ಬಿರುಗಾಳಿ ಸಹಿತ ಮಳೆ: ಮರದ ಕೊಂಬೆ ಬಿದ್ದು ವ್ಯಕ್ತಿ ಸಾವು..!

Rain: Man dies after falling tree branch..!

ಚಿಕ್ಕನಾಯಕನಹಳ್ಳಿ: ತುಮಕೂರು (Tumakuru) ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಬ್ಯಾಲರೆಯಲ್ಲಿ ಬುಧವಾರ ರಾತ್ರಿ ಸುರಿದ ಭಾರಿ ಬಿರುಗಾಳಿ ಸಹಿತ ಮಳೆಗೆ (Rain) ಮರದ ಕೊಂಬೆ ಮುರಿದು ಬಿದ್ದು ವ್ಯಕ್ತಿಯೋರ್ವ ದುರ್ಮರಣಕ್ಕೀಡಾಗಿದ್ದಾರೆ.

ಮೃತರನ್ನು ಬ್ಯಾಲರೆ ಗ್ರಾಮದ ಪುಟ್ಟಯ್ಯ (68 ವರ್ಷ) ಎಂದು ಗುರುತಿಸಲಾಗಿದೆ.

ಪುಟ್ಟಯ್ಯ ತಮ್ಮ ತೋಟದಲ್ಲಿದ್ದ ವೇಳೆ ಏಕಾಏಕಿ ಮಳೆ ಆರಂಭವಾದ ಕಾರಣ ರಕ್ಷಣೆಗಾಗಿ ಅವರು ಮರದ ಕೆಳಗೆ ಆಶ್ರಯ ಪಡೆದಿದ್ದರು.

ಈ ಸಂದರ್ಭದಲ್ಲಿ ಬಿರುಗಾಳಿ ಸಹಿತ ಮಳೆ ಬಂದಿದ್ದರಿಂದ ಮರದ ಭಾರಿ ಗಾತ್ರದ ಕೊಂಬೆಯೊಂದು ಮುರಿದು ನೇರವಾಗಿ ಅವರ ತಲೆಯ ಮೇಲೆ ಬಿದ್ದಿದೆ. ಇದರ ತೀವ್ರತೆಗೆ ಪುಟ್ಟಯ್ಯ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಚಿಕ್ಕನಾಯಕನಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮಳೆರಾಯನ ಆರ್ಭಟ; ಬೌರಿಂಗ್ ಆಸ್ಪತ್ರೆಯ ಗೋಡೆ ಕುಸಿತ.. 7 ಮಂದಿ ದುರ್ಮರಣ!

ಬೆಂಗಳೂರು: ಬುಧವಾರ ಸಂಜೆಯಿಂದ ಸುರಿಯುತ್ತಿರುವ ಭೀಕರ ಆಲಿಕಲ್ಲು ಮಳೆಗೆ ನಗರದಲ್ಲಿ ದೊಡ್ಡ ದುರಂತವೇ ಸಂಭವಿಸಿದೆ. ಮಳೆಯ ಆರ್ಭಟಕ್ಕೆ ಬೌರಿಂಗ್‌ ಆಸ್ಪತ್ರೆಯ (Bowring Hospital) ಶವಾಗಾರದ ಸಮೀಪವಿರುವ ಗೋಡೆಯೊಂದು ಏಕಾಏಕಿ ಕುಸಿದು ಬಿದ್ದ ಪರಿಣಾಮ, ಸ್ಥಳದಲ್ಲಿದ್ದ ಏಳು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ಬುಧವಾರ ಸಂಜೆಯಿಂದ ರಾಜಧಾನಿಯಾದ್ಯಂತ ಗುಡುಗು ಸಹಿತ ಭಾರಿ ಮಳೆ ಸುರಿಯುತ್ತಿದೆ. ಶಿವಾಜಿನಗರದ ಬೌರಿಂಗ್‌ ಆಸ್ಪತ್ರೆಯ ಶವಾಗಾರದ ಬಳಿ ಜನರು ಆಶ್ರಯ ಪಡೆದಿದ್ದ ವೇಳೆ ಈ ಹಳೆಯ ಗೋಡೆ ಕುಸಿದಿದೆ ಎನ್ನಲಾಗಿದೆ.

ಘಟನೆಯಲ್ಲಿ ಗೋಡೆಯ ಅವಶೇಷಗಳಡಿ ಸಿಲುಕಿ ಏಳು ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳ ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು‌.

ಧಾರಾಕಾರವಾಗಿ ಮಳೆ ಸುರಿಯುತ್ತಿದ್ದರೂ ಲೆಕ್ಕಿಸದೆ ಮಣ್ಣಿನಡಿ ಸಿಲುಕಿರುವವರನ್ನು ಹೊರತೆಗೆಯುವ ಕಾರ್ಯ ಭರದಿಂದ ಸಾಗಿತ್ತು.

ಮೃತದೇಹಗಳನ್ನು ಹೊರತೆಗೆಯಲು ಜೆಸಿಬಿ ಯಂತ್ರಗಳ ನೆರವು ಪಡೆಯಲಾಯಿತು‌.

