ಪೊಲೀಸ್ ಇಲಾಖೆಯಲ್ಲಿ ರಿಯಲ್ ಎಸ್ಟೇಟ್ ದಂಧೆ ಮಾಡಬಾರದು: ಸಚಿವ ಪರಮೇಶ್ವರ್

Real estate scam should not be allowed in the police department: Minister Parameshwar

ಬೆಂ.ಗ್ರಾ.ಜಿಲ್ಲೆ: ಪೊಲೀಸ್ ಇಲಾಖೆಯಲ್ಲಿ (Police department) 1000 ಸಬ್ ಇನ್ಸ್ಪೆಕ್ಟರ್ ಹಾಗೂ 8000 ಕಾನ್ಸ್ಟೇಬಲ್ ಗಳನ್ನು ಆದಷ್ಟು ಶೀಘ್ರ ನೇಮಕ ಮಾಡಲಾಗುವುದು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ (Dr.G. Parameshwar) ಅವರು ಹೇಳಿದರು.

ದೇವನಹಳ್ಳಿ ಟೌನ್ ನಲ್ಲಿ ಪ್ರೆಸ್ಟೀಜ್ ಗ್ರೂಪ್ ಸಂಸ್ಥೆಯಿಂದ ಸಿಎಸ್ಆರ್ ಅನುದಾನದಡಿ ನಿರ್ಮಿಸಲಾಗಿರುವ ದೇವನಹಳ್ಳಿ ಸಹಾಯಕ ಪೊಲೀಸ್ ಆಯುಕ್ತರ ಕಚೇರಿ ಹಾಗೂ ದೇವನಹಳ್ಳಿ ಪೊಲೀಸ್ ಠಾಣೆಯ ನೂತನ ಕಟ್ಟಡಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪೊಲೀಸ್ ಇಲಾಖೆಯಲ್ಲಿ ದೊಡ್ಡ ಬದಲಾವಣೆಗಳನ್ನು ಮಾಡಲಾಗುತ್ತಿದೆ. ಪಿಎಸ್ಐ ಹಗರಣವನ್ನು ಬಗೆಹರಿಸಿ ಈಗ 545 ಜನ ತರಬೇತಿ ಪಡೆದು ಕೆಲಸಕ್ಕೆ ಸೇರಿದ್ದಾರೆ. ಇನ್ನು ಸಬ್ ಇನ್ಸ್ಪೆಕ್ಟರ್ ಗಳ ನೇಮಕ ಹಾಗೂ ಕಾನ್ಸ್ಟೇಬಲ್ ಗಳನ್ನು ನೇಮಕಕ್ಕೆ ಮುಖ್ಯಮಂತ್ರಿಗಳು ಅನುಮತಿ ನೀಡಿದ್ದು, ಹಣಕಾಸು ಇಲಾಖೆಯು ಅನುಮೊದಿಸಿದ್ದು ಮುಂದಿನ ದಿನಗಳಲ್ಲಿ ನೇಮಕ ಮಾಡಲಾಗುವುದು ಎಂದರು.

ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ಯಾವುದೇ ಕೋಮುಗಲಭೆಗಳಾಗಿಲ್ಲ ಕರಾವಳಿ ಭಾಗದಲ್ಲಿಯೂ ಕೂಡ ಗಲಾಟೆ ಆಗಿಲ್ಲ. ಸಬ್ ಇನ್ಸ್ಪೆಕ್ಟರ್ ವರ್ಗಾವಣೆಯನ್ನು ಒಂದು ವರ್ಷದಿಂದ ಎರಡು ವರ್ಷಕ್ಕೆ ಹೆಚ್ಚಿಸಲಾಗಿದೆ. ಕಡ್ಡಾಯವಾಗಿ ಎರಡು ವರ್ಷ ಪೊರೈಸಲೇಬೇಕು.

