ಬೆಂಗಳೂರು ಗ್ರಾಮಾಂತರ ಜಿ.ಪಂ ಸೇರಿ 8 ಕ್ಷೇತ್ರಗಳ ಪುನರ್ ವಿಂಗಡಣೆ

Affidavit is mandatory for Grama Panchayat elections too..!

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಸೇರಿದಂತೆ ಎಂಟು ಜಿಲ್ಲೆಗಳ ಜಿಲ್ಲಾ ಪಂಚಾಯಿತಿ (Z.P) ಕ್ಷೇತ್ರಗಳ (Constituencies) ಗಡಿ ಗುರುತಿಸಿ ಮತ್ತು ಚುನಾಯಿತ ಸದಸ್ಯರ ಸಂಖ್ಯೆ ನಿಗದಿಪಡಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಬೆಂಗಳೂರು ದಕ್ಷಿಣ, ಹಾಸನ, ಉತ್ತರ ಕನ್ನಡ, ಯಾದಗಿರಿ, ಬೀದ‌ರ್, ಕೊಪ್ಪಳ ಗಡಿ ಗುರುತಿಸಿದ ಕ್ಷೇತ್ರಗಳಾಗಿವೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಒಟ್ಟು 28 ಏಕ ಸದಸ್ಯ ಜಿಲ್ಲಾ ಪಂಚಾಯಿತಿ ಪ್ರಾದೇಶಿಕ ಚುನಾವಣಾ ಕ್ಷೇತ್ರಗಳನ್ನು ಗುರುತಿಸಲಾಗಿದೆ. ಇದರಲ್ಲಿ ದೊಡ್ಡಬಳ್ಳಾಪುರ ಯಾವುದೇ ಬದಲಾವಣೆಯಾಗಿಲ್ಲ (7), ಹೊಸಕೋಟೆ (8), ದೇವನಹಳ್ಳಿ (7) ಮತ್ತು ನೆಲಮಂಗಲ (6) ಕ್ಷೇತ್ರಗಳಿವೆ.

ಪ್ರತಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಅಡಿಯಲ್ಲಿ ಬರುವ ಗ್ರಾಮಗಳ ವಿವರವಾದ ಪಟ್ಟಿಯನ್ನು ಅಧಿಸೂಚನೆಯಲ್ಲಿ ಪ್ರಕಟಿಸಲಾಗಿದೆ.

ಭೌಗೋಳಿಕ ವ್ಯಾಪ್ತಿಗೆ ಅನುಗುಣವಾಗಿ ಪ್ರಾದೇಶಿಕ ಚುನಾವಣಾ ಕ್ಷೇತ್ರಗಳ ಗಡಿಗಳನ್ನು ಮರುನಿಗದಿಪಡಿಸಲಾಗಿದೆ. ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಕ್ರಮಸಂಖ್ಯೆಯ ನಿರಂತರತೆ ಕಾಪಾಡುವ ಉದ್ದೇಶದಿಂದ ಹಳೆಯ ಅಧಿಸೂಚನೆಗಳನ್ನು ಹಿಂಪಡೆದು ಹೊಸ ಕ್ರಮಸಂಖ್ಯೆಗ ಳೊಂದಿಗೆ ಕ್ಷೇತ್ರಗಳ ಹೆಸರು ಮತ್ತು ವ್ಯಾಪ್ತಿ ಪ್ರಕಟಿಸಲಾಗಿದೆ.

ಈ ಹಿಂದೆ ಜಿಲ್ಲಾ ಪಂಚಾಯಿತಿಗಳ ಸದಸ್ಯರ ಸಂಖ್ಯೆ ಮತ್ತು ಗಡಿ ಗುರುತಿಸಿ ಹೊರಡಿಸಿದ್ದ ಅಧಿಸೂಚನೆಯ ನಂತರ ಆಗಿರುವ ಕೆಲವು ಆಡಳಿತಾತ್ಮಕ ಬದಲಾವಣೆಗಳ ಕಾರಣಕ್ಕೆ ಮತ್ತು ನಗರಾಭಿವೃದ್ಧಿ ಇಲಾಖೆಯು ಕೆಲವು ಗ್ರಾಮೀಣ ಪ್ರದೇಶಗಳನ್ನು ನಗರ ಸ್ಥಳೀಯ ಸಂಸ್ಥೆಗಳಾಗಿ ಪರಿವರ್ತಿಸಿರುವುದರಿಂದ ಕ್ಷೇತ್ರಗಳ ಪುನರ್ ವಿಂಗಡಣೆ ಮಾಡಲಾಗಿದೆ.

