ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಕೆಂಪೇಗೌಡ – ರಾಷ್ಟ್ರಕವಿ ಕುವೆಂಪು ಪುತ್ಥಳಿ ನಿರ್ಮಾಣಕ್ಕೆ ವಿರೋಧ

ದೊಡ್ಡಬಳ್ಳಾಪುರ: ನಗರದ ಪ್ರವಾಸಿ ಮಂದಿರದ ಮುಂಭಾಗ ಡಾ.ಬಿ.ಆರ್.ಅಂಬೇಡ್ಕರ್ ವೃತ್ತ ಎಂದು ನಾಮಕರಣವಾಗಿರುವುದರಿಂದ ಇಲ್ಲಿ ನಾಡಪ್ರಭು ಕೆಂಪೇಗೌಡ – ರಾಷ್ಟ್ರಕವಿ ಕುವೆಂಪು ಪುತ್ಥಳಿ ನಿರ್ಮಾಣ ಮಾಡುವುದು ಸಮಂಜಸವಲ್ಲ.ಇದಲ್ಲದೇ ಬೇರೆಡೆ ಸೂಕ್ತ ಸ್ಥಳ ಗುರುತಿಸಿದರೆ ನಮ್ಮ ಸಹಕಾರವಿರುತ್ತದೆ ಎಂದು ವಿವಿಧ ಸಂಘಟನೆಗಳ ಹಾಗೂ ಸಮುದಾಯದ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.

ನಗರದ ಪ್ರವಾಸಿ ಮಂದಿರದಲ್ಲಿ ಅಹಿಂದ ಮತ್ತು ಪ್ರಗತಿಪರ ಸಂಘಟನೆಗಳು ಹಾಗು ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಪ್ರತಿಷ್ಠಾಪನಾ ಹೋರಾಟ ಸಮಿತಿ ವತಿಯಿಂದ ನಡೆದ ಪತ್ರಿಕಾಗೋಷ್ಠಿ ಹಾಗೂ ಸಭೆಯಲ್ಲಿ ಮಾತನಾಡಿದ ಕೆಪಿಸಿಸಿ ಸದಸ್ಯ ಜಿ.ಲಕ್ಷ್ಮಿಪತಿ, ಕಳೆದ 28 ವರ್ಷಗಳ ಹಿಂದೆಯೆ ಇಲ್ಲಿನ ತುಮಕೂರು, ಗೌರಿಬಿದನೂರು, ಚಿಕ್ಕಬಳ್ಳಾಪುರ, ಬೆಂಗಳೂರು ನಗರಕ್ಕೆ ಸೇರುವ ಮುಖ್ಯ ವೃತ್ತಕ್ಕೆ ಡಾ.ಬಿ.ಆರ್.ಅಂಬೇಡ್ಕರ್ ಅವರ ನಾಮಕರಣ ಮಾಡಿರುತ್ತದೆ. ಆದರೆ 2018ರ ನಗರಸಭೆ ಸರ್ವ ಸದಸ್ಯರ ಸಭೆಯಲ್ಲಿ ಅದೇ ವೃತ್ತಕ್ಕೆ ಹೊಂದಿಕೊಂಡಿರುವ ಪ್ರವಾಸಿ ಮಂದಿರದ ಮುಂಭಾಗದಲ್ಲಿ ನಾಡಪ್ರಭು ಕೆಂಪೇಗೌಡ ಮತ್ತು ರಾಷ್ಟ್ರಕವಿ ಕುವೆಂಪು ಅವರ ಪುತ್ಥಳಿ ನಿರ್ಮಾಣಕ್ಕೆ ಸರ್ವಾನುಮತದ ಅನುಮೋದನೆ ನೀಡಿದ್ದಾರೆ. ಈ ರೀತಿ ಮಾಡುವುದಾದರೆ ಇಲ್ಲಿನ ಅಂಬೇಡ್ಕರ್ ವೃತ್ತದ ಹೆಸರೆ ಮಾಯವಾಗುತ್ತದೆ ಎಂದರು.

ಮಾದರ ಚನ್ನಯ್ಯ ಮಹಾಸಭಾದ ಕೋರ್‌ಕಮಿಟಿ ಅಧ್ಯಕ್ಷ ಮಾ.ಮುನಿರಾಜು ಮಾತನಾಡಿ ಪ್ರತಿಮೆ ವಿಚಾರದಲ್ಲಿ ಶಾಸಕರು ಒಂದು ವರ್ಗದ ಜನರ ಪರವಾಗಿ ನಿಲ್ಲುವುದು ಸಮಂಜಸವಲ್ಲ. ಎಲ್ಲಾ ವರ್ಗದವರನ್ನು ಕರೆದು ಚರ್ಚೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳಬೇಕಿದೆ ಎಂದರು.