ಪೊಲೀಸ್ ಇಲಾಖೆಗೆ ಎಲ್ಲಾ ರೀತಿಯ ಸೌಲಭ್ಯಗಳನ್ನು ನೀಡುತ್ತಿದ್ದೇವೆ. ಪೊಲೀಸ್ ಗೃಹ ಎಂಬ ಯೋಜನೆ ಯಿಂದ ಸುಮಾರು 40% ಸಿಬ್ಬಂದಿ, ಪೊಲೀಸರಿಗೆ ಮನೆ ಕಟ್ಟಿಕೊಟ್ಟಿದ್ದೀವಿ, ಒಂದು ಅಪಾರ್ಟ್ಮೆಂಟ್ಗೆ 38 ಲಕ್ಷ ಖರ್ಚು ಮಾಡಿ ಮನೆ ನಿರ್ಮಿಸಲಾಗಿದೆ. ಇನ್ನಷ್ಟು ಮನೆಗಳನ್ನು ಕಟ್ಟಲಿದ್ದೇವೆ ಎಂದು ಹೇಳಿದರು.

ಪೋಲಿಸ್ ಇಲಾಖೆ ಬಹಳ ಶಿಸ್ತು ಬದ್ಧ ಇಲಾಖೆ ಕರ್ನಾಟಕ ಪೊಲೀಸ್ ಇಲಾಖೆಗೆ ಒಂದು ಇತಿಹಾಸ ಇದೆ. ಇಡೀ ದೇಶದಲ್ಲಿ ಸಂಯಮದಿಂದ ಜನಸ್ನೇಹಿಯಾಗಿ ಕೆಲಸ ಮಾಡುತ್ತಿರುವ ಪೊಲೀಸ್ ಇಲಾಖೆ ಇಡೀ ದೇಶದಲ್ಲಿ ಯಾವುದಾದರೂ ಇದೆ ಎಂದರೆ ಅದು ಕರ್ನಾಟಕ ಪೊಲೀಸ್. ಇಲಾಖೆಯಲ್ಲಿ ಅನೇಕ ಬದಲಾವಣೆಗಳನ್ನು ತರಲಾಗಿದೆ ಇಡೀ ದೇಶದಲ್ಲಿ ನ್ಯಾಯವನ್ನು ಜರೂರಾಗಿ ಒದಗಿಸುವುದರಲ್ಲಿ ಕರ್ನಾಟಕ ನಂಬರ್ ಒನ್ ಸ್ಥಾನದಲ್ಲಿದೆ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಈಗ ಸಾಕಷ್ಟು ಭೂಮಿ ಬೆಲೆ ಜಾಸ್ತಿ ಆಗಿದೆ. ರಿಯಲ್ ಎಸ್ಟೇಟ್ ದಂಧೆ ಬಗ್ಗೆ ಸಂಸದರು ಪ್ರಸ್ತಾಪಿಸಿದ್ದಾರೆ. ನಾನು ಅನೇಕ ಬಾರಿ ಸಭೆಗಳಲ್ಲಿ ಪ್ರಸ್ತಾಪಿಸಿದ್ದೇನೆ, ಯಾವ ಅಧಿಕಾರಿಯೂ ಕೂಡ ಪೊಲೀಸ್ ಇಲಾಖೆಯಲ್ಲಿ ರಿಯಲ್ ಎಸ್ಟೇಟ್ ದಂಧೆ ಮಾಡಬಾರದು. ಯಾರಾದರೂ ಪೊಲೀಸ್ ಸ್ಟೇಷನ್ ಗೆ ಬಂದಾಗ ಎಫ್ ಐ ಆರ್ ದಾಖಲಿಸಿ ಅವರಿಗೆ ನ್ಯಾಯ ಒದಗಿಸಿ ಕೊಡುವುದು ಬಿಟ್ಟರೆ ಪೊಲೀಸ್ ಸ್ಟೇಷನ್ನಲ್ಲಿ ಕುಳಿತುಕೊಂಡು ದಂಧೆ ಬಗ್ಗೆ ಮಾತನಾಡಿ ಹಣ ವಸೂಲಿ ಮಾಡುವುದು ಆಗಬಾರದು ಎಂದು ಪೊಲೀಸ್ ಇಲಾಖೆಗೆ ಖಡಕ್ ಸೂಚನೆ ನೀಡಿದರು.

