ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

Cylinder explosion.. Houses completely burnt to ashes

ಅಥಣಿ; ಬೆಳಗಾವಿ ಜಿಲ್ಲೆಯ (Belagavi) ಅಥಣಿ ತಾಲೂಕಿನ ಬಳ್ಳಿಗೇರಿ ಗ್ರಾಮದ ಲಾಡ್ಜ್ ಒಂದರ ಮೇಲೆ ಪೊಲೀಸರು ದಾಳಿ (Police Raid) ನಡೆಸಿದ್ದು, ವೇಶ್ಯಾವಾಟಿಕೆ (Prostitution) ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿದ್ದಾರೆ. ದಾಳಿಯ ವೇಳೆ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ.

ಬಳ್ಳಿಗೇರಿ ಗ್ರಾಮದ ಲಾಡ್ಜ್ ಮಾಲೀಕ ಸರದಾರ ಭಗವಂತ ಕಾಂಬಳೆ ಹಾಗೂ ವಿಜಯಪುರ ಜಿಲ್ಲೆಯ ಚಡಚಣ ಮೂಲದ ಪ್ರವೀಣ ಬಸವರಾಜ ಮಲ್ದಾರಿ ಬಂಧಿತ ಆರೋಪಿಗಳು.

ಈ ಲಾಡ್ಜ್‌ನಲ್ಲಿ ಕಳೆದ ಹಲವು ತಿಂಗಳುಗಳಿಂದ ಗುಟ್ಟಾಗಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಅದರಂತೆ ಶುಕ್ರವಾರ ಅಥಣಿ ಪೊಲೀಸರು ಕಾರ್ಯಾಚರಣೆ ನಡೆಸಿ, ದಂಧೆಗೆ ಪ್ರಚೋದನೆ ನೀಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ಮಹಾರಾಷ್ಟ್ರ ಮತ್ತು ಕರ್ನಾಟಕದ ಗಡಿಭಾಗದಲ್ಲಿರುವ ಬಳ್ಳಿಗೇರಿ ಗ್ರಾಮವು ಇತ್ತೀಚಿನ ದಿನಗಳಲ್ಲಿ ಅಕ್ರಮ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿದೆ ಎಂಬ ದೂರುಗಳು ಕೇಳಿಬರುತ್ತಿವೆ. ಇಲ್ಲಿ ಅಕ್ರಮ ಸಾರಾಯಿ ಮಾರಾಟ, ಶೇಂಧಿ ಮಾರಾಟ, ತಂಬಾಕು ಉತ್ಪನ್ನಗಳ ಕಳ್ಳಸಾಗಾಣಿಕೆ ಹಾಗೂ ಮಟ್ಕಾ ದಂಧೆಗಳು ಎಗ್ಗಿಲ್ಲದೆ ನಡೆಯುತ್ತಿವೆ ಎಂಬ ಆರೋಪ ವ್ಯಾಪಕವಾಗಿದೆ. ಇದರ ಜೊತೆಗೆ ಈಗ ಹೋಟೆಲ್ ಉದ್ಯಮದ ಮರೆಯಲ್ಲಿ ವೇಶ್ಯಾವಾಟಿಕೆ ದಂಧೆಯೂ ತಲೆ ಎತ್ತಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ದೊಡ್ಡಬಳ್ಳಾಪುರ: ಕ್ಯಾಂಟರ್ಗೆ ಟೆಂಪೋ ಡಿಕ್ಕಿ ಚಾಲಕ ದುರ್ಮರಣ

Tempo collides with canter, driver dies
Tempo collides with canter, driver dies

ದೊಡ್ಡಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ (Tempo) ಡಿವೈಡರ್ ಮೇಲೆ ಸಾಗಿ, ಮತ್ತೊಂದು ರಸ್ತೆಯಲ್ಲಿ ಎದುರು ಬರುತ್ತಿದ್ದ ಟ್ಯಾಂಕರ್ಗೆ (Canter) ಡಿಕ್ಕಿ ಹೊಡೆದ ಪರಿಣಾಮ (Accident), ಟೆಂಪೋ ಚಾಲಕ ಸಾವನಪ್ಪಿರುವ ಘಟನೆ ತಾಲೂಕಿ ಕೂಗೇನಹಳ್ಳಿ ಕಾಲೋನಿ ಬಳಿ ಸಂಭವಿಸಿದೆ.

ಮೃತನನ್ನು ಬೆಂಗಳೂರಿನ ಮಂಡೂರು ನಿವಾಸಿ ವೇಣು (45 ವರ್ಷ) ಎಂದು ಗುರುತಿಸಲಾಗಿದೆ.

ಶನಿವಾರ ತಡರಾತ್ರಿ ದೊಡ್ಡಬಳ್ಳಾಪುರ ಮೂಲಕ ರಾಷ್ಟ್ರೀಯ ಹೆದ್ದಾರಿಯಲ್ಲಿ ದಾಬಸ್ ಪೇಟೆ ಮಾರ್ಗವಾಗಿ ತೆರಳುವ ವೇಳೆ, ಕೂಗೇನಹಳ್ಳಿ ಕಾಲೋನಿ ಬಳಿ ಟೆಂಪೋ ಚಾಲಕನ ನಿಯಂತ್ರಣ ತಪ್ಪಿದ್ದು, ಡಿವೈಡರ್ ಮೇಲೆ ಹಾರಿ ಸಾಗಿ, ದಾಬಸ್ ಪೇಟೆ ಕಡೆಯಿಂದ ದೊಡ್ಡಬಳ್ಳಾಪುರ ಮಾರ್ಗವಾಗಿ ಬರುತ್ತಿದ್ದ ಕ್ಯಾಂಟರ್ ಗೆ ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ ಟೆಂಪೋ ಚಾಲಕ ವೇಣು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ.

ಸ್ಥಳಕ್ಕೆ ದೊಡ್ಡಬೆಳವಂಗಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ.

ರಾಜಕೀಯ

ಬೆಂಗಳೂರು ಗ್ರಾಮಾಂತರ ಜಿ.ಪಂ ಸೇರಿ 8 ಕ್ಷೇತ್ರಗಳ ಪುನರ್ ವಿಂಗಡಣೆ

ಬೆಂಗಳೂರು ಗ್ರಾಮಾಂತರ ಜಿ.ಪಂ ಸೇರಿ 8 ಕ್ಷೇತ್ರಗಳ ಪುನರ್ ವಿಂಗಡಣೆ

ಬೆಂಗಳೂರು ಗ್ರಾಮಾಂತರ ಸೇರಿದಂತೆ ಎಂಟು ಜಿಲ್ಲೆಗಳ ಜಿಲ್ಲಾ ಪಂಚಾಯಿತಿ (Z.P) ಕ್ಷೇತ್ರಗಳ (Constituencies) ಗಡಿ ಗುರುತಿಸಿ ಮತ್ತು ಚುನಾಯಿತ ಸದಸ್ಯರ ಸಂಖ್ಯೆ ನಿಗದಿಪಡಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.

[ccc_my_favorite_select_button post_id="121409"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ಗ್ರಾಮದ ಲಾಡ್ಜ್ ಒಂದರ ಮೇಲೆ ಪೊಲೀಸರು ದಾಳಿ (Police Raid) ನಡೆಸಿದ್ದು, ವೇಶ್ಯಾವಾಟಿಕೆ (Prostitution) ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿದ್ದಾರೆ. ದಾಳಿಯ ವೇಳೆ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ.

[ccc_my_favorite_select_button post_id="121407"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇವ್ವರಯ ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್ ಧರಿಸದ

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]