ದೊಡ್ಡಬಳ್ಳಾಪುರ ತಾಲ್ಲೂಕು JDS ಅಧ್ಯಕ್ಷರಾಗಿ ಹರೀಶ್ ಗೌಡ ಆಯ್ಕೆ: ಪಕ್ಷ ಸಂಘಟನೆ ಸಹಕಾರಿಯೆಂದ ಪ್ರವೀಣ್ ಶಾಂತಿನಗರ

Harish Gowda elected as president of Doddaballapur taluk JDS

ದೊಡ್ಡಬಳ್ಳಾಪುರ: ವಿಧಾನಸಭಾ ಕ್ಷೇತ್ರದ ಜಾತ್ಯತೀತ ಜನತಾದಳ (JDS) ಪಕ್ಷಕ್ಕೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.

ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ರಾಜ್ಯ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಕೃಷ್ಣಾರೆಡ್ಡಿ ಹಾಗೂ ಬೆಂಗಳೂರು ಗ್ರಾಮಾಂತರ ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ವಿ. ಮಂಜುನಾಥ್ ನೇತೃತ್ವದಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.

ಇದರ ಅನ್ವಯ ದೊಡ್ಡಬಳ್ಳಾಪುರ ಜೆಡಿಎಸ್ ಅಧ್ಯಕ್ಷರಾಗಿ ಹರೀಶ್ ಗೌಡ (Harish Gowda) ಅವರನ್ನು ನೇಮಕ ಮಾಡಲಾಗಿದೆ.

ಉಳಿದಂತೆ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಕಾರ್ಯಾಧ್ಯಕ್ಷರಾಗಿ ಆಂಜನೇಗೌಡ, ಉಪಾಧ್ಯಕ್ಷರಾಗಿ ಆನಂದ್ ಕೊನಘಟ್ಟ, ಪುಟ್ಟರಾಜು ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಗೋವಿಂದ ರಾಜು ಅವರನ್ನು ನೇಮಿಸಲಾಗಿದೆ.

ಈ ನೇಮಕಾತಿ ತಕ್ಷಣದಿಂದಲೇ ಜಾರಿಗೆ ಬಂದಿದೆ.

ಪಕ್ಷದ ತತ್ವ-ಸಿದ್ಧಾಂತಗಳಿಗೆ ಬದ್ಧವಾಗಿ ಕಾರ್ಯನಿರ್ವಹಿಸಿ, ಮುಖಂಡರು ಹಾಗೂ ಕಾರ್ಯಕರ್ತರನ್ನು ಒಗ್ಗೂಡಿಸಿ ಕ್ಷೇತ್ರದಲ್ಲಿ ಪಕ್ಷವನ್ನು ಸಂಘಟಿತವಾಗಿ ಬಲಪಡಿಸುವಲ್ಲಿ ಹರೀಶ್ ಗೌಡ ಅವರು ಪ್ರಮುಖ ಪಾತ್ರವಹಿಸುವರೆಂಬ ವಿಶ್ವಾಸವನ್ನು ನಾಯಕರು ವ್ಯಕ್ತಪಡಿಸಿದ್ದಾರೆ.

ಪಕ್ಷ ಸಂಘಟನೆ ಸಹಕಾರಿ: ಪ್ರವೀಣ್ ಶಾಂತಿನಗರ

ಹರೀಶ್ ಗೌಡ ಅವರನ್ನು ದೊಡ್ಡಬಳ್ಳಾಪುರ ಜೆಡಿಎಸ್ ಅಧ್ಯಕ್ಷರಾಗಿ ಆಯ್ಕೆಯಾ ಮಾಡಿರುವ ಕುರಿತು ಸ್ವಾಗತಕೋರಿರುವ ಪ್ರವೀಣ್ ಶಾಂತಿನಗರ, ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೆಡಿಎಸ್ ಪಕ್ಷದ ಪರವಾಗಿ ಸಂಘಟನೆಯಲ್ಲಿ ತೊಡಗಿಸಿಕೊಂಡು, ಅವರದ್ದೇ ಆದ ಕಾರ್ಯ ಚಟುವಟಿಕೆ ಮೂಲಕ ಹರೀಶ್ ಗೌಡ ಅವರು ಸದಾ ಪಕ್ಷದ ಕಾರ್ಯಕರ್ತರ ವಿಶ್ವಾಸ ಹೊಂದಿದ್ದಾರೆ.

