ದೊಡ್ಡಬಳ್ಳಾಪುರ ಡೈರಿಗಳಲ್ಲಿ ಫೀಡ್ ಕೊರತೆ.. ರೈತರ ಪರದಾಟ..!

Shortage of feed in dairies.. Farmers' struggle..!

ದೊಡ್ಡಬಳ್ಳಾಪುರ: ತಾಲೂಕಿನ ಹಾಲು ಉತ್ಪಾದಕರ ಸಹಾಕರ ಸಂಘಗಳ ಡೈರಿಗಳಲ್ಲಿ (Dairies) ರೈತರಿಗೆ ಫೀಡ್ (feed) ಕೊರತೆ ಎದುರಾಗಿದ್ದು, ಪರದಾಡುತಾಗಿದೆ.

ಕರ್ನಾಟಕ ಹಾಲು ಮಹಾಮಂಡಳಿ (KMF) ರೈತರಿಗಾಗಿ ‘ನಂದಿನಿ’ ಬ್ರ್ಯಾಂಡ್ ಅಡಿಯಲ್ಲಿ ಗುಣಮಟ್ಟದ ಪಶು ಆಹಾರವನ್ನು (Cattle Feed) ಪೂರೈಸುತ್ತದೆ. ಇದು ಹಸುಗಳ ಆರೋಗ್ಯ ಮತ್ತು ಹಾಲಿನ ಇಳುವರಿಯನ್ನು ಹೆಚ್ಚಿಸಲು ವಿನ್ಯಾಸಗೊಳಿಸಲಾದ ಸಮತೋಲಿತ ಪಶು ಆಹಾರವಾಗಿದೆ.

ರೈತರಿಗೆ ಕಡಿಮೆ ದರದಲ್ಲಿ ಗುಣಮಟ್ಟದ ಮೇವು ಮತ್ತು ಆಹಾರವನ್ನು ಒದಗಿಸಿ, ಹೈನುಗಾರಿಕೆಯನ್ನು ಲಾಭದಾಯಕವಾಗಿಸುವುದು ಇದರ ಮುಖ್ಯ ಉದ್ದೇಶವಾಗಿದೆ. ಆದರೆ ಡೈರಿ ಫೀಡ್ ಕೊರತೆಯಿಂದ ರೈತರು ಪರದಾಡುವ ಪರಿಸ್ಥಿತಿ ದೊಡ್ಡಬಳ್ಳಾಪುರ ತಾಲೂಕಿನ ರೈತರದ್ದಾಗಿದೆ.

ದೊಡ್ಡಬಳ್ಳಾಪುರ ತಾಲೂಕಿನ ಡೈರಿಗಳಲ್ಲಿ ಫೀಡ್ ದಾಸ್ತಾನು ಇಲ್ಲವಾಗಿದೆ. ಏಪ್ರಿಲ್ 1 ರಿಂದ ಇಂಡೆಂಟ್ ಹಾಕಲಾಗುತ್ತಿದ್ದರು ಪೂರೈಕೆ ಇಲ್ಲವಾಗಿದೆ.

ಬೇಸಿಗೆ ಬಿಸಿಯಲ್ಲಿ ಜಾನುವಾರುಗಳಿಗೆ ಫೀಡ್ ದೊರಕದೆ ಹಾಲು ಉತ್ಪಾದನೆ ಕಡಿಮೆಯಾಗಿದೆ. ಅಲ್ಲದೆ ಪೌಷ್ಟಿಕಾಂಶದ ಕೊರತೆ ಎದುರಾಗಿದೆ. ಈ ಕುರಿತು ಡೈರಿಗಳ ಬಳಿ ಕಳೆದ 10 ದಿನಗಳಿಂದ ಅಲೆದು, ಅಲೆದು ಸಾಕಾಗಿದ್ದು, ಯಾವ ಅಧಿಕಾರಿಗಳು ರೈತರಿಗೆ ಸ್ಪಂದಿಸುತ್ತಿಲ್ಲ ಎಂದು ಯುವ ರೈತ ಮಲ್ಲೋಹಳ್ಳಿ ಪುನೀತ್ ಗೌಡ ಅಳಲು ತೋಡಿಕೊಂಡಿದ್ದಾರೆ.

ತ್ವರಿತ ಪೂರೈಕೆಗೆ ಸೂಚನೆ

ಈ ಕುರಿತಂತೆ ಬಮೂಲ್ ನಿರ್ದೇಶಕ ಬಿ.ಸಿ. ಆನಂದ್ ಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದು, ಡೈರಿ ಕಾರ್ಯದರ್ಶಿಗಳು ಮಾರ್ಚ್ ತಿಂಗಳಲ್ಲಿ ದಾಸ್ತಾನು ಮಾಡಿಕೊಳ್ಳದ ಕಾರಣ ಡೈರಿಗಳಲ್ಲಿ ಫೀಡ್‌ ಅಭಾವ ಉಂಟಾಗಿದೆ.

