ಎಸ್‍ಎಸ್‍ಎಲ್‍ಸಿ ಪರೀಕ್ಷಾ ಕೆಂದ್ರಗಳಿಗೆ ದಾವಣಗೆರೆ ಡಿಸಿ ಭೇಟಿ; ಪರಿಶೀಲನೆ

ದಾವಣಗೆರೆ: ಎಸ್‍ಎಸ್‍ಎಲ್‍ಸಿ ಪರೀಕ್ಷೆ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಗುರುವಾರ ನಗರದಲ್ಲಿನ ಪರೀಕ್ಷಾ ಕೆಂದ್ರಗಳಿಗೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಭೇಟಿ ನೀಡಿ ಪರಿಶೀಲನೆ ನಡೆಸಿ, ವಿದ್ಯಾರ್ಥಿಗಳಿಗೆ ಶುಭಾಷಯ ಕೋರಿದರು. ಹಾಗೂ ಯಾವುದೇ ಗೊಂದಲಕ್ಕೆ ಒಳಗಾಗದೇ ನಿರ್ಭೀತಿಯಿಂದ ಪರೀಕ್ಷೆ ಬರೆಯಿರಿ ಎಂದರು.

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿನಿಂದ ರಾಜ್ಯದೆಲ್ಲೆಡೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಪ್ರಾರಂಭವಾಗಿದ್ದು, ಪ್ರಥಮ ಇಂಗ್ಲೀಷ್ ಪರೀಕ್ಷೆ ನಡೆಯುತ್ತಿದೆ. ಜಿಲ್ಲೆಯಲ್ಲಿ ಒಟ್ಟು 93 ಪರೀಕ್ಷಾ ಕೇಂದ್ರಗಳಿವೆ. ಬೆಳಿಗ್ಗೆಯಿಂದ 5 ಕೇಂದ್ರಗಳಿಗೆ ಭೇಟಿ ನೀಡಲಾಗಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿಯೂ ಸಹ ಸಾಮಾಜಿಕ ಅಂತರ ಕಾಪಾಡಿಕೊಂಡು ಒಂದು ಚೂರು ಗೊಂದಲ ಆಗದ ರೀತಿಯಲ್ಲಿ ವಿದ್ಯಾರ್ಥಿಗಳನ್ನು ಒಳಗೆ ಕಳುಹಿಸಿ ಕೂರಿಸುವ ವ್ಯವಸ್ಥೆ ಮಾಡಲಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಗೂ ಸ್ಯಾನಿಟೈಸರ್ ಹಾಗೂ ಮಾಸ್ಕ್ ವಿತರಿಸಲಾಗಿದೆ. ವಿದ್ಯಾರ್ಥಿಗಳು ತುಂಬಾ ವಿಶ್ವಾಸ ಹಾಗೂ ಧೈರ್ಯದಿಂದ ಪರೀಕ್ಷೆ ಬರೆಯುತ್ತಿದ್ದಾರೆ ಎಂದು ಹೇಳಿದರು.

ಕಂಟೈನ್‍ಮೆಂಟ್ ಜೋನ್‍ನಲ್ಲಿರುವ ವಿದ್ಯಾರ್ಥಿಗಳಿಗೆ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಅವರಿಗಾಗಿ ಪರೀಕ್ಷೆ ಬರೆಯಲು ಪ್ರತ್ಯೇಕ ಕೊಠಡಿಯ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ಎನ್-95 ಮಾಸ್ಕ್ ನೀಡಲಾಗಿದ್ದು, ವಿದ್ಯಾರ್ಥಿಗಳಿಗೆ ಆರಾಮದಾಯಕವಾಗಿ ಪರೀಕ್ಷೆ ಬರೆಯಲು ಆತ್ಮವಿಶ್ವಾಸ ತುಂಬಲಾಗಿದೆ ಎಂದರು.