ಕಂದಾಯ ಇಲಾಖೆಯು ಮಾಗಡಿ ಮತ್ತು ನೆಲಮಂಗಲ ತಾಲ್ಲೂಕುಗಳ ಭೌಗೋಳಿಕ ಗಡಿಗಳನ್ನು ಪುನ‌ರ್ ರಚಿಸಿತ್ತು. ಈ ಕಾರಣಗಳಿಂದಾಗಿ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಗಡಿಗಳನ್ನು ಮತ್ತೊಮ್ಮೆ ಪರಿಷ್ಕರಿಸುವುದು ಅನಿವಾರ್ಯವಾಗಿತ್ತು ಎನ್ನಲಾಗಿದೆ.

ಗ್ರಾಮಪಂಚಾಯಿತಿ ಚುನಾವಣೆಗೂ ಅಫಿಡವಿಟ್ ಕಡ್ಡಾಯ..!

ಗ್ರಾಮಪಂಚಾಯತಿ (Gram Panchayat) ಸೇರಿದಂತೆ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಲು ರಾಜ್ಯ ಸರಕಾರ ಸಿದ್ಧತೆ ನಡೆಸಿರುವ ಸಮಯದಲ್ಲಿಯೇ, ರಾಜ್ಯ ಚುನಾವಣಾ ಆಯೋಗ ನಾಮಪತ್ರ ಸಲ್ಲಿಕೆಯ ವಿಷಯದಲ್ಲಿ ಮಹತ್ವದ ಬದಲಾವಣೆಯನ್ನು ತಂದಿದೆ. ವಿಧಾನಸಭೆ, ಲೋಕಸಭೆ ಅಭ್ಯರ್ಥಿಗಳಂತೆ ವಿವರವಾದ ಅಫಿಡವಿಟ್‌ಗಳನ್ನು (Affidavit) ಸಲ್ಲಿಸಬೇಕು ಎನ್ನುವ ಆದೇಶವನ್ನು ಹೊರಡಿಸಿದೆ.

2003 ಮತ್ತು 2018ರ ಹಿಂದಿನ ನಿರ್ದೇಶನ ಗಳೊಂದಿಗೆ ಇನ್ನಷ್ಟು ವಿಷಯಗಳನ್ನು ಸೇರಿಸಲಾಗಿದೆ. ಈ ಆದೇಶ ಗ್ರಾಮ ಪಂಚಾಯತಿ, ನಗರಸಭೆ, ಪಾಲಿಕೆ, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವ ಣೆಗಳಿಗೂ ಅನ್ವಯವಾಗಲಿದೆ.

ಅಭ್ಯರ್ಥಿಗಳು ತಮ್ಮ ವೈಯಕ್ತಿಕ, ಆರ್ಥಿಕ ಮತ್ತು ಕಾನೂನು ಸಂಬಂಧಿತ ವಿವರಗಳನ್ನು ಸ್ಪಷ್ಟವಾಗಿ ಬಹಿರಂಗಪಡಿಸಬೇಕಾಗಿದೆ.

ಕುಟುಂಬ ಸದಸ್ಯರ ಮಾಹಿತಿ ಕಡ್ಡಾಯ

ಆಸ್ತಿ ವಿವರಗಳ ವಿಷಯದಲ್ಲಿ, ಅಭ್ಯರ್ಥಿಗಳು ತಮ್ಮ ಹಾಗೂ ಕುಟುಂಬ ಸದಸ್ಯರ ಚರ ಮತ್ತು ಸ್ಥಿರ ಆಸ್ತಿಗಳ ಸಂಪೂರ್ಣ ವಿವರಗಳನ್ನು ನೀಡಬೇಕು.

