ಬೌರಿಂಗ್ ಆಸ್ಪತ್ರೆ ದುರಂತ: ಇಂಜಿನಿಯರ್ ತಲೆದಂಡ

Bowing Hospital disaster: Engineer beheaded

ಬೆಂಗಳೂರು: ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಗೋಡೆ ಕುಸಿದು ಏಳು ಜನರ ಸಾವಿಗೆ ಕಾರಣವಾಗಿರುವ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಇಂಜಿನಿಯರಿಂಗ್ ವಿಭಾಗದ ಇಂಜಿನಿಯರ್ ಅಮಾನತು ಮಾಡಲು ಸೂಚಿಸಲಾಗಿದೆ ( Engineer) ಅವರನ್ನು ಅಮಾನತುಗೊಳಿಸಿ, ನೋಟೀಸು ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

ಭಾರಿ ಮಳೆಯಿಂದ ಬೌರಿಂಗ್ ಆಸ್ಪತ್ರೆ ದುರಂತದ ಹಿನ್ನೆಲೆಯಲ್ಲಿ ಇಂದು ಅವರ ಅಧ್ಯಕ್ಷತೆಯಲ್ಲಿ ಜಿಬಿಎ ಆಯುಕ್ತರುಗಳ ಸಭೆ ಜರುಗಿತು.

ಬೆಂಗಳೂರಿನಲ್ಲಿ ಮಳೆಯಿಂದ ಉಂಟಾಗಿರುವ ಹಾನಿ ಹಾಗೂ ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತದಿಂದ ನಿನ್ನೆ ಏಳು ಜನ ಮೃತಪಟ್ಟಿರುವ ಕುರಿತಂತೆ ಜಿಬಿಎ ಆಯುಕ್ತರೊಂದಿಗೆ ಚರ್ಚಿಸಿದ ಮುಖ್ಯಮಂತ್ರಿಗಳು ಗೋಡೆಗೆ ಹಾನಿ ಆಗಲಿದೆ ಎಂದು ತಿಳಿದಿದ್ದರೂ ಕಾಮಗಾರಿ ನಡೆಯುವಾಗ ಮಣ್ಣು ಸುರಿದದ್ದು ಏಕೆ ಎಂದು ಪ್ರಶ್ನಿಸಿದರು.

ಗೋಡೆಗೆ ಹಾನಿಯಾಗುವಂತೆ ಮಣ್ಣು ಸುರಿದದ್ದು ನೀವು ಏಕೆ ನೋಡಿಕೊಳ್ಳಲಿಲ್ಲ ಎಂದು ಆಸ್ಪತ್ರೆ ಮುಖ್ಯಸ್ಥರನ್ನು ಮುಖ್ಯಮಂತ್ರಿಗಳು ಪ್ರಶ್ನಿಸಿದರು.

ಬೌರಿಂಗ್ ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್ ನೀಡಲು ಸೂಚಿಸಿದ ಮುಖ್ಯಮಂತ್ರಿಗಳು
ಬೆಂಗಳೂರಿನಲ್ಲಿ ಗುಂಡಿಗಳನ್ನು ಮುಚ್ಚಲು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದರು.

ನಿನ್ನೆ ಬೆಂಗಳೂರಿನಲ್ಲಿ ಉಂಟಾದ ಮಳೆಯಲ್ಲಿ ಸಾಕಷ್ಟು ಹಾನಿಯಾಗಿದ್ದು, 250 ಕ್ಕೂ ಹೆಚ್ಚು ಮರಗಳು ಬಿದ್ದಿವೆ. ಏಳು ಜನ ಸಾವನ್ನಪ್ಪಿದ್ದಾರೆ. ಈಗಾಗಲೇ ಸತ್ತವರ ಕುಟುಂಬದವರಿಗೆ 5 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ.
ಗಾಯಗೊಂಡವರಿಗೆ ಉಚಿತ ಚಿಕಿತ್ಸೆ ನೀಡುವಂತೆ ಸೂಚಿಸಿದರು.

ಮುಂಗಾರು ಮಳೆ ಪ್ರಾರಂಭವಾಗುವ ಮೊದಲೇ ಸಿದ್ಧತೆ ಕೈಗೊಳ್ಳಿ

ಮುಂಗಾರು ಮಳೆ ಪ್ರಾರಂಭವಾಗುವ ಮೊದಲೇ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಬೆಂಗಳೂರಿನ ಐದೂ ವಲಯಗಳ ಆಯುಕ್ತರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು . ಒಣಗಿರುವ ಅಪಾಯಕಾರಿ ಮರಗಳ ರೆಂಬೆಗಳನ್ನು ಕತ್ತರಿಸಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು.

ಮುಂದಿನ ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿದ್ದು ರಾಜಕಾಲುವೆಗಳಲ್ಲಿ ಹೂಳು ತೆಗೆಯುವುದು, ಪ್ರವಾಹ ಉಂಟಾಗದಂತೆ ಕ್ರಮ ತೆಗೆದುಕೊಳ್ಳಬೇಕು ಎಂದರು. ಮಳೆಯಿಂದ ರಸ್ತೆಯಲ್ಲಿ ಬಿದ್ದಿರುವ ಕಸ, ರೆಂಬೆಗಳನ್ನು ಕೂಡಲೇ ತೆರವು ಮಾಡಲು ಸೂಚಿಸಿದರು.

ಅಂಡರ್ ಪಾಸ್ ಗಳಲ್ಲಿ ಮಳೆ ನೀರು ನಿಲ್ಲದಂತೆ ಹಾಗೂ ಜನ ಅಂಡರ್ ಪಾಸ್ ಬಳಸದಂತೆ ಕೂಡಲೇ ಬ್ಯಾರಿಕೇಡ್ ಹಾಕಿ ಎಂದು ಅವರು ಸೂಚಿಸಿದರು.

ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಶಾಸಕ ರಿಜ್ವಾನ್ ಅರ್ಷದ್, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಜಿಬಿಎ ಆಯುಕ್ತ ಮಹೇಶ್ವರ ರಾವ್ , ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಅಂಜುಮ್ ಪರ್ವೇಜ್, ಮೊದಲಾದವರು ಇದ್ದರು.

ರಾಜಕೀಯ

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರೂಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ

[ccc_my_favorite_select_button post_id="121560"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]