ದೊಡ್ಡಬಳ್ಳಾಪುರ: ತಾಲ್ಲೂಕಿಗೆ ಸಮೀಪದ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳ ಆವರಣದಲ್ಲಿ ಜಗಜ್ಯೋತಿ ಬಸವೇಶ್ವರರ (Basaveshwara) ಪ್ರತಿಮೆ ಸ್ಥಾಪನೆ ಮಾಡಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳ ಆವರಣದಲ್ಲಿ ಜಗಜ್ಯೋತಿ ಬಸವೇಶ್ವರರ ಪ್ರತಿಮೆ ಸ್ಥಾಪನೆಗೆ ಸಹಕಾರ ನೀಡಿದ್ದ ಬೆಂಗಳೂರು ಘನತ್ಯಾಜ್ಯ ನಿರ್ವಹಣ ನಿಗಮದ ಸಿಇಒ ಕರೀಗೌಡ ಅವರನ್ನು ಜಗಜ್ಯೋತಿ ಬಸವೇಶ್ವರ ಪ್ರತಿಮೆ ನಿರ್ಮಾಣ ಸಮಿತಿ ಅಧ್ಯಕ್ಷ ಎಂ.ಎಸ್.ರಮೇಶ್ ಹಾಗೂ ಪದಾಧಿಕಾರಿಗಳು ಗುರುವಾರ ಪ್ರತಿಮೆ ಬಳಿ ಅಭಿನಂದಿಸಿದರು.

JDS ದೊಡ್ಡಬಳ್ಳಾಪುರ ಅಧ್ಯಕ್ಷರಾಗಿ ಹರೀಶ್ ಗೌಡ ಆಯ್ಕೆ ಬಹುತೇಕ ಖಚಿತ..?

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ (JDS) ಅಧ್ಯಕ್ಷ ಆಯ್ಕೆ ಬೆನ್ನಲ್ಲೇ, ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಯಾರಾಗಲಿದ್ದಾರೆ ಎಂಬ ಚರ್ಚೆ ವ್ಯಾಪಕವಾಗಿ ನಡೆಯುತ್ತಿದೆ.
ಹೌದು ಕಳೆದ ಹಲವು ವರ್ಷಗಳಿಂದ ಜೆಡಿಎಸ್ ಪಕ್ಷದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷರಾಗಿದ್ದ ಬಿ.ಮುನೇಗೌಡ ಅವರ ಸ್ಥಾನಕ್ಕೆ ಕೆ.ವಿ.ಮಂಜುನಾಥ್ ಅವರನ್ನು ಆಯ್ಕೆ ಮಾಡಲಾಗಿದ್ದು, ಈಗ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಸ್ಥಾನದ ಮೇಲೆ ಎಲ್ಲರ ಕಣ್ಣು ನೆಟ್ಟಿದೆ.
ಪ್ರಸ್ತುತ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಲಕ್ಷ್ಮೀಪತಯ್ಯ ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ ಜೆಡಿಎಸ್ ಪದಾಧಿಕಾರಿಗಳನ್ನು ವಿಸರ್ಜಿಸಲಾಗಿದ್ದು, ನೂತನ ಅಧ್ಯಕ್ಷರ ಆಯ್ಕೆ ಕುರಿತು ಮುಖಂಡರು, ಕಾರ್ಯಕರ್ತರ ಸಭೆ ನಡೆಸಿ, ಸಲಹೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.
ದೊಡ್ಡಬಳ್ಳಾಪುರ ಜೆಡಿಎಸ್ ಅಧ್ಯಕ್ಷ ಸ್ಥಾನದ ಆಯ್ಕೆ ಕುರಿತು ಪ್ರಮುಖವಾಗಿ ಹರೀಶ್ ಗೌಡ, ಹುಸ್ಕೂರು ಆನಂದ್, ಡಾ.ವಿಜಯ್ ಕುಮಾರ್, ವಕೀಲರಾದ ಅಂಜನೇಗೌಡ, ಸತೀಶ್ ಅವರ ಹೆಸರು ಕೇಳಿ ಬರುತ್ತಿದ್ದು, ಮತ್ತೊಮ್ಮೆ ಲಕ್ಷ್ಮೀಪತಯ್ಯ ಅವರೇ ಮುಂದುವರಿಯುವ ನಿರೀಕ್ಷೆಯಲ್ಲಿದ್ದಾರೆ.
