ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿ ವಿಸ್ತರಣೆ

Affidavit is mandatory for Grama Panchayat elections too..!

ಬೆಂಗಳೂರು: ಕರ್ನಾಟಕ ಪಂಚಾಯತ್‌ರಾಜ್ ಸೀಮಾ ನಿರ್ಣಯ ಆಯೋಗ ಏಪ್ರಿಲ್ 18ರಂದು ಹೊರಡಿಸಿರುವ ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯ (Grama Panchayat member) ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿಯನ್ನು ಮೇ 2ರ ಸಂಜೆ 5.30ರವರೆಗೆ ವಿಸ್ತರಿಸಲಾಗಿದೆ.

ಎಲ್ಲ 31 ಜಿಲ್ಲೆಗಳ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯರ ಸಂಖ್ಯೆಯ ಕುರಿತಂತೆ ಬಂದಿರುವ ಆಕ್ಷೇಪಣೆ, ಅಹವಾಲುಗಳ ಕುರಿತು ಏಪ್ರಿಲ್ 27ರಂದು ನಿಗದಿಪಡಿಸಲಾಗಿದ್ದ ಪರಿಶೀಲನಾ ಅದಾಲತ್ತನ್ನು ಮೇ 5ಕ್ಕೆ ಮುಂದೂಡಲಾಗಿದೆ.

ಬಹುಮಹಡಿಗಳ ಕಟ್ಟಡದಲ್ಲಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಚೇರಿಯಲ್ಲಿ ಅದಾಲತ್ ನಡೆಯಲಿದೆ.

ಅಂದು ಬೆಳಿಗ್ಗೆ 11 ರಿಂದ 1.30ರವರೆಗೆ ಕಲಬುರಗಿ, ಯಾದಗಿರಿ, ಬೀದ‌ರ್, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ವಿಜಯಪುರ, ಹಾವೇರಿ ಮತ್ತು ಉತ್ತರಕನ್ನಡ ಜಿಲ್ಲೆ.

ಮಧ್ಯಾಹ್ನ 2:30 ರಿಂದ 5ರವರೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಬೆಂಗಳೂರು ದಕ್ಷಿಣ, ತುಮಕೂರು, ದಾವಣಗೆರೆ, ಕೋಲಾರ, ಚಿತ್ರದುರ್ಗ, ಶಿವಮೊಗ್ಗ, ಕೊಡಗು, ಚಾಮರಾಜನಗರ, ಮೈಸೂರು, ಮಂಡ್ಯ, ಹಾಸನ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಮತ್ತು ಉಡುಪಿ ಜಿಲ್ಲೆಗಳಿಗೆ ಸಂಬಂಧಿಸಿದ ಅದಾಲತ್‌ ನಡೆಯಲಿದೆ.

ಗ್ರಾಮಪಂಚಾಯಿತಿ ಚುನಾವಣೆಗೂ ಅಫಿಡವಿಟ್ ಕಡ್ಡಾಯ..!

ಬೆಂಗಳೂರು: ಗ್ರಾಮಪಂಚಾಯತಿ (Gram Panchayat) ಸೇರಿದಂತೆ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಲು ರಾಜ್ಯ ಸರಕಾರ ಸಿದ್ಧತೆ ನಡೆಸಿರುವ ಸಮಯದಲ್ಲಿಯೇ, ರಾಜ್ಯ ಚುನಾವಣಾ ಆಯೋಗ ನಾಮಪತ್ರ ಸಲ್ಲಿಕೆಯ ವಿಷಯದಲ್ಲಿ ಮಹತ್ವದ ಬದಲಾವಣೆಯನ್ನು ತಂದಿದೆ. ವಿಧಾನಸಭೆ, ಲೋಕಸಭೆ ಅಭ್ಯರ್ಥಿಗಳಂತೆ ವಿವರವಾದ ಅಫಿಡವಿಟ್‌ಗಳನ್ನು (Affidavit) ಸಲ್ಲಿಸಬೇಕು ಎನ್ನುವ ಆದೇಶವನ್ನು ಹೊರಡಿಸಿದೆ.

