ಸುಮನ‌ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಡಿಜಿಟಲ್ ಶಿಕ್ಷಣ, ಸ್ಪರ್ಧಾತ್ಮಕ ಪರೀಕ್ಷಾ ಜಾಗೃತಿ ಕಾರ್ಯಾಗಾರ

Awareness workshop at Suman PU College

ದೊಡ್ಡಬಳ್ಳಾಪುರ: ಎಕ್ಸ್ಟ್ರಾ ಮಾರ್ಕ್ಸ್ (Extra Marks) ಮತ್ತು ಸುಮನ ಪಿಯು ಕಾಲೇಜಿನ (Suman PU College) ಸಂಯೋಗದೊಂದಿಗೆ ಡಿಜಿಟಲ್ ಶಿಕ್ಷಣ ಹಾಗೂ ಸ್ಪರ್ಧಾತ್ಮಕ ಪರೀಕ್ಷಾ ಜಾಗೃತಿ ಕಾರ್ಯಾಗಾರ (workshop) ಆಯೋಜಿಸಲಾಗಿತ್ತು.

ದೊಡ್ಡಬಳ್ಳಾಪುರ- ಮಾರಸಂದ್ರ ಮುಖ್ಯರಸ್ತೆಯಲ್ಲಿರುವ ಸುಮನ ಪಿಯು ಕಾಲೇಜು ವತಿಯಿಂದ ಪೋಷಕರು ಮತ್ತು ವಿದ್ಯಾರ್ಥಿಗಳಿಗಾಗಿ ಡಿಜಿಟಲ್ ಶಿಕ್ಷಣ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಜಾಗೃತಿ ಕಾರ್ಯಾಗಾರ ನಡೆಸಲಾಯಿತು.

ಕಾರ್ಯಾಗಾರದಲ್ಲಿ ಎಕ್ಸ್ಟ್ರಾ ಮಾರ್ಕ್ಸ್ ಡಿಜಿಟಲ್ ಲರ್ನಿಂಗ್ ಮೂಲಕ ವಿದ್ಯಾರ್ಥಿಗಳಿಗೆ ಆಧುನಿಕ ಶಿಕ್ಷಣ ಪದ್ಧತಿ, ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ ಹಾಗೂ ಹೆಚ್ಚಿನ ಅಂಕ ಗಳಿಸುವ ಕುರಿತು ಮಾರ್ಗದರ್ಶನ ನೀಡಲಾಯಿತು.

ಕಾರ್ಯಾಗಾರದಲ್ಲಿ ಭಾಗವಹಿಸಿದ್ದ ತಜ್ಞರು ಮಾತನಾಡಿ, ಇಂದಿನ ಡಿಜಿಟಲ್ ಯುಗದಲ್ಲಿ ವಿದ್ಯಾರ್ಥಿಗಳು ತಂತ್ರಜ್ಞಾನವನ್ನು ಸದುಪಯೋಗಪಡಿಸಿಕೊಂಡು ಉತ್ತಮ ಫಲಿತಾಂಶ ಪಡೆಯಬಹುದು ಎಂದು ತಿಳಿಸಿದರು.

NEET, JEE ಹಾಗೂ KCET ಪರೀಕ್ಷೆಗಳಿಗೆ ಹೇಗೆ ಸಮಗ್ರವಾಗಿ ಸಿದ್ಧರಾಗಬೇಕು, ಉನ್ನತ ಅಂಕಗಳಿಸಲು ಅನುಸರಿಸಬೇಕಾದ ತಂತ್ರಗಳು ಹಾಗೂ ಸರಿಯಾದ ಕೋರ್ಸ್ ಆಯ್ಕೆ ಕುರಿತು ವಿವರಿಸಿದರು.

