ಗ್ಯಾರಂಟಿ ಯೋಜನೆಗಳು ಮಹಿಳಾಸಮೂಹಕ್ಕೆ ವರದಾನ; ಮುಖ್ಯಮಂತ್ರಿ ಸಿದ್ದರಾಮಯ್ಯ

Guarantee schemes are a boon for women: Chief Minister Siddaramaiah

ಮೈಸೂರು: ಆರ್ಥಿಕ ಹಾಗೂ ಸಾಮಾಜಿಕ ಶಕ್ತಿಗಾಗಿ ಶಿಕ್ಷಣ ಅಗತ್ಯವಾಗಿದ್ದು, ಭೋವಿ ಜನಾಂಗದವರು ಶಿಕ್ಷಣಕ್ಕೆ ಒತ್ತು ನೀಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರು ಜಿಲ್ಲಾಡಳಿತದ ವತಿಯಿಂದ ಮೈಸೂರಿನ ಕಲಾಮಂದಿರದಲ್ಲಿ ಆಯೋಜಿಸಿದ್ದ ಸಿದ್ದರಾಮೇಶ್ವರ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು.

ಉತ್ಪಾದಿಸಿದ ಸಂಪತ್ತಿನ ಸಮಾನ ಹಂಚಿಕೆ

ಶ್ರೀ ಸಿದ್ದರಾಮೇಶ್ವರ ಜಯಂತಿಯ ಶುಭ ಕೋರಿದ ಮುಖ್ಯಮಂತ್ರಿಗಳು, ರಾಜ್ಯದಲ್ಲಿ ಸಮಸಮಾಜ ನಿರ್ಮಿಸುವ ಸಂಕಲ್ಪವನ್ನು ಸರ್ಕಾರ ಹೊಂದಿದೆ. ಉತ್ಪಾದಿಸಿದ ಸಂಪತ್ತು ಸಮಾನವಾಗಿ ಹಂಚಿಕೆಯಾಗಿಬೇಕು. ರಾಜ್ಯದ ಸರ್ವರಿಗೂ ಸಮಪಾಲು, ಸಮಬಾಳು ಸಿಗಬೇಕೆಂಬುದೇ ಸರ್ಕಾರದ ಉದ್ದೇಶ.

ಸಿದ್ದರಾಮೇಶ್ವವರೂ ಸೇರಿದಂತೆ ಸಂತಮಹಾಶಯರು, ಸಮಾಜದಲ್ಲಿ ಜಾತಿವರ್ಗಗಳ ವ್ಯವಸ್ಥೆಗಳು ತೊಲಗಬೇಕು ಎಂದು ಬಯಸಿದ್ದರು. ಬಸವಾದಿ ಶರಣರು 12 ನೇ ಶತಮಾನದಲ್ಲಿ ಸಮಾನತೆಯ ಸಿದ್ಧಾಂತವನ್ನು ಬೋಧಿಸಿದ್ದರು. ಶೋಷಣೆಗೊಳಗಾದ ಹಾಗೂ ಅವಕಾಶವಂಚಿತ ಸಮುದಾಯಗಳು ಸಂಘಟಿತರಾಗುವ ಸಮ್ಮೇಳನಗಳು ಉತ್ತಮ ಕಾರ್ಯಗಳಾಗಿವೆ ಎಂದರು.

