ಬೆಂಗಳೂರು: ಶಿವಾಜಿನಗರದಲ್ಲಿ ಮಳೆಯಿಂದ ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು 7 ಜನ ಸಾವು. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು, ಸಂಬಂಧಪಟ್ಟ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡರು.
ಶಿವಾಜಿನಗರದ ಬೌರಿಂಗ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದು ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿದರು.
#Breaking #Bengaluru #Rains#Karnataka chief minister Siddaramaiah pegs the death toll in Bowring Hospital wall collapse tragedy at 7, including two children.
— TOI Bengaluru (@TOIBengaluru) April 29, 2026
A total of seven injured.@timesofindia pic.twitter.com/bKQ0aZ92H6
ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿತ ಪ್ರಕರಣದಲ್ಲಿ 7 ಮಂದಿ ಮೃತಪಟ್ಟಿರುವುದನ್ನು ಅಧಿಕಾರಿಗಳು ತಿಳಿಸಿದರು. ವ್ಯಾಪಾರ ಮಾಡುತ್ತಿದ್ದವರ ಮೇಲೆ ಗೋಡೆ ಕುಸಿದ ಘಟನೆ ಬಗ್ಗೆ ಆಕ್ರೋಶಗೊಂಡ ಸಿಎಂ ಸ್ಥಳದಲ್ಲೇ ತನಿಖೆ ಮಾಡಲು ಆದೇಶ ನೀಡಿದರು.
ಮೃತರ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ ಸಿಎಂ, ಗಾಯಾಳುಗಳಿಗೆ ಉಚಿತ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದರು.
ಬೌರಿಂಗ್ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗಕ್ಕೆ ಸಿಎಂ ಭೇಟಿ ನೀಡಿ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದರು.
ಕಾಂಪೌಂಡ್ ಕುಸಿದ ದುರಂತಕ್ಕೆ ಸಿಎಂ ಆಘಾತ. ಜಿಬಿಎ ಅಧಿಕಾರಿಗಳಿಗೆ ಕ್ಲಾಸ್ ತಗೆದುಕೊಂಡ ಸಿಎಂ ಸಿದ್ದರಾಮಯ್ಯ, “ಏನ್ ಕ್ರಮಕೈಗೊಂಡಿದ್ದೀರಿ ಎಂದು ಸಿಎಂ ಕ್ಲಾಸ್. ಹಳೆ ಗೋಡೆ ನೋಡೋಕಾಗಲ್ವಾ…? ನಿಮ್ಮ ಮಧ್ಯೆ ಕೋ ಆರ್ಡಿನೇಷನ್ ಇರಲ್ವಾ? ಎಚ್ಚರವಹಿಸಿದ್ದರೆ ಈ ಅನಾಹುತ ತಪ್ಪಿಸಬಹುದಿತ್ತು. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ತರಾಟೆ ತೆಗೆದುಕೊಂಡರು.
ಮಳೆರಾಯನ ಆರ್ಭಟ; ಬೌರಿಂಗ್ ಆಸ್ಪತ್ರೆಯ ಗೋಡೆ ಕುಸಿತ.. 7 ಮಂದಿ ದುರ್ಮರಣ!

ಬೆಂಗಳೂರು: ಇಂದು ಸಂಜೆಯಿಂದ ಸುರಿಯುತ್ತಿರುವ ಭೀಕರ ಆಲಿಕಲ್ಲು ಮಳೆಗೆ ನಗರದಲ್ಲಿ ದೊಡ್ಡ ದುರಂತವೇ ಸಂಭವಿಸಿದೆ. ಮಳೆಯ ಆರ್ಭಟಕ್ಕೆ ಬೌರಿಂಗ್ ಆಸ್ಪತ್ರೆಯ (Bowring Hospital) ಶವಾಗಾರದ ಸಮೀಪವಿರುವ ಗೋಡೆಯೊಂದು ಏಕಾಏಕಿ ಕುಸಿದು ಬಿದ್ದ ಪರಿಣಾಮ, ಸ್ಥಳದಲ್ಲಿದ್ದ ಏಳು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.
