2019ರ ಸೋಲು ಸ್ಮರಿಸಿ ನಿಖಿಲ್ ಕುಮಾರಸ್ವಾಮಿ ಭಾವುಕ

Nikhil Kumaraswamy is emotional remembering the defeat of 2019

ಪಾಂಡವಪುರ; “ನನ್ನ ರಾಜಕೀಯ ಪ್ರವೇಶ ಮಂಡ್ಯ ಜಿಲ್ಲೆಯಿಂದಲೇ ಆಗಿದೆ. ನಾವು ಮಂಡ್ಯದಲ್ಲಿ ಹುಟ್ಟದಿದ್ದರೂ ಈ ಜಿಲ್ಲೆಯ ಋಣ ನಮ್ಮ ಮೇಲಿದೆ. ಯಾವುದೇ ಊರಿಗೆ ಹೋದರೂ ಜನ ತೋರಿಸುವ ಪ್ರೀತಿ ಮರೆಯಲಾಗದು” ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಭಾವುಕರಾದರು.

ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಪಾಂಡವಪುರದಲ್ಲಿ ಮಂಗಳವಾರ ನಡೆದ ಜನರೊಂದಿಗೆ ಜನತಾದಳ ಮತ್ತು ಪಕ್ಷದ 25ನೇ ವರ್ಷದ ರಜತ ಮಹೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, “2019ರ ಲೋಕಸಭಾ ಚುನಾವಣೆಯ ಸೋಲು ರಾಜಕೀಯ ಪಕ್ವತೆಗೆ ದಾರಿ ಮಾಡಿಕೊಟ್ಟಿದೆ. ಅವತ್ತಿನ ನಿಖಿಲ್‌ಗೂ ಇವತ್ತಿನ ನಿಖಿಲ್‌ಗೂ ಸಾಕಷ್ಟು ಬದಲಾವಣೆಯಾಗಿದೆ” ಎಂದರು.

ಜೆಡಿಎಸ್ ಕನ್ನಡ ನಾಡಿನ ಅಸ್ಮಿತೆ

“ದೇವೇಗೌಡರ ಹೋರಾಟದ ಫಲವೇ ಜನತಾದಳ ಪಕ್ಷ. 25 ವರ್ಷಗಳ ರಜತ ಮಹೋತ್ಸವ ಆಚರಿಸುತ್ತಿರುವ ನಮ್ಮ ಜೆಡಿಎಸ್ ಕನ್ನಡ ನಾಡು, ನುಡಿ, ನೆಲ, ಜಲ, ಭಾಷೆಗಾಗಿ ಹೋರಾಡಿದ ಪಕ್ಷ. ಎಷ್ಟೋ ಪ್ರಾದೇಶಿಕ ಪಕ್ಷಗಳು ಹುಟ್ಟಿ ಮುಳುಗಿದರೂ, ಗಟ್ಟಿಯಾಗಿ ಉಳಿದು ರಾಜ್ಯದಲ್ಲಿ ಸುಭದ್ರವಾಗಿರುವುದು ಜೆಡಿಎಸ್ ಮಾತ್ರ” ಎಂದು ಪ್ರತಿಪಾದಿಸಿದರು.

“93ನೇ ವಯಸ್ಸಿನಲ್ಲೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಹೋರಾಟದ ಕಿಚ್ಚು ಕಡಿಮೆಯಾಗಿಲ್ಲ. ರಾಜ್ಯಸಭೆಯಲ್ಲಿ ಕನ್ನಡ ನಾಡಿನ ರೈತರು, ನೀರಾವರಿ ಪರವಾಗಿ ಅವರು ಧ್ವನಿ ಎತ್ತುತ್ತಿದ್ದಾರೆ. ಅವರ ಹೋರಾಟದ ಮನೋಭಾವ ನಮಗೆಲ್ಲರಿಗೂ ಸ್ಪೂರ್ತಿ” ಎಂದು ಬಣ್ಣಿಸಿದರು.

ರೈತರ ವಿರೋಧಿ ಕಾಂಗ್ರೆಸ್ ಸರ್ಕಾರ

“ರೈತರ ಬದುಕು ಹಸನಾಗಿಸುತ್ತೇವೆ ಎಂದು ಭರವಸೆ ನೀಡಿ ಅಧಿಕಾರಕ್ಕೆ ಬಂದ ಸರ್ಕಾರದ ಆಡಳಿತದಲ್ಲಿ ಇಂದು ಅನ್ನದಾತನ ಬದುಕೇ ಹಸಿಗೆಯಾಗುತ್ತಿದೆ. ಸಾಲದ ಸುಳಿಗೆ ಸಿಲುಕಿ, ಬೆಂಬಲ ಬೆಲೆಯಿಲ್ಲದೆ, ನೆಮ್ಮದಿಯಿಂದ ಬದುಕಲೂ ಆಗದ ಸ್ಥಿತಿಗೆ ರೈತ ತಲುಪಿದ್ದಾನೆ. ಕಾಂಗ್ರೆಸ್ ಆಡಳಿತದಲ್ಲಿ ಕಳೆದ ಮೂರು ವರ್ಷಗಳಲ್ಲಿ 3 ಸಾವಿರ ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಂಡ್ಯ ಜಿಲ್ಲೆಯೊಂದರಲ್ಲೇ 97 ರೈತರು ಬಲಿಯಾಗಿದ್ದಾರೆ. ಇದು ಸರ್ಕಾರದ ವೈಫಲ್ಯಕ್ಕೆ ಸಾಕ್ಷಿ” ಎಂದು ಆರೋಪಿಸಿದರು.

