ಚನ್ನರಾಯಪಟ್ಟಣ: ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳದ ಶ್ರೀಕಂಠನಗರದಲ್ಲಿ ನಡೆದಿದೆ.

ಯುವಕ ಉಮಾಶಂಕರ್ ಹಲವು ವರ್ಷಗಳಿಂದ ಮದುವೆ ಮಾಡಿಸುವಂತೆ ತಾಯಿಯನ್ನು ಒತ್ತಾಯಿಸುತ್ತಿದ್ದನಂತೆ. ಆದರೆ ಮಾಡಿಸಿಲ್ಲವೆಂದು ಜಗಳ ತೆಗೆದ ಮಗ ತಾಯಿಯ ತಲೆಗೆ ಕಲ್ಲಿನಿಂದ ಹಲ್ಲೆಮಾಡಿದ್ದಾನೆ. ಇದರಿಂದ ತೀವ್ರವಾಗಿ ಗಾಯಗೊಂಡ ತಾಯಿ ಗಂಗಮ್ಮ ಅವರನ್ನು ಹಾಸನದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ತಾಯಿ ಸಾವನಪ್ಪಿದ್ದಾರೆ ಎನ್ನಲಾಗಿದೆ.
ಗಂಗಮ್ಮ ಪುತ್ರ ಉಮಾಶಂಕರ್ ಬೆಂಗಳೂರಿನಲ್ಲಿ ವಾಸವಾಗಿದ್ದರಂತೆ. ಒಮ್ಮೆ ಆತನಿಗೆ ಉಮಾಶಂಕರ್‌ಗೆ ಅಪಘಾತವಾಗಿದ್ದು ತಲೆಗೆ ಪೆಟ್ಟು ಬಿದ್ದ ಬಳಿಕ ಅವನ ವರ್ತನೆ ಬದಲಾಗಿತ್ತು ಎನ್ನಲಾಗಿದೆ. ಹೀಗಾಗಿ, ಆತನ ಮದುವೆಗೆ ಕುಟುಂಬಸ್ಥರು ಅಷ್ಟೊಂದು ತಲೆ ಕೆಡಿಸಿಕೊಂಡಿರಲಿಲ್ಲವಂತೆ.
ಆದರೆ, ಮದುವೆ ವಿಚಾರವಾಗಿ ಮನೆಯಲ್ಲಿ ಜಗಳ ನಡೆದಿದ್ದು, ಈ ವೇಳೆ ರೊಚ್ಚಿಗೆದ್ದ ಉಮಾಶಂಕರ್ ಕಲ್ಲಿನಿಂದ ತಾಯಿ ಗಂಗಮ್ಮನ ತಲೆಗೆ ಹೊಡೆದು ಗಾಯಗೊಳಿಸಿದ್ದಾನೆ. ಇದರಿಂದ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ತಾಯಿ ಗಂಗಮ್ಮ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ ಎಂದು ವರದಿಯಾಗಿದೆ.
ಈ ಕುರಿತು ಶ್ರವಣಬೆಳಗೊಳ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸಾವರ ಸಾವು..!

ದೊಡ್ಡಬಳ್ಳಾಪುರ: ಕೆಎಸ್‌ಆರ್‌ಟಿಸಿ (KSRTC) ಬಸ್ ಡಿಕ್ಕಿ ಹೊಡೆದ (Accident) ಪರಿಣಾಮ ಬೈಕ್ ಸವಾರ ಸಾವನಪ್ಪಿರುವ ಘಟನೆ ಹಿಂದೂಪುರ- ಬೆಂಗಳೂರು ನಡುವಿನ ರಾಜ್ಯ ಹೆದ್ದಾರಿ ದೊಡ್ಡಬಳ್ಳಾಪುರ ಎಪಿಎಂಸಿ ಮಾರುಕಟ್ಟೆ ಸಮೀಪ ಸಂಭವಿಸಿದೆ.
ಮೃತ ದುರ್ದೈವಿಯನ್ನು ಪಾಲನಜೋಗಿಹಳ್ಳಿ ನಿವಾಸಿ ಪುರುಷೋತ್ತಮ (29 ವರ್ಷ) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಗೌರಿಬಿದನೂರು ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ಕೆಎಸ್‌ಆರ್ಟಿಸಿ ಬಸ್ ಹಾಗೂ ಬೈಕ್ ಸಾವರ ತೆರಳುತ್ತಿದ್ದು, ಬಸ್ ಡಿಕ್ಕಿ ಹೊಡೆದ ಪರಿಣಾಮ ಕೆಳಗೆ ಬಿದ್ದ ಬೈಕ್ ಸವಾರನ ಮೇಲೆ ಬಸ್ ಹರಿದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ವರದಿಯಾಗಿದ್ದು, ಈ ವ್ಯಾಪ್ತಿಯಲ್ಲಿ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಸಾರ್ವಜನಿಕರ ಆಕ್ರೋಶ
ಇನ್ನೂ ಪ್ರಾವಾಸಿ ಮಂದಿರದಿಂದ ಪಾಲನಜೋಗಿಹಳ್ಳಿ ಕಡೆ ಸಾಗುವ ರಾಜ್ಯ ಹೆದ್ದಾರಿಯ ಎರಡು ಬದಿಗಳಲ್ಲಿ ಬೇಕಾಬಿಟ್ಟಿ ವಾಹನಗಳನ್ನು ನಿಲ್ಲಿಸುತ್ತಿರುವ ಕಾರಣ ಅಪಘಾತಕ್ಕೆ ಕಾರಣವಾಗುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯ ಹೆದ್ದಾರಿ ಸುಂಕ ವಸೂಲಿ ಮಾಡುವ ಟೋಲ್ ಸಂಸ್ಥೆ, ಸುಗಮ ಸಂಚಾರಕ್ಕೆ ಅವಕಾಶ ಕಲ್ಪಸದ ಕಾರಣ, ವಾಹನ ಸವಾರರು ಈ ರಸ್ತೆ ಎರಡೂ ಬದಿಗಳಲ್ಲಿ ಇರುವ ಅಂಗಡಿಗಳ ಬಳಿ ಬೇಕಾಬಿಟ್ಟಿಯಾಗಿ ರಸ್ತೆ ಬದಿಯಲ್ಲಿಯೇ ವಾಹನ ನಿಲ್ಲಿಸುತ್ತಿದ್ದು, ಇದರಿಂದ ವಾಹನ ದಟ್ಟಣೆಯ ಜೊತೆ ಪದೇ ಪದೇ ಅಪಘಾತಗಳಿಗೆ ಕಾರಣವಾಗುತ್ತಿದ್ದು, ಟೋಲ್ ಸಿಬ್ಬಂದಿಗಳು ಹಾಗೂ ಪೊಲೀಸರು ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.