ಜಲಾಮೃತ ಯೋಜನೆಯ ಯಶಸ್ವಿ ಅನುಷ್ಠಾನಕ್ಕೆ ಅಧಿಕಾರಿಗಳು ಶ್ರಮಿಸಬೇಕು: ಎಂ.ಎನ್.ನಾಗರಾಜ

ದೊಡ್ಡಬಳ್ಳಾಪುರ : ಜಲ ಸಂರಕ್ಷಣೆ, ಜಲ ಸಾಕ್ಷರತೆ, ಜಲ ಮೂಲಗಳ ಪುನಶ್ಚೇತನ ಮತ್ತು ಹಸಿರೀಕರಣವನ್ನು  ಕೇಂದ್ರವಾಗಿಟ್ಟುಕೊಂಡು ನೀರಿನ ಸಂರಕ್ಷಣೆಗೆ ಆದ್ಯತೆ ನೀಡುವ ಜಲಾಮೃತ ಯೋಜನೆಯ ಯಶಸ್ಸಿಗೆ ಸಂಬಂಧಪಟ್ಟ ಎಲ್ಲಾ ಇಲಾಖೆ ಅಧಿಕಾರಿಗಳು ಶ್ರಮಿಸಬೇಕು ಎಂದು ಜಿಲ್ಲಾ ಪಂಚಾಯತಿ ಮುಖ್ಯ  ಕಾರ್ಯನಿರ್ವಾಹಕ ಅಧಿಕಾರಿ ಎಂ.ಎನ್. ನಾಗರಾಜ ಅವರು ತಿಳಿಸಿದರು.

ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ, ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯತಿ ಕಚೇರಿ ಸಭಾಂಗಣದಲ್ಲಿ ಇಂದು ಜಲಾನಯನ ಅಭಿವೃದ್ಧಿ ಕಾರ್ಯಕ್ರಮದಡಿ ಹಮ್ಮಿಕೊಳ್ಳಲಾದ ಜಲಾಮೃತ ಕಾರ್ಯಾಗಾರವನ್ನು ಗಿಡಕ್ಕೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಜಿಪಂ ಸಿಇಓ  ಎಂ.ಎನ್.ನಾಗರಾಜು ಅವರು ನೀರಿನ ಸಮಸ್ಯೆಯನ್ನು ಮೂಲದಿಂದ ನಿವಾರಿಸುವ ಸಲುವಾಗಿ ಜಲಾಮೃತ ಯೋಜನೆ ಜಾರಿಗೆ ತರಲಾಗಿದ್ದು, ಕೃಷಿ ಚಟುವಟಿಕೆ ಹೆಚ್ಚಾಗಿ ಕಂಡುಬರುವ ಗ್ರಾಮೀಣ ಪ್ರದೇಶದಲ್ಲಿ, ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಹಾಗೂ ಜಲಾಮೃತ ಯೋಜನೆಯ ಒಗ್ಗೂಡಿಸುವಿಕೆಯಡಿ ಗ್ರಾಮದ ಜನರನ್ನೇ ಬಳಸಿಕೊಂಡು ಜಲ ಸಂರಕ್ಷಣೆಯ ಕಾರ್ಯಕ್ರಮಗಳನ್ನು ಅನುಷ್ಟಾನ ಮಾಡಲಾಗುತ್ತಿದೆ ಎಂದು ತಿಳಿಸಿದರು‌.

ಜಲಾಮೃತ ಯೋಜನೆಯಡಿ ನೀರಿನ ವಿವಿಧ ರೀತಿಯ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುತ್ತಿದ್ದು,  ಪ್ರಮುಖವಾಗಿ ಜಲ ಸಾಕ್ಷರತೆ ಮುಖೇನ ಜನರಲ್ಲಿ ನೀರಿನ ಮಿತ ಹಾಗೂ ಪ್ರಜ್ಞಾವಂತ ಬಳಕೆ ಬಗ್ಗೆ ಅರಿವು ಮೂಡಿಸಲಾಗುತ್ತಿದೆ ಎಂದು ತಿಳಿಸಿದ ಅವರು, ಜಲ ಮೂಲಗಳನ್ನು ಪುನಶ್ಚೇತನ ಮಾಡುವ ಕಾರ್ಯಕ್ರಮದಡಿ ಕೊಳವೆಬಾವಿಗಳ ಮರುಪೂರಣ, ಕೆರೆಗಳ ಹೂಳೆತ್ತುವಿಕೆ, ನೂತನ ಕೆರೆ, ಚೆಕ್‍ಡ್ಯಾಂ, ಕಲ್ಯಾಣಿ ಕೊಳಗಳ ನಿರ್ಮಾಣ, ಗೋ ಕಟ್ಟೆಗಳ ನಿರ್ಮಾಣದಂತಹ ಕಾರ್ಯಗಳನ್ನು ಮಾಡಲಾಗುತ್ತಿದೆ ಎಂದು ಹೇಳಿದರು.

