ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

Of course, the price of cooking gas has increased: Opposition Leader R. Ashoka

ಬೆಂಗಳೂರು: ಸರ್ವರಿಗೂ ಸಮಪಾಲು ಎಂದು ಹೇಳುವ ಕಾಂಗ್ರೆಸ್‌ ಮುಸ್ಲಿಮರಿಗೆ ಮಾತ್ರ ವಿಶೇಷ ಅನುದಾನ ನೀಡುತ್ತಿದೆ. ಇದರ ಜೊತೆಗೆ ದಲಿತರು ಹಾಗೂ ಹಿಂದುಳಿದ ವರ್ಗಕ್ಕೂ ನೀಡಬೇಕಿತ್ತು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಾವಣಗೆರೆಯಲ್ಲಿ ಮುಸ್ಲಿಮರು ತಿರುಗಿಬಿದ್ದು ಮುಖಂಡರ ವಿರುದ್ಧ ಕ್ರಮ ಕೈಗೊಂಡಿರುವುದರಿಂದ ಮತ ಬ್ಯಾಂಕ್‌ ರಾಜಕಾರಣ ಮಾಡಲಾಗಿದೆ. ಇದಕ್ಕೆ ಹಿಂದೂಗಳು ತಿರುಗುಬಾಣ ನೀಡಲಿದ್ದಾರೆ ಎಂದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್‌ನ ಮೂರನೇ ಬಾಗಿಲಿಗೆ ಶಂಕುಸ್ಥಾಪನೆಯ ಪೂಜೆ ಮಾಡಿದ್ದಾರೆ. ಈ ಮೂಲಕ ಅವರು ಸಿಎಂ ಆಗುವ ಚರ್ಚೆ ಶುರುವಾಗಿದೆ. ಇದುವರೆಗೆ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿಯಾಗುತ್ತಾರೆ ಎಂಬ ಅಭಿಪ್ರಾಯವಿತ್ತು. ಈಗ ಎಲ್ಲರೂ ಖರ್ಗೆ ಕಡೆಗೆ ತಿರುಗಿ ನೋಡುತ್ತಿದ್ದಾರೆ.

ನಮಗೆ ಸಿಎಂ ಬದಲಾವಣೆಗಿಂತಲೂ ಸರ್ಕಾರ ಬಿದ್ದುಹೋಗುವುದು ಸೂಕ್ತ ಎಂಬ ಅಭಿಪ್ರಾಯವಿದೆ. ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ಅವರ ಆಟ ನೋಡಿಯಾಗಿದೆ. ಅದೇ ರೀತಿ ಹೊಸ ಪಿಕ್ಚರ್‌ ಬಂದರೂ ನೋಡುತ್ತೇವೆ. ಖರ್ಗೆ ಸಿಎಂ ಆದರೂ ಬಳಿಕ ಜನರು ಗೇಟ್‌ಪಾಸ್‌ ನೀಡುವುದು ಖಚಿತ ಎಂದರು.

ಹೈಕಮಾಂಡ್‌ ತಿರಸ್ಕಾರ ಮಾಡಿದ ನಂತರ ಡಿ.ಕೆ.ಶಿವಕುಮಾರ್‌ಗೆ ಬೇರೆ ದಾರಿಯೇ ಇಲ್ಲ. ತಲೆಬಾಗಿ ಅಲ್ಲ, ಮಂಡಿಯೂರಿ ತೆವಳಿಕೊಂಡು ಮಲ್ಲಿಕಾರ್ಜುನ ಖರ್ಗೆ ಅವರ ಸೂಚನೆಯನ್ನು ಸ್ವೀಕಾರ ಮಾಡಬೇಕಾಗುತ್ತದೆ. ಮಲ್ಲಿಕಾರ್ಜುನ ಖರ್ಗೆ ಏನೇನು ಕಿಲಾಡಿ ಆಟ ಆಡುತ್ತಾರೋ ನೋಡೋಣ ಎಂದರು.

ಇರಾನ್‌ ಹಾಗೂ ಅಮೆರಿಕದ ನಡುವಿನ ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ. ಮುಂದಿನ ದಿನಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಬೆಲೆಯನ್ನು ಇಳಿಕೆ ಮಾಡಲು ಕ್ರಮ ವಹಿಸಬಹುದು. ಯುದ್ಧ ನಿಂತ ಕೂಡಲೇ ಈ ಸಮಸ್ಯೆ ನಿವಾರಣೆಯಾಗುವ ವಿಶ್ವಾಸವಿದೆ ಎಂದರು.

