
ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ (Hosahalli) ಗ್ರಾಮದಲ್ಲಿನ ಇತಿಹಾಸ ಪ್ರಸಿದ್ದ ಶ್ರೀಲಕ್ಷ್ಮೀನರಸಿಂಹಸ್ವಾಮಿ ಬ್ರಹ್ಮರಥೋತ್ಸವ (Sri Lakshminarasimha Swamy Brahmarathotsava) ಸಾವಿರಾರು ಭಕ್ತರ ಸಮ್ಮುಖದಲ್ಲಿ ಇಂದು (ಮೇ.06) ಬುಧವಾರ ಮಧ್ಯಾಹ್ನ ವಿಜೃಂಭಣೆಯಿಂದ ನೆರವೇರಿತು.
ಬ್ರಹ್ಮರಥೋತ್ಸವದ ಪ್ರಯುಕ್ತ ದೇವಾಲಯದಲ್ಲಿ ಬೆಳಗ್ಗಿನಿಂದಲೂ ಅಭಿಷೇಕ, ಅರ್ಚನೆ ನೆಡೆದು ಶ್ರೀಲಕ್ಷ್ಮೀನರಸಿಂಹಸ್ವಾಮಿಯನ್ನು ದೇವಾಲಯದಿಂದ ತಂದು ಪಂಚ ಕಳಸ ಊಡಿದ ರಥದಲ್ಲಿ ಪ್ರತಿಸ್ಠಾಪಿಸಲಾಯಿತು.
ದೊಡ್ಡಬಳ್ಳಾಪುರ: ಅದ್ಧೂರಿಯಾಗಿ ನೆರವೇರಿದ ಹೊಸಹಳ್ಳಿ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ಬ್ರಹ್ಮರಥೋತ್ಸವ pic.twitter.com/bf50o2ZF5Y
— Harithalekhani (@harithalekhani) May 6, 2026
ವಿವಿಧ ಧಾರ್ಮಿಕ ಕಾರ್ಯಗಳ ಬಳಿಕ ಮಧ್ಯಾಹ್ನ 3ಕ್ಕೆ ವೇದಬ್ರಹ್ಮರ ಮಂತ್ರ ಘೋಷಗಳೊಂದಿಗೆ ರಥ ಮುಂದೆ ಸಾಗುತಿದ್ದಂತೆ, ಜಯಘೋಷ ಹಾಕುತ್ತ ಹರಕೆ ಹೊತ್ತ ಭಕ್ತರು, ಭಕ್ತಿ ಭಾವದಿಂದ ಬಾಳೆಹಣ್ಣು, ದವನ ಎಸೆದು ಹರಕೆ ತೀರಿಸಿದರು.
ರಥೋತ್ಸವದಲ್ಲಿ ಭಕ್ತರ ಜೈಕಾರ, ತಮಟೆ ವಾದ್ಯಗಳ ಸದ್ದು ಮುಗಿಲು ಮುಟ್ಟುವಂತಿತ್ತು.
ರಥವನ್ನು ಗ್ರಾಮದ ಮುಖ್ಯ ಬೀದಿಯಿಂದ ಗೊಡ್ಡರಾಯಿಕಲ್ಲಿನವರೆಗೆ ಎಳೆದು ತಂದರು.
ಬ್ರಹ್ಮರಥೋತ್ಸವದ ಅಂಗವಾಗಿ ರಥ ಹಾಗೂ ಗರ್ಭಗುಡಿಯಲ್ಲಿನ ದೇವರಿಗೆ ವಿಶೇಷವಾಗಿ ಅಲಂಕಾರ ಮಾಡಿ ವಿಶೇಷ ಪೂಜೆ ಸಲ್ಲಿಸಲಾಯಿತು.
ವಿವಿಧ ಸಮುದಾಯದವತಿಯಿಂದ ಬ್ರಹ್ಮರಥೊತ್ಸವದ ಬರುವ ಭಕ್ತಾಧಿಗಳಿಗೆ ಪಾನಕ, ಮಜ್ಜಿಗೆ, ಹೆಸರುಬೇಳೆ ಹಾಗೂ ಪ್ರಸಾದ ವಿತರಿಸಲು ರಸ್ತೆ ಬದಿಗಳಲ್ಲಿ ಶಾಮಿಯಾನ, ಟೆಂಟ್ ಮತ್ತು ಅರವಂಟಿಕೆಗಳ ವ್ಯವಸ್ಥೆ ಮಾಡಿದ್ದರು.
ಶ್ರೀ ಲಕ್ಷ್ಮೀನರಸಿಂಹ ಸ್ವಾಮಿಯ ಜಾತ್ರಾ ಮಹೋತ್ಸವ ಮೇ.04 ಆರಂಭವಾಗಿ ಮೇ.08ರ ವರೆಗೆ ನಡೆಯಲಿದೆ.
