ಗ್ರೇಡಿಂಗ್ ಪ್ರಶ್ನಿಸಿದ್ದ ಅರ್ಜಿ ವಜಾ: ಹಿಂದಿ ಹೇರಿಕೆ ವಕಾಲತ್ತು ವಹಿಸಿದವರಿಗೆ ಕಪಾಳ ಮೋಕ್ಷವೆಂದು ರಾಜಘಟ್ಟರವಿ ಸಂತಸ

Petition challenging grading for Hindi dismissed: Rajghatta Ravi welcomes

ದೊಡ್ಡಬಳ್ಳಾಪುರ: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (ಕೆಎಸ್‌ಇಎಬಿ) ನಡೆಸುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ (SSLC Exam) ಹಿಂದಿ (Hindi) ಸೇರಿ ತೃತೀಯ ಭಾಷೆಗೆ ಅಂಕಗಳ ಬದಲಿಗೆ ಗ್ರೇಡ್ ನೀಡಲು ಮುಂದಾಗಿರುವ ಸರ್ಕಾರದ ಪ್ರಸ್ತಾವನೆ ಪ್ರಶ್ನಿಸಿದ್ದ ಅರ್ಜಿಯನ್ನು ವಜಾಗೊಳಿಸಿರುವ ಹೈಕೋರ್ಟ್, ಅರ್ಜಿದಾರರಿಗೆ ಒಂದು ಲಕ್ಷ ರೂ. ದಂಡ ವಿಧಿಸಿದೆ ಎಂದು ವರದಿಯಾಗಿದೆ.

ಈ ಕುರಿತಂತೆ ನ್ಯಾಯಾಲಯದ ಆದೇಶ ಸ್ವಾಗತಿಸಿರುವ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಬಣದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಘಟ್ಟರವಿ, ಕನ್ನಡ ವಿದ್ಯಾರ್ಥಿಗಳಿಗೆ ನ್ಯಾಯಾಲಯ ನೀಡಿದ ಜಯವೆಂದು ಶ್ಲಾಘಿಸಿದ್ದು, ಇದು ಹಿಂದಿಹೇರಿಕೆ ಪರವಾಗಿ ವಕಾಲತ್ತು ವಹಿಸುತ್ತಿದ್ದವರಿಗೆ ಕಪಾಳಮೋಕ್ಷವಾಗಿದೆ ಎಂದಿದ್ದಾರೆ‌.

ಕನ್ನಡ ಪರ ಮನಸ್ಸುಗಳು ಎಂದಿಗೂ ಬೇರೆ ಭಾಷೆಗಳನ್ನು ವಿರೋಧ ಮಾಡಿಲ್ಲ. ಕೇವಲ ಕನ್ನಡದ ವಿದ್ಯಾರ್ಥಿಗಳಿಗೆ ಬಲವಂತವಾಗಿ ಹಿಂದಿ ಹೇರಿಕೆ ಕುರಿತು ಆಕ್ಷೇಪ ವ್ಯಕ್ತಪಡಿಸಿವೆ.

ಆದಾಗ್ಯೂ ಕೆಲವರು ಹಿಂದಿ ಹೇರಿಕೆಯನ್ನು ಸಮರ್ಥನೆ ಮಾಡುತ್ತಾ ಹೋರಾಟಗಾರರನ್ನು ಆ ಪಕ್ಷದ ಪರ, ಈ ಪಕ್ಷದ ಪರ ಎಂದು ಅವಹೇಳನ ಮಾಡುತ್ತಾ, ಚರ್ಚೆ ಮೂಲಕ ವಿವರಿಸಿದರೆ ವಿಷಯಾಂತರ ಮಾಡುತ್ತಾ, ವಾಸ್ತವ ತಿಳಿಯದೆ ವಿನಾಕಾರಣ ವಾದ ಮಾಡುತ್ತಿದ್ದವರಿಗೆ ನ್ಯಾಯಾಲಯದ ಆದೇಶ ಸರಿಯಾದ ಉತ್ತರ ನೀಡಿದೆ.