ಬೆಂಗಳೂರಿನಲ್ಲಿ ಏಳು ಮಂದಿ ಸತ್ತಿದ್ದಕ್ಕೆ ಅಧಿಕಾರಿಗಳು ಕಾರಣರಲ್ಲ, ಮುಖ್ಯಮಂತ್ರಿಯೇ ಕಾರಣ

ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಕುರ್ಚಿಗಾಗಿ ನಡೆಯುತ್ತಿರುವ ಕಲಹದಿಂದ ಹೆಚ್ಚು ಗೊಂದಲ ಉಂಟಾಗಿದೆ. ಇಬ್ಬರ ಜಗಳ ಮೂರನೆಯವನಿಗೆ ಲಾಭ ಎಂಬಂತೆ ಮಲ್ಲಿಕಾರ್ಜುನ ಖರ್ಗೆ ಕೂಡ ಸಿಎಂ ಆಗಲು ಪ್ರಯತ್ನ ಮಾಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ವ್ಯಂಗ್ಯವಾಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸಿಎಂ ಕುರ್ಚಿ ಕಲಹದಿಂದಾಗಿ ಇಡೀ ಸರ್ಕಾರ ಗೊಂದಲದ ಗೂಡಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೊಸ ಹೇಳಿಕೆ ನೀಡಿ ಇನ್ನಷ್ಟು ಗೊಂದಲ ಉಂಟುಮಾಡಿದ್ದಾರೆ. ಮುಂದೆ ನನ್ನ ಪರ್ವ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳುತ್ತಿದ್ದು, ಆ ಪರ್ವಕ್ಕೆ ಕಲ್ಲು ಬಿದ್ದಿದೆ. ಈಗ ಮಲ್ಲಿಕಾರ್ಜುನ ಖರ್ಗೆ ಮಧ್ಯ ಪ್ರವೇಶ ಮಾಡಿ ನನಗೂ ಆಸೆಯಿದೆ, ಹಿಂದೆ ನನಗೆ ಮೋಸವಾಗಿದೆ ಎಂದು ಹೇಳಿದ್ದಾರೆ.

ಬಹುಶಃ ಕಾಂಗ್ರೆಸ್‌ ಹೈಕಮಾಂಡ್‌ನಿಂದ ಅವರು ಸಿಎಂ ಆಗಲು ಗ್ರೀನ್‌ ಸಿಗ್ನಲ್‌ ಸಿಕ್ಕಿರಬಹುದು. ಖರ್ಗೆ ಸಿಎಂ ಆಗಬೇಕೆಂದು ಈಗಾಗಲೇ ಎಲ್ಲರೂ ಹೇಳಿದ್ದಾರೆ. ನಾನು ಸಿಎಂ ಆಗಲು ಸಿದ್ಧನಿದ್ದೇನೆ ಎಂದು ಖರ್ಗೆ ಹೇಳಿದ್ದಾರೆ. ಇದುವರೆಗೆ ಅವರು ಬಹಳ ಪ್ರಯತ್ನ ಮಾಡಿದ್ದರೂ ಸಿಎಂ ಆಗಿರಲಿಲ್ಲ. ಈ ಸಮಯದಲ್ಲಾದರೂ ಸಿಎಂ ಆಗೋಣ ಎಂದು ಪ್ರಯತ್ನ ಮಾಡುತ್ತಿದ್ದಾರೆ. ಕಾಂಗ್ರೆಸ್‌ನಲ್ಲೀಗ ಇಬ್ಬರ ಜಗಳ ಮೂರನೆಯವನಿಗೆ ಲಾಭ ಎನ್ನುವಂತಾಗಿದೆ ಎಂದು ವ್ಯಂಗ್ಯವಾಡಿದರು.

ಸಿನಿಮಾದ ಕ್ಲೈಮಾಕ್ಸ್‌ನಲ್ಲಿ ಆಗುವಂತೆಯೇ ಮಲ್ಲಿಕಾರ್ಜುನ ಖರ್ಗೆ ಬಂದಿದ್ದಾರೆ. ಮಾತುಕತೆಗೆ ಇನ್ನಷ್ಟು ಸಮಯ ಬೇಕೆಂದು ಅವರು ಹೇಳಿದ್ದಾರೆ. ಹಾಗೆಯೇ ಆದರೆ ಸಿಎಂ ಬದಲಾವಣೆ ಬಹಳ ತಡವಾಗುತ್ತದೆ. ಆ ವೇಳೆಗೆ ಚುನಾವಣೆ ಸಮೀಪ ಬಂದಿರುತ್ತದೆ. ರಾಜಸ್ಥಾನ, ಮಧ್ಯಪ್ರದೇಶದಲ್ಲಾದಂತೆ ಕಾಂಗ್ರೆಸ್‌ ಗೊಂದಲದ ಗೂಡಾಗಿ ಸರ್ವನಾಶವಾಗಲಿದೆ ಎಂದರು.