ಐದು ದಿನಗಳ ಕಾಲ ನಡೆಯುವ ಜಾತ್ರಾ ಮಹೋತ್ಸವದ ಅಂಗವಾಗಿ ನಿನ್ನೆ ಕಲ್ಯಾಣೋತ್ಸವ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯತ್ತಿದ್ದು, ವಿಶೇಷ ಅಲಂಕಾರ, ಅಭಿಷೇಕ, ಪೂಜೆ, ಆರತಿ ಕಾರ್ಯಕ್ರಮ ನೆರವೇರಿಸಲಾಗಿದೆ.
ಇಂದು ರಾತ್ರಿ ಲಕ್ಷ್ಮೀನರಸಿಂಹಸ್ವಾಮಿ ಕಲಾತಂಡದವರಿಂದ ‘ಕುರುಕ್ಷೇತ್ರ’ ಅಥವಾ ‘ಶ್ರೀಕೃಷ್ಣ ಸಂಧಾನ’ ಎಂಬ ಪೌರಾಣಿಕ ನಾಟಕ ನಡೆಯಲಿದೆ.
ಮೇ 8ಕ್ಕೆ ದೊಡ್ಡಬಳ್ಳಾಪುರದಲ್ಲಿ ‘ಜೆಡಿಎಸ್ 25’ ಸಂಭ್ರಮ: ನಿಖಿಲ್ ಕುಮಾರಸ್ವಾಮಿಗೆ ಆಹ್ವಾನ

ದೊಡ್ಡಬಳ್ಳಾಪುರ: ಮೇ 8 ರಂದು ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಜೆಡಿಎಸ್ (JDS) ಪಕ್ಷದ 25 ನೇ ವರ್ಷದ ರಜತ ಮಹೋತ್ಸವ ಸಮಾರಂಭವನ್ನು ಅದ್ಧೂರಿಯಾಗಿ ನಡೆಸಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಇಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರಿಗೆ ಆಹ್ವಾನ ನೀಡಲಾಗಿದೆ.
ಬೆಂಗಳೂರಿನ ನಿಖಿಲ್ ಕುಮಾರಸ್ವಾಮಿ ಅವರ ಸ್ವಗೃಹಕ್ಕೆ ಭೇಟಿ ನೀಡಿದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಮಂಜುನಾಥ್, ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ ಹರೀಶ್ ಗೌಡ ಸೇರಿದಂತೆ ಅನೇಕ ಹಿರಿಯ ಮುಖಂಡರು ನಿಖಿಲ್ ಕುಮಾರಸ್ವಾಮಿ ಅವರಿಗೆ ಆಹ್ವಾನ ನೀಡಿದರು.
ಈ ವೇಳೆ ಕಾರ್ಯಕ್ರಮದ ಆಯೋಜನೆ, ಬೈಕ್ ರ‍್ಯಾಲಿಯಲ್ಲಿ ವಿಳಂಭ ಮಾಡದೆ, ವೇದಿಕೆಗೆ ಹೆಚ್ಚಿನ ಸಮಯ ಮೀಸಲಿಡುವಂತೆ ನಿಖಿಲ್ ಕುಮಾರಸ್ವಾಮಿ ಸೂಚನೆ ನೀಡಿದರು.
20 ಸಾವಿರ ಮಂದಿ ಸೇರುವ ನಿರೀಕ್ಷೆ
ಮೇ 8 ರಂದು ಭಗತ್ ಸಿಂಗ್ ಕ್ರೀಡಾಂಣದಲ್ಲಿ ನಿಖಿಲ್ ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಮಾರಂಭಕ್ಕೆ ಸುಮಾರು 20 ಸಾವಿರ ಸೇರುವ ನಿರೀಕ್ಷೆ ಇದ್ದು, ಇದಕ್ಕಾಗಿ ಮಂಗಳವಾರ ವೇದಿಕೆ ಸಿದ್ದತೆಗೆ ಭೂಮಿ ಪೂಜೆ ಮಾಡಲಾಗಿದೆ.
ದೊಡ್ಡಬಳ್ಳಾಪುರ ತಾಲ್ಲೂಕಿನ ಪಕ್ಷದ ಎಲ್ಲಾ ಹಿರಿಯ ಹಾಗೂ ಯುವ ಮುಖಂಡರನ್ನು ಆಹ್ವಾನಿಸಲಾಗಿದೆ. ಈ ಸಮಾವೇಶ ಸದ್ಯದಲ್ಲೇ ಬರುವ ಗ್ರಾಮ ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಚುನಾವಣೆಗೆ ಈ ಸಮಾವೇಶ ಪಕ್ಷದ ಕಾರ್ಯಕರ್ತರಿಗೆ ಶಕ್ತಿ ತುಂಬಲಿದೆ ಎಂಬ ಉದ್ದೇಶ ಜೆಡಿಎಸ್ ಮುಖಂಡರದ್ದಾಗಿದೆ.

