ದೊಡ್ಡಬಳ್ಳಾಪುರ: ಭಾರತ ಸೇವಾದಳದಿಂದ ಹರ್ಡೆಕರ್ ಜನ್ಮ ದಿನಾಚರಣೆ

Doddaballapur: Hardekar's birth anniversary celebrated by Bharat Seva Dal

ದೊಡ್ಡಬಳ್ಳಾಪುರ: ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲಾ ಘಟಕ ಹಾಗೂ ದೊಡ್ಡಬಳ್ಳಾಪುರ ತಾಲೂಕ ಘಟಕದ ವತಿಯಿಂದ ನಾ.ಸು. ಹರ್ಡೆಕರ್ (Hardekar) ಅವರ 137ನೇ ಜನ್ಮದಿನಾಚರಣೆಯನ್ನು ನಗರದ ಬಸವೇಶ್ವರ ವೃತ್ತದಲ್ಲಿ ಆಚರಿಸಲಾಯಿತು.

ಈ ವೇಳೆ ಮಾತನಾಡಿದ ಭಾರತ ಸೇವಾದಳದ ಜಿಲ್ಲಾ ಅಧ್ಯಕ್ಷ ಜಿ ಲಕ್ಷ್ಮಿಪತಿ, ನಾ.ಸು.ಹರ್ಡೇಕರ್ ಅವರು ತಮ್ಮ ಉನ್ನತ ವ್ಯಾಸಂಗವನ್ನು ವಿದೇಶದಲ್ಲಿ ಮಾಡಿ ನಂತರ ಭಾರತಕ್ಕೆ ಮರಳಿ, ಭಾರತದ ಸ್ವಾತಂತ್ರ್ಯದ ಚಳುವಳಿಯಲ್ಲಿ ಭಾಗವಹಿಸಿ, ಸ್ವಾತಂತ್ರ್ಯ ಹೋರಾಟಕ್ಕೆ ಯುವಕರನ್ನು ಸಂಘಟಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ್ದು, ಆ ಸಂದರ್ಭದಲ್ಲಿ ಹಿಂದೂಸ್ತಾನಿ ಸೇವಾದಳವನ್ನು ಸ್ಥಾಪಿಸಿದರು.

ಇದರ ಮೂಲಕ ಲಕ್ಷಾಂತರ ಯುವಕರಲ್ಲಿ ಶಿಸ್ತು, ರಾಷ್ಟ್ರ ಪ್ರೇಮ ಮತ್ತು ಸೇವಾ ಮನೋಭಾವವನ್ನ ಬೆಳೆಸಿದರು. ಸ್ವಾತಂತ್ರ್ಯದ ನಂತರ ಹಿಂದುಸ್ತಾನಿ ಸೇವಾದಳವನ್ನು ಭಾರತ ಸೇವಾದಳ ಎಂದು ಹೆಸರಿಸಿ, ಅದನ್ನ ಶಿಕ್ಷಣ ಇಲಾಖೆಯೊಂದಿಗೆ ಸಂಯೋಜಿಸಿ, ಇಂದಿನ ಮಕ್ಕಳಲ್ಲಿ ರಾಷ್ಟ್ರ ಪ್ರೇಮ, ಶಿಸ್ತು ಹಾಗೂ ಸೇವಾ ಮನೋಭಾವವನ್ನ ಬೆಳೆಸುವಲ್ಲಿ ಭಾರತ ಸೇವಾದಳ ಉತ್ತಮವಾದ ಕೆಲಸವನ್ನು ನಿರ್ವಹಿಸುತ್ತಿದೆ ಎಂದರು.

ಪ್ರಸ್ತುತ ಸನ್ನಿವೇಶದಲ್ಲಿ ಅತ್ಯಾವಶ್ಯಕವಾಗಿ ಇಂದಿನ ವಿದ್ಯಾರ್ಥಿಗಳಿಗೆ ಬೇಕಾದ ರಾಷ್ಟ್ರಪ್ರೇಮ, ಶಿಸ್ತು, ಸೇವಾ ಮನೋಭಾವವನ್ನು ಬೆಳೆಸುವಲ್ಲಿ ಅತ್ಯಂತ ಉತ್ತಮವಾದ ಕೆಲಸವನ್ನು ಬೆಂಗಳೂರು ಗ್ರಾಮಾಂತರ ಸೇವಾದಳ ಜಿಲ್ಲಾ ಘಟಕ, ತಾಲೂಕು ಘಟಕ ಪ್ರತಿಯೊಂದು ಶಾಲೆಯಲ್ಲೂ ಸೇವಾದಳದ ಶಾಖೆಗಳನ್ನು ತೆರೆದು ಉತ್ತಮವಾದ ಮಾಡುತ್ತಿದೆ ಎಂದರು.