ಪ್ರೆಸ್ಟೀಜ್ ಕಂಪನಿಯವರು ಸಿಎಸ್ಆರ್ ಅನುದಾನದಲ್ಲಿ ಬಹಳ ಸುಂದರವಾದ ಕಟ್ಟಡವನ್ನು ಕಟ್ಟಿಸಿಕೊಟ್ಟಿದ್ದಾರೆ. ದೇಶದಲ್ಲಿಯೇ ಮಾದರಿ ಪೊಲೀಸ್ ಕಟ್ಟಡ ಎಂದರೆ ತಪ್ಪಾಗಲಾರದು. ವಿನ್ಯಾಸವು ಕೂಡ ಬಹಳ ಚೆನ್ನಾಗಿ ಮೂಡಿ ಬಂದಿದೆ. ಸುಸಜ್ಜಿತ ಕಟ್ಟಡದಲ್ಲಿ ಜನಸ್ನೇಹಿ ಕೆಲಸಗಳು ಆಗಬೇಕು. ಸಾರ್ವಜನಿಕರು ಪೊಲೀಸ್ ಸ್ಟೇಷನ್ ಗೆ ಬಂದಾಗ ಅವರ ಜೊತೆ ಸರಿಯಾಗಿ ವರ್ತಿಸಿ, ಭಾಷೆ ಬದಲಾವಣೆ ಮಾಡಿಕೊಳ್ಳಿ ಎಂದು ಹಲವು ಬಾರಿ ಹೇಳುತ್ತಾ ಬಂದಿದ್ದೇನೆ. ಅದೇ ರೀತಿಯ ಜನಸ್ನೇಹಿ ಆಡಳಿತ ನೀಡಬೇಕು ಎಂದರು.

ದೇವನಹಳ್ಳಿಯ ಆವತಿಯಲ್ಲಿ ಭಾರತ ಮೀಸಲು ಪಡೆ ಆವತಿ ಘಟಕದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಸಚಿವರು ಶಾಂತಿಯನ್ನು ಕಾಪಾಡಲು ಹಾಗೂ ಬೇರೆ ಬೇರೆ ಸಂದರ್ಭಗಳಲ್ಲಿ ಕೆಲಸ ನಿರ್ವಹಿಸಲು ರಿಸರ್ವ್ ಪೊಲೀಸನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ರಾಜ್ಯದಲ್ಲಿ 14 ಮೀಸಲು ಪೊಲೀಸ್ ಪಡೆ ಇದ್ದು, ಬೆಂಗಳೂರು ದಕ್ಷಿಣ ಈ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಆವತಿ ಬಳಿ ಮೀಸಲು ಪಡೆ ಘಟಕ ಮಾಡಲಾಗುತ್ತಿದೆ. ಇದು 568 ಕೋಟಿ ರೂಗಳ ಯೋಜನೆ. 1000 ಕ್ಕು ಹೆಚ್ಚು ಸಿಬ್ಬಂದಿ ಇಲ್ಲಿ ತರಬೇತಿ ಪಡೆಯಲಿದ್ದಾರೆ. ಹಂತ ಹಂತವಾಗಿ ಮಾಡಲಾಗುವುದು. ಇಂದು 30 ಕೋಟಿ ರೂ. ವೆಚ್ಚದ ಕಾಮಗಾರಿಗೆ ಭೂಮಿಪೂಜೆ ಮಾಡಲಾಗಿದೆ. ಇದು ಒಂದು ಪ್ರತಿಷ್ಠಿತ ಮೀಸಲು ಘಟಕ ಆಗಲಿದೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಕೆ ಹೆಚ್ ಮುನಿಯಪ್ಪ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರೆಸ್ಟೀಜ್ ಕಂಪನಿಯವರು ಬಹಳಷ್ಟು ಒಳ್ಳೆಯ ಕೆಲಸವನ್ನು ಮಾಡಿದೆ. ಜಿಲ್ಲೆಯಲ್ಲಿ ಸಿಎಸ್ಆರ್ ಅನುದಾನದಲ್ಲಿ ಶಾಲಾ ಕಾಲೇಜು ಕಟ್ಟುತ್ತಿದ್ದಾರೆ. ಜಿಲ್ಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಿಕ್ಷಣ ಒದಗಿಸುವುದು, ಉದ್ಯೋಗ ಒದಗಿಸುವುದು ನಮ್ಮ ಆದ್ಯತೆ ಆಗಿರಬೇಕು. ಜಿಲ್ಲೆಯಲ್ಲಿರುವ ಕಂಪನಿಗಳು ಸ್ಥಳೀಯರಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸಿ. ಸಾಕಷ್ಟು ರೈತಾಪಿ ಕುಟುಂಬಗಳು ಕೈಗಾರಿಕೆಗಳಿಗೆ ಭೂಮಿ ನೀಡಿದ್ದು ಅಂತಹ ಕುಟುಂಬಗಳ ಅಭ್ಯರ್ಥಿಗಳಿಗೆ ಉದ್ಯೋಗ ನೀಡಿದರೆ ಅನುಕೂಲವಾಗಲಿದೆ ಎಂದರು.

