Georgia Meloni ಡೀಪ್‌ಫೇಕ್ ಫೋಟೋ ವೈರಲ್.. ಇಟಾಲಿಯನ್ ಪ್ರಧಾನಿ ಆಕ್ರೋಶ

Georgia Meloni condemns viral deepfake photo

ನವದೆಹಲಿ: ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೋನಿ (Georgia Meloni) ಅವರು ಒಳ ಉಡುಪು ಧರಿಸಿರುವ ಡೀಪ್‌ಫೇಕ್ ಫೋಟೋದ ಶೇರ್ ಮಾಡುತ್ತಿರುವುದನ್ನು ಟೀಕಿಸಿದ್ದಾರೆ. ಇದನ್ನು “ರಾಜಕೀಯ ದಾಳಿ” ಎಂದಿರುವ ಅವರು, ಕೃತಕ ಬುದ್ಧಿಮತ್ತೆ (ΑΙ) ಬಳಸಿ ರಚಿಸಲಾದ ಅಂತಹ ಚಿತ್ರಗಳ ಅಪಾಯಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಅವರ ಟ್ವೀಟ್ ಅನ್ನು ಅನುವಾದಿಸಿದಾಗ, ಇತ್ತೀಚಿನ ದಿನಗಳಲ್ಲಿ, ನನ್ನ ಹಲವಾರು ನಕಲಿ ಫೋಟೋಗಳು ಪ್ರಸಾರವಾಗುತ್ತಿವೆ, ಕೃತಕ ಬುದ್ಧಿಮತ್ತೆಯಿಂದ ರಚಿಸಲ್ಪಟ್ಟಿವೆ ಮತ್ತು ಕೆಲವು ವಿರೋಧಿಗಳು ಅವುಗಳನ್ನು ನಿಜವೆಂದು ಬಿಂಬಿಸುತ್ತಿದ್ದಾರೆ.

ಅವುಗಳನ್ನು ಸೃಷ್ಟಿಸಿದವರು, ಕನಿಷ್ಠ ಲಗತ್ತಿಸಲಾದ ಪ್ರಕರಣದಲ್ಲಾದರೂ, ನನ್ನನ್ನು ಸಾಕಷ್ಟು ಸುಧಾರಿಸಿದ್ದಾರೆ ಎಂದು ನಾನು ಒಪ್ಪಿಕೊಳ್ಳಲೇಬೇಕು. ಆದರೆ ವಾಸ್ತವವೆಂದರೆ, ಇತ್ತೀಚಿನ ದಿನಗಳಲ್ಲಿ ಯಾವುದನ್ನಾದರೂ ದಾಳಿ ಮಾಡಲು ಮತ್ತು ಸುಳ್ಳನ್ನು ಸೃಷ್ಟಿಸಲು ಬಳಸಲಾಗುತ್ತದೆ.

ಆದರೆ, ವಿಷಯ ನನ್ನಿಂದ ಮೀರಿದ್ದು. ಡೀಪ್‌ಫೇಕ್‌ಗಳು ಅಪಾಯಕಾರಿ ಸಾಧನ, ಏಕೆಂದರೆ ಅವು ಯಾರನ್ನಾದರೂ ಮೋಸಗೊಳಿಸಬಹುದು, ಕುಶಲತೆಯಿಂದ ನಿರ್ವಹಿಸಬಹುದು ಮತ್ತು ದೌರ್ಜನ್ಯಕ್ಕೆ ಬಳಸಬಹುದು. ಇದರಿಂದ ನಾನು ನನ್ನನ್ನು ರಕ್ಷಿಸಿಕೊಳ್ಳಬಲ್ಲೆ. ಇತರ ಅನೇಕರು ಹಾಗೆ ಮಾಡಲು ಸಾಧ್ಯವಿಲ್ಲ.

ಈ ಕಾರಣಕ್ಕಾಗಿ, ಒಂದು ನಿಯಮ ಯಾವಾಗಲೂ ಅನ್ವಯವಾಗಬೇಕು, ಈ ರೀತಿಯ ಪೋಟೋಗಳನ್ನು ನಂಬುವ ಮೊದಲು ಪರಿಶೀಲಿಸಿ, ಮತ್ತು ಹಂಚಿಕೊಳ್ಳುವ ಮೊದಲು ನಂಬಿ. ಏಕೆಂದರೆ ಇಂದು ಅದು ನನಗೆ ಸಂಭವಿಸುತ್ತದೆ, ನಾಳೆ ಅದು ಯಾರಿಗಾದರೂ ಸಂಭವಿಸಬಹುದು ಎಂದಿದ್ದಾರೆ.

