ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

Car accident: Inspector dies

ಚಿತ್ರದುರ್ಗ: ಕಾರು ಅಪಘಾತದಲ್ಲಿ (Accident) ವಿಜಯನಗರ-ಕೊಪ್ಪಳ ಜಿಲ್ಲಾ ಡಿಸಿಆರ್‌ಇ ಪೊಲೀಸ್‌ ಇನ್ ಸ್ಪೆಕ್ಟರ್ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಜಗಳೂರು ತಾಲೂಕಿನ ಕಡಬನಕಟ್ಟೆ ಬಳಿ ಸಂಭವಿಸಿದೆ.

ಡಿಸಿಆರ್‌ಇ ಪೊಲೀಸ್ ಇನ್‌ಸೆಕ್ಟರ್ ರಘುನಾಥ ಮೃತ ದುರ್ದೈವಿ. ಅವರಿಗೆ 45 ವರ್ಷ ವಯಸ್ಸಾಗಿತ್ತು.

ಚಿತ್ರದುರ್ಗ ಜಿಲ್ಲೆ ಆಲಿಕಲು ಗ್ರಾಮಕ್ಕೆ ಪತ್ನಿ ಮನೆಗೆ ರಘುನಾಥ್ ಅವರು ಬಂದಿದ್ದರು. ಹೆಂಡತಿ ಗ್ರಾಮದಿಂದ ಹೊಸಪೇಟೆ ಕಡೆಗೆ ಸಾಗುವಾಗ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದು ದುರ್ಘಟನೆ ನಡೆದಿದೆ.

ಮೂಲತಃ ಚಿತ್ರದುರ್ಗ ಜಿಲ್ಲೆ ಭರಮಸಾಗರ ಸಮೀಪದ ನಂದಿಹಳ್ಳಿ ಗ್ರಾಮದ ರಘುನಾಥ, ಪತ್ನಿ ಮತ್ತು ಇಬ್ಬರು ಮಕ್ಕಳು ಚಿತ್ರದುರ್ಗದ ಬ್ಯಾಂಕ್‌ ಕಾಲೊನಿ ಯಲ್ಲಿ ವಾಸವಾಗಿದ್ದಾರೆ.

ಮೊನ್ನೆಯಷ್ಟೇ ಬೆಂಗಳೂರು ಕೇಂದ್ರ ಕಚೇರಿಗೆ ಸಿಪಿಐ ರಘುನಾಥ ವರ್ಗಾವಣೆ ಯಾಗಿ ಆದೇಶವಾಗಿತ್ತು. ರಘುನಾಥ ಕೇಂದ್ರ ಕಚೇರಿಗೆ ವರದಿ ಮಾಡಿಕೊಳ್ಳುವ ಮುನ್ನವೇ, ಅಪಘಾತದಲ್ಲಿ ಇಹಲೋಕವನ್ನು ತ್ಯಜಿಸಿದ್ದಾರೆ.

CBSE ಫಲಿತಾಂಶ; MSV ಶಾಲೆ ಮಕ್ಕಳ ಮೇಲುಗೈ: ದೊಡ್ಡಬಳ್ಳಾಪುರ ತಾಲೂಕಿಗೆ ಟಾಪರ್..

CBSE results; MSV school students dominate
CBSE results; MSV school students dominate

ದೊಡ್ಡಬಳ್ಳಾಪುರ: ನಿನ್ನೆ (ಏ‌.15) ಪ್ರಕಟವಾದ
ಸಿಬಿಎಸ್‌ಇ (CBSE) 10ನೇ ತರಗತಿ ಫಲಿತಾಂಶದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರತಿಷ್ಠಿತ ಶಾಲೆಯಾದ ಎಂ‌ಎಸ್‌ವಿ ಪಬ್ಲಿಕ್ ಶಾಲೆ (MSV Public School) ಶೇ.100 ರಷ್ಟು ಸಾಧನೆ ಮಾಡಿದೆ.