ದೊಡ್ಡಬಳ್ಳಾಪುರ ತಾಲೂಕು ಸಂಘಟಕ ಸುರೇಶ್ ಮಾತನಾಡಿ, ನಾಸು ಹರ್ಡೇಕರ್ ಅವರ ಜೀವನ ಚರಿತ್ರೆ ಅವರ ಸಂಘಟನೆಗಳ ಬಗ್ಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ತಾಲೂಕು ಕಾರ್ಯಾಧ್ಯಕ್ಷ ಹಮಾಮ್ ವೆಂಕಟೇಶ್, ಪ್ರಧಾನ ಕಾರ್ಯದರ್ಶಿ ವಿ. ಸಿ ಜ್ಯೋತಿ ಕುಮಾರ್, ನಗರಸಭೆಯ ನಾಮ ನಿರ್ದೇಶಕ ಸದಸ್ಯ ಕಾಂತರಾಜ್, ಜಿಲ್ಲಾ ಸಂಘಟಕ ರಾಜು, ವಕೀಲರಾದ ಆರ್ ವಿ ಶಿವಕುಮಾರ್, ಆರ್ ವಿ ಮನು, ನಿರ್ದೇಶಕ ಮಹೇಶ್ ಮುಂತಾದವರಿದ್ದರು.

ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

Bakrid; Jail for illegal cow transport/killing.. DC warns
Bakrid; Jail for illegal cow transport/killing.. DC warns

ಬೆಂಗಳೂರು; ಬೆಂಗಳೂರು ನಗರ ಜಿಲ್ಲೆಯಲ್ಲಿ ಗೋವುಗಳ ಅಕ್ರಮ ಸಾಗಣೆ ಅಥವಾ ಹತ್ಯೆ (illegal cow transport/slaughter) ಮಾಡಿದಲ್ಲಿ ಏಳು ವರ್ಷ ಜೈಲು, ಹಾಗೂ ರೂ 10 ಲಕ್ಷ ಗಳ ವರೆಗೆ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ (District Collector) ಜಿ.ಜಗದೀಶ ಅವರು ಎಚ್ಚರಿಕೆ ನೀಡಿದ್ದಾರೆ.

ಬಕ್ರೀದ್ ಸಂದರ್ಭದಲ್ಲಿ ಒಂಟೆ, ಗೋವುಗಳ ಅಕ್ರಮ ಸಾಗಣೆ ಮತ್ತು ಹತ್ಯೆ ಮಾಡುವುದನ್ನು ತಡೆಗಟ್ಟುವ ಬಗ್ಗೆ ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಜಿಲ್ಲೆಗೆ ಬರುವ ಸಾಗಣೆ ವಾಹನಗಳ ತಪಾಸಣೆ ನಡೆಸಿ ಗೋವು, ಒಂಟೆಗಳ ಅಕ್ರಮ ಸಾಗಣೆ ಕಂಡುಬಂದಲ್ಲಿ ಯಾವುದೇ ಮುಲಾಜಿಲ್ಲದೆ ಸೂಕ್ತ ಕಾನೂನುಕ್ರಮ ಜರುಗಿಸುವಂತೆ ಪೊಲೀಸ್ ಮತ್ತು ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು ತಪಾಸಣೆ ನಡೆಸಿದ ವಾಹನಗಳು ಅನಧಿಕೃತವಾಗಿ ಗೋವು / ಒಂಟೆಗಳನ್ನು ಸಾಗಿಸುತ್ತಿದ್ದಲ್ಲಿ ಅವುಗಳನ್ನು ವಶಪಡಿಸಿಕೊಂಡು ಅಗತ್ಯ ಕಾನೂನು ಕ್ರಮ ಕೈಗೊಳ್ಳುವುದು ಮಾತ್ರವಲ್ಲದೆ ವಾಹನದಲ್ಲಿರುವ ಗೋವುಗಳನ್ನು ಪಶುಪಾಲನಾ ಇಲಾಖೆಯ ಸಹಯೋಗದೊಂದಿಗೆ ಗೋಶಾಲೆಗಳಿಗೆ ಅದೇ ವಾಹನದಲ್ಲಿ ಸಾಗಿಸಿ ಸುರಕ್ಷಿತಗೊಳಿಸುವಂತೆ ಸೂಚನೆ ನೀಡಿದರು.

