ಹುಬ್ಬಳ್ಳಿ: ಕಾಂಗ್ರೆಸ್ (Congress) ಪಕ್ಷ ಮತ್ತು ಇಂಡಿ ಒಕ್ಕೂಟವು ಮಹಿಳೆಯರಿಗೆ ಮಾಡಿರುವ ಅನ್ಯಾಯವನ್ನು ಸಾರಿಸಾರಿ ಹೇಳಬೇಕೆಂದು ಶಾಸಕ ಹಾಗೂ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ಮನವಿ ಮಾಡಿದ್ದಾರೆ.
ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಹುಬ್ಬಳ್ಳಿಯಲ್ಲಿ ಇಂದು ನಡೆದ ‘ಬೃಹತ್ ಜನಾಕ್ರೋಶ ಮಹಿಳಾ ಪ್ರತಿಭಟನಾ ಸಭೆ’ಯಲ್ಲಿ ಅವರು ಮಾತನಾಡಿದರು.
ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಜೀ ಅವರು ದೇಶದ ಅಭಿವೃದ್ಧಿಯಲ್ಲಿ ನಾರಿಶಕ್ತಿಯ ಮಹತ್ವದ ಪಾತ್ರವನ್ನು ಅರ್ಥ ಮಾಡಿಕೊಂಡವರು ಎಂದು ವಿಶ್ಲೇಷಿಸಿದರು.
ಮೋದಿಜೀ ಅವರ ಸಂಕಲ್ಪಕ್ಕೆ ಬೆಂಬಲ ನೀಡಲು ಸುತ್ತಲಿನ ಜಿಲ್ಲೆಗಳಿಂದ ಬಂದ ಮಹಿಳೆಯರು, ಜನರನ್ನು ಅವರು ಅಭಿನಂದಿಸಿದರು. ಬಿಜೆಪಿ ಯಾವತ್ತೂ ತಾಯಂದಿರ ಪರ ನಿಲ್ಲಲಿದೆ. ಮುಂದಿನ ದಿನಗಳಲ್ಲೂ ಈ ಹೋರಾಟ ಮುಂದುವರೆಸೋಣ ಎಂದು ಮನವಿ ಮಾಡಿದರು.
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರೂ ಭಾಗ್ಯಲಕ್ಷ್ಮಿ ಯೋಜನೆಯನ್ನು ಜಾರಿಗೊಳಿಸಿದ್ದರು. ಬೈಸಿಕಲ್ ಯೋಜನೆ ತಂದಿದ್ದರು. ಬಿಜೆಪಿ, ನಾರಿ ಶಕ್ತಿಗೆ ಗೌರವ ಕೊಡುವ ಕೆಲಸ ಮಾಡುತ್ತಿದೆ ಎಂದು ವಿವರಿಸಿದರು.
ಮೇ 9ರಂದು ಚಿತ್ರದುರ್ಗದಲ್ಲಿ ನಡೆಯುವ ಬಿ.ಎಸ್.ಯಡಿಯೂರಪ್ಪನವರ ಅಭಿಮಾನೋತ್ಸವದಲ್ಲಿ ಎಲ್ಲರೂ ಪಾಲ್ಗೊಳ್ಳಬೇಕೆಂದು ವಿನಂತಿಸಿದರು.
ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಕು. ಶೋಭಾ ಕರಂದ್ಲಾಜೆ, ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಬಸವರಾಜ ಬೊಮ್ಮಾಯಿ, ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ್, ಶಾಸಕ ಮಹೇಶ್ ಟೆಂಗಿನಕಾಯಿ, ವಿಧಾನಪರಿಷತ್ ಸದಸ್ಯೆ ಭಾರತಿ ಶೆಟ್ಟಿ, ರಾಜ್ಯ ಉಪಾಧ್ಯಕ್ಷೆ ಮಾಳವಿಕ ಅವಿನಾಶ್, ರೂಪಾಲಿ ನಾಯಕ್, ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷೆ ಕು. ಸಿ. ಮಂಜುಳಾ, ಪಕ್ಷದ ಶಾಸಕರು, ಜನಪ್ರತಿನಿಧಿಗಳು, ಪಕ್ಷದ ಪದಾಧಿಕಾರಿಗಳು ಭಾಗವಹಿಸಿದ್ದರು.
ದೊಡ್ಡಬಳ್ಳಾಪುರ: ಇಂದಿನಿಂದ ವಿವಿಧೆಡೆ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ಬೆಸ್ಕಾಂ ವತಿಯಿಂದ ನಿರ್ವಹಣಾ ಕಾಮಗಾರಿ ನಡೆಯುತ್ತಿರುವುದರಿಂದ ಮೇ.2 ರಿಂದ ಮೇ.8ರವರೆಗೆ ದೊಡ್ಡಬಳ್ಳಾಪುರ ಮತ್ತು ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ (Power outages) ಉಂಟಾಗಲಿದೆ.
ವಿವಿಧ 11 ಕೆವಿ ಫೀಡರ್‌ಗಳಲ್ಲಿ ತುರ್ತು ದುರಸ್ತಿ ಹಾಗೂ ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳಲಾಗು-ತ್ತಿದೆ. ಇದರಿಂದ ಪ್ರತಿದಿನ ಬೆಳಗ್ಗೆ 9 ರಿಂದ ಮಧ್ಯಾಹ್ನ 2 ರವರೆಗೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ಬೆಸ್ಕಾಂ ನಗರ ಉಪವಿಭಾಗದ ಕಾರ್ಯಪಾಲಕ ಎಂಜಿನಿಯರ್ ವಿನಯ್‌ಕುಮಾರ್ ತಿಳಿಸಿದ್ದಾರೆ.
ವ್ಯತ್ಯಯ ಆಗುವ ಪ್ರದೇಶಗಳು: ಮೇ.2 ರಂದು ವರದನಹಳ್ಳಿ, ಟಾಫೆ, ಎಳ್ಳುಪುರ ಪ್ರದೇಶ. ಮೇ.3 ರಂದು ರೈಲ್ವೆ ಸ್ಟೇಷನ್, ಜೀನ್ಸ್ ನಿಟ್, ನಗರ ಪ್ರದೇಶ. ಮೇ.4 ರಂದು ಟೆಲಿಫೋನ್ ಎಕ್ಸ್‌ಜೇಂಜ್, ಬಿರ್ಲಾ ಸೂಪರ್, ಕರೇನಹಳ್ಳಿ, ಮೇ 5 ನಂದಿ ಮೊರಿ, ಬೀಡಿಕರೆ. ಮೇ.6 ರಂದು ವಾಸವಿ, ಅಪಾರೆಲ್ ಪಾರ್ಕ್, ಏಕಾಶಿಪುರ. ಮೇ.7 ರೈಲ್ವೆ ಸ್ಟೇಷನ್ ಸುತ್ತಮುತ್ತ. ಮೇ.8 ಜಾಲಿಗೆ, ಏಕಾಶಿಪುರ ಸುತ್ತಮುತ್ತ ಪ್ರದೇಶ.