ಸುಮನ‌ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಡಿಜಿಟಲ್ ಶಿಕ್ಷಣ, ಸ್ಪರ್ಧಾತ್ಮಕ ಪರೀಕ್ಷಾ ಜಾಗೃತಿ ಕಾರ್ಯಾಗಾರ

ವಿದ್ಯಾರ್ಥಿಗಳಿಗೆ ವಿಶೇಷ ಸಂದೇಶವಾಗಿ, “NEET, JEE ಹಾಗೂ KCET ಪರೀಕ್ಷೆಗಳಿಗೆ ಸಂಪೂರ್ಣ ಸ್ಪರ್ಧಾತ್ಮಕ ತರಬೇತಿ ಪಡೆಯಲು ಸುಮನ ಪಿಯು ಕಾಲೇಜಿಗೆ ಸೇರಿ” ಎಂದು ಕರೆ ನೀಡಲಾಯಿತು.

ಇದೇ ವೇಳೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 95% ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ 2 ವರ್ಷದ ಉಚಿತ ಕೋಚಿಂಗ್ ಸೌಲಭ್ಯ ನೀಡಲಾಗುತ್ತದೆ ಎಂದು ಕಾಲೇಜು ಆಡಳಿತ ಮಂಡಳಿ ತಿಳಿಸಿತು. ಜೊತೆಗೆ, ದೊಡ್ಡಬಳ್ಳಾಪುರ ವಿದ್ಯಾರ್ಥಿಗಳಿಗೆ ಪ್ರಥಮ ಪಿಯುಸಿ ಪ್ರವೇಶದ ವೇಳೆ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಘೋಷಿಸಲಾಯಿತು.

ಕಾರ್ಯಕ್ರಮದಲ್ಲಿ ಪ್ರಥಮ ಮತ್ತು ದ್ವಿತೀಯ ಪಿಯು ವಿದ್ಯಾರ್ಥಿಗಳು, ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾದ ವಿದ್ಯಾರ್ಥಿಗಳು ಹಾಗೂ ಪೋಷಕರು ಭಾಗವಹಿಸಿದ್ದರು.

ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಇಂತಹ ಶೈಕ್ಷಣಿಕ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ಮುಂದುವರಿಸಲಾಗುವುದು ಎಂದು ಕಾಲೇಜಿನ ಆಡಳಿತ ಮಂಡಳಿ ತಿಳಿಸಿದೆ.

ದೊಡ್ಡಬಳ್ಳಾಪುರ ಸೇರಿ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಿಗೆ ಸಂಚಾರಿ ಇ-ಬೈಕ್: ತುರ್ತು ಅರೋಗ್ಯ ಸೇವೆಗೆ ವರದಾನ

Mobile e-bikes for government hospitals
Mobile e-bikes for government hospitals

ಬೆಂ.ಗ್ರಾ. ಜಿಲ್ಲೆ: ಗ್ರಾಮೀಣ ಪ್ರದೇಶ ಹಾಗೂ ದೂರದ ಪ್ರದೇಶಗಳಿಗೆ ತುರ್ತು ಆರೋಗ್ಯ ಸೇವೆ ಒದಗಿಸಲು ಸಂಚಾರಿ ಇ-ಬೈಕ್ ಗಳು (e-bikes) ಸಹಕಾರಿ ಆಗಲಿವೆ ಎಂದು ಜಿ.ಪಂ ಸಿಇಒ ಡಾ. ವಾಸಂತಿ ಅಮರ್ (Dr. Vasanthi amar) ಅವರು ಹೇಳಿದರು.

ಜಿಲ್ಲಾಡಳಿ, ಆರೋಗ್ಯ ಇಲಾಖೆಯಡಿ ”ಆಪ್ಟಮ್ ಇಂಡಿಯಾ ಸಂಸ್ಥೆ ಮತ್ತು ಯುನೈಟೆಡ್ ವೇ ಬೆಂಗಳೂರು ವತಿಯಿಂದ ಸಿ.ಎಸ್.ಆರ್ ಅನುದಾನದಡಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ 45 ಇ-ಬೈಕ್ ಗಳನ್ನು ಹಸ್ತಾಂತರಿಸುವ ಕಾರ್ಯಕ್ರಮಕ್ಕೆ ಜಿಲ್ಲಾಡಳಿತ ಭವನದ ಆವರಣದಲ್ಲಿ ಗುರುವಾರ ಚಾಲನೆ ನೀಡಿ ಅವರು ಮಾತನಾಡಿದರು.