ನಾನು ಸಾಮಾಜಿಕ ನ್ಯಾಯದಲ್ಲಿ ನಂಬಿಕೆಯಿರಿಸಿದ್ದೇನೆ

ಬಸವಜಯಂತಿಯಂದು ನಾನು 2013 ಮೇ 13 ರಂದು ನಾನು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದೆ. ಬಸವಣ್ಣನವರು ಬೋಧಿಸಿದಂತೆ ನಾನು ಸಾಮಾಜಿಕ ನ್ಯಾಯದಲ್ಲಿ ನಂಬಿಕೆಯಿರಿಸಿದ್ದೇನೆ. ರಾಜಕೀಯ ಸ್ವಾತಂತ್ರ್ಯವು, ಆರ್ಥಿಕ ಹಾಗೂ ಸಾಮಾಜಿಕ ಸ್ವಾತಂತ್ರ್ಯದ ತಳಹದಿಯ ಮೇಲೆ ನಿಂತಿದೆ. ಶಿಕ್ಷಣ ಪಡೆದಾಗ ಮಾತ್ರ ಸಾಮಾಜಿಕ ಆರ್ಥಿಕ ಶಕ್ತಿ ದೊರಕಲು ಸಾಧ್ಯ ಎಂದರು.

ಗ್ಯಾರಂಟಿ ಯೋಜನೆಗಳು ಮಹಿಳಾಸಮೂಹಕ್ಕೆ ವರದಾನ

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಆರ್ಥಿಕವಾಗಿ ಶಕ್ತಿಯಿಲ್ಲದವರಿಗೆ ಗ್ಯಾರಂಟಿ ಯೋಜನೆಗಳನ್ನು ಸಮಾನವಾಗಿ ನೀಡಲಾಗಿದೆ. ರಾಜ್ಯದ ಮಹಿಳೆಯರಿಗೆ ಶಕ್ತಿ ಯೋಜನೆ ಹಾಗೂ ಗೃಹಲಕ್ಷ್ಮಿ ಯೋಜನೆಯನ್ನು ಯಾವುದೇ ತಾರತಮ್ಯವಿಲ್ಲದೇ ನೀಡಲಾಗುತ್ತಿದೆ.

ಐತಿಹಾಸಿಕ ಒಳ ಮೀಸಲಾತಿ ಜಾರಿ

ನಮ್ಮ ಸರ್ಕಾರ ಭೋವಿ ನಿಗಮವೂ ಸೇರಿದಂತೆ ವಿವಿಧ ಸಮುದಾಯಗಳ ಅಭಿವೃದ್ಧಿ ನಿಗಮಗಳ ಸಾಲವನ್ನು ಮನ್ನಾ ಮಾಡಲಾಗಿದೆ. ಪರಿಶಿಷ್ಟ ಜಾತಿಯ ಸಮುದಾಯಗಳಲ್ಲಿನ ಅಸಮಾನತೆ ಹೋಗಲಾಡಿಸಲು ಐತಿಹಾಸಿಕ ಒಳ ಮೀಸಲಾತಿಯನ್ನು ಜಾರಿಗೊಳಿಸಿದೆ ಎಡಗೈಗೆ 5.25%, ಬಲಗೈಗೆ 5.25%, ಹಾಗೂ ಇತರ ಉಪಜಾತಿಗಳಿಗೆ 4.5% ಹಂಚಿಕೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಸರ್ಕಾರ ಸಾಮಾಜಿಕ ನ್ಯಾಯಕ್ಕೆ ಬದ್ಧ

ಈಗ ಜಾತಿ ಸಮೀಕ್ಷೆ ನಡೆಯುತ್ತಿದ್ದು, ಜಾತಿ ಸಮೀಕ್ಷೆ ವರದಿ ಬಂದ ನಂತರ ಚರ್ಚೆ ಮಾಡೋಣ ಎಂದರು. ನಮ್ಮ ಸರ್ಕಾರ ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿದೆ. ಯಾರಿಗೂ ಅನ್ಯಾಯವಾಗಬಾರದು, ನೂರಕ್ಕೆ ನೂರು ಅಲ್ಲದಿದ್ದರೂ 99% ನ್ಯಾಯ ಒದಗಿಸಲು ಪ್ರಯತ್ನಿಸಲಾಗುವುದು ಎಂದರು.