“2028ರ ವಿಧಾನಸಭಾ ಚುನಾವಣೆ ಬಹಳ ದೂರವಿಲ್ಲ. ಎಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ರಾಜಕಾರಣಕ್ಕೆ ಮರಳಬೇಕು ಎಂಬುದು ಕಾರ್ಯಕರ್ತರ ಅಭಿಪ್ರಾಯ. 2028ಕ್ಕೆ NDA ಮೈತ್ರಿಕೂಟದ ಸರ್ಕಾರ ಆಡಳಿತಕ್ಕೆ ಬರುವುದು ಶತಸಿದ್ಧ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪಾಂಡವಪುರದಲ್ಲಿ ನಿಖಿಲ್ ಕುಮಾರಸ್ವಾಮಿ ಅವರಿಗೆ ಅದ್ದೂರಿ ಸ್ವಾಗತ

ಸಕ್ಕರೆನಾಡು ಮಂಡ್ಯ ಜಿಲ್ಲೆಯ ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಪಾಂಡವಪುರದಲ್ಲಿ ಜನರೊಂದಿಗೆ ಜನತಾದಳ ಹಾಗೂ ಪಕ್ಷದ 25 ವರ್ಷದ ರಜತ ಮಹೋತ್ಸವ ಸಮಾರಂಭದ ನಿಮಿತ್ತ ಆಗಮಿಸಿದ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರಿಗೆ ಮಂಡ್ಯ ಸರ್ಕಲ್‌ನಲ್ಲಿ ಕ್ರೇನ್ ಮೂಲಕ ಬೃಹತ್ ಹೂವಿನ ಹಾರ ಹಾಕಿ ಭವ್ಯ ಸ್ವಾಗತ ಕೋರಲಾಯಿತು.

ಬಳಿಕ ಸಹಸ್ರಾರು ಯುವಕರು, ಕಾರ್ಯಕರ್ತರು ಹಾಗೂ ತಾಯಂದಿರ ಸಮ್ಮುಖದಲ್ಲಿ ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಪಟ್ಟಣಕ್ಕೆ ಆಗಮಿಸಿದ ಯುವ ನಾಯಕರಿಗೆ ದಾರಿಯುದ್ದಕ್ಕೂ ಸಾರ್ವಜನಿಕರು ಪಟಾಕಿ ಸಿಡಿಸಿ, ಹೂಮಳೆಗರೆದು ಅದ್ದೂರಿಯಾಗಿ ಸ್ವಾಗತಿಸಿದರು.

ತಾಲ್ಲೂಕಿನ ಮಹಾಜನತೆ ಬೃಹತ್ ಹೂವಿನ ಹಾರ, ಮೂಸಂಬಿ ಹಾರ ಹಾಗೂ ಬೆಲ್ಲದ ಹಾರ ಹಾಕಿ ಬೃಹತ್ ವೇದಿಕೆಗೆ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು.

ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ಸಿ.ಎಸ್. ಪುಟ್ಟರಾಜು, ಸಾ.ರಾ. ಮಹೇಶ್, ಡಿ.ಸಿ. ತಮ್ಮಣ್ಣ, ಜಿ.ಬಿ. ಶಿವಕುಮಾರ್, ಕೋರ್ ಕಮಿಟಿ ಅಧ್ಯಕ್ಷ ಜೆ.ಕೆ. ಕೃಷ್ಣಾರೆಡ್ಡಿ, ಜಿಲ್ಲಾಧ್ಯಕ್ಷ ಡಿ. ರಮೇಶ್, ಡಾ. ಕೆ. ಅನ್ನದಾನಿ, ವಿಧಾನಪರಿಷತ್ ಸದಸ್ಯ ಮಂಜೇಗೌಡ, ರಾಮಚಂದ್ರು, ಕಂಸಾಗರ ರವಿ, ರಾಮೇಗೌಡ ಸೇರಿದಂತೆ ನೂರಾರು ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ರಾಜಕೀಯ

TVK ವಿಜಯ್ ಸರಕಾರ ರಚನೆ ಹಕ್ಕು ತಡೆಯುವ ರಾಜ್ಯಪಾಲರ ನಡೆ ಸರಿಯಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ

TVK ವಿಜಯ್ ಸರಕಾರ ರಚನೆ ಹಕ್ಕು ತಡೆಯುವ ರಾಜ್ಯಪಾಲರ ನಡೆ ಸರಿಯಲ್ಲ: ಡಿಸಿಎಂ

"TVK ವಿಜಯ್ ಅವರಿಗೆ ಸರ್ಕಾರ ರಚನೆ ಮಾಡಿ ಬಹುಮತ ಸಾಬೀತುಪಡಿಸುವುದನ್ನು ತಡೆಯಲು ತಮಿಳುನಾಡಿನ ರಾಜ್ಯಪಾಲರಿಗೆ ಯಾವುದೇ ರೀತಿಯ ಅಧಿಕಾರವಿಲ್ಲ. ರಾಜ್ಯಪಾಲರ ನಡೆ ಸರಿಯಲ್ಲ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಹೇಳಿದರು.

[ccc_my_favorite_select_button post_id="121880"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಗೋವುಗಳ ಅಕ್ರಮ ಸಾಗಣೆ ಅಥವಾ ಹತ್ಯೆ (illegal cow transport/slaughter) ಮಾಡಿದಲ್ಲಿ ಏಳು ವರ್ಷ ಜೈಲು, ಹಾಗೂ ರೂ 10 ಲಕ್ಷ ಗಳ ವರೆಗೆ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

[ccc_my_favorite_select_button post_id="121833"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]