2025-26 ನೇ ಸಾಲಿನ ಸಿಬಿಎಸ್‌ಇ ಕೇಂದ್ರೀಯ ಪರೀಕ್ಷಾ ಮಂಡಳಿಯ ಹತ್ತನೇ ತರಗತಿ ಫಲಿತಾಂಶದಲ್ಲಿ, ದೊಡ್ಡಬಳ್ಳಾಪುರ ನಗರದ ಎಂಎಸ್‌ವಿ ಪಬ್ಲಿಕ್ ಶಾಲೆಯು ನಿರಂತರವಾಗಿ 15ನೇ ವರ್ಷವೂ ಶೇ.100 ಸಾಧನೆ ಮಾಡಿ ಮತ್ತೊಮ್ಮೆ ಗಮನ ಸೆಳೆದಿದೆ. 

ಈ ಬಾರಿ ಒಟ್ಟು 136 ವಿದ್ಯಾರ್ಥಿಗಳಲ್ಲಿ 86 ಮಕ್ಕಳು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು, 41 ಮಕ್ಕಳು ಪ್ರಥಮ ಶ್ರೇಣಿಯಲ್ಲಿ ಹಾಗೂ 6 ಮಕ್ಕಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

ಮಕ್ಕಳ ಈ ಫಲಿತಾಂಶಕ್ಕೆ ಮತ್ತು ಅವರ ಸಾಧನೆಗೆ ಶಾಲೆಯ ಸಂಸ್ಥಾಪಕರಾದ ಸುಬ್ರಮಣ್ಯ.ಎ ರವರು ಪ್ರಶಂಸೆ ವ್ಯಕ್ತಪಡಿಸಿದರು. 

ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, “ನಿರಂತರವಾಗಿ 15 ವರ್ಷಗಳ ಕಾಲ ಶೇ.100 ಫಲಿತಾಂಶವನ್ನು ಸಾಧಿಸುವುದು ನಮ್ಮ ಶಾಲೆಯ ಗುಣಮಟ್ಟದ ಶಿಕ್ಷಣ ಮತ್ತು ತಂಡದ ಕಾರ್ಯದ ಪ್ರತೀಕವಾಗಿದೆ.  ಮಕ್ಕಳ ಈ ಸಾಧನೆ ನಮ್ಮ ಶಾಲೆಗೆ ಕೀರ್ತಿ ತಂದಿದೆ, ಮಕ್ಕಳಿಗೆ ಹಾಗೂ ವಿದ್ಯೆ ಕಲಿಸಿದ ಶಿಕ್ಷಕ ವೃಂದಕ್ಕೆ ನನ್ನ ಮನಃಪೂರ್ವಕವಾದ ಅಭಿನಂದನೆಗಳು” ಎಂದು ಮುಕ್ತ ಕಂಠದಿಂದ ಹಾರೈಸಿದ್ದಾರೆ.

ಶಾಲಾ ಕಾರ್ಯದರ್ಶಿ ಮಂಜುಳಾ ಸುಬ್ರಮಣ್ಯ, ಉಪಾಧ್ಯಕ್ಷ ಸ್ವರೂಪ್, ಟ್ರಸ್ಟಿ ನಯನಾ ಸ್ವರೂಪ್ ಹಾಗೂ ಪ್ರಾಂಶುಪಾಲರಾದ ರೆಮ್ಯ.ಬಿ.ವಿ ಹಾಗೂ ಸಿಬ್ಬಂದಿ ವರ್ಗಕೂಡ ಮಕ್ಕಳ ಸಾಧನೆಯನ್ನು ಮುಕ್ತ ಕಂಠದಿಂದ ಅಭಿನಂದನೆಗಳನ್ನು ಸಲ್ಲಿಸಿದರು.

ಈ ವಿಶಿಷ್ಟ ಸಾಧನೆಗೆ ಶಿಕ್ಷಕರ ಸಮರ್ಪಣೆ, ಮಾರ್ಗದರ್ಶನ,  ವಿದ್ಯಾರ್ಥಿಗಳ ಪರಿಶ್ರಮ ಮತ್ತು ಶಾಲೆಯ ಶಿಸ್ತಿನ ವಾತಾವರಣ ಪ್ರಮುಖ ಕಾರಣಗಳಾಗಿವೆ.