‘ಒಂಟೆ, ಗೋವುಗಳ ಹತ್ಯೆ ಮಾಡುವುದು, ಹೊರ ರಾಜ್ಯ ಮತ್ತು ಹೊರ ಜಿಲ್ಲೆಗಳಿಂದ ಪ್ರಾಣಿಗಳನ್ನು ಕಳ್ಳ ಸಾಗಣೆ ಮೂಲಕ ಜಿಲ್ಲೆಗೆ ತರುವುದು ಅಪರಾಧವಾಗಿದ್ದು, ಈ ಬಗ್ಗೆ ಸಾರ್ವಜನಿಕರಲ್ಲಿ ಕರಪತ್ರ ಹಾಗೂ ಆಟೊರಿಕ್ಷಾ ಪ್ರಚಾರ ಮೂಲಕ ಅರಿವು ಮೂಡಿಸಬೇಕು ಎಂದು ತಿಳಿಸಿದ ಅವರು ನಗರದ ಹೊರ ವಲಯಗಳಲ್ಲಿ, ಅಂದರೆ ಮೈಸೂರು ರಸ್ತೆ (ಕುಂಬಳಗೂಡು), ತುಮಕೂರು ರಸ್ತೆ (ಎಕ್ಸಿಬ್ಯೂಷನ್ ಕೇಂದ್ರ) ಮಾಗಡಿ ರಸ್ತೆ (ತಾವರೆಕೆರೆ), ಹೊಸೂರು ರಸ್ತೆ (ಅತ್ತಿ ಬೆಲೆ), ಹಳೆ ಮದ್ರಾಸ್ ರಸ್ತೆ (ಹೊಸಕೋಟೆ ಹತ್ತಿರ) ಸೇರದ ಒಟ್ಟು 10 ತಪಾಸಣಾ ಕೇಂದ್ರಗಳನ್ನು ಸಾರಿಗೆ ಇಲಾಖೆ ನೇತೃತ್ವದಲ್ಲಿ ನಿರ್ಮಿಸಿ, ಎಲ್ಲಾ ಕೇಂದ್ರಗಳಲ್ಲಿ ಮೂರು ಪಾಳಿಗಳಲ್ಲಿ ಕಾರ್ಯನಿರ್ವಹಿಸಲು ಸೂಚಿಸಿದರು.

ಅಕ್ರಮವಾಗಿ ಒಂಟೆ/ ಗೋಹತ್ಯೆ ಮಾಡುವುದು ಕಂಡುಬಂದಲ್ಲಿ ಸಾರ್ವಜನಿಕರು ಬೆಂಗಳೂರು ನಗರ ಪಾಲಿಕೆಗಳ ಸಹಾಯವಾಣಿ 1533ಕ್ಕೆ ಕರೆ ಮಾಡಿ ದೂರು ನೀಡಬಹುದು ಎಂದು ತಿಳಿಸಿದ ಜಿಲ್ಲಾಧಿಕಾರಿಗಳು ಹಬ್ಬದ ಸಂದರ್ಭಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಸಾರ್ವಜನಿಕ ಸ್ಥಳಗಳಲ್ಲಿ ಹಾಕದಂತೆ ಎಚ್ಚರ ವಹಿಸಬೇಕು.

ಪ್ರಾಣಿ ವಧೆಯಿಂದ ಉತ್ಪತ್ತಿಯಾಗುವ ತ್ಯಾಜ್ಯ ವಿಲೇವಾರಿಯನ್ನು ನಿಯಮಾನುಸಾರ ನಿರ್ವಹಣೆ ಮಾಡಬೇಕು ಎಂದು ಬಿಬಿಎಂಪಿ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಬೆಂಗಳೂರು ನಗರ ಜಿಲ್ಲೆಯ ಪಶುಪಾಲನ ಇಲಾಖೆಯ ಉಪ ನಿರ್ದೇಶಕ ಡಾ. ಪರಮೇಶ್ವರ್ ರವರು ಹಾಗೂ ಜಿ. ಬಿ. ಎ ಉಪ ನಿರ್ದೇಶಕರಾದ ಡಾ. ಚಂದ್ರಯ್ಯ ಅವರು ಉಪಸ್ಥಿತರಿದ್ದರು.

ರಾಜಕೀಯ

ಜನರ ತೀರ್ಪನ್ನು ಅವಮಾನಿಸದೆ ವಿಜಯ್‌ಗೆ ಅವಕಾಶ ನೀಡಿ: ತಮಿಳುನಾಡು ರಾಜ್ಯಪಾಲರ ನಡೆಗೆ ಕಮಲ್ ಹಾಸನ್ ಗರಂ

ಜನರ ತೀರ್ಪನ್ನು ಅವಮಾನಿಸದೆ ವಿಜಯ್‌ಗೆ ಅವಕಾಶ ನೀಡಿ: ತಮಿಳುನಾಡು ರಾಜ್ಯಪಾಲರ ನಡೆಗೆ ಕಮಲ್

ತಮಿಳುನಾಡಿನಲ್ಲಿ ನೂತನ ಸರಕಾರ ರಚನೆಗೆ ವಿಜಯ್ (Vijay) ನೇತೃತ್ವದ ಟಿವಿಕೆ (TVK) ಭರದಿಂದ ಸಿದ್ಧತೆ ನಡೆಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯಪಾಲರಾದ ರಾಜೇಂದ್ರ ಮಾಡಿ ಸರಕಾರ ಅರ್ಲೇಕರ್‌ರನ್ನು ಭೇಟಿ ರಚನೆಗೆ ವಿಜಯ್ ಹಕ್ಕು ಮಂಡಿಸಿದ್ದಾರೆ. ಆದರೆ

[ccc_my_favorite_select_button post_id="121857"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಗೋವುಗಳ ಅಕ್ರಮ ಸಾಗಣೆ ಅಥವಾ ಹತ್ಯೆ (illegal cow transport/slaughter) ಮಾಡಿದಲ್ಲಿ ಏಳು ವರ್ಷ ಜೈಲು, ಹಾಗೂ ರೂ 10 ಲಕ್ಷ ಗಳ ವರೆಗೆ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

[ccc_my_favorite_select_button post_id="121833"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]