ಇಡೀ ರಾಜ್ಯದಲ್ಲಿ ರಸ್ತೆಗಳು ಗುಂಡಿ ಬಿದ್ದಿವೆ. ಎಲ್ಲೂ ಅಭಿವೃದ್ಧಿ ನಡೆಯುತ್ತಿಲ್ಲ. ಇಂತಹ ಸಮಯದಲ್ಲಿ ದಾವಣಗೆರೆ ಚುನಾವಣೆ ಹಿನ್ನೆಲೆಯಲ್ಲಿ ಮುಸ್ಲಿಮ್ ಮುಖಂಡರ ವಿರುದ್ಧ ಕ್ರಮ ವಹಿಸಲಾಗಿದೆ. ಈಗ ಅದನ್ನು ಮರೆಮಾಚಲು ಮುಸ್ಲಿಮರಿಗೆ ಅನುದಾನ ನೀಡಲಾಗಿದೆ. ಆದರೆ ವಾಸ್ತವದಲ್ಲಿ ಮುಸ್ಲಿಮರ ಮನಸ್ಸು ಒಡೆದಿದೆ. ದಾವಣಗೆರೆ ಹಾಗೂ ಬಾಗಲಕೋಟೆಯಲ್ಲಿ ಮುಸ್ಲಿಮರು ಕಾಂಗ್ರೆಸ್‌ಗೆ ಕೈ ಕೊಟ್ಟಿದ್ದಾರೆ ಎಂದರು.

ಮುಖ್ಯಮಂತ್ರಿಯೇ ನೇರ ಕಾರಣ

ಬೆಂಗಳೂರಿನಲ್ಲಿ ಹದಿನೈದು ದಿನಕ್ಕೊಮ್ಮೆ ನಗರ ಪ್ರದಕ್ಷಿಣೆ ಮಾಡುತ್ತೇನೆಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಆದರೆ ಮೂರು ತಿಂಗಳಿಗೊಮ್ಮೆಯೂ ನಗರ ಪ್ರದಕ್ಷಿಣೆ ಮಾಡಲಿಲ್ಲ. ಮಳೆಹಾನಿಗೆ ಯಾವುದೇ ಸಿದ್ಧತೆ ಮಾಡಿಕೊಳ್ಳದೆ ಏಳು ಜೀವಗಳ ಬಲಿಯಾಗಿದೆ. ಈ ಸಾವಿಗೆ ನ್ಯಾಯ ಕೊಡಿ ಎಂದು ಜನರು ಕೇಳಿದರೆ, ತಮ್ಮ ತಪ್ಪನ್ನು ಮುಚ್ಚಿಟ್ಟು ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡಿದ್ದಾರೆ.

ಒಂದು ತಿಂಗಳ ಮುನ್ನ ಸಭೆ ನಡೆಸಿ, ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳ ಬಗ್ಗೆ ವರದಿ ಪಡೆದು ದುರಸ್ತಿ ಮಾಡಿಸಬೇಕಿತ್ತು. ನೀರು ನಿಲ್ಲುವ ಕಡೆ ನೀರು ಹರಿದುಹೋಗಲು ವ್ಯವಸ್ಥೆ ಮಾಡಬೇಕಿತ್ತು. ಏನೂ ಮಾಡದೆಯೇ ಬೌರಿಂಗ್‌ ಆಸ್ಪತ್ರೆ ಮುಖ್ಯಸ್ಥರ ವಿರುದ್ಧ, ಎಂಜಿನಿಯರ್‌ಗಳ ವಿರುದ್ಧ ಕ್ರಮ ವಹಿಸಿದ್ದಾರೆ.

ಆಸ್ಪತ್ರೆ ಮುಖ್ಯಸ್ಥರು ರೋಗಿಗಳಿಗೆ ಹೇಗೆ ಚಿಕಿತ್ಸೆ ನೀಡಬೇಕೆಂದು ನೋಡುತ್ತಾರೆಯೋ ಹೊರತು, ಕಾಂಪೌಂಡ್‌ ದುರಸ್ತಿ ಮಾಡುವುದು ಅವರ ಜವಾಬ್ದಾರಿಯಲ್ಲ. ಈ ಸಾವುಗಳಿಗೆ ಮುಖ್ಯಮಂತ್ರಿಯೇ ನೇರ ಕಾರಣ. ಇದರಲ್ಲಿ ಅಧಿಕಾರಿಗಳ ತಪ್ಪಿಲ್ಲ ಎಂದರು.

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]