, ಭೂ ಸ್ವಾಧೀನದ ವಿರುದ್ಧ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ನೇತೃತ್ವದಲ್ಲಿ ಚಿಕ್ಕಬೆಳವಂಗಲದಿಂದ ತಾಲ್ಲೂಕು ಕಚೇರಿವರೆಗೆ ಮಂಗಳವಾರ ನೂರಾರು ಟ್ರ್ಯಾಕ್ಟರ್ (Tractors) ರ್ಯಾಲಿ ನಡೆಸುವ ಮೂಲಕ ರೈತರು ಬೃಹತ್ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ಉಚ್ಛ ನ್ಯಾಯಾಲಯದ ಹಿರಿಯ ವಕೀಲರಾದ ಸಿ.ಎಚ್.ಹನುಮಂತರಾಯ ಅವರು, ಸ್ಥಳೀಯ ಕಂದಾಯ ಇಲಾಖೆ ಅಧಿಕಾರಿಗಳು ಸರ್ಕಾರಕ್ಕೆ ತಪ್ಪು ಮಾಹಿತಿ ನೀಡುವ ಮೂಲಕ ಫವತ್ತಾದ ಕೃಷಿ ಭೂಮಿ ಕೈಗಾರಿಕಾ ಉದ್ದೇಶಕ್ಕೆ ಸ್ವಾಧೀನವಾಗುವಂತೆ ಮಾಡಿದ್ದಾರೆ.

ಈಗ ಸ್ವಾಧೀನಕ್ಕೆ ಒಳಪಡುತ್ತಿರುವ ಕೃಷಿ ಭೂಮಿಯಲ್ಲಿ ನಮ್ಮ ಪೂರ್ವಿಕರ ಕಾಲದಿಂದಲು ಅಡಿಕೆ, ತೆಂಗು,ಬಾಳೆ ಸೇರಿದಂತೆ ಹತ್ತಾರು ರೀತಿಯ ಬೆಳೆಗಳನ್ನು ಬೆಳೆಯುತ್ತ ಬದುಕು ಕಟ್ಟಿಕೊಂಡಿರುವ ಸಾವಿರಾರು ರೈತ ಕುಟುಂಬಗಳು ಇವೆ. ಇಂತಹ ಫಲವತ್ತಾದ ಕೃಷಿ ಭೂಮಿಯನ್ನು ಖಾಲಿ ಭೂಮಿ ಎಂದು ಸರ್ಕಾರಕ್ಕೆ ವರದಿ ನೀಡಿರುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು.

ಈಗ ಸ್ವಾಧೀನ ಮಾಡಿಕೊಳ್ಳಲು ಉದ್ದೇಶಿಸಿರುವ ದೊಡ್ಡಬೆಳವಂಗಲ, ರಾಂಪುರ, ಸೊಣ್ಣೇನಹಳ್ಳಿ, ನಾರನಹಳ್ಳಿ ಹಾಗೂ ಚಿಕ್ಕಬೆಳವಂಗಲ ಗ್ರಾಮಗಳ ಭೂಮಿಯನ್ನು ಕೈಬಿಡದೇ ಇದ್ದರೆ ನ್ಯಾಯಾಲಯದ ಮೂಲಕ ರೈತರಿಗೆ ನ್ಯಾಯ ದೊರಕಿಸಿಕೊಡಲಾಗುವುದು. ಹಾಗೆಯೇ ತಪ್ಪು ಮಾಹಿತಿ ನೀಡಿರುವ ಅಧಿಕಾರಿಗಳ ವಿರುದ್ಧವು ಕಾನೂನು ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ನಮ್ಮ ಪ್ರತಿಭಟನೆಗೆ ಮನ್ನಣೆ ನೀಡಿ ಸರ್ಕಾರ ಭೂಸ್ವಾಧೀನವನ್ನು ಕೈಬಿಡದೇ ಇದ್ದರೆ ಫಲವತ್ತಾದ ಹಾಗೂ ಸಮೃದ್ಧವಾಗಿ ಬೆಳೆ ಬೆಳೆಯುತ್ತಿರುವ ಭೂಮಿಯನ್ನು ಖಾಲಿ ಭೂಮಿ ಎಂದು ವರದಿ ನೀಡಿರುವ ಕಂದಾಯ ಇಲಾಖೆಯ ಅಧಿಕಾರಿಗಳ ವಿರುದ್ಧವು ನ್ಯಾಯಾಲಯದಲ್ಲಿ ದೂರು ದಾಖಲಿಸಲಾಗುವುದು. ನಮ್ಮೂರಿನ ಫಲವತ್ತಾದ ಕೃಷಿ ಭೂಮಿ ಸ್ವಾಧೀನ ರದ್ದತಿಯ ಹೋರಾಟಕ್ಕೆ ಮುಂದಿನ ದಿನಗಳಲ್ಲಿ ವಕೀಲರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದರು.