ಸರ್ಕಾರವು ಈಗಾಗಲೇ ರಾಜ್ಯಾದ್ಯಂತ ‘ಆರೋಗ್ಯ ಸೇತು ಸಂಚಾರಿ ಆರೋಗ್ಯ ಘಟಕ’ ಯೋಜನೆಯನ್ನು ಜಾರಿಗೊಳಿಸಿದೆ. ಇದಕ್ಕೆ ಪೂರಕವಾಗಿ ಇಂದು ”ಆಪ್ಟಮ್ ಇಂಡಿಯಾ ಸಂಸ್ಥೆಯವರು ನಮ್ಮ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇ- ಬೈಕ್ ಗಳನ್ನು ನೀಡುತ್ತಿರುವುದು ಪ್ರಶಂಸನೀಯ. ಸಂಚಾರಿ ಇ- ಬೈಕ್ ಗಳು ತುರ್ತು ಆರೋಗ್ಯ ಸೇವೆಗಳನ್ನು ಜನರಿಗೆ ಒದಗಿಸಲಿದೆ. ಗ್ರಾಮೀಣ ಭಾಗದವರಿಗೆ ಸೂಕ್ತ ಸಾರಿಗೆ ವ್ಯವಸ್ಥೆಯಿಲ್ಲದೆ, ತುರ್ತು ಆರೋಗ್ಯ ಸೇವೆಗಳಲ್ಲಿ ವಿಳಂಬವಾಗುತ್ತದೆ. ಈ ರೀತಿಯ ಸಂದರ್ಭಗಳಲ್ಲಿ ಇ-ವಾಹನಗಳು ಆರೋಗ್ಯ ಸಿಬ್ಬಂದಿಗೆ ಸಹಾಯಕವಾಗಿರುತ್ತವೆ.

ಗ್ರಾಮೀಣ ಪ್ರದೇಶಗಳಲ್ಲಿ ಆಸ್ಪತ್ರೆಗೆ ಹೋಗಲು ಸಾಧ್ಯವಾಗದವರಿಗೆ, ರೋಗಿಗಳಿಗೆ ತ್ವರಿತ ಚಿಕಿತ್ಸೆ, ಔಷಧಿಗಳನ್ನು ತಲುಪಿಸಲು ಹಾಗೂ ಮನೆ, ಮನೆಗೂ ಆರೋಗ್ಯ ಸೇವೆಯನ್ನು ಒದಗಿಸಲು ಈ ವಾಹನಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದರು.

ಇ-ಬೈಕ್ಗಳು ಪರಿಸರ ಸ್ನೇಹಿ ಯಾಗಿದ್ದು, ವಾಯುಮಾಲಿನ್ಯ ಆಗದಂತೆ ತಡೆಗಟ್ಟತ್ತವೆ, ವಾಹನಗಳ ನಿರ್ವಹಣೆ ಸೇರಿದಂತೆ ಸರಿಯಾಗಿ ಬಳಸಿಕೊಳ್ಳಬೇಕು. ಎಲ್ಲಿ ಅವಶ್ಯಕತೆ ಇದೆಯೋ ಅಲ್ಲಿ ಸರಿಯಾದ ಸಮಯಕ್ಕೆ ಆರೋಗ್ಯ ಸೇವೆ ಒದಗಿಸಿ ಎಂದು ಆರೋಗ್ಯ ಸಿಬ್ಬಂದಿಗೆ ಸಿಇಒ ಸಲಹೆ ನೀಡಿದರು.