ಇದರಲ್ಲಿ ನಗದು, ಬ್ಯಾಂಕ್ ಠೇವಣಿಗಳು, ಷೇರುಗಳು, ಬಾಂಡ್, ವಾಹನ, ಜಮೀನು, ಮನೆಗಳು ಸೇರಿದಂತೆ ಎಲ್ಲಾ ಆಸ್ತಿಗಳ ಮಾಹಿತಿಯನ್ನು ಒಳಗೊಂಡಿರಬೇಕು. ಜತೆಗೆ, ಬ್ಯಾಂಕ್ ಸಾಲ, ಸರಕಾರಕ್ಕೆ ಬಾಕಿ ಇರುವ ತೆರಿಗೆಗಳು ಮತ್ತು ಇತರೆ ಹಣಕಾಸು ಬಾಧ್ಯತೆಗಳ ವಿವರಗಳನ್ನು ಕೂಡ ಸಲ್ಲಿಸಬೇಕಾಗಿದೆ.

SSLC ರಿಸಲ್ಟ್: ದೊಡ್ಡಬಳ್ಳಾಪುರದ ನಳಂದ ಪ್ರೌಢಶಾಲೆಗೆ ಶೇ.100 ಫಲಿತಾಂಶ

SSLC: 100% results for Nalanda High School in Doddaballapur
SSLC: 100% results for Nalanda High School in Doddaballapur

ದೊಡ್ಡಬಳ್ಳಾಪುರ: ಇತ್ತೀಚೆಗೆ ಪ್ರಕಟವಾದ 2025-26ನೇ ಸಾಲಿನ ಎಸ್ಎಸ್ಎಲ್‌ಸಿ (SSLC) ಪರೀಕ್ಷಾ ಫಲಿತಾಂಶದಲ್ಲಿ ನಗರದ ಪ್ರತಿಷ್ಠಿತ ನಳಂದ ಪ್ರೌಢಶಾಲೆ ಶೇ.100% ರಷ್ಟು ಫಲಿತಾಂಶ ಪಡೆದಿದೆ.

2025- 26ನೇ ಸಾಲಿನಲ್ಲಿ 211 ವಿದ್ಯಾರ್ಥಿಗಳು SSLC ಪರೀಕ್ಷೆ ಬರೆದಿದ್ದು, ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಅತ್ಯುತ್ತಮ ಫಲಿತಾಂಶವನ್ನು ನಳಂದ ಪ್ರೌಢಶಾಲೆ ತಂದಿದ್ದಾರೆ.

ನಳಂದ ಪ್ರೌಢ ಶಾಲೆಯ ವಿದ್ಯಾರ್ಥಿ ಚಂದ್ರ ಆರ್ 625ಕ್ಕೆ 619 (ರಾಜ್ಯಕ್ಕೆ ಏಳನೇ ರ್‍ಯಾಂಕ್‌), ದೀಕ್ಷಾ ಆರ್ 625ಕ್ಕೆ 616 (ರಾಜ್ಯಕ್ಕೆ ಒಂಬತ್ತನೇ ರ್‍ಯಾಂಕ್‌) ಮತ್ತು ರಮ್ಯಾ ಕೆ 625ಕ್ಕೆ 615 (ರಾಜ್ಯಕ್ಕೆ ಹತ್ತನೇ ರ್‍ಯಾಂಕ್‌) ಅಂಕಗಳನ್ನು ಪಡೆಯುವ ಮೂಲಕ ಅತ್ಯುತ್ತಮ ಫಲಿತಾಂಶವನ್ನು ಪಡೆದಿದ್ದಾರೆ ಎಂದು ಶಾಲಾ ಮುಖ್ಯ ಶಿಕ್ಷಕರಾದ ಸುನೀತಾ ಪಿ ಅವರು ತಿಳಿಸಿದ್ದಾರೆ.

ಫಲಿತಾಂಶದ ಬಳಿಕ ಹರಿತಲೇಖನಿಗೆ ಪ್ರತಿಕ್ರಿಯೆ ನೀಡಿರುವ ಅವರು, ವಿದ್ಯಾರ್ಥಿಗಳೆಲ್ಲರೂ ಅತ್ಯಂತ ಕಠಿಣ ಪರಿಶ್ರಮದಿಂದ ಅಧ್ಯಯನಶೀಲರಾಗಿದ್ದು, ಈ ಫಲಿತಾಂಶವನ್ನು ಪಡೆಯಲು ಸಾಧ್ಯವಾಗಿದೆ ಎಂದರು.