ಮುಖಂಡರಾದ ಎನ್‌.ಪ್ರಭಾ, ಡಿ.ಸಿ.ಶಶಿಧರ್ ಮಾತನಾಡಿ, ತಾಲೂಕಿನ ದೊಡ್ಡಬೆಳವಂಗಲ ಚಿಕ್ಕಬೆಳವಂಗಲ, ಸೊಣೇನಹಳ್ಳಿ, ನಾರನಹಳ್ಳಿ, ರಾಂಪುರ ಗ್ರಾಮಗಳ ಮೇಲ್ಕಂಡ ಗ್ರಾಮಗಳ ರೈತರಿಗೆ ಸೇರಿದ ಸುಮಾರು 2100 ಎಕರೆ ಕೃಷಿ ಭೂಮಿಯನ್ನು ಕೈಗಾರಿಕಾ ಅಭಿವೃದ್ಧಿಗೆ ಸ್ವಾಧೀನಪಡಿಸಿಕೊಳ್ಳಲು ವಿಶೇಷ ಜಿಲ್ಲಾಧಿಕಾರಿಗಳು ಕೆಐಎಡಿಬಿಯ 398ನೆಯ ಬೋರ್ಡ್ ಸಭೆಯಲ್ಲಿ ಮಂಡಿಸಿ, ಭೂ-ಸ್ವಾಧೀನಕ್ಕೆ ಶಿಫಾರಸ್ಸು ಮಾಡಿದ್ದಾರೆ.

ಕೃಷಿಕರನ್ನು ಅವಲಂಬಿಸಿ ನೂರಾರು ಕೃಷಿ ಕೂಲಿ ಕಾರ ಕುಟುಂಬಗಳು ಬದುಕು ನಡೆಸುತ್ತಿವೆ. ಈ ನಿಟ್ಟಿನಲ್ಲಿ ಭಾರತದ ಸಂವಿಧಾನವು ಎಲ್ಲರಿಗು ಜೀವಿಸುವ, ಬದುಕುವ ಹಕ್ಕನ್ನು ನೀಡಿದ್ದು ಆ ಪ್ರಕಾರವಾಗಿ ಈಗಾಗಲೆ ಸೊರಗಿರುವ ರೈತರನ್ನು ಬದುಕಲು ಬಿಡಬೇಕೆಂದು, ಗುಳೆ ಹೋಗುವ ಪರಿಸ್ಥಿತಿಯನ್ನು ನಿರ್ಮಾಣ ಮಾಡಬಾರದೆಂದು ಆಗ್ರಹಿಸಲಾಗುತ್ತಿದ್ದು, ಮುಖ್ಯಮಂತ್ರಿಗಳಿಗೂ ಸಹ ಮನವಿ ಸಲ್ಲಿಸಲಾಗಿದೆ ಎಂದರು.

ಪ್ರತಿಭಟನೆಯಲ್ಲಿ ಶಾಸಕ ಧೀರಜ್‌ ಮುನಿರಾಜು, ಮಾಜಿ ಶಾಸಕ ಟಿ.ವೆಂಕಟರಮಣಯ್ಯ, ಜೆಡಿಎಸ್ ಮುಖಂಡ ಹರೀಶ್ ಗೌಡ, ಸಿಪಿಐಂ ತಾಲ್ಲೂಕು ಕಾರ್ಯದರ್ಶಿ ರುದ್ರಾರಾಧ್ಯ, ಕರವೇ ರಾಜ್ಯ ಕಾರ್ಯದರ್ಶಿ ರಾಜಘಟ್ಟರವಿ, ಸ್ಥಳೀಯ ಸಿ.ಎಚ್.ರಾಮಕೃಷ್ಣಯ್ಯ, ಸುನಿಲ್‌ ಕುಮಾರ್ ಸೇರದಂತೆ ರೈತ ಸಂಘ, ಕನ್ನಡಪರ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.

ರಾಜಕೀಯ

ಕೇಂದ್ರದಿಂದ ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

ಕೇಂದ್ರದಿಂದ ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್

"ಕೇಂದ್ರ ಬಿಜೆಪಿ (BJP) ಸರ್ಕಾರ ಜನರಿಗೆ ಉಜ್ವಲ ಯೋಜನೆ ಬದಲಾಗಿ ಸೌದೆ ಒಲೆ ಯೋಜನೆ ನೀಡಿದೆ. ಅಚ್ಛೇದಿನ ಏನಾಯ್ತು? ಈಗ ಇರುವುದನ್ನು ಕಚ್ಚಾ ದಿನ ಎಂದು ಹೇಳಬೇಕಾ? ಎಂದು ಬಿಜೆಪಿ ನಾಯಕರನ್ನು ಕೇಳಬಯಸುತ್ತೇನೆ" ಎಂದು

[ccc_my_favorite_select_button post_id="120598"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಮದುವೆ ನಿಶ್ಚಯವಾಗಿದ್ದ ಜೋಡಿಯೊಂದರ ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆಂದು (photoshoot) ತೆರಳಿದ್ದ ಫೋಟೋಗ್ರಾಫರ್‌ಗಳ (Photographers) ಮೇಲೆ ಸ್ಥಳೀಯ ಕೆಲವರು ಹಲ್ಲೆ ನಡೆಸಿರುವ ಘಟನೆ ಸಕಲೇಶಪುರ ತಾಲೂಕಿನ ಬೆಟ್ಟದ ಭೈರವೇಶ್ವರ ದೇವಾಲಯದ ಆವರಣದಲ್ಲಿ ನಡೆದಿದೆ.

[ccc_my_favorite_select_button post_id="120523"]
ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ಶ್ರೀರಾಮನವಮಿ ಹಬ್ಬಕ್ಕೆಂದು ತಮ್ಮನ ಮನೆಗೆ ಬರುತ್ತಿದ್ದ ಮಹಿಳೆಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಹಮಾಮ್ ಗೇಟ್ ಬಳಿ ಗುರುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120487"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]