ಕಾರ್ಯಕರ್ತರಿಗೆ ಹತ್ತಿರವಾಗಿ, ಸದಾ ಹಸನ್ಮುಖಿಯಿಂದ ಕ್ರಿಯಾಶೀಲರಾಗಿ, ಪಕ್ಷದ ಕಾರ್ಯ ಚಟುವಟಿಕೆ ಯಲ್ಲಿ ತೊಡಗಿಸಿ ಕೊಂಡ ಫಲವಾಗಿ, ಅವರ ಪಕ್ಷ ನಿಷ್ಠೆಗೆ ಮನ್ನಣೆ ನೀಡಿರುವ ಪಕ್ಷದ ವರಿಷ್ಠರು, ಹರೀಶ್ ಗೌಡ ಅವರಿಗೆ ದೊಡ್ಡಬಳ್ಳಾಪುರ ತಾಲ್ಲೂಕಿನ ಜೆಡಿಎಸ್ (JDS) ಪಕ್ಷದ ಅಧ್ಯಕ್ಷರ ಜವಾಬ್ದಾರಿ ಕೊಟ್ಟಿರುವುದು, ಪಕ್ಷವನ್ನ ಮುಂದಿನ ದಿನಗಳಲ್ಲಿ ಒಳ್ಳೆಯ ಬೆಳವಣಿಗೆಯತ್ತ ಕೊಂಡೋಯ್ಯಲು ತುಂಬಾ ಅನುಕೂಲವಾಗಲಿದೆ ಎಂದು ಪ್ರವೀಣ್ ಶಾಂತಿನಗರ ಭರವಸೆ ವ್ಯಕ್ತಪಡಿಸಿದ್ದಾರೆ.

ದೊಡ್ಡಬಳ್ಳಾಪುರ DJ ಕೇಸ್ಗೆ ಹೈ ಕೋರ್ಟ್ ತಡೆಯಾಜ್ಞೆ

High Court stays Doddaballapura DJ case
High Court stays Doddaballapura DJ case

ದೊಡ್ಡಬಳ್ಳಾಪುರ; ವಿಶ್ವ ಹಿಂದೂಪರಿಷತ್ ಮತ್ತು ಬಜರಂಗದಳದಿಂದ ನಡೆದ ಶೋಭಾಯಾತ್ರೆಯಲ್ಲಿ (Sobhayatre) ಅನುಮತಿ ಇಲ್ಲದೆ ಡಿಜೆ (DJ) ಬಳಸಿದ ಕುರಿತು ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ ಎಂದು ತಿಳಿದು ಬಂದಿದೆ.

ಈ ಕುರಿತಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವಿಶ್ವ ಹಿಂದೂ ಪರಿಷದ್ ಭಜರಂಗದಳದ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ವೈರಲ್ ಆಗಿದ್ದು, ದೊಡ್ಡಬಳ್ಳಾಪುರ ಶ್ರೀರಾಮೋತ್ಸವ ಯಾತ್ರೆ ವೇಳೆ ಡಿಜೆ ಬಳಸಿದ್ದಕ್ಕಾಗಿ 9 ಕಾರ್ಯಕರ್ತರ ಮೇಲೆ ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ನೆರವು ನೀಡಿದ ವಕೀಲರಾದ ಗಿರೀಶ್ ಭಾರದ್ವಾಜ್ ಅವರಿಗೆ ಧನ್ಯವಾದಗಳು ಎಂದು ಬರೆದಿದೆ.

ಪ್ರತಿ ವರ್ಷದಂತೆಯೇ ಮಾರ್ಚ್ 29 ರಂದು ಡಿ.ಜೆಗೆ ಅನುಮತಿ ನೀಡದೆ ಧ್ವನಿವರ್ಧಕಗಳ ಬಳಕೆಗೆ ಮಾತ್ರ ಅನುಮತಿ ನೀಡಲಾಗಿತು. ಆದರೆ ಡಿಜೆ ಸೌಂಡ್ಸ್ ಬಳಸುವುದನ್ನು ನಿಷೇಧಿಸಿರುವ ಆದೇಶ ಉಲ್ಲಂಘಿಸಿ ಡಿಜೆ ಬಳಕೆ ಮಾಡಿರುವ ಆರೋಪದ ಬಜರಂಗದಳದ ಕಾರ್ಯಕರ್ತರು, ಡಿಜೆ ಮಾಲೀಕ, ವಾಹನಗಳ ಮಾಲೀಕ ಹಾಗೂ ಚಾಲಕರು ಸೇರಿ 9 ಜನರ ವಿರುದ್ಧ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರತಿಭಟನೆ

ಇದಕ್ಕೂ ಮುನ್ನ ಶೋಭಾಯಾತ್ರೆಯಲ್ಲಿ ಡಿಜೆ ಸೌಂಡ್ಸ್ ಬಳಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹೊರಡಿಸಿರುವ ಆದೇಶ ಖಂಡಿಸಿ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ಮುಂದೆ ವಿಶ್ವ ಹಿಂದೂ ಪರಿಷತ್, ಬಜರಂಗದಳ ಕಾರ್ಯಕರ್ತರು ಶ್ರೀರಾಮ ಭಜನೆ ಮಾಡುವ ಮೂಲಕ ಪ್ರತಿಭಟನೆ ನಡೆಸಿದ್ದರು.

ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಡಿವೈಎಸ್ಪಿ ಪಾಂಡುರಂಗ ಅವರ ಸಮ್ಮುಖದಲ್ಲಿ ಶಾಸಕ ಧೀರಜ್ ಮುನಿರಾಜು ಹಾಗೂ ಹಿಂದೂಪರ ಸಂಘಟನೆಗಳ ಮುಖಂಡರ ಸಭೆಯಲ್ಲಿ ‘ಡಿಜೆ ಬಳಸದೆ ಶೋಭಾಯಾತ್ರೆಯಲ್ಲಿ ಧ್ವನಿ ವರ್ಧಕಗಳನ್ನು ಮಾತ್ರ ಬಳಸಬೇಕು’ ಎಂದು ಪೊಲೀಸರು ತಿಳಿಸಿದ್ದರು.

ಅದರಂತೆಯೇ ಮಾರ್ಚ್ 29 ರಂದು ಮಧ್ಯಾಹ್ನ 3 ಗಂಟೆಗೆ ಭಗತ್‌ಸಿಂಗ್ ಕ್ರೀಡಾಂಗಣದಿಂದ ಪ್ರಾರಂಭವಾದ ಶೋಭಾಯಾತ್ರೆಯಲ್ಲಿ ಶ್ರೀರಾಮ, ಶಿವ, ಆಂಜನೇಯ, ಇಮ್ಮಡಿ ಪುಲಿಕೇಶಿ, ಡಾ.ಬಿ.ಆರ್.ಅಂಬೇಡ್ಕರ್ ಸೇರಿದಂತೆ ವಿವಿಧ ದೇವತೆಗಳ ಪ್ರತಿಮೆಗಳು ಮೆರವಣಿಗೆ ನಡೆಲಾಯಿತು. ವಿವಿಧ ಕಲಾತಂಡಗಳು ಭಾಗವಹಿಸಿದ್ದವು.

ಈ ಶೋಭಾಯಾತ್ರೆಯಲ್ಲಿ ಡಿಜೆ ಆದೇಶ ಉಲ್ಲಂಘಿಸಿ ಡಿಜೆ ಬಳಕೆ ಮಾಡಿರುವ ಆರೋಪ ಹಾಗೂ ಕಾರ್ಯಕ್ರಮದ ಅನುಮತಿ ರಾತ್ರಿ 10 ಗಂಟೆಗೆ ಮಾತ್ರ ನೀಡಿದ್ದರು, 11, 45ರ ವರೆಗೂ ನಡೆಸಿದ್ದಾರೆಂಬ ಕಾರಣ ಪ್ರಕರಣ ದಾಖಲಾಗಿತ್ತು.

ರಾಜಕೀಯ

ದೊಡ್ಡಬಳ್ಳಾಪುರ ತಾಲ್ಲೂಕು JDS ಅಧ್ಯಕ್ಷರಾಗಿ ಹರೀಶ್ ಗೌಡ ಆಯ್ಕೆ: ಪಕ್ಷ ಸಂಘಟನೆ ಸಹಕಾರಿಯೆಂದ ಪ್ರವೀಣ್ ಶಾಂತಿನಗರ

ದೊಡ್ಡಬಳ್ಳಾಪುರ ತಾಲ್ಲೂಕು JDS ಅಧ್ಯಕ್ಷರಾಗಿ ಹರೀಶ್ ಗೌಡ ಆಯ್ಕೆ: ಪಕ್ಷ ಸಂಘಟನೆ ಸಹಕಾರಿಯೆಂದ

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಜಾತ್ಯತೀತ ಜನತಾದಳ (JDS) ಪಕ್ಷಕ್ಕೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ

[ccc_my_favorite_select_button post_id="121361"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ DJ ಕೇಸ್ಗೆ ಹೈ ಕೋರ್ಟ್ ತಡೆಯಾಜ್ಞೆ

ದೊಡ್ಡಬಳ್ಳಾಪುರ DJ ಕೇಸ್ಗೆ ಹೈ ಕೋರ್ಟ್ ತಡೆಯಾಜ್ಞೆ

ವಿಶ್ವ ಹಿಂದೂಪರಿಷತ್ ಮತ್ತು ಬಜರಂಗದಳದಿಂದ ನಗರದಲ್ಲಿ ನಡೆದ ಶೋಭಾಯಾತ್ರೆಯಲ್ಲಿ (Sobhayatre) ಅನುಮತಿ ಇಲ್ಲದೆ ಡಿಜೆ (DJ) ಬಳಸಿದ ಕುರಿತು ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ ಎಂದು ತಿಳಿದು ಬಂದಿದೆ.

[ccc_my_favorite_select_button post_id="121351"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]