 ನೀರಿನ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಕಾಲ ಕಾಲಕ್ಕೆ ನೀರಿನ ಸ್ಥರಗಳ ಸ್ವಚ್ಛತಾ ಕಾರ್ಯವನ್ನು ಜಲಾಮೃತ ಯೋಜನೆಯಡಿ  ಮಾಡಲಾಗುವುದು. ಹಸಿರೀಕರಣದ ಮುಖೇನ ಮರಗಳನ್ನು ಹೆಚ್ಚೆಚ್ಚು ಬೆಳೆಸುವ ಮಹತ್ತರ ಕಾರ್ಯವನ್ನೂ ಕೈಗೊಳ್ಳಲಾಗಿದೆ ಎಂದು ಜಲಾಮೃತ ಯೋಜನೆಯ  ಮಹತ್ವವನ್ನು ಅಧಿಕಾರಿಗಳಿಗೆ ತಿಳಿಸಿದರು.

ಜಲಾಮೃತ ಯೋಜನೆಯಡಿ ಜಿಲ್ಲೆಯಲ್ಲಿ ಸಮಗ್ರ ಹಸಿರೀಕರಣ ಕಾರ್ಯಕ್ರಮವನ್ನು ಸಮುದಾಯದ ಪಾಲ್ಗೊಳ್ಳುವಿಕೆಯೊಂದಿಗೆ ಅಂದಾಜು 60 ಸಾವಿರ  ಸಸಿಗಳನ್ನು ನೆಡಿಸಲು ಕಾರ್ಯ ರೂಪಿಸಲಾಗಿದೆ. ಸಾಂಪ್ರದಾಯಿಕ ಜಲಮೂಲಗಳನ್ನು ಗುರುತಿಸಲಾಗಿದ್ದು, ಆಯಾ ಗ್ರಾಮ ಪಂಚಾಯತಿಗಳ ಮೂಲಕ ಪುನಶ್ಚೇತನ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಜಲಾಮೃತ ಯೋಜನೆಯಡಿ ಪ್ರಮುಖ ಕೆರೆಗಳನ್ನು ಆಯ್ಕೆ ಮಾಡಲಾಗಿದ್ದು, ಕೆರೆಗಳ ಅಗತ್ಯತೆಗೆ ತಕ್ಕಂತೆ ಅಭಿವೃದ್ಧಿ ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸಲಾಗುವುದು. ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಗುಳ್ಯ ನಂದಿಗುಂದ, ಕೊಡಿಗೇಹಳ್ಳಿ, ಕೊನಘಟ್ಟ, ಕುರುಬರಹಳ್ಳಿ , ರಬ್ಬನಹಳ್ಳಿ ಮತ್ತು ಲಿಂಗನಹಳ್ಳಿ ಯನ್ನು ಕಿರು ಜಲಾನಯನ ಯೋಜನೆ ಅನುಷ್ಠಾನಗೊಳಿಸಲು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು. ನೆಲಮಂಗಲ ತಾಲೂಕಿನ ಹೊನ್ನಸಂದ್ರ, ಲಿಂಗೇನಹಳ್ಳಿ, ಮಹದೇವಪುರ, ದೊಡ್ಡೇಕರೇನಹಳ್ಳಿ ಮತ್ತು ಬಾವಿಕೆರೆ ಹಾಗೂ ಹೊಸಕೋಟೆ ತಾಲ್ಲೂಕಿನ ಕಟ್ಟಿಗೇನಹಳ್ಳಿ.ಮಾಕನಹಳ್ಳಿ, ತಿಂಡ್ಲು, ದಾಸರಹಳ್ಳಿ ಹಂದೇನಹಳ್ಳಿ, ಮಾರಸಂದ್ರ ನಾರಾಯಣ ಕೆರೆ, ಪರಾಮನಹಳ್ಳಿ, ಖಾಜಿ ಹೊಸಳ್ಳಿ ಯನ್ನು ಕಿರು ಜಲಾನಯನ  ಕಾಮಗಾರಿಗೆ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.


ಕಾರ್ಯಾಗಾರದಲ್ಲಿ ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಕೆ.ಕರಿಯಪ್ಪ  ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಜಯಸ್ವಾಮಿ, ತೋಟಗಾರಿಕೆ ಇಲಾಖೆಯ  ಉಪ ನಿರ್ದೇಶಕ ಮಹಾಂತೇಶ್  ಮುರುಗೋಳ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜಕೀಯ

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಮಿತ್ರಪಕ್ಷ ಅಧಿಕಾರದಲ್ಲಿರುವ ಆಂಧ್ರಪ್ರದೇಶದ ಹೊರತುಪಡಿಸಿ ದಕ್ಷಿಣ ಭಾರತದ ರಾಜ್ಯಗಳಿಗೆ ನಿರ್ಲಕ್ಷ್ಯ ತೋರಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

[ccc_my_favorite_select_button post_id="119088"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದಂಡುಪಾಳ್ಯ ಗ್ಯಾಂಗ್‌ನ (Dandupalya gang) ಚಿಕ್ಕ ಹನುಮಂತಪ್ಪ (ಅಲಿಯಾಸ್ ಕೆ.ಕೃಷ್ಣಪ್ಪ) ಎಂಬಾತನನ್ನು ಆಂಧ್ರಪ್ರದೇಶದ ಮದನಪಳ್ಳೆ ಗ್ರಾಮದಲ್ಲಿ ಬಂಧಿಸಲಾಗಿದೆ.

[ccc_my_favorite_select_button post_id="118778"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!