ಪ್ರತಿಮೆ ನಿರ್ಮಾಣದ ಮೂಲಕ ಬೆಂಗಳೂರು ನಿರ್ಮಾತೃ ಕೆಂಪೇಗೌಡರಿಗೆ ಸರ್ಕಾರದಿಂದ ಗೌರವ ಸಮರ್ಪಣೆ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ದೊಡ್ಡಬಳ್ಳಾಪುರ: ದೇವನಹಳ್ಳಿಯ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ನಿರ್ಮಾಣಕ್ಕೆ ಚಾಲನೆ ನೀಡುವ ಮೂಲಕ ಬೆಂಗಳೂರು ನಗರ ನಿರ್ಮಾತೃ ನಾಡಪ್ರಭು ಕೆಂಪೇಗೌಡರಿಗೆ ಸರ್ಕಾರ ಗೌರವ ಸಲ್ಲಿಸುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ 23 ಎಕರೆ ಪ್ರದೇಶದಲ್ಲಿ ರೂ.78 ಕೋಟಿ ವೆಚ್ಚದ 108 ಅಡಿ ಎತ್ತರದ ಕೆಂಪೇಗೌಡರ ಕಂಚಿನ‌ ಪ್ರತಿಮೆ ನಿರ್ಮಾಣಕ್ಕೆ ಶಿಲಾನ್ಯಾಸ ಹಾಗೂ ಸೆಂಟ್ರಲ್ ಪಾರ್ಕ್ ನಿರ್ಮಾಣ ಕಾಮಗಾರಿಗೆ ಇಂದು ಭೂಮಿ ಪೂಜೆ ನೆರವೇರಿಸಿ ಮತ್ತು ಕೆಂಪೇಗೌಡರ ಕಂಚಿನ ಪ್ರತಿಮೆ ಮಾದರಿ ಅನಾವರಣಗೊಳಿಸಿ ಅವರು ಮಾತನಾಡಿದರು.

ಚತುರ ಆಡಳಿತಗಾರರಾಗಿದ್ದ ಕೆಂಪೇಗೌಡರಿಗೆ ಬೆಂಗಳೂರನ್ನು ಯೋಜನಾ ಬದ್ಧವಾಗಿ ನಿರ್ಮಿಸಿದ ಕೀರ್ತಿ ಸಲ್ಲುತ್ತದೆ. ಶಾಶ್ವತ ನದಿ ಮೂಲಗಳಿಲ್ಲದ ನಗರದಲ್ಲಿ ನೀರಿನ ಸೆಲೆ ಹೆಚ್ಚಿಸಲು ಹಲವು ಕೆರೆಗಳನ್ನು ನಿರ್ಮಿಸಿದ ಖ್ಯಾತಿಯೂ ಅವರಿಗಿದೆ. ಕೆಂಪೇಗೌಡರ ಕೊಡುಗೆ ಸ್ಮರಿಸುತ್ತಲೇ ಬೆಂಗಳೂರು ಮಹಾನಗರದಲ್ಲಿ ಮೂಲಸೌಕರ್ಯವನ್ನು ಬಲಪಡಿಸುವುದರೊಂದಿಗೆ ಆರೋಗ್ಯ, ಘನತ್ಯಾಜ್ಯ ವಿಲೇವಾರಿ, ಇನ್ನಿತರ ಕ್ಷೇತ್ರಗಳಲ್ಲಿ ಹೆಚ್ಚಿನ ಪ್ರಗತಿ ಸಾಧಿಸಬೇಕು ಎಂದರು. ಕೆಂಪೇಗೌಡರ ಪ್ರತಿಮೆ ಸ್ಥಾಪನೆಗೆ ಶ್ರಮಿಸಿದ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಹೇಳಿದರು.

ಶ್ರೀ ಅದಿಚುಂಚನಗಿರಿ ಮಹಾಸಂಸ