8 ಜನರು ತೀವ್ರ ನಿಗಾಘಟಕದಲ್ಲಿದ್ದು ಸಾವುನೋವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಘಟನೆ ನಡೆಯುತ್ತಲೇ ಬೌರಿಂಗ್ ಆಸತ್ರೆಗೆ ದೌಡಾಯಿಸಿದ ಸಿಎಂ ಸಿದ್ದರಾಮಯ್ಯ, ಮೃತ ಕುಟುಂಬಸ್ಥರಿಗೆ ತಲಾ 5 ಲಕ್ಷ ರು. ಪರಿಹಾರ ಘೋಷಿಸಿದ್ದಾರೆ.

ಸಂಜೆ ವೇಳೆ ದಿಢೀರ್ ಮಳೆಗೆ ಶಿವಾಜಿ ನಗರದ ಬಳಿಯ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು ರಸ್ತೆ ವ್ಯಾಪಾರಿಗಳು ಮತ್ತು ಪಾದಚಾರಿಗಳು ಸೇರಿದಂತೆ 7 ಜನರು ಸಾವನ್ನ ಪ್ಪಿದ್ದಾರೆ.

ತಬೀನ್ ತಾಜ್ (47 ವರ್ಷ), ಮುಬೀನ್ ತಾಜ್ (49 ವರ್ಷ), ಮಾಯ (51 ವರ್ಷ), ಸಾಜಿದ್ (20 ವರ್ಷ), ಅಜು (35 ವರ್ಷ), ಪ್ರೀತಿ (5 ವರ್ಷ), ಸಿಜಿ (47 ವರ್ಷ) ಮೃತಪಟ್ಟವರು.

ನಗರದ ಮೆಜೆಸ್ಟಿಕ್, ಶಿವಾಜಿನಗರ, ಎಂ.ಜಿ. ರಸ್ತೆ ಸೇರಿದಂತೆ ಹಲವೆಡೆ ಆಲಿಕಲ್ಲು ಸಹಿತ ಮಳೆಯಾಗುತ್ತಿದ್ದು, ರಸ್ತೆಗಳು ಕೆರೆಯಂತಾಗಿವೆ. ಮಳೆಯ ಅಬ್ಬರಕ್ಕೆ 50ಕ್ಕೂ ಹೆಚ್ಚು ಮರಗಳು ನೆಲಕ್ಕುರುಳಿದ್ದು ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

ಮಳೆರಾಯನ ಆರ್ಭಟಕ್ಕೆ ಬೆಂಗಳೂರು ಅಕ್ಷರಶಃ ತತ್ತರಿಸಿ ಹೋಗಿದ್ದು, ಬಿಬಿಎಂಪಿ ಮತ್ತು ವಿಪತ್ತು ನಿರ್ವಹಣಾ ತಂಡಗಳು ಹೈ ಅಲರ್ಟ್ ಆಗಿವೆ.

ಈ ಮಧ್ಯೆ ವಿಧಾನ ಸೌಧದ ಸುತ್ತಮುತ್ತ ಸೇರಿ ಹಲವೆಡೆ ಭಾರಿ ಆಲಿಕಲ್ಲು ಮಳೆಯಾಗಿದೆ. ಈ ವೇಳೆ ರಸ್ತೆಗಳು ಹಿಮದ ಹೊದಿಕೆಯಂತೆ ಕಂಡುಬಂತು. ಕಂಠೀರವ ಕ್ರೀಡಾಂಗಣ ಆಲಿಕಲ್ಲಿನಿಂದ ಸಂಪೂರ್ಣವಾಗಿ ಮುಚ್ಚಿಹೋಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ರಾಜಕೀಯ

ಕರ್ನಾಟಕ ಶಕ್ತಿ ಕೇಂದ್ರ ಸಮಿತಿ ಅಸ್ತಿತ್ವಕ್ಕೆ; ಜಿಲ್ಲಾಧ್ಯಕ್ಷರಾಗಿ ಆದಿತ್ಯ ನಾಗೇಶ್, ತಾಲೂಕು ಅಧ್ಯಕ್ಷರಾಗಿ ಆಂಜನಮೂರ್ತಿ ಆಯ್ಕೆ

ಕರ್ನಾಟಕ ಶಕ್ತಿ ಕೇಂದ್ರ ಸಮಿತಿ ಅಸ್ತಿತ್ವಕ್ಕೆ; ಜಿಲ್ಲಾಧ್ಯಕ್ಷರಾಗಿ ಆದಿತ್ಯ ನಾಗೇಶ್, ತಾಲೂಕು ಅಧ್ಯಕ್ಷರಾಗಿ

ಮಾದಿಗ ಜನಾಂಗದ ಏಳಿಗೆಗಾಗಿ, ರಾಜಕೀಯ ಶಕ್ತಿ, ನಾಯಕತ್ವದ ಶಕ್ತಿ, ಆರ್ಥಿಕ ಶಕ್ತಿ ತುಂಬುವ ನಿಟ್ಟಿನಲ್ಲಿ ಕರ್ನಾಟಕ ಶಕ್ತಿ ಕೇಂದ್ರ ಸಮಿತಿಯನ್ನು (Karnataka Shakti Kendra Committee) ರಚಿಸಲಾಗಿದೆ.

[ccc_my_favorite_select_button post_id="121547"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]