2003 ಮತ್ತು 2018ರ ಹಿಂದಿನ ನಿರ್ದೇಶನ ಗಳೊಂದಿಗೆ ಇನ್ನಷ್ಟು ವಿಷಯಗಳನ್ನು ಸೇರಿಸಲಾಗಿದೆ. ಈ ಆದೇಶ ಗ್ರಾಮ ಪಂಚಾಯತಿ, ನಗರಸಭೆ, ಪಾಲಿಕೆ, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವ ಣೆಗಳಿಗೂ ಅನ್ವಯವಾಗಲಿದೆ.ಅಭ್ಯರ್ಥಿಗಳು ತಮ್ಮ ವೈಯಕ್ತಿಕ, ಆರ್ಥಿಕ ಮತ್ತು ಕಾನೂನು ಸಂಬಂಧಿತ ವಿವರಗಳನ್ನು ಸ್ಪಷ್ಟವಾಗಿ ಬಹಿರಂಗಪಡಿಸಬೇಕಾಗಿದೆ.ಕುಟುಂಬ ಸದಸ್ಯರ ಮಾಹಿತಿ ಕಡ್ಡಾಯ

ಆಸ್ತಿ ವಿವರಗಳ ವಿಷಯದಲ್ಲಿ, ಅಭ್ಯರ್ಥಿಗಳು ತಮ್ಮ ಹಾಗೂ ಕುಟುಂಬ ಸದಸ್ಯರ ಚರ ಮತ್ತು ಸ್ಥಿರ ಆಸ್ತಿಗಳ ಸಂಪೂರ್ಣ ವಿವರಗಳನ್ನು ನೀಡಬೇಕು.ಇದರಲ್ಲಿ ನಗದು, ಬ್ಯಾಂಕ್ ಠೇವಣಿಗಳು, ಷೇರುಗಳು, ಬಾಂಡ್, ವಾಹನ, ಜಮೀನು, ಮನೆಗಳು ಸೇರಿದಂತೆ ಎಲ್ಲಾ ಆಸ್ತಿಗಳ ಮಾಹಿತಿಯನ್ನು ಒಳಗೊಂಡಿರಬೇಕು. ಜತೆಗೆ, ಬ್ಯಾಂಕ್ ಸಾಲ, ಸರಕಾರಕ್ಕೆ ಬಾಕಿ ಇರುವ ತೆರಿಗೆಗಳು ಮತ್ತು ಇತರೆ ಹಣಕಾಸು ಬಾಧ್ಯತೆಗಳ ವಿವರಗಳನ್ನು ಕೂಡ ಸಲ್ಲಿಸಬೇಕಾಗಿದೆ.

SSLC ರಿಸಲ್ಟ್: ದೊಡ್ಡಬಳ್ಳಾಪುರದ ನಳಂದ ಪ್ರೌಢಶಾಲೆಗೆ ಶೇ.100 ಫಲಿತಾಂಶ

ದೊಡ್ಡಬಳ್ಳಾಪುರ: ಇತ್ತೀಚೆಗೆ ಪ್ರಕಟವಾದ 2025-26ನೇ ಸಾಲಿನ ಎಸ್ಎಸ್ಎಲ್‌ಸಿ (SSLC) ಪರೀಕ್ಷಾ ಫಲಿತಾಂಶದಲ್ಲಿ ನಗರದ ಪ್ರತಿಷ್ಠಿತ ನಳಂದ ಪ್ರೌಢಶಾಲೆ ಶೇ.100% ರಷ್ಟು ಫಲಿತಾಂಶ ಪಡೆದಿದೆ.