ಬೆಂಗಳೂರಿನಿಂದ ಐಪಿಎಲ್ ಫೈನಲ್ ಪಂದ್ಯ ಸ್ಥಳಾಂತರ: ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ

IPL final shifted from Bengaluru
IPL final shifted from Bengaluru

ಬೆಂಗಳೂರು: “ಅಹಮದಾಬಾದ್ ನಲ್ಲಿ ದೊಡ್ಡ ಕ್ರೀಡಾಂಗಣವಿದೆ, ಹೆಚ್ಚು ಜನ ಸೇರುತ್ತಾರೆ ಎಂಬ ಉದ್ದೇಶದಿಂದ ಐಪಿಎಲ್ (IPL) ಫೈನಲ್ ಪಂದ್ಯವನ್ನು ಸ್ಥಳಾಂತರ ಮಾಡಿರಬೇಕು. ಶಾಸಕರಿಗೆ ಟಿಕೆಟ್ ವಿತರಣೆಗೂ ಅಂತಿಮ ಪಂದ್ಯ ಸ್ಥಳಾಂತರಕ್ಕೂ ಸಂಬಂಧವಿಲ್ಲ” ಎಂದು‌ ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ಹೇಳಿದರು.

ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದರು.

ಶಾಸಕರಿಗೆ ಐಪಿಎಲ್ ಟಿಕೆಟ್ ಬೇಡಿಕೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಐಪಿಎಲ್ ಫೈನಲ್ ಪಂದ್ಯವನ್ನು ಅಹಮದಾಬಾದಿಗೆ ಸ್ಥಳಾಂತರಿಸಲಾಗಿದೆ ಎಂಬ ವಿಚಾರವಾಗಿ ಕೇಳಿದಾಗ, “ಬೇರೆ ಕಡೆ ಶೇ 50 ರಷ್ಟು ಮೀಸಲಿರುತ್ತದೆ” ಎಂದರು‌.

ಬಿಸಿಸಿಐ ಟಿಕೆಟ್ ವಿಚಾರಕ್ಕೆ ಸ್ಥಳಾಂತರ ನಿರ್ಧಾರ ಮಾಡಿದ್ದೇವೆ ಎಂದು ಹೇಳಿಕೆ ನೀಡಿರುವ ಬಗ್ಗೆ ಕೇಳಿದಾಗ, “ಅವರು ಈ ರೀತಿ ಹೇಳಿಕೆ ನೀಡಲಿ, ನಾನು ಅದಕ್ಕೆ ಸರಿಯಾದ ಉತ್ತರ ಕೊಡುತ್ತೇನೆ” ಎಂದರು.

ಪಕ್ಷದ ತೀರ್ಮಾನದ ಬಗ್ಗೆ ಮಾತನಾಡುವುದಿಲ್ಲ

ದಾವಣಗೆರೆಯಲ್ಲಿ ಮುಸ್ಲಿಂ ನಾಯಕರ ಅಮಾನತನ್ನು ವಾಪಸ್ ಪಡೆಯುವ ಸಾಧ್ಯತೆ ಇದೆಯೇ ಎಂದು ಕೇಳಿದಾಗ, “ನಾನು ಈ ಬಗ್ಗೆ ಏನೂ ಮಾತನಾಡುವುದಿಲ್ಲ. ಪಕ್ಷ ಈ ತೀರ್ಮಾನ ಮಾಡಿದೆ‌. ಸಿಎಂ ರಾಜಕೀಯ ಕಾರ್ಯದರ್ಶಿಯವರನ್ನು ಕೈಬಿಡಬೇಕಾದರೆ, ಆ ಬಗ್ಗೆ ಮುಖ್ಯಮಂತ್ರಿಯವರು ಮಾತನಾಡಿದ್ದರು. ಮುಖ್ಯಮಂತ್ರಿಗಳಿಗೆ ತಮ್ಮದೇ ಆದ ಮಾಹಿತಿ ಇರುತ್ತದೆ. ಪಕ್ಷದ ಪದಾಧಿಕಾರಿಗಳು ಮಾರ್ಗದರ್ಶನ ಮಾಡಿದ್ದಾರೆ. ಪಕ್ಷ ಅವರಿಗೆ ಕೆಲವು ಜವಾಬ್ದಾರಿಗಳನ್ನು ನೀಡಿತ್ತು. ಅದನ್ನು ಅವರು ಸರಿಯಾಗಿ ನಿಭಾಯಿಸಲಿಲ್ಲ ಅದಕ್ಕೆ ಅವರನ್ನು ಆ ಸ್ಥಾನದಿಂದ ಇಳಿಸಲಾಯಿತು. ಜಬ್ಬಾರ್ ಅವರು ತಾವಾಗಿಯೇ ರಾಜೀನಾಮೆ ನೀಡಿದ್ದರು. ಅದನ್ನು ಸ್ವೀಕಾರ ಮಾಡಿದ್ದೇವೆ ಅಷ್ಟೇ” ಎಂದರು.