ಕನ್ನಡಪರ ಸಂಘಟನೆಗಳು, ಚಿಂತಕರು, ಕನ್ನಡದ ಮನಸ್ಸುಗಳು ನ್ಯಾಯಾಲಯದ ಆದೇಶವನ್ನು ಸ್ವಾಗತಿಸುತ್ತೇವೆ.

ಈ ಆದೇಶದಿಂದ ಹಿಂದಿ ಹೇರಿಕೆ ಪರ ವಕಲಾತ್ತು ವಹಿಸುತ್ತಾ, ನ್ಯಾಯಾಲಯಕ್ಕೆ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿ, ಅರ್ಜಿದಾರರಿಗೆ ದಂಡ ವಿಧಿಸಿರುವುದು ಪ್ರಶಂಸನೀಯ ಎಂದಿದ್ದಾರೆ.

ಹಿಂದಿ ಗ್ರೇಡಿಂಗ್‌ ಪ್ರಶ್ನಿಸಿದ್ದಕ್ಕೆ ದಂಡ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆಗಳಿಗೆ ಅಂಕಗಳ ಬದಲಿಗೆ ಗ್ರೇಡ್ ನೀಡುವ ಸಂಬಂಧ ಸರಕಾರದ ಪ್ರಸ್ತಾವಕ್ಕೆ ಸಂಬಂಧಿಸಿದಂತೆ ಪತ್ರಿಕೆಗಳ ವರದಿ ಆಧರಿಸಿ ಪಿಐಎಲ್ ಸಲ್ಲಿಸಿದ್ದ ಅರ್ಜಿದಾರರಿಗೆ ಹೈಕೋರ್ಟ್ 1 ಲಕ್ಷ ರೂ. ದಂಡ ವಿಧಿಸಿ ಆದೇಶಿಸಿದೆ.

ಬೆಂಗಳೂರಿನ ಎಚ್.ಎನ್.ಚಂದನಾ ಮತ್ತು ಎಸ್.ವೆಂಕಟೇಶ್ ಎಂಬುವವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾ.ವಿಭು ಬಬ್ರು ಮತ್ತು ನ್ಯಾ.ಸಿ.ಎಂ. ಪೂಣಚ್ಚ ಅವರಿದ್ದ ಪೀಠ ಈ ಆದೇಶ ನೀಡಿದೆ. ಅಲ್ಲದೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆಗಳಿಗೆ ಅಂಕಗಳ ಬದಲಿಗೆ ಶ್ರೇಣಿಗಳನ್ನು ನೀಡುವ ವ್ಯವಸ್ಥೆಯ ಕುರಿತ ಶಿಕ್ಷಣ ಸಚಿವರ ಹೇಳಿಕೆಗೆ ಸಂಬಂಧಿಸಿದಂತೆ ಪತ್ರಿಕಾ ವರದಿಗಳನ್ನು ಆಧರಿಸಿ ಅರ್ಜಿ ಸಲ್ಲಿಸಲಿದ್ದಾರೆ. ಅರ್ಜಿದಾರರ ಈ ನಡೆ ಅತ್ಯಂತ ಅಗೌರವಯುತವಾಗಿದೆ. ಇಂತಹ ಪತ್ರಿಕಾ ಹೇಳಿಕೆಗಳನ್ನು ರದ್ದು ಗೊಳಿಸುವುದಕ್ಕೆ ಹೈಕೋರ್ಟ್‌ಗೆ ಅಸಾಧಾರಣವಾದ ವಿಶೇಷ ನ್ಯಾಯವ್ಯಾಪ್ತಿ ಚಲಾಯಿಸಬೇಕಾಗುತ್ತದೆ ಎಂದು ಪೀಠ ತಿಳಿಸಿದೆ.

