ಜೂನ್ 25 ರಿಂದ ಜಿಲ್ಲೆಯ 52 ಕೇಂದ್ರಗಳಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ

ದೊಡ್ಡಬಳ್ಳಾಪುರ: ಎಸ್.ಎಸ್.ಎಲ್.ಸಿ. ಪರೀಕ್ಷೆಯು ಜೂನ್ 25 ರಿಂದ ಜಿಲ್ಲೆಯ 52 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಜಿಲ್ಲೆಯ 13252  ವಿದ್ಯಾರ್ಥಿಗಳು ಮತ್ತು ಹೊರ ಜಿಲ್ಲೆಯ 65 ವಿದ್ಯಾರ್ಥಿಗಳು ಹಾಗೂ ಜಿಲ್ಲೆಯ 125 ವಿದ್ಯಾರ್ಥಿಗಳು ಬೇರೆ ಜಿಲ್ಲೆಗಳಲ್ಲಿ ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದು  ಅಪರ ಜಿಲ್ಲಾಧಿಕಾರಿ ಡಾ. ಜಗದೀಶ್.ಕೆ.ನಾಯಕ್ ಅವರು ತಿಳಿಸಿದರು.

ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ನಡೆದ ಎಸ್.ಎಸ್.ಎಲ್.ಸಿ. ಪರೀಕ್ಷಾ  ಕೇಂದ್ರಗಳ ಮುಖ್ಯ ಅಧೀಕ್ಷಕರು, ತಾಲ್ಲೂಕು ನೋಡಲ್  ಅಧಿಕಾರಿಗಳು  ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು

ಕೊರೋನ ವೈರಾಣು ಸೋಂಕು ಪಸರಿಕೆಭೀತಿ ಹಿನ್ನಲೆ ಮುಂಜಾಗ್ರತಾ ಕ್ರಮವಾಗಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಆರೋಗ್ಯದ ಸುರಕ್ಷತಾ ಹಿತದೃಷ್ಟಿಯಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆ ನಡೆಯಲಿರುವ ಜಿಲ್ಲೆಯ 52 ಪರೀಕ್ಷಾ ಕೇಂದ್ರಗಳಲ್ಲಿನ ಎಲ್ಲಾ ಪರೀಕ್ಷಾ ಕೊಠಡಿಗಳನ್ನು ಹಾಗೂ ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ ಆವರಣವನ್ನು ಸಂಪೂರ್ಣವಾಗಿ ಸೋಂಕು ನಿವಾರಕ  ಔಷಧಿ ಸಿಂಪಡಿಸಿ ಸುರಕ್ಷತೆಯೊಂದಿಗೆ ಸ್ವಚ್ಛತೆ ಕಾಪಾಡಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮ ವಹಿಸಬೇಕು.

ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು.  ಥರ್ಮಲ್ ಸ್ಕ್ರೀನಿಂಗ್ ಮೂಲಕ ಪ್ರತಿ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ನಡೆಸಿ ಪರೀಕ್ಷಾ ಕೇಂದ್ರದ ಒಳಗೆ ಪ್ರವೇಶಿಸಲು ಅವಕಾಶ ಕಲ್ಪಿಸಬೇಕು. ಕೆಮ್ಮು, ನೆಗಡಿ ಹಾಗೂ ಜ್ವರ ಲಕ್ಷಣ ಹೊಂದಿರುವ ವಿದ್ಯಾರ್ಥಿಗಳಿಗೆ ಆರೋಗ್ಯ ಇಲಾಖೆ ನೀಡುವ ಎನ್-95 ಮಾಸ್ಕ್ ಧರಿಸಿ ಪ್ರತ್ಯೇಕ ಕೊಠಡಿಗಳಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಬೇಕು ಎಂದರು.

ಕೊರೋನಾ ವೈರಾಣು ಸೋಂಕು ಹರಡದಂತೆ ತಡೆಯಲು, ವಿದ್ಯಾರ್ಥಿಗಳ ನಡುವೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಪ್ರತಿ ಕೊಠಡಿಗೆ ಗರಿಷ್ಟ 18 ವಿದ್ಯಾರ್ಥಿಗಳು ಮಾತ್ರ ಪರೀಕ್ಷೆ ಬರೆಯಲು ವ್ಯವಸ್ಥೆ ಕಲ್ಪಿಸಬೇಕು. ಪೆನ್, ಇತರೆ ಲೇಖನ ಸಾಮಗ್ರಿಗಳು ಸೇರಿದಂತೆ ಕುಡಿಯುವ ನೀರನ್ನು ವಿದ್ಯಾರ್ಥಿಗಳೇ ತರಬೇಕು. ಬೇರೆ ವಿದ್ಯಾರ್ಥಿಗಳಿಂದ ಪಡೆಯುವಂತಿಲ್ಲ ಎಂದು ತಿಳಿಸಿದರು.

ವಿದ್ಯಾರ್ಥಿಗಳು ಸುಗಮವಾಗಿ ಪರೀಕ್ಷಾ ಕೇಂದ್ರಗಳಿಗೆ ತಲುಪಲು ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳು ಉತ್ತಮವಾಗಿರುವಂತೆ ಅಧಿಕಾರಿಗಳು ಕ್ರಮ ವಹಿಸಬೇಕು. ಪರೀಕ್ಷಾ ಅವಧಿಯಲ್ಲಿ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ 144 ಸಿ.ಆರ್.ಪಿ.ಸಿ ಕಲಂ ಜಾರಿಮಾಡಲಾಗುವುದು ಹಾಗೂ ಪರೀಕ್ಷಾ ಕೇಂದ್ರಗಳ ಸಮೀಪದ ಝೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಆದೇಶಿಸಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ  ಜಿಲ್ಲಾ ಪಂಚಾಯತಿ ಮುಖ್ಯ ಯೋಜನಾಧಿಕಾರಿ  ವಿನುತಾರಾಣಿ,  ಜಿಲ್ಲಾ  ಆರೋಗ್ಯಾಧಿಕಾರಿ ಡಾ. ಮಂಜುಳಾದೇವಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಂಗಾಮಾರೇಗೌಡ, ತಾಲ್ಲೂಕು  ಕ್ಷೇತ್ರ ಶಿಕ್ಷಣಾಧಿಕಾರಿಗಳು, ನೋಡಲ್ ಅಧಿಕಾರಿಗಳು  ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜಕೀಯ

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ ಸಚಿವರಿಗೆ ಮನವಿ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ ಸಚಿವರಿಗೆ

“ಬೆಂಗಳೂರಿನಲ್ಲಿರುವ ಹೆಚ್ಎಎಲ್, ಜಕ್ಕೂರು, ವಾಯುನೆಲೆ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತ ಕಟ್ಟಡ ಎತ್ತರದ ಮಿತಿಯಿಂದ ಅಭಿವೃದ್ಧಿ ಕಾಮಗಾರಿಗೆ ತೊಡಕಾಗಿದ್ದು, ಈ ಮಿತಿಯ ಬಗ್ಗೆ ಪರಿಶೀಲನೆ ನಡೆಸುವಂತೆ ಕೇಂದ್ರ ನಾಗರೀಕ ವಿಮಾನಯಾನ ಸಚಿವರಿಗೆ ಮನವಿ

[ccc_my_favorite_select_button post_id="120305"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!