ಕರೆದಾಗ ದೆಹಲಿಗೆ ಹೋಗುತ್ತೇವೆ

ಸಿಎಂ, ಡಿಸಿಎಂ ದೆಹಲಿ ಭೇಟಿ ವಿಚಾರ ಕೇಳಿದಾಗ, “ಅವರು (ಹೈಕಮಾಂಡ್) ಕರೆದಾಗ ನಾವು ಹೋಗುತ್ತೇವೆ. ಕರೆಯದೇ ಹೋಗುವುದು ಸರಿಯಲ್ಲ. ಕರೆಯುತ್ತಾರೆ, ಕರೆದಾಗ ನಾವು ಹೋಗುತ್ತೇವೆ” ಎಂದರು.

ತಮಿಳುನಾಡಿನ ಹಿತ, ಜಾತ್ಯಾತೀತ ತತ್ವ ಉಳಿಯಲು ತೀರ್ಮಾನ

ತಮಿಳುನಾಡಿನಲ್ಲಿ ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿರುವ ಬಗ್ಗೆ ಕೇಳಿದಾಗ, “ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಬೇಕು. ಜಾತ್ಯಾತೀತ ಶಕ್ತಿಗಳು ಒಂದಾಗಿ ಇರಬೇಕು ಎಂದು ಈ ತೀರ್ಮಾನ ಮಾಡಲಾಗಿದೆ. ಎಐಡಿಎಂಕೆ, ಬಿಜೆಪಿಯವರು ಎಷ್ಟೇ ಒತ್ತಡ ಹಾಕಿದರು ಟಿವಿಕೆಯವರು ಮೈತ್ರಿ ಮಾಡಿಕೊಳ್ಳಲಿಲ್ಲ. ಜಾತ್ಯಾತೀತ ಶಕ್ತಿ ಉಳಿಯಲು, ತಮಿಳುನಾಡಿನ ಹಿತಕ್ಕಾಗಿ ನಮ್ಮ ಪಕ್ಷ ತೀರ್ಮಾನ ಮಾಡಿದೆ” ಎಂದರು.

ಶಾಸಕರ ಉಚಿತ ಟಿಕೆಟ್ ದುರಾಸೆಯಿಂದ ಅಹಮದಾಬಾದ್‌ಗೆ ಹೋದ ಐಪಿಎಲ್ ಫೈನಲ್: ನಿಖಿಲ್ ಕುಮಾರಸ್ವಾಮಿ ಗುಡುಗು

'JDS 25' celebrations in Doddaballapur on May 8
‘JDS 25’ celebrations in Doddaballapur on May 8

ಬೆಂಗಳೂರು: ವಿವಿಐಪಿ ಪಾಸ್‌ಗಳ ಹಪಾಹಪಿ ಹಾಗೂ ಶಾಸಕರ ಉಚಿತ ಟಿಕೆಟ್ ವ್ಯಾಮೋಹದಿಂದಾಗಿ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಐಪಿಎಲ್ ಫೈನಲ್ ಪಂದ್ಯ ಅಹಮದಾಬಾದ್ ಪಾಲಾಗಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಸೋಮವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ನಮ್ಮ ರಾಜ್ಯದ ನಾಯಕರಿಗೆ ‘ಅಭಿನಂದನೆಗಳು’! ಕೇವಲ ತಮ್ಮ ವಿವಿಐಪಿ ಪಾಸ್‌ಗಳ ಹಪಾಹಪಿಯಿಂದಾಗಿ, ನಮ್ಮೂರಿನಲ್ಲಿ ನಡೆಯಬೇಕಿದ್ದ ಫೈನಲ್ ಪಂದ್ಯವನ್ನು ಅಹಮದಾಬಾದ್‌ಗೆ ಉಡುಗೊರೆಯಾಗಿ ನೀಡಿದ್ದೀರಿ, ಎಂದು ಅವರು ವ್ಯಂಗ್ಯವಾಡಿದರು.

