ಕನ್ನಡ ಭಾಷೆಯ ಅಸ್ಮಿತೆಗಾಗಿ ಕನ್ನಡದ ಅನುಷ್ಠಾನವನ್ನು ಸರ್ಕಾರ ಮಾಡುತ್ತಿದೆ: ಡಾ.ಸಂತೋಷ ಹಾನಗಲ್ಲ

The government is implementing Kannada for the identity of the Kannada language: Dr. Santosha Hanagalla

ದೊಡ್ಡಬಳ್ಳಾಪುರ: ಕನ್ನಡ ಭಾಷೆಯ ಅಸ್ಮಿತೆಗಾಗಿ ಕನ್ನಡದ ಅನುಷ್ಠಾನವನ್ನು ಸರ್ಕಾರ ಮಾಡುತ್ತಿದೆ. ಇದರ ಜೊತೆಗೆ ಕರ್ನಾಟಕ ರಾಜ್ಯದ (Karnataka State) ಪ್ರತಿಯೊಬ್ಬರೂ ಕನ್ನಡ (Kannada l ಮಾತನಾಡುವಂತೆ ಆಗಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ.ಸಂತೋಷ ಹಾನಗಲ್ಲ ತಿಳಿಸಿದರು.

ದೊಡ್ಡಬಳ್ಳಾಪುರ ನಗರದ ಕನ್ನಡ ಜಾಗೃತ ಭವನದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಬೆಂಗಳೂರು ಗ್ರಾಮಾಂತರ ಜಿಲ್ಲಾ  ಕನ್ನಡ ಜಾಗೃತಿ ಸಮಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ,  ಕನ್ನಡ ಸಾಹಿತ್ಯ ಪರಿಷತ್ತು,  ಕನ್ನಡ ಜಾಗೃತ ಪರಿಷತ್ತು ವತಿಯಿಂದ ನಡೆದ ಕನ್ನಡ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಕನ್ನಡಿಗರು ಮೊದಲು ದಿನನಿತ್ಯ ಮತ್ತು ಸಾರ್ವಜನಿಕವಾಗಿ ಕನ್ನಡವನ್ನು ಬಳಸಬೇಕು.‌ ಕನ್ನಡಿಗರು ತಮ್ಮ ಪತ್ರ ವ್ಯವಹಾರಗಳನ್ನು  ಕನ್ನಡದಲ್ಲಿ ರಾಜ್ಯ ಸರ್ಕಾರಕ್ಕೆ ಮಾಡುವಂತೆ ಕೇಂದ್ರ ಸರ್ಕಾರಕ್ಕೂ ಮಾಡಬೇಕು. ಬೆಂಗಳೂರಿನಲ್ಲಿ ಹಲವು ಭಾಷೆಗಳನ್ನು ಮಾತನಾಡುವ ಜನರಿದ್ದಾರೆ. ಇವರುಗಳ ಮಧ್ಯೆ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಕನ್ನಡಿಗರಿಗೆ ಇದೆ. ಕನ್ನಡ ಅಭಿವೃದ್ದಿ ಪ್ರಾಧಿಕಾರ ಕನ್ನಡೇತರಿಗೆ ಕನ್ನಡ ಕಲಿಸುವ ಯೋಜನೆಯನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದೆ. ಎಂದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಟಿ.ತಿಮ್ಮೇಶ್ ಮಾತನಾಡಿ, ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆ. ಕನ್ನಡ ಉಳಿಸಿ ಬೆಳೆಸುವಲ್ಲಿ ಕನ್ನಡಪರ ಸಂಘಟನೆಗಳು ಪ್ರಧಾನ ಪಾತ್ರ ವಹಿಸುವೆ. ಇದರಿಂದ ಕನ್ನಡಕ್ಕಾಗಿ ದುಡಿಯುವರಿಗೆ ಸಾರ್ಥಕತೆ ಇದೆ. ಬೆಂಗಳೂರಿನಲ್ಲಿ ಕನ್ನಡಿಗರ ಸಂಖ್ಯೆ ಶೇ.40 ರಷ್ಟು ಮಾತ್ರವಿದೆ. ಕನ್ನಡವನ್ನು ನಿರ್ಲಕ್ಷಿಸುವ ಕನ್ನಡ ವಿರೋಧಿಗಳ ಬಗ್ಗೆ ಸದಾ ಎಚ್ಚರವಹಿಸಬೇಕಾಗಿದೆ.