ಇಲ್ಲಿ ಯಾವುದು ಒಂದು ಸಮುದಾಯ ಜಾತ್ಯಾತೀತವಾಗಿ ಸಮಾಜಕ್ಕೆ ಬದುಕಿದವರನ್ನು ತಮ್ಮ ಜಾತಿ ಧರ್ಮಗಳ ಆಧಾರದ ಜಾತಿ ಸಾಮರಸ್ಯ ಕದಡುವುದು ಬೇಡ. ಹೀಗಾಗಿ ಈ ಕೂಡಲೆ ಪ್ರವಾಸಿ ಮಂದಿರದ ಮುಂಭಾಗ ಪುತ್ಥಳಿ ನಿರ್ಮಾಣವನ್ನು ಕೈ ಬಿಟ್ಟು ನಗರದಲ್ಲಿ ಬಹುತೇಕ ಸ್ಥಳವಕಾಶ ಇದ್ದು ಅಲ್ಲಿ ಕೆಂಪೇಗೌಡ-ಕುವೆಂಪು ಪುತ್ಥಳಿ ನಿರ್ಮಾಣ ಮಾಡಲಿ ಅದರ ಜೊತೆ ನಾವು ಸಹ ಇರುತ್ತೇವೆ ಎಂದು ಅಹಿಂದ  ಹಾಗೂ ವಿವಿಧ ಸಂಘಟನೆಗಳ ಮುಖಂಡರು ಅಭಿಪ್ರಾಯಪಟ್ಟರು

ಸಭೆಯಲ್ಲಿ ಕನ್ನಡಪಕ್ಷ ತಾಲೂಕು ಅಧ್ಯಕ್ಷ ಸಂಜೀವ ನಾಯಕ, ಕರವೇ(ಪ್ರವೀಣ್‌ಕುಮಾರ್ ಶೆಟ್ಟಿ ಬಣ) ರಾಜ್ಯ ಕಾರ್ಯದರ್ಶಿ ರಾಜಘಟ್ಟರವಿ ಹಾಗು ಹಿಂದುಳಿದ ವರ್ಗಗಳ,ದಲಿತ ಸಂಘಟನೆಗಳು ಸೇರಿದಂತೆ ಕನ್ನಡಪರ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.

     *****************

ರಾಜಕೀಯ

ಸಂಸತ್‌ನಲ್ಲಿ ಆಪರೇಷನ್ ಸಿಂಧೂರ ಕದನವಿರಾಮದ ಕಾವೇರಿದ ಚರ್ಚೆ: ರಾಹುಲ್ ಗಾಂಧಿ ಸವಾಲು, ಮೋದಿ ಸ್ಪಷ್ಟನೆ

ಸಂಸತ್‌ನಲ್ಲಿ ಆಪರೇಷನ್ ಸಿಂಧೂರ ಕದನವಿರಾಮದ ಕಾವೇರಿದ ಚರ್ಚೆ: ರಾಹುಲ್ ಗಾಂಧಿ ಸವಾಲು, ಮೋದಿ

ಚಳಿಗಾಲದ ಅಧಿವೇಶನದಲ್ಲಿ ಆಪರೇಷನ್ ಸಿಂಧೂರ (Operation Sindoor), ಏಕಾಏಕಿ ಕದನ ವಿರಾಮ (ceasefire) ಘೋಷಣೆ ಕುರಿತು ತೀವ್ರ ಚರ್ಚೆಗೆ ಕಾರಣವಾಗಿತ್ತು.

[ccc_my_favorite_select_button post_id="111876"]
ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಯಾಣ

ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ

ಆಗಸ್ಟ್ 4 ರಿಂದ 6ನೇ ತಾರೀಖಿನವರೆಗೆ ಅಮೇರಿಕಾದ ಬೋಸ್ಟನ್ ನಗರದಲ್ಲಿ ನಡೆಯುವ "ಶಾಸಕಾಂಗ ಶೃಂಗಸಭೆ 2025”ರಲ್ಲಿ (Legislative Summit 2025) ಪಾಲ್ಗೊಳ್ಳಲು ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಇಂದು ಬೆಳಗಿನ ಜಾವ

[ccc_my_favorite_select_button post_id="111777"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಮತ್ತೊಂದು ಬಲಿ.!

ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಮತ್ತೊಂದು ಬಲಿ.!

ಸರ್ಕಾರಗಳು ಮುಂಜಾಗ್ರತೆ ಕ್ರಮ ಕೈಗೊಳ್ಳಿ ಎಂದು ಎಷ್ಟೇ ಸೂಚನೆ ನೀಡಿದರು, ಕೃಷಿ ಹೊಂಡದಲ್ಲಿ (Agricultural pit) ಆಕಸ್ಮಿಕವಾಗಿ ಬಿದ್ದು ಸಾವನಪ್ಪುತ್ತಿರುವ ಪ್ರಕರಣಗಳು ಮಾತ್ರ ನಿಲ್ಲುತ್ತಿಲ್ಲ.

[ccc_my_favorite_select_button post_id="111873"]
ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಾಲ್ಲೂಕಿನ ಮಧುರೆ ರಸ್ತೆಯಲ್ಲಿನ ಖಾಸಗಿ

[ccc_my_favorite_select_button post_id="111623"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!