ಪ್ರಮುಖಾಂಶಗಳು

• ಇ- ಬೈಕ್ ಗಳು ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಗ್ರಾಮೀಣ ಪ್ರದೇಶದಲ್ಲಿ ಸಂಚರಿಸಲಿವೆ.
• ತುರ್ತು ಆರೋಗ್ಯ ಸೇವೆ ಒದಗಿಸಲಿವೆ.
• ಆರೋಗ್ಯ ಸೇವೆ ಮತ್ತು ಸಿಬ್ಬಂದಿಯ ಕಾರ್ಯ ಕ್ಷಮತೆ ಹೆಚ್ಚಲಿದೆ.
• ಹೊಸಕೋಟೆ, ದೇವನಹಳ್ಳಿ, ದೊಡ್ಡಬಳ್ಳಾಪುರ, ನೆಲಮಂಗಲ ಭಾಗದ ಜನರಿಗೆ ಅನುಕೂಲ.
• ಬಡವರು, ಮಧ್ಯಮ ವರ್ಗದವರು ಹಾಗೂ ಆಸ್ಪತ್ರೆಗೆ ತೆರಳದವರಿಗೆ ಅನುಕೂಲ.
• ಆರೋಗ್ಯ ಸೇವೆಯನ್ನು ಮತ್ತಷ್ಟು ಜನರ ಹತ್ತಿರ ಕೊಂಡೊಯ್ಯಲಿದೆ.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶಿವಕುಮಾರ್, ಆರೋಗ್ಯಾಧಿಕಾರಿ ಡಾ. ಲಕ್ಕಾ ಕೃಷ್ಣ ರೆಡ್ಡಿ, ಆಪ್ಟಮ್ ಸಂಸ್ಥೆಯ ಎಂ.ಡಿ ಉಮಾ ರತ್ನಮ್ ಕೃಷ್ಣ, ಮತ್ತು ಯುನೈಟೆಡ್ ವೇ ಬೆಂಗಳೂರು ಸಂಸ್ಥೆಯ ಸಿ.ಇ.ಒ ರಾಜೇಶ್ ಕೃಷ್ಣನ್, ಆರೋಗ್ಯ ಇಲಾಖೆ ಸಿಬ್ಬಂದಿ, ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ರಾಜಕೀಯ

2019ರ ಸೋಲು ಸ್ಮರಿಸಿ ನಿಖಿಲ್ ಕುಮಾರಸ್ವಾಮಿ ಭಾವುಕ

2019ರ ಸೋಲು ಸ್ಮರಿಸಿ ನಿಖಿಲ್ ಕುಮಾರಸ್ವಾಮಿ ಭಾವುಕ

"ನನ್ನ ರಾಜಕೀಯ ಪ್ರವೇಶ ಮಂಡ್ಯ ಜಿಲ್ಲೆಯಿಂದಲೇ ಆಗಿದೆ. ನಾವು ಮಂಡ್ಯದಲ್ಲಿ ಹುಟ್ಟದಿದ್ದರೂ ಈ ಜಿಲ್ಲೆಯ ಋಣ ನಮ್ಮ ಮೇಲಿದೆ. ಯಾವುದೇ ಊರಿಗೆ ಹೋದರೂ ಜನ ತೋರಿಸುವ ಪ್ರೀತಿ ಮರೆಯಲಾಗದು" ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ

[ccc_my_favorite_select_button post_id="121871"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಗೋವುಗಳ ಅಕ್ರಮ ಸಾಗಣೆ ಅಥವಾ ಹತ್ಯೆ (illegal cow transport/slaughter) ಮಾಡಿದಲ್ಲಿ ಏಳು ವರ್ಷ ಜೈಲು, ಹಾಗೂ ರೂ 10 ಲಕ್ಷ ಗಳ ವರೆಗೆ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

[ccc_my_favorite_select_button post_id="121833"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]