ಕರ್ನಾಟಕದಲ್ಲಿ ಕನ್ನಡ ಶೇ.100 ರಷ್ಡು ಜಾರಿಗೆ ಬರಬೇಕು. ಕನ್ನಡಿಗರು ಕನ್ನಡ ನಾಡಿನಲ್ಲಿ ವಿದ್ಯೆ ಮತ್ತು ಉದ್ಯೋಗದಿಂದ ವಂಚಿತರಾಗಬಾರದು. ಕನ್ನಡದ ಅನುಷ್ಠಾನಕ್ಕೆ ಪ್ರಸ್ತುತ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಸಮಿತಿಗಳು ಮತ್ತು ಸದಸ್ಯರು ಇದ್ದಾರೆ. ಇವರು ಕನ್ನಡಪರ ಸಂಘಟನೆಗಳೊಂದಿಗೆ ಸೇರಿ ಕನ್ನಡ ಅನುಷ್ಠಾನ ಸಮರ್ಪಕವಾಗಿ ಜಾರಿಗೊಳಿಸಬೇಕೆಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪ್ರೊ.ಬಿ.ಎನ್.ಕೃಷ್ಣಪ್ಪ ಮಾತನಾಡಿ, ನಮ್ಮ ರಾಜ್ಯದಲ್ಲಿ ಕಾರ್ಯನಿರ್ವಹಿಸುವ ಬಹುರಾಷ್ಟ್ರೀಯ ಕಂಪನಿಗಳು ಮತ್ತು ರಾಷ್ಟ್ರೀಕೃತ ಬ್ಯಾಂಕುಗಳು, ಸ್ವಾಯತ್ತತೆಯ ವಿಶ್ವವಿದ್ಯಾಲಯಗಳು ಮುಂತಾದವು ಕನ್ನಡ ಭಾಷೆಯನ್ನು ನಿರ್ಲಕ್ಷ್ಯ ಮಾಡುತ್ತಿವೆ. ಇದರ ಬಗ್ಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಗಮನ‌ನೀಡಬೇಕಾಗಿದೆ. ಕನ್ನಡ ಜಾಗೃತಿ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸಬೇಕಾಗಿದೆ ಎಂದರು.

ಮನವಿ ಮತ್ತು ಒತ್ತಾಯ

ಶಿಕ್ಷಣದಲ್ಲಿ ದ್ವಿಭಾಷಾ ನೀತಿಯನ್ನು ಶಾಸನವಾಗಿ ರೂಪಿಸಿ ಜಾರಿಗೊಳಿಸಬೇಕೆಂದು ದೊಡ್ಡಬಳ್ಳಾಪುರ ವಿವಿಧ ಕನ್ನಡಪರ ‌ಸಂಘಟನೆಗಳು ಮುಖ್ಯಮಂತ್ರಿಗಳಿಗೆ ಮನವಿಯನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ.ಸಂತೋಷ್ ಹಾನಗಲ್ಲ ಅವರಿಗೆ ನೀಡಿದರು.

