ಬೆಂಗಳೂರು: ರಸ್ತೆಯಲ್ಲಿ ನಿಂತ ಆರು ಯುವತಿಯರು ಪುರುಷರನ್ನು ಲೈಂಗಿಕ ಕ್ರಿಯೆಗೆ ಪ್ರಚೋದಿಸುತ್ತಿದ್ದ (Sexually arousing) ಆರೋಪದ ಅಡಿಯಲ್ಲಿ ಆರು ವಿದೇಶಿ ಮಹಿಳೆಯರನ್ನು ಬಂಧಿಸಲಾಗಿದೆ.
ಬೆಂಗಳೂರಿನ ಕೋರಮಂಗಲ (Koramangala) ಚೆಕ್‌ಪೋಸ್ಟ್ ಬಳಿ ರಸ್ತೆಯಲ್ಲಿ ನಿಂತು ವೇಶ್ಯವಾಟಿಕೆಗೆ (Prostitution) ಪ್ರಚೋದನೆ ನೀಡುತ್ತಿದ್ದ ಆರು ಮಹಿಳೆಯರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ರಸ್ತೆಯಲ್ಲಿ ನಿಂತ ಆರು ಯುವತಿಯರು ಪುರುಷರನ್ನು ಲೈಂಗಿಕ ಕ್ರಿಯೆಗೆ ಪ್ರಚೋದಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಆಧರಿಸಿ ಪೊಲೀಸರು ದಾಳಿ ನಡೆಸಿದ್ದಾರೆ.
ಈ ವೇಳೆ 6 ಯುವತಿಯರ ವಶಕ್ಕೆ ಪಡೆಯಲಾಗಿದೆ.
ಈ ಸಂಬಂಧ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿದೇಶಿ ಮಹಿಳೆಯರ ಬಳಿ ಇರುವ ಪಾಸ್‌ಪೋರ್ಟ್, ವೀಸಾ ಪರಿಶೀಲನೆ ಸೇರಿದಂತೆ, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ವರದಿಯಾಗಿದೆ.
ದೊಡ್ಡಬಳ್ಳಾಪುರ: ನಟ ಚೇತನ್ ಅಹಿಂಸಾ ವಿರುದ್ಧ ದೂರು. ಗಡಿಪಾರಿಗೆ ಕನ್ನಡಪರ ಸಂಘಟನೆಗಳ ಆಗ್ರಹ

ದೊಡ್ಡಬಳ್ಳಾಪುರ: ವರನಟ ಡಾ.ರಾಜ್ ಕುಮಾರ್ ಸಮಾಧಿಗೆ ಜಾಗ ನೀಡಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ನಟ ಚೇತನ್ ಅಹಿಂಸಾ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಚೇತನ್ ಅಹಿಂಸಾ (Chethan Ahimsa) ವಿರುದ್ಧ ಕನ್ನಡಪರ ಸಂಘಟನೆಗಳು ಪೊಲೀಸರಿಗೆ ದೂರು ನೀಡಿದ್ದಾರೆ.
ಡಾ.ರಾಜ್ ಕುಮಾರ್ ಸಮಾಧಿಗೆ ಸರ್ಕಾರ 2.5 ಎಕರೆ ಜಾಗ ನೀಡಿದ್ದಕ್ಕೆ ನಟ ಚೇತನ್ ಅಹಿಂಸಾ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದರು.
2.5 ಎಕರೆ ಜಾಗ ನೀಡಿದ್ದು ತಿಳುವಳಿಕೆಯ ನಿರ್ಧಾರವಾಗಿತ್ತಾ? 21ನೇ ಶತಮಾನದಲ್ಲಿ ಪ್ರಮುಖ ಹೋರಾಟವೇ ಭೂಮಿ. ಸರ್ಕಾರ ಸಾರ್ವಜನಿಕರ ಉಪಯೋಗಕ್ಕೆ ಭೂಮಿ ಹಂಚಬೇಕು ಮತಗಳ ಉದ್ದೇಶದಿಂದ ಹಂಚಬಾರದು ಎಂದು ಪೋಸ್ಟ್ ಹಾಕಿದ್ದರು.
ನಟ ಚೇತನ್ ಅಹಿಂಸಾ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಚೇನತ್ ವಿರುದ್ಧ ಡಾ.ರಾಜ್ ಕುಮಾರ್ ಅಭಿಮಾನಿಗಳು, ಕನ್ನಡ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಅಲ್ಲದೇ ದೊಡ್ಡಬಳ್ಳಾಪುರ ನಗರ ಪೊಲಿಸ್ ಠಾಣೆಯಲ್ಲಿ ಇನ್ಸ್‌ಪೆಕ್ಟರ್ ಅಮರೇಶ್ ಗೌಡ ಅವರಿಗೆ ಚೇತನ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಾಗೂ ಗಡಿಪಾರು ಮಾಡುವಂತೆ ಒತ್ತಾಯಿಸಿವೆ.
ಈ ವೇಳೆ ಡಾ.ರಾಜ್ ಕುಮಾರ್ ಅಭಿಮಾನಿಗಳ ಸಂಘದ ತಾಲೂಕು ಅಧ್ಯಕ್ಷ ಸು. ನರಸಿಂಹಮೂರ್ತಿ, ಕನ್ನಡಪರ ಸಂಘಟನೆಗಳ ಮುಖಂಡರಾದ ತ.ನ.ಪ್ರಭುದೇವ, ಸಂಜೀವನಾಯ್ಕ್, ರಾಜಘಟ್ಟರವಿ, ಡಿ.ಪಿ. ಆಂಜನೇಯ, ಪ್ರಮಿಳಾ ಮಹದೇವ್, ಪರಮೇಶ್, ಚೌಡರಾಜ್, ರಮೇಶ್, ಜನಪರ ಮಂಜುನಾಥ್, ಗುರು, ನವೀನ್, ಸೂರಿ, ಮಂಜು, ಮನು, ನಾಗಣ್ಣ ಮತ್ತಿತರರಿದ್ದರು.