ವಿದ್ಯಾರ್ಥಿಗಳು ತಮ್ಮ ತಮ್ಮ ಪರೀಕ್ಷಾ ಕೇಂದ್ರಗಳನ್ನು ತಲುಪಲು ಯಾವುದೇ ರೀತಿಯ ತೊಂದರೆ ಆಗದ ರೀತಿಯಲ್ಲಿ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಸ್ಕೂಲ್ ಮತ್ತು ಖಾಸಗಿಯ 70 ಬಸ್‍ಗಳು ಹಾಗೂ ಸರ್ಕಾರದ ಕೆಎಸ್‍ಆರ್‍ಟಿಸಿಯ 16 ಬಸ್‍ಗಳು ಸೇರಿ ಒಟ್ಟು 86 ಬಸ್‍ಗಳ ಸೌಲಭ್ಯವನ್ನು ವ್ಯವಸ್ಥಿತವಾಗಿ ಒದಗಿಸಲಾಗಿದೆ. ಜೊತೆಗೆ ಪರೀಕ್ಷೆ ಮುಗಿದ ನಂತರವೂ ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ನೋಡಿಕೊಳ್ಳುತ್ತೇವೆ ಎಂದರು.

ಪರೀಕ್ಷಾ ಕೇಂದ್ರದದ ಸುತ್ತ ಕಟ್ಟುನಿಟ್ಟಿನ ವ್ಯವಸ್ಥೆ ಮಾಡಲಾಗಿದೆ. ಬಹಳಷ್ಟು ದೂರದಲ್ಲಿ ಬ್ಯಾರಿಕೇಡ್ ಹಾಕಲಾಗಿದೆ. ಇದರಿಂದಾಗಿ ಯಾವುದೇ ಪಾಲಕರು ಹಾಗೂ ಬೇರೆ ಯಾರೂ ಸಹ ಒಳಗೆ ಬರುವ ಮತ್ತು ಹೋಗುವಂತಹ ಗೊಂದಲ ಆಗಿಲ್ಲ. ಶಿಕ್ಷಣ ಸಚಿವರ ಆಶಯದಂತೆ ಜಿಲ್ಲೆಯಲ್ಲಿ ಯಾವುದೇ ರೀತಿಯಲ್ಲಿ ಅಹಿತಕರ ಘಟನೆ ಸಂಭವಿಸದಂತೆ ಬಹಳ ಯಶಸ್ವಿಯಾಗಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜಕೀಯ

ನ್ಯಾಯ ವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು: ಸಿಎಂ ಸಿದ್ದರಾಮಯ್ಯ

ನ್ಯಾಯ ವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು: ಸಿಎಂ ಸಿದ್ದರಾಮಯ್ಯ

ನ್ಯಾಯ ವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ತಿಳಿಸಿದರು.

[ccc_my_favorite_select_button post_id="120557"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಮದುವೆ ನಿಶ್ಚಯವಾಗಿದ್ದ ಜೋಡಿಯೊಂದರ ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆಂದು (photoshoot) ತೆರಳಿದ್ದ ಫೋಟೋಗ್ರಾಫರ್‌ಗಳ (Photographers) ಮೇಲೆ ಸ್ಥಳೀಯ ಕೆಲವರು ಹಲ್ಲೆ ನಡೆಸಿರುವ ಘಟನೆ ಸಕಲೇಶಪುರ ತಾಲೂಕಿನ ಬೆಟ್ಟದ ಭೈರವೇಶ್ವರ ದೇವಾಲಯದ ಆವರಣದಲ್ಲಿ ನಡೆದಿದೆ.

[ccc_my_favorite_select_button post_id="120523"]
ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ಶ್ರೀರಾಮನವಮಿ ಹಬ್ಬಕ್ಕೆಂದು ತಮ್ಮನ ಮನೆಗೆ ಬರುತ್ತಿದ್ದ ಮಹಿಳೆಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಹಮಾಮ್ ಗೇಟ್ ಬಳಿ ಗುರುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120487"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!