ನಾನು ಅಂದೇ ಹೇಳಿದ್ದೆ, ಇಂದೂ ಅದನ್ನೇ ಪುನರುಚ್ಚರಿಸುತ್ತಿದ್ದೇನೆ, ಕ್ರೀಡಾಂಗಣವಿರುವುದು ಕ್ರಿಕೆಟ್ ಅಭಿಮಾನಿಗಳಿಗಾಗಿ ಹೊರತು ವಿಐಪಿಗಳಿಗಾಗಿ ಅಲ್ಲ. ನಮ್ಮ ಕೆಲವು ಶಾಸಕರ ಉಚಿತ ಟಿಕೆಟ್ ವ್ಯಾಮೋಹದಿಂದಾಗಿ ಇಂದು ಐಪಿಎಲ್ ಫೈನಲ್ ಬೆಂಗಳೂರಿನಿಂದ ಕೈತಪ್ಪಿ ಹೋಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಬಿಸಿಸಿಐನ ನಿರ್ಧಾರವನ್ನು ಉಲ್ಲೇಖಿಸಿದ ನಿಖಿಲ್ ಕುಮಾರಸ್ವಾಮಿ ಅವರು ಬಿಸಿಸಿಐ ತೆಗೆದುಕೊಂಡಿರುವ ಈ ನಿರ್ಧಾರ ನಮ್ಮ ಸರ್ಕಾರಕ್ಕೆ ಒಂದು ಎಚ್ಚರಿಕೆ ಗಂಟೆಯಾಗಲಿ. ಚಿನ್ನಸ್ವಾಮಿ ಕ್ರೀಡಾಂಗಣವನ್ನು ತಮ್ಮ ವೈಯಕ್ತಿಕ ಟಿಕೆಟ್ ಕೌಂಟರ್ ಮಾಡಿಕೊಂಡವರ ಬೇಜವಾಬ್ದಾರಿ ವರ್ತನೆಯಿಂದಾಗಿ, ಇಂದು ನಾವು ಕೇವಲ ಒಂದು ಪಂದ್ಯವನ್ನಷ್ಟೇ ಅಲ್ಲ, ರಾಷ್ಟ್ರಮಟ್ಟದಲ್ಲಿ ಬೆಂಗಳೂರಿನ ಘನತೆಯನ್ನೂ ಕಳೆದುಕೊಂಡಿದ್ದೇವೆ, ಎಂದು ಆಕ್ರೋಶ ಹೊರಹಾಕಿದರು.

ಕ್ರಿಕೆಟ್ ಅಭಿಮಾನಿಗಳ ಭಾವನೆಗೆ ಧಕ್ಕೆ ತಂದಿರುವ ಸರ್ಕಾರದ ನಡೆಯನ್ನು ನಿಖಿಲ್ ಕುಮಾರಸ್ವಾಮಿ ಅವರು ತೀವ್ರವಾಗಿ ಖಂಡಿಸಿದ್ದಾರೆ.

ರಾಜಕೀಯ

ಗ್ಯಾರಂಟಿ ಯೋಜನೆಗಳು ಮಹಿಳಾಸಮೂಹಕ್ಕೆ ವರದಾನ; ಮುಖ್ಯಮಂತ್ರಿ ಸಿದ್ದರಾಮಯ್ಯ

ಗ್ಯಾರಂಟಿ ಯೋಜನೆಗಳು ಮಹಿಳಾಸಮೂಹಕ್ಕೆ ವರದಾನ; ಮುಖ್ಯಮಂತ್ರಿ ಸಿದ್ದರಾಮಯ್ಯ

ಆರ್ಥಿಕವಾಗಿ ಶಕ್ತಿಯಿಲ್ಲದವರಿಗೆ ಗ್ಯಾರಂಟಿ ಯೋಜನೆಗಳನ್ನು ಸಮಾನವಾಗಿ ನೀಡಲಾಗಿದೆ. ಮಹಿಳೆಯರಿಗೆ ಶಕ್ತಿ ಹಾಗೂ ಗೃಹಲಕ್ಷ್ಮಿ ಯೋಜನೆಯನ್ನು ಯಾವುದೇ ತಾರತಮ್ಯವಿಲ್ಲದೇ ನೀಡಲಾಗುತ್ತಿದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121806"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]