2025- 26ನೇ ಸಾಲಿನಲ್ಲಿ 211 ವಿದ್ಯಾರ್ಥಿಗಳು SSLC ಪರೀಕ್ಷೆ ಬರೆದಿದ್ದು, ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಅತ್ಯುತ್ತಮ ಫಲಿತಾಂಶವನ್ನು ನಳಂದ ಪ್ರೌಢಶಾಲೆ ತಂದಿದ್ದಾರೆ.ನಳಂದ ಪ್ರೌಢ ಶಾಲೆಯ ವಿದ್ಯಾರ್ಥಿ ಚಂದ್ರ ಆರ್ 625ಕ್ಕೆ 619 (ರಾಜ್ಯಕ್ಕೆ ಏಳನೇ ರ್‍ಯಾಂಕ್‌), ದೀಕ್ಷಾ ಆರ್ 625ಕ್ಕೆ 616 (ರಾಜ್ಯಕ್ಕೆ ಒಂಬತ್ತನೇ ರ್‍ಯಾಂಕ್‌) ಮತ್ತು ರಮ್ಯಾ ಕೆ 625ಕ್ಕೆ 615 (ರಾಜ್ಯಕ್ಕೆ ಹತ್ತನೇ ರ್‍ಯಾಂಕ್‌) ಅಂಕಗಳನ್ನು ಪಡೆಯುವ ಮೂಲಕ ಅತ್ಯುತ್ತಮ ಫಲಿತಾಂಶವನ್ನು ಪಡೆದಿದ್ದಾರೆ ಎಂದು ಶಾಲಾ ಮುಖ್ಯ ಶಿಕ್ಷಕರಾದ ಸುನೀತಾ ಪಿ ಅವರು ತಿಳಿಸಿದ್ದಾರೆ.ಫಲಿತಾಂಶದ ಬಳಿಕ ಹರಿತಲೇಖನಿಗೆ ಪ್ರತಿಕ್ರಿಯೆ ನೀಡಿರುವ ಅವರು, ವಿದ್ಯಾರ್ಥಿಗಳೆಲ್ಲರೂ ಅತ್ಯಂತ ಕಠಿಣ ಪರಿಶ್ರಮದಿಂದ ಅಧ್ಯಯನಶೀಲರಾಗಿದ್ದು, ಈ ಫಲಿತಾಂಶವನ್ನು ಪಡೆಯಲು ಸಾಧ್ಯವಾಗಿದೆ ಎಂದರು. ಈ ವರ್ಷ ಉತ್ತಮ ಫಲಿತಾಂಶ ಪಡೆದ ಎಲ್ಲಾ ವಿದ್ಯಾರ್ಥಿಗಳನ್ನು, ನಿರಂತರ ಪರಿಶ್ರಮದಿಂದ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ ಶಿಕ್ಷಕರನ್ನು ಹಾಗೂ ಉತ್ತಮವಾಗಿ ಸಹಕರಿಸಿದ ಎಲ್ಲಾ ಪೋಷಕರನ್ನು ಶಾಲಾ ಕಾರ್ಯದರ್ಶಿ ಅನುರಾಧಾ ಕೆಆರ್ ರವರು ಅಭಿನಂದಿಸಿ ವಿದ್ಯಾರ್ಥಿಗಳೆಲ್ಲರಿಗೂ ಉಜ್ವಲ ಭವಿಷ್ಯವನ್ನು ಹಾರೈಸಿದ್ದಾರೆ. ಈ ಸಾಲಿನಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿ ಚಂದ್ರ ಆರ್, ಶಾಲೆಯಲ್ಲಿರುವ ಅತ್ಯುತ್ತಮವಾದ ಶೈಕ್ಷಣಿಕ ವಾತಾವರಣ, ಶಿಸ್ತು, ಸಮಯ ಪಾಲನೆ ಮತ್ತು ಅಧ್ಯಯನಶೀಲತೆಯೇ ನಮ್ಮ ಸಾಧನೆಗೆ ಕಾರಣವೆಂದು ತಿಳಿಸಿ, ಶಿಕ್ಷಕರ 24X7 ಪರಿಶ್ರಮ ನಮ್ಮನ್ನು ಇಲ್ಲಿಯವರೆಗೆ ಕರೆತಂದಿದೆ ಎಂದರು.ಅತ್ಯುತ್ತಮ ಫಲಿತಾಂಶ ಪಡೆದ ಎಲ್ಲ ವಿದ್ಯಾರ್ಥಿಗಳಿಗೆ ಶಾಲೆಯ ಆಡಳಿತ ಮಂಡಳಿ ಮತ್ತು ಗುರು ವೃಂದದವರು ಶುಭವನ್ನು ಕೋರಿದ್ದಾರೆ.


ರಾಜಕೀಯ

ಕರ್ನಾಟಕ ಶಕ್ತಿ ಕೇಂದ್ರ ಸಮಿತಿ ಅಸ್ತಿತ್ವಕ್ಕೆ; ಜಿಲ್ಲಾಧ್ಯಕ್ಷರಾಗಿ ಆದಿತ್ಯ ನಾಗೇಶ್, ತಾಲೂಕು ಅಧ್ಯಕ್ಷರಾಗಿ ಆಂಜನಮೂರ್ತಿ ಆಯ್ಕೆ

ಕರ್ನಾಟಕ ಶಕ್ತಿ ಕೇಂದ್ರ ಸಮಿತಿ ಅಸ್ತಿತ್ವಕ್ಕೆ; ಜಿಲ್ಲಾಧ್ಯಕ್ಷರಾಗಿ ಆದಿತ್ಯ ನಾಗೇಶ್, ತಾಲೂಕು ಅಧ್ಯಕ್ಷರಾಗಿ

ಮಾದಿಗ ಜನಾಂಗದ ಏಳಿಗೆಗಾಗಿ, ರಾಜಕೀಯ ಶಕ್ತಿ, ನಾಯಕತ್ವದ ಶಕ್ತಿ, ಆರ್ಥಿಕ ಶಕ್ತಿ ತುಂಬುವ ನಿಟ್ಟಿನಲ್ಲಿ ಕರ್ನಾಟಕ ಶಕ್ತಿ ಕೇಂದ್ರ ಸಮಿತಿಯನ್ನು (Karnataka Shakti Kendra Committee) ರಚಿಸಲಾಗಿದೆ.

[ccc_my_favorite_select_button post_id="121547"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]