ಅವಕಾಶಗಳಿಂದ ಯಾರೂ ವಂಚಿತರಾಗಬಾರದು

ಸಮುದಾಯದವರು ಇಟ್ಟಿರುವ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಭರವಸೆ ನೀಡಿದ ಮುಖ್ಯಮಂತ್ರಿಗಳು ಸಮುದಾಯದವರಿಗೆ ಕುಲಪತಿ, ವಿಧಾನ ಪರಿಷತ್ ಸದಸ್ಯ ಸ್ಥಾನ ನೀಡುವ ಬಗ್ಗೆ ಪರಿಶೀಲಿಸಲಾಗುವುದು ಎಂದರು. ಏಳು ಕೋಟಿ ಜನರಿಗೂ ನ್ಯಾಯ ಸಿಗಬೇಕು ಹಾಗೂ ಯಾರೂ ಅವಕಾಶಗಳಿಂದ ವಂಚಿತರಾಗಬಾರದು ಎಂದರು. ಸಂವಿಧಾನ ರಚನೆಯಾದ ನಂತರ ಸಮಾನತೆಯನ್ನು ಸಾಧಿಸುವತ್ತ ದೇಶ ಸಾಗಿದ್ದು, ಸಂವಿಧಾನ ಹೇಳುವಂತೆಯೇ ನಡೆದುಕೊಳ್ಳುತ್ತೇವೆ ಎಂದರು.

ಸಹಿಷ್ಣುತೆಯನ್ನು ರೂಡಿಸಿಕೊಳ್ಳಬೇಕು

ಸ್ವಾತಂತ್ರ್ಯ ಸಮಾನತೆ ಮತ್ತು ಭ್ರಾತೃತ್ವ ಸಂವಿಧಾನದ ಮೂಲ ತತ್ವಗಳು. ಜಡತ್ವದಿಂದ ಕೂಡಿರುವ ಜಾತಿ ವ್ಯವಸ್ಥೆಯನ್ನು ಸುಧಾರಿಸಬೇಕಿದೆ. ಎಲ್ಲಾ ಜಾತಿಗಳನ್ನು ಪ್ರೀತಿಸಿ, ಅವರೂ ನಮ್ಮನ್ನು ಪ್ರೀತಿಸುವಂತೆ ಮಾಡಬೇಕು ಹಾಗೂ ಸಹಿಷ್ಣುತೆಯನ್ನು ರೂಡಿಸಿಕೊಳ್ಳಬೇಕು. ಉತ್ಪಾದನೆಯಲ್ಲಿ ಎಲ್ಲರೂ ಭಾಗವಹಿ ಉತ್ಪನ್ನವನ್ನು ಸಮಾನವಾಗಿ ಹಂಚಿಕೊಳ್ಳಬೇಕು ಎಂದು ಸಿದ್ಧರಾಮೇಶ್ವರರು ನಮಗೆ ಬೋಧಿಸಿದ್ದರು. ಅವರು ನಡೆದ ಹಾದಿಯಲ್ಲಿಯೇ ನಮ್ಮ ಸರ್ಕಾರವೂ ನಡೆಯುತ್ತಿದೆ ಎಂದರು.

ರಾಜಕೀಯ

ಸಿಎಂ ಬದಲಾವಣೆ ವರಿಷ್ಠರ ತೀರ್ಮಾನಕ್ಕೆ ಬದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಿಎಂ ಬದಲಾವಣೆ ವರಿಷ್ಠರ ತೀರ್ಮಾನಕ್ಕೆ ಬದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕಾಂಗ್ರೆಸ್ ಸರ್ಕಾರದ ಯೋಜನೆಗಳು ಜನಮೆಚ್ಚುಗೆಗೆ ಪಾತ್ರವಾಗಿದ್ದು, ಜನಾಶೀರ್ವಾದದಿಂದ ರಾಜ್ಯದ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಭೂತಪೂರ್ವ ಗೆಲುವು ಸಾಧಿಸಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ತಿಳಿಸಿದರು.

[ccc_my_favorite_select_button post_id="121818"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]