ಪೊಲೀಸ್ ಠಾಣೆಗಳು ಸದಾ ಜನಸ್ನೇಹಿಯಾಗಿರಬೇಕು. ಯಾರಾದರೂ ಪೊಲೀಸ್ ಸ್ಟೇಷನ್ ಗೆ ಬಂದು ದೂರು ಕೊಟ್ಟಲ್ಲಿ ಅವರನ್ನ ಸಂಯಮದಿಂದ ವರ್ತಿಸಿ ಪೊಲೀಸ್ ಸ್ಟೇಷನ್ನಲ್ಲಿ ಬಗೆಹರಿಸುವಂತ ಸಮಸ್ಯೆಗಳಿದ್ದಲ್ಲಿ ಅಲ್ಲೇ ಬಗೆಹರಿಸಿ ಅವರನ್ನು ಕಳಿಸಿಕೊಡುವುದು ಉತ್ತಮ. ತೀರ ಅನಿವಾರ್ಯವಾದಲ್ಲಿ ಮಾತ್ರ ಎಫ್ ಐ ಆರ್ ದಾಖಲಿಸಿ. ಇಲ್ಲವಾದಲ್ಲಿ ಅವರು ಪೊಲೀಸ್ ಸ್ಟೇಷನ್,ಕೋರ್ಟ್ ಎಂದು ಅಲೆಯುತ್ತಾರೆ. ಇದರಿಂದ ಗ್ರಾಮಗಳಲ್ಲಿ ಮನಸ್ತಾಪಗಳು ಹೆಚ್ಚಾಗಿ ಗ್ರಾಮಗಳ ಅಭಿವೃದ್ಧಿ ಕುಂಠಿತವಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಚಿಕ್ಕಬಳ್ಳಾಪುರ ಸಂಸದರಾದ ಡಾ. ಕೆ.ಸುಧಾಕರ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾದ ಡಾ. ಎಂ.ಎ.ಸಲೀಂ, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್, ಜಿಲ್ಲಾಧಿಕಾರಿ ಡಾ. ಕೆಎನ್ ಅನುರಾಧ, ಜಂಟಿ ಪೊಲೀಸ್ ಆಯುಕ್ತರಾದ ರಮೇಶ್ ಬಾನೋಥ್, ವಂಶಿಕೃಷ್ಣ, ಪ್ರೆಸ್ಟಿಜ್ ಗ್ರೂಪ್ ಸಂಸ್ಥೆಯ ಮುಖ್ಯಸ್ಥರಾದ ನದೀಮ್ ಮತ್ತು ನಹೀಮ್ ರವರು, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ರಾಜಣ್ಣ,ಬಯಪ ಅಧ್ಯಕ್ಷರಾದ ಶಾಂತಕುಮಾರ್, ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.

ರಾಜಕೀಯ

ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ; ಹೆಚ್.ಡಿ. ಕುಮಾರಸ್ವಾಮಿ

ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ; ಹೆಚ್.ಡಿ. ಕುಮಾರಸ್ವಾಮಿ

ಮುಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಎಂದು ಅಥವಾ ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ. ಅಂಬೇಡ್ಕರ್ ಅವರ ಜಯಂತಿ ದಿನ ನನ್ನ ಬಗ್ಗೆ ಘೋಷಣೆಗಳನ್ನು ಕೂಗುವುದು ಬೇಡ: ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy)

[ccc_my_favorite_select_button post_id="120957"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ರಸ್ತೆಯಲ್ಲಿ ಟ್ಯಾಂಕರ್ ಬ್ರೇಕ್ ವಿಫಲವಾಗಿದ್ದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಪಕ್ಕದಲ್ಲೇ ಸಾಗುತ್ತಿದ್ದ ಬಿಎಂಡಬ್ಲ್ಯು ಕಾರಿನ (BMW Car) ಮೇಲೆ ಮಗುಚಿ ಬಿದ್ದಿದೆ.

[ccc_my_favorite_select_button post_id="120918"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]