ಜತೆಗೆ, ಇದೊಂದು ಪ್ರಚಾರಕ್ಕಾಗಿ ಸಲ್ಲಿಸಿರುವ ಅರ್ಜಿಯಾಗಿದ್ದು, ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಲಾಗುವುದು. ದಂಡದ ಮೊತ್ತವನ್ನು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಪಾವ ತಿಸಬೇಕು ಎಂದು ಪೀಠ ತಿಳಿಸಿತು. ಒಂದು ವೇಳೆ ದಂಡದ ಮೊತ್ತವನ್ನು ಪಾವತಿ ಮಾಡದಿದ್ದಲ್ಲಿ, ಅವರ ಭೂ ಕಂದಾಯಕ್ಕೆ ಬಾಕಿ ಮೊತ್ತವನ್ನಾಗಿ ಪರಿಗಣಿಸಿ ವಸೂಲಿ ಮಾಡಬಹುದಾಗಿದೆ ಎಂದು ತಿಳಿಸಿತು.

ಅರ್ಜಿ ವಿವರ

ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇತ್ತೀಚೆಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ, ಹಿಂದಿ ಭಾಷೆ ಸೇರಿದಂತೆ ತೃತೀಯ ಭಾಷೆಗಳು ಕಡ್ಡಾಯವಲ್ಲ. ಈ ಭಾಷೆಗಳಿಗೆ ಅಂಕಗಳ ಬದಲಿಗೆ ಗ್ರೇಡ್ ಗಳನ್ನಾಗಿ ಪರಿಗಣಿಸಲಾಗುತ್ತದೆ. ಪ್ರಸ್ತುತ ಶೈಕ್ಷಣಿಕ ವರ್ಷದಿಂದಲೇ ದ್ವಿಭಾಷಾ ಸೂತ್ರವನ್ನು ಜಾರಿಗೆ ತರುವುದಾಗಿ ತಿಳಿಸಿದ್ದಾರೆ.

ಸಚಿವರು ಈ ನಿರ್ಧಾರವನ್ನು ಪ್ರಕಟಿಸುವುದಕ್ಕೂ ಮುನ್ನ ಸಾರ್ವಜನಿಕ ವಾಗಿ ಚರ್ಚೆ ನಡೆಸಿಲ್ಲ. ಸಚಿವ ಸಂಪುಟದ ಅನುಮೋದನೆ ಪಡೆದಿಲ್ಲ ಹಾಗೂ ಭಾಷಾ ತಜ್ಞರ ಸಲಹೆ ಇಲ್ಲದೇ ಏಕಪಕ್ಷೀಯವಾಗಿ ತೆಗೆದು ಕೊಂಡಿದ್ದಾರೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ರಾಜಕೀಯ

ನನ್ನ 60 ವರ್ಷಗಳ ರಾಜಕೀಯ ಜೀವನದಲ್ಲಿ ಇಂತಹ ಕೆಟ್ಟ ಸರ್ಕಾರ ನೋಡಿಲ್ಲ: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ

ನನ್ನ 60 ವರ್ಷಗಳ ರಾಜಕೀಯ ಜೀವನದಲ್ಲಿ ಇಂತಹ ಕೆಟ್ಟ ಸರ್ಕಾರ ನೋಡಿಲ್ಲ: ಮಾಜಿ

ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ (H.D. Deve Gowda) ಅವರು ಹಾಲಿ ಮುಖ್ಯಮಂತ್ರಿ ಸಾಮಾಜಿಕ ನ್ಯಾಯದ ಪರ ಇಲ್ಲ ಎಂದು ನೇರ ಆರೋಪ

[ccc_my_favorite_select_button post_id="120877"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಬಿದ್ದು ಸಾವು

ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಬಿದ್ದು ಸಾವು

ಕೃಷಿ ಹೊಂಡಕ್ಕೆ (Krushi Honda) ಬಿದ್ದು 34 ವರ್ಷದ ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.

[ccc_my_favorite_select_button post_id="120787"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]