ಈ ಕುರಿತಂತೆ ಹಿರಿಯ ಅಧಿಕಾರಿಗಳೊಂದಿಗೆ ಮಾತನಾಡಿದ್ದು, ಏಪ್ರಿಲ್ ತಿಂಗಳಲ್ಲಿ ಏಕಾಏಕಿ 23 ಸಾವಿರ ಟನ್ ಫೀಡ್ಗೆ ಇಂಡೆಂಟ್ ಹಾಕಿರುವ ಕಾರಣ ರಾಜಾನುಕುಂಟೆ ಘಟಕದಿಂದ ಪೂರೈಕೆ ಮಾಡಲು ವಿಳಂಬವಾಗುತ್ತಿದೆ.

ಸಾಂಗ್ಲಿ ಘಟಕದಿಂದ ಫೀಡ್ ಪೂರೈಕೆಗೆ ಸಿದ್ಧವಿದ್ದರು, ಸ್ಥಳೀಯ ಹಸುಗಳಿಗೆ ಫೀಡ್ ಹೊಂದದ ಕಾರಣ ತಡೆಹಿಡಿಯಲಾಗಿದೆ. ಆದಾಗ್ಯೂ ರಾಜಾನುಕುಂಟೆ ಘಟಕದಿಂದ ಹೆಚ್ಚುವರಿ ಉತ್ಪಾದನಗೆ ಒತ್ತು ನೀಡಿ, ತ್ವರಿತವಾಗಿ ರೈತರಿಗೆ ಫೀಡ್ ಪೂರೈಕೆಗೆ ಕ್ರಮಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ಬಿ.ಸಿ. ಆನಂದ್ ಕುಮಾರ್ ತಿಳಿಸಿದ್ದಾರೆ.

ದೊಡ್ಡಬಳ್ಳಾಪುರ: ಇಂದು ವಿವಿಧೆಡೆ ವಿದ್ಯುತ್‌ ಸ್ಥಗಿತ

power cut off in Doddaballapura.!
power cut off in Doddaballapura.!

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಫೀಡರ್‌ನಲ್ಲಿ ಕಾಮಗಾರಿ ನಡೆಯುತ್ತಿರುವುದರಿಂದ ಏಪ್ರಿಲ್ 12ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 2ವರೆಗೆ ವಿದ್ಯುತ್ ಪೂರೈಕೆ ಸ್ಥಗಿತವಾಗಲಿದೆ (Power cut).

ಕುಚ್ಚಪ್ಪನಪೇಟೆ, ಕೊಂಗಾಡಿಯಪ್ಪ ಮುಖ್ಯರಸ್ತೆ, ಸಂಜಯ್ ನಗರ, ಭುವನೇಶ್ವರಿನಗರ, ಚೈತನ್ಯನಗರ, ತೇರಿನಬೀದಿ, ರಂಗಪ್ಪ ಸರ್ಕಲ್‌, ಕೆಸಿಪಿ ಸರ್ಕಲ್, ವೀರಾಪುರ, ಗಾಂಧಿನಗರ, ಖಾಸ್‌ಬಾಗ್ ಹಾಗೂ ಸುತ್ತಮು-ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ನಗರ ಉಪವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಎಚ್.ಪಿ.ವಿನಯಕು-ಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ಒಂದೇ ಒಂದು ಬಾರಿ ಅವಕಾಶ ನೀಡಿ, ರಾಜ್ಯಕ್ಕೆ ಹಿಡಿದಿರುವ ಗ್ರಹಣ ಸಂಪೂರ್ಣವಾಗಿ ಬಿಡಿಸುತ್ತೇನೆ: ಹೆಚ್.ಡಿ. ಕುಮಾರಸ್ವಾಮಿ

ಒಂದೇ ಒಂದು ಬಾರಿ ಅವಕಾಶ ನೀಡಿ, ರಾಜ್ಯಕ್ಕೆ ಹಿಡಿದಿರುವ ಗ್ರಹಣ ಸಂಪೂರ್ಣವಾಗಿ ಬಿಡಿಸುತ್ತೇನೆ:

ಜೆಡಿಎಸ್ (JDS) ಪಕ್ಷಕ್ಕೆ ಐದು ವರ್ಷಗಳ ಕಾಲ ಒಂದೇ ಒಂದು ಬಾರಿ ಅವಕಾಶ ನೀಡಿ. ಈ ರಾಜ್ಯಕ್ಕೆ ಹಿಡಿದಿರುವ ಗ್ರಹಣವನ್ನು ಸಂಪೂರ್ಣವಾಗಿ ಬಿಡಿಸುತ್ತೇನೆ ಎಂದು ಕೇಂದ್ರ ಸಚಿವ ಹೆಚ್‍.ಡಿ. ಕುಮಾರಸ್ವಾಮಿ (H.D. Kumaraswamy) ರಾಜ್ಯದ

[ccc_my_favorite_select_button post_id="120885"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಬಿದ್ದು ಸಾವು

ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಬಿದ್ದು ಸಾವು

ಕೃಷಿ ಹೊಂಡಕ್ಕೆ (Krushi Honda) ಬಿದ್ದು 34 ವರ್ಷದ ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.

[ccc_my_favorite_select_button post_id="120787"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]