ಈ ವರ್ಷ ಉತ್ತಮ ಫಲಿತಾಂಶ ಪಡೆದ ಎಲ್ಲಾ ವಿದ್ಯಾರ್ಥಿಗಳನ್ನು, ನಿರಂತರ ಪರಿಶ್ರಮದಿಂದ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ ಶಿಕ್ಷಕರನ್ನು ಹಾಗೂ ಉತ್ತಮವಾಗಿ ಸಹಕರಿಸಿದ ಎಲ್ಲಾ ಪೋಷಕರನ್ನು ಶಾಲಾ ಕಾರ್ಯದರ್ಶಿ ಅನುರಾಧಾ ಕೆಆರ್ ರವರು ಅಭಿನಂದಿಸಿ ವಿದ್ಯಾರ್ಥಿಗಳೆಲ್ಲರಿಗೂ ಉಜ್ವಲ ಭವಿಷ್ಯವನ್ನು ಹಾರೈಸಿದ್ದಾರೆ.

ಈ ಸಾಲಿನಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿ ಚಂದ್ರ ಆರ್, ಶಾಲೆಯಲ್ಲಿರುವ ಅತ್ಯುತ್ತಮವಾದ ಶೈಕ್ಷಣಿಕ ವಾತಾವರಣ, ಶಿಸ್ತು, ಸಮಯ ಪಾಲನೆ ಮತ್ತು ಅಧ್ಯಯನಶೀಲತೆಯೇ ನಮ್ಮ ಸಾಧನೆಗೆ ಕಾರಣವೆಂದು ತಿಳಿಸಿ, ಶಿಕ್ಷಕರ 24X7 ಪರಿಶ್ರಮ ನಮ್ಮನ್ನು ಇಲ್ಲಿಯವರೆಗೆ ಕರೆತಂದಿದೆ ಎಂದರು.

ಅತ್ಯುತ್ತಮ ಫಲಿತಾಂಶ ಪಡೆದ ಎಲ್ಲ ವಿದ್ಯಾರ್ಥಿಗಳಿಗೆ ಶಾಲೆಯ ಆಡಳಿತ ಮಂಡಳಿ ಮತ್ತು ಗುರು ವೃಂದದವರು ಶುಭವನ್ನು ಕೋರಿದ್ದಾರೆ.

ರಾಜಕೀಯ

ಬೆಂಗಳೂರು ಗ್ರಾಮಾಂತರ ಜಿ.ಪಂ ಸೇರಿ 8 ಕ್ಷೇತ್ರಗಳ ಪುನರ್ ವಿಂಗಡಣೆ

ಬೆಂಗಳೂರು ಗ್ರಾಮಾಂತರ ಜಿ.ಪಂ ಸೇರಿ 8 ಕ್ಷೇತ್ರಗಳ ಪುನರ್ ವಿಂಗಡಣೆ

ಬೆಂಗಳೂರು ಗ್ರಾಮಾಂತರ ಸೇರಿದಂತೆ ಎಂಟು ಜಿಲ್ಲೆಗಳ ಜಿಲ್ಲಾ ಪಂಚಾಯಿತಿ (Z.P) ಕ್ಷೇತ್ರಗಳ (Constituencies) ಗಡಿ ಗುರುತಿಸಿ ಮತ್ತು ಚುನಾಯಿತ ಸದಸ್ಯರ ಸಂಖ್ಯೆ ನಿಗದಿಪಡಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.

[ccc_my_favorite_select_button post_id="121409"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ಗ್ರಾಮದ ಲಾಡ್ಜ್ ಒಂದರ ಮೇಲೆ ಪೊಲೀಸರು ದಾಳಿ (Police Raid) ನಡೆಸಿದ್ದು, ವೇಶ್ಯಾವಾಟಿಕೆ (Prostitution) ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿದ್ದಾರೆ. ದಾಳಿಯ ವೇಳೆ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ.

[ccc_my_favorite_select_button post_id="121407"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇವ್ವರಯ ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್ ಧರಿಸದ

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]