ದಿನ ಭವಿಷ್ಯ: ಈ ರಾಶಿಯವರಿಂದು ಯಾರನ್ನೂ ಲಘುವಾಗಿ ಪರಿಗಣಿಸಬೇಡಿ

Astrology: Think before spending money

Astrology: ಶುಕ್ರವಾರ, ಮೇ 08, 2026, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ

ವ್ಯಾಪಾರ ಮತ್ತು ವ್ಯವಹಾರ ವಿಷಯಗಳಿಗೆ ಹೆಚ್ಚು ಗಮನ ನೀಡುತ್ತಿದ್ದೀರಿ,ಆದರೆ ಆಸ್ತಿಯೇ ಎಲ್ಲವೂ ಅಲ್ಲ ಎಂಬುದನ್ನು ಅರಿತುಕೊಳ್ಳಬೇಕಿದೆ. ಹಣಕಾಸು ವ್ಯವಹಾರ, ಯೋಜನೆಗಳ ರೂಪಿಸಲು ಸಾಕಷ್ಟು ಸಮಯ ವಿರುತ್ತದೆ ಆದರೆ, ವೈಯಕ್ತಿಕ ಜೀವನಕ್ಕೂ ಕೊಂಚ ಸಮಯ ನೀಡಿ. (ಭಕ್ತಿಯಿಂದ ಶ್ರೀ ಸುದರ್ಶನ ಮಹಾವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಷಭ ರಾಶಿ

ಕನಸು ಈಡೇರಿಕೆಯ ಸಮಯವಿದು. ಆದರೆ, ಇದಕ್ಕೆ ನಿಮ್ಮ ಪರಿಶ್ರಮದ ಅಗತ್ಯವಿದೆ. ವಾಹನ ಚಾಲನೆ ವೇಳೆ ಎಚ್ಚರವಿರಲಿ. ವ್ಯಾಪಾರದಲ್ಲಿನ ಲಾಭವು ಇಂದು ಅನೇಕ ವ್ಯಾಪಾರಿಗಳ ಮತ್ತು ಉದ್ಯಮಿಗಳ ಮುಖದಲ್ಲಿ ಸಂತೋಷವನ್ನು ತರುತ್ತದೆ. (ಭಕ್ತಿಯಿಂದ ಶ್ರೀ ಲಕ್ಷ್ಮ ವೆಂಕಟೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ

ತಪ್ಪು ಮಾಡುತ್ತಿರುವ ಮನೋಭಾವ ನಿಮ್ಮಲ್ಲಿದೆ. ಈ ಸಂದರ್ಭದಲ್ಲಿ ನಿಮ್ಮ ಮನಸ್ಸಿನ ಶಕ್ತಿ ಹೆಚ್ಚಿಸಿಕೊಂಡು ನಿಮ್ಮ ಮೇಲೆ ನಿಯಂತ್ರಣ ಹೊಂದಿ. ನಿಮ್ಮ ಮೇಲೆ ನಿಮಗೆ ಭರವಸೆ ಇರಲಿ. (ಭಕ್ತಿಯಿಂದ ಸಾಲಿಗ್ರಾಮ ಸ್ವರೂಪ ಶ್ರೀ ಮಹಾವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ

ಚಿಲ್ಲರೆ ಮತ್ತು ಸಗಟು ವ್ಯಾಪಾರಿಗಳಿಗೆ ಉತ್ತಮ ದಿನ. ಇದು ನಿಮ್ಮ ಸಾಮರ್ಥ್ಯವನ್ನು ಕಡಿಮೆ ಮಾಡಬಹುದು. ಇಲ್ಲಿಯವರೆಗೆ ಅನವಶ್ಯಕವಾಗಿ ಹಣ ವ್ಯಯಿಸುತ್ತಿದ್ದವರಿಗೆ ಹಣಕಾಸಿನ ಕೊರತೆಯ ನಡುವೆ ದಿಢೀರ್ ಅವಶ್ಯಕತೆ ಉಂಟಾಗುವುದರಿಂದ
ಹಣ ಸಂಪಾದಿಸುವುದು ಮತ್ತು ಉಳಿಸುವುದು ಎಷ್ಟು ಕಷ್ಟ ಎಂಬುದು ಅರ್ಥವಾಗುತ್ತದೆ. (ಭಕ್ತಿಯಿಂದ ಶ್ರೀ ಕಾರ್ಯಸಿದ್ಧಿ ಮಹಾಗಣಪತಿ ಪ್ರಾರ್ಥನೆ ಮಾಡಿ ಶುಭವಾಗುವುದು)

ಸಿಂಹ ರಾಶಿ

ರಾಜಿ ವಿಚಾರದಲ್ಲಿ ಕಷ್ಟಗಳನ್ನು ಎದುರಿಸಲಿದ್ದೀರಿ. ಸಂವೇದನಾಶೀಲ ಸಂಗತಿಯಾಗಿರುವ ಸಂದರ್ಭಗಳು ಎದುರಾಗಬಹುದು. ಬದಲಾವಣೆಗಳಿಗಿದು ಸಕಾಲವಲ್ಲ. ಎಚ್ಚರಿಕೆ ವಹಿಸಿ. (ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಒಳಿತಾಗುವುದು.)

ಕನ್ಯಾ ರಾಶಿ

ಶುಕ್ರನ ಪ್ರಭಾವ ನಿಮ್ಮ ರಾಶಿ ಮೇಲಿದೆ. ಇತರರ ಅಗತ್ಯಗಳನ್ನು ಪೂರೈಸಲಿದ್ದೀರಿ. ಎಲ್ಲರನ್ನೂ ಎಲ್ಲಾ ವಿಚಾರದಲ್ಲಿ ತೃಪ್ತಿಪಡಿಸುವುದು ಅಸಾಧ್ಯ. ಬೇಸರ ಬೇಡ. ಮುನ್ನಡೆಯಿರಿ. (ಭಕ್ತಿಯಿಂದ ಶ್ರೀ ಲಕ್ಷ್ಮ ನಾರಾಯಣ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ

ಮನೆಯಲ್ಲಿ ಪ್ರೀತಿ ಮತ್ತು ತಿಳುವಳಿಕೆಯನ್ನು ಕಾಣುವಿರಿ. ನೀವು ಯೋಜನೆಯ ಸಂಶೋಧನೆಯಲ್ಲಿ ಕೆಲಸ ಮಾಡಬಹುದು. ಇದಲ್ಲದೇ ವ್ಯಾಪಾರಕ್ಕೆ ಸಂಬಂಧಿಸಿದವರು ಪ್ರಾಮಾಣಿಕತೆಯಿಂದ ಕೆಲಸ ಮಾಡಬೇಕು. (ಭಕ್ತಿಯಿಂದ ಶ್ರೀ ಕಾರ್ಯಸಿದ್ಧಿ ಗಣಪತಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ

ಕುಟುಂಬದ ಸದಸ್ಯರ ಉತ್ತಮ ಸಲಹೆ ನಿಮ್ಮ ಮಾನಸಿಕ ಒತ್ತಡವನ್ನು ಕಡಿಮೆ ಮಾಡುತ್ತದೆ. ಹೊಸ ವಿಷಯಗಳನ್ನು ಕಲಿಯುವ ನಿಮ್ಮ ಸಾಮರ್ಥ್ಯವು ಗಮನಾರ್ಹ ವಾಗಿರುತ್ತದೆ. ಹೊಸ ಆಲೋಚನೆಗಳನ್ನು ಪರೀಕ್ಷೆಗೆ ಒಳಪಡಿಸಲು ಸೂಕ್ತ ಸಮಯ. (ಭಕ್ತಿಯಿಂದ ಶ್ರೀ ಧನ್ವಂತರಿ ಮಹಾವಿಷ್ಣು ಪ್ರಾರ್ಥನೆ ಮಾಡಿ ಶುಭವಾಗುವುದು.)

ಧನಸ್ಸು ರಾಶಿ

ನಿಮ್ಮ ಭಾವನಾತ್ಮಕ ಮಹತ್ವಾಕಾಂಕ್ಷೆಗಳನ್ನು ಈಡೇರುವ ಸಮಯವಿದು. ಆದರೆ, ನಿಮ್ಮ ನೈಜ ಸನ್ನಿವೇಶಗಳು ನಿಮ್ಮ ಭರವಸೆಯನ್ನು ತೃಪ್ತಿಪಡಿಸಲು ಅನುಮತಿಸುತ್ತದೆಯೇ ಎಂಬುದನ್ನು ಗಮನಿಸಬೇಕಾಗುತ್ತದೆ.(ಭಕ್ತಿಯಿಂದ ಶ್ರೀ ಅನಂತ ಪದ್ಮನಾಭ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ

ಕುಟುಂಬದ ನಿರೀಕ್ಷೆಗಳಿಗೆ ತಕ್ಕಂತೆ ಬದುಕಲು ನೀವು ಏನನ್ನಾದರೂ ಮಾಡಬೇಕು. ಇಂದು ಹಿಂದಿನ ಮೊತ್ತವನ್ನು ಇನ್ನೂ ಹಿಂತಿರುಗಿಸದ ಸಂಬಂಧಿಕರಿಗೆ ನಿಮ್ಮ ಹಣವನ್ನು ಸಾಲ ನೀಡುವುದನ್ನು ತಪ್ಪಿಸಿ. ಪ್ರೀತಿಪಾತ್ರರ ಜೊತೆ ವಾದಗಳನ್ನು ಉಂಟು ಮಾಡುವ ವಿವಾದಾತ್ಮಕ ಸಮಸ್ಯೆಗಳನ್ನು ನೀವು ತಪ್ಪಿಸಬೇಕು. (ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ

ಮೂಲಭೂತ ಅಂಶಗಳನ್ನು ಉತ್ತಮವಾಗಿ ನಿಭಾಯಿಸಿದರೆ ನಿಮ್ಮ ಯೋಜನೆಗಳು ಉತ್ತಮವಾಗಿರುತ್ತವೆ. ಯಾವುದನ್ನೂ ಮತ್ತು ಯಾರನ್ನೂ ಲಘುವಾಗಿ ಪರಿಗಣಿಸಬೇಡಿ, ಕೆಲಸವು ಯೋಗ್ಯವಾಗಿದೆ ಎಂದೆನಿಸಿದರೆ, ಅದನ್ನು ನೀವೇ ಮಾಡುವುದು ಉತ್ತಮವಾಗಿರುತ್ತದೆ. (ಭಕ್ತಿಯಿಂದ ಶ್ರೀ ಬದರೀನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ

ನಿಮ್ಮ ಆರೋಗ್ಯದ ಬಗ್ಗೆ ಕಾಳಜಿವಹಿಸಿ ಮತ್ತು ಅನಗತ್ಯ ವಿಶ್ಲೇಷಣೆ ಮತ್ತು ಊಹಾಪೋಹಗಳಿಂದ ದೂರವಿರಿ. ವೃತ್ತಿ ಕ್ಷೇತ್ರದಲ್ಲಿ ನಿಮ್ಮ ಕಾರ್ಯಕ್ಷಮತೆ ಕಡಿಮೆ ಯಾಗುವ ಸಾಧ್ಯತೆಯಿದೆ. (ಭಕ್ತಿಯಿಂದ ಕುಲದೇವರ ಪ್ರಾರ್ಥನೆ ಮಾಡಿ ಒಳಿತಾಗುವುದು.)

ತಿಥಿ: ಪಂಚಮಿ / ಷಷ್ಠಿ
ನಕ್ಷತ್ರ: ಉತ್ತರಾಷಾಡ ನಕ್ಷತ್ರ

ರಾಹುಕಾಲ: 10:30AM ರಿಂದ 12:00PM
ಗುಳಿಕಕಾಲ: 07:30AM ರಿಂದ 09:00AM
ಯಮಗಂಡಕಾಲ: 03:00PM ರಿಂದ 04:30PM

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ವಿದ್ವಾನ್ ಎಸ್.ನವೀನ್ M.A., ರಾಜ್ಯ ಜಂಟಿ ಕಾರ್ಯದರ್ಶಿ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ರಿ.) ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ದೊಡ್ಡಬಳ್ಳಾಪುರ. ಮೊ:9620445122

ರಾಜಕೀಯ

ಇಂದು ದೊಡ್ಡಬಳ್ಳಾಪುರದಲ್ಲಿ ‘JDS 25’ ಸಂಭ್ರಮ: ನಿಖಿಲ್ ಕುಮಾರಸ್ವಾಮಿ ಸ್ವಾಗತಕ್ಕೆ ಸಜ್ಜು

ಇಂದು ದೊಡ್ಡಬಳ್ಳಾಪುರದಲ್ಲಿ ‘JDS 25’ ಸಂಭ್ರಮ: ನಿಖಿಲ್ ಕುಮಾರಸ್ವಾಮಿ ಸ್ವಾಗತಕ್ಕೆ ಸಜ್ಜು

ಇಂದು (ಮೇ.8) ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಜೆಡಿಎಸ್ (JDS) ಪಕ್ಷದ 25 ನೇ ವರ್ಷದ ರಜತ ಮಹೋತ್ಸವ ಸಮಾರಂಭವನ್ನು ಅದ್ಧೂರಿಯಾಗಿ ನಡೆಸಲಾಗುತ್ತಿದೆ.

[ccc_my_favorite_select_button post_id="121888"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಗೋವುಗಳ ಅಕ್ರಮ ಸಾಗಣೆ ಅಥವಾ ಹತ್ಯೆ (illegal cow transport/slaughter) ಮಾಡಿದಲ್ಲಿ ಏಳು ವರ್ಷ ಜೈಲು, ಹಾಗೂ ರೂ 10 ಲಕ್ಷ ಗಳ ವರೆಗೆ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

[ccc_my_favorite_select_button post_id="121833"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]