ಬುಧವಾರ ಸಂಜೆಯಿಂದ ರಾಜಧಾನಿಯಾದ್ಯಂತ ಗುಡುಗು ಸಹಿತ ಭಾರಿ ಮಳೆ ಸುರಿಯುತ್ತಿದೆ. ಶಿವಾಜಿನಗರದ ಬೌರಿಂಗ್ ಆಸ್ಪತ್ರೆಯ ಶವಾಗಾರದ ಬಳಿ ಜನರು ಆಶ್ರಯ ಪಡೆದಿದ್ದ ವೇಳೆ ಈ ಹಳೆಯ ಗೋಡೆ ಕುಸಿದಿದೆ ಎನ್ನಲಾಗಿದೆ.
#Bengaluru #Rain #Damage
— TOI Bengaluru (@TOIBengaluru) April 29, 2026
Rescue workers search for 5-6 persons feared trapped under the compound wall that crashed at Bowring Hospital in Shivajinagar.
Death toll so far is 8. The victims are street vendors & their kids. @timesofindia pic.twitter.com/hXlpE1eFx3
ಘಟನೆಯಲ್ಲಿ ಗೋಡೆಯ ಅವಶೇಷಗಳಡಿ ಸಿಲುಕಿ ಏಳು ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳ ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ.
ಧಾರಾಕಾರವಾಗಿ ಮಳೆ ಸುರಿಯುತ್ತಿದ್ದರೂ ಲೆಕ್ಕಿಸದೆ ಮಣ್ಣಿನಡಿ ಸಿಲುಕಿರುವವರನ್ನು ಹೊರತೆಗೆಯುವ ಕಾರ್ಯ ಭರದಿಂದ ಸಾಗಿದೆ.
ಇದೀಗ ಬಂದ ಮಾಹಿತಿ ಅನ್ವಯ ಘಟನೆಯಲ್ಲಿ ಇಬ್ಬರು ಮಕ್ಕಳು ಸೇರಿ 8 ಮಂದಿ ಬೀದಿ ಬದಿ ವ್ಯಾಪಾರಿಗಳು ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಮೃತದೇಹಗಳನ್ನು ಹೊರತೆಗೆಯಲು ಜೆಸಿಬಿ ಯಂತ್ರಗಳ ನೆರವು ಪಡೆಯಲಾಗುತ್ತಿದೆ. ಮೃತರ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಲಾಗಿದೆ.
Intense thundershowers & hailstorms hit #Bengaluru.
— TOI Bengaluru (@TOIBengaluru) April 29, 2026
The city received 78 rainfall by 5:30 pm.
@timesofindia pic.twitter.com/dBM32DoDho
ನಗರದ ಮೆಜೆಸ್ಟಿಕ್, ಶಿವಾಜಿನಗರ, ಎಂ.ಜಿ. ರಸ್ತೆ ಸೇರಿದಂತೆ ಹಲವೆಡೆ ಆಲಿಕಲ್ಲು ಸಹಿತ ಮಳೆಯಾಗುತ್ತಿದ್ದು, ರಸ್ತೆಗಳು ಕೆರೆಯಂತಾಗಿವೆ. ಮಳೆಯ ಅಬ್ಬರಕ್ಕೆ 59ಕ್ಕೂ ಹೆಚ್ಚು ಮರಗಳು ನೆಲಕ್ಕುರುಳಿದ್ದು ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
ಮಳೆರಾಯನ ಆರ್ಭಟಕ್ಕೆ ಬೆಂಗಳೂರು ಅಕ್ಷರಶಃ ತತ್ತರಿಸಿ ಹೋಗಿದ್ದು, ಬಿಬಿಎಂಪಿ ಮತ್ತು ವಿಪತ್ತು ನಿರ್ವಹಣಾ ತಂಡಗಳು ಹೈ ಅಲರ್ಟ್ ಆಗಿವೆ.
ಈ ಮಧ್ಯೆ ವಿಧಾನ ಸೌಧದ ಸುತ್ತಮುತ್ತ ಸೇರಿ ಹಸಿದ್ದರಾಮಯ್ಯ ಆಲಿಕಲ್ಲು ಮಳೆಯಾಗಿದೆ. ಈ ವೇಳೆ ರಸ್ತೆಗಳು ಹಿಮದ ಹೊದಿಕೆಯಂತೆ ಕಂಡುಬಂತು. ಕಂಠೀರವ ಕ್ರೀಡಾಂಗಣ ಆಲಿಕಲ್ಲಿನಿಂದ ಸಂಪೂರ್ಣವಾಗಿ ಮುಚ್ಚಿಹೋಗಿದ್ದು, ಜನರನ್ನು ಚಕಿತಗೊಳಿಸಿದೆ.