ದ್ವಿಭಾಷಾ ನೀತಿಯನ್ನು ಶಾಸನಗೊಳಿಸಿ ಜಾರಿಗೆ ತರುವ ಮೂಲಕ ಕನ್ನಡ ಭಾಷೆಯ ಬಳಕೆ ಮತ್ತು ಕನ್ನಡ ಭಾಷೆಯ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ದ್ವಿಭಾಷಾ ನೀತಿಯನ್ನು ಕಡ್ಡಾಯಗೊಳಿಸುವುದರಿಂದ ಪ್ರತಿಯೊಬ್ಬರೂ ಕನ್ನಡವನ್ನು ಶಿಕ್ಷಣದಲ್ಲಿ ಕಲಿಯುವಂತೆ ಕಡ್ಡಾಯಗೊಳಿಸುತ್ತದೆ ಎಂದು ಕನ್ನಡಪರ ಸಂಘಟನೆಗಳ ಮುಖಂಡರು ಅಭಿಪ್ರಾಯ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ತಹಶಿಲ್ದಾರ್ ಡಾ.ಮಲ್ಲಪ್ಪ ಕೆ.ಯರಗೋಳ, ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎಸ್.ಶಂಕರಯ್ಯ, ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಕನ್ನಡಿಗೆ ಸ್ನೇಹಕೂಟದ ಅಧ್ಯಕ್ಷ ರಾಂ.ಕೆ.ಹನುಮಂತಯ್ಯ, ಕನ್ನಡ ಜಾಗೃತ ಪರಿಷತ್ತು ಕಾರ್ಯದರ್ಶಿ ಡಿ.ಪಿ.ಆಂಜನೇಯ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರುಗಳಾದ ಕೆ.ಮಹಾಲಿಂಗಯ್ಯ, ನಾಗರತ್ನಮ್ಮ, ವಿ.ಬಸವರಾಜು, ಯು.ಸಿರಾಜ್ ಅಹಮದ್, ರವಿಚಂದ್ರ, ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರು ಮತ್ತು ಪದಾಧಿಕಾರಿಗಳು ಭಾಗವಹಿಸಿದ್ದರು.

ರಾಜಕೀಯ

ಕೇಂದ್ರದಿಂದ ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

ಕೇಂದ್ರದಿಂದ ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್

"ಕೇಂದ್ರ ಬಿಜೆಪಿ (BJP) ಸರ್ಕಾರ ಜನರಿಗೆ ಉಜ್ವಲ ಯೋಜನೆ ಬದಲಾಗಿ ಸೌದೆ ಒಲೆ ಯೋಜನೆ ನೀಡಿದೆ. ಅಚ್ಛೇದಿನ ಏನಾಯ್ತು? ಈಗ ಇರುವುದನ್ನು ಕಚ್ಚಾ ದಿನ ಎಂದು ಹೇಳಬೇಕಾ? ಎಂದು ಬಿಜೆಪಿ ನಾಯಕರನ್ನು ಕೇಳಬಯಸುತ್ತೇನೆ" ಎಂದು

[ccc_my_favorite_select_button post_id="120598"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ ಶೋಭಾಯಾತ್ರೆಯಲ್ಲಿ ಡಿಜೆ ಬಳಕೆ..!; ಆಯೋಜಕರ ವಿರುದ್ಧ FIR.!

ದೊಡ್ಡಬಳ್ಳಾಪುರ ಶೋಭಾಯಾತ್ರೆಯಲ್ಲಿ ಡಿಜೆ ಬಳಕೆ..!; ಆಯೋಜಕರ ವಿರುದ್ಧ FIR.!

ವಿಶ್ವ ಹಿಂದೂಪರಿಷತ್ ಮತ್ತು ಬಜರಂಗದಳ ದಿಂದ ಭಾನುವಾರ ದೊಡ್ಡಬಳ್ಳಾಪುರದಲ್ಲಿ ಶೋಭಾಯಾತ್ರೆ (Sobhayatre) ಅದ್ದೂರಿಯಾಗಿ ನೆರವೇರಿದೆ. ಆದರೆ ಆಯೋಜಕರಿಗೆ ಸಂಕಷ್ಟ ಎದುರಾಗಿದೆ.

[ccc_my_favorite_select_button post_id="120613"]
ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ಶ್ರೀರಾಮನವಮಿ ಹಬ್ಬಕ್ಕೆಂದು ತಮ್ಮನ ಮನೆಗೆ ಬರುತ್ತಿದ್ದ ಮಹಿಳೆಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಹಮಾಮ್ ಗೇಟ್ ಬಳಿ ಗುರುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120487"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]