JDS ದೊಡ್ಡಬಳ್ಳಾಪುರ ಅಧ್ಯಕ್ಷರಾಗಿ ಹರೀಶ್ ಗೌಡ ಆಯ್ಕೆ ಬಹುತೇಕ ಖಚಿತ..?
ಹರಿತಲೇಖನಿಗೆ ದೊರೆತಿರುವ ಜೆಡಿಎಸ್ ಮೂಲಗಳ ಮಾಹಿತಿ ಅನ್ವಯ, ದೊಡ್ಡಬಳ್ಳಾಪುರ ತಾಲ್ಲೂಕಿನ ಹಿರಿಯ ಮುಖಂಡ ಹರೀಶ್ ಗೌಡ ಅವರ ಹೆಗಲಿಗೆ ದೊಡ್ಡಬಳ್ಳಾಪುರ ಜೆಡಿಎಸ್ ಜವಾಬ್ದಾರಿ ಬೀಳುವ ಸಾಧ್ಯತೆ ಹೆಚ್ಚಾಗಿದೆ.
ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜೆಡಿಎಸ್ ಪ್ರಭಾವ ಹೊಂದಿದ್ದರು, ಬಣಬಡಿದಾಟದಿಂದ ಪದೇ ಪದೇ ಅಧಿಕಾರದಿಂದ ವಂಚಿತವಾಗಿದೆ.
ಈಗ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಹೊಂದಿದೆ. ಆದಾಗ್ಯೂ ಜೆಡಿಎಸ್ ವರಿಷ್ಠರಾದ ಹೆಚ್.ಡಿ. ದೇವೇಗೌಡ ಅವರು ಲೋಕಸಭೆ ಮತ್ತು ವಿಧಾನಸಭೆ ಹೊರತು ಪಡಿಸಿ, ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಸ್ವತಂತ್ರವಾಗಿ ಸ್ಪರ್ಧೆ ಮಾಡಲಿದೆ, ಆ ಮೂಲಕ ಪಕ್ಷದ ಪ್ರಭಾವ ತೋರಲಿದೆ ಎಂದಿರುವ ಕಾರಣ, ಮತ್ತೆ ತುರ್ತಾಗಿ ದೊಡ್ಡಬಳ್ಳಾಪುರ ತಾಲೂಕು ಮಟ್ಟದಲ್ಲಿ ಜೆಡಿಎಸ್ ಸಂಘಟನೆ ಅಗತ್ಯವಾಗಿದೆ.
ಈ ನಿಟ್ಟಿನಲ್ಲಿ ಹರಿಶ್ ಗೌಡ ಅವರ ಪರ ಪಕ್ಷದ ವರಿಷ್ಠರು ಒಲವು ಹೊಂದಿದ್ದು, ಅವರನ್ನೆ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷರನ್ನಾಗಿಸಿ, ಪಕ್ಷ ಸಂಘಟನೆ ಜವಾಬ್ದಾರಿ ನೀಡುವ ಸಾಧ್ಯತೆ ಹೆಚ್ಚಾಗಿದೆ ಎಂದು ತಿಳಿದುಬಂದಿದೆ.
ಇದೇ ತಿಂಗಳ 23ರಂದು ನಡೆಯಲಿರುವ ಬಸವ ಜಯಂತಿ ಒಳಗಾಗಿ ದೊಡ್ಡಬಳ್ಳಾಪುರ ಜೆಡಿಎಸ್ ಅಧ್ಯಕ್ಷ ಸ್ಥಾನಕ್ಕೆ ಘೋಷಣೆಯಾಗಲಿದೆ ಎನ್ನಲಾಗುತ್ತಿದೆ.