ಈ ಸಾಧನೆಯೊಂದಿಗೆ, ಶಾಲೆಯು ಸಿಬಿಎಸ್‌ಇ ಪಠ್ಯಕ್ರಮದಲ್ಲಿ ತನ್ನ ಶ್ರೇಷ್ಠತೆಯನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದು, ಮುಂದಿನ ವರ್ಷಗಳಲ್ಲಿಯೂ ಇದೇ ಸಾಧನೆಯನ್ನು ಮುಂದುವರಿಸುವ ವಿಶ್ವಾಸ ವ್ಯಕ್ತವಾಗಿದೆ.

ಫಲಿತಾಂಶದ ವಿವರ

ಶ್ರೇಯಾ ಆರ್ –  97.00%
ಶ್ರುತಿ ಬಿ ಆರ್  – 95.60%
ಡಿ ರಕ್ಷಾ – 94.60%
ಗಗನಶ್ರೀ ಡಿ ಎಸ್ – 94.00%
ಕೆ ಹೆಚ್ ಸ್ಮೃತಿ. – 93.00%
ಅಫಿಫಾ. – 92.60%
ಧನುಶ್ರೀ ವಿ.- 92.00%.

ಚಿನ್ಮಯ್ ಎನ್ ಲೋಕೇಶ್. – 91.80%
ಪೂರ್ವಿಕಾ ಡಿ – 91.60%
ಹರಿಪ್ರಿಯಾ ಕೆ ಪಿ. – 91.60%
ರವಿನೂತಲ ತೇಜೋ ನಾಗಗೌರೀ ವೈಷ್ಣವಿ. – 91.40%
ಯೋಗಿತಾ ಕೆ ಪಿ. – 91.40%
ರಿಶಿಕಾ ರಾಜ್ ಸಿ. – 91.20%.

ಕೃತಿಕಾ ಹೆಚ್ ಎಂ. – 90.80%
ಭರಣಿ.ಎಸ್. – 90.40%
ವರ್ಷ ಬಿಂದು ಎನ್. – 90.20%
ಇಖ್ರಾ ಮರಿಯಮ್ – 90.00%

ರಾಜಕೀಯ

ಕ್ಷೇತ್ರ ಮರು ವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ: ಸಿಎಂ ಸಿದ್ದರಾಮಯ್ಯ

ಕ್ಷೇತ್ರ ಮರು ವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ: ಸಿಎಂ ಸಿದ್ದರಾಮಯ್ಯ

ಜನಸಂಖ್ಯೆ ನಿಯಂತ್ರಣವನ್ನು ದಕ್ಷಿಣ ಭಾರತದ ರಾಜ್ಯಗಳು ಉತ್ತಮವಾಗಿ ಮಾಡಿದ್ದು, ಉತ್ತರ ಭಾರತದ ರಾಜ್ಯಗಳು ಮಾಡಿಲ್ಲ. ಸಹಜವಾಗಿಯೇ ಅವರಿಗೆ ಅನುಕೂಲ ಹಾಗೂ ದಕ್ಷಿಣ ಭಾರತದ ರಾಜ್ಯಗಳಿಗೆ ಅನಾನುಕೂಲವಾಗಲಿದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121167"]
ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾದರೆ ನ್ಯಾಯವನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಬಹು ದೊಡ್ಡ ಹೆಜ್ಜೆಯನ್ನು ಇರಿಸಿದಂತಾಗುತ್ತದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121121"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಗ್ಯಾಸ್ ಸಿಲಿಂಡರ್ (Gas Cylinder ) ಸ್ಪೋಟಗೊಂಡು ಎರಡು ಮನೆಗಳು ಸುಟ್ಟು ಭಸ್ಮವಾಗಿರುವ ಘಟನೆ ವರದಿಯಾಗಿದೆ.

[ccc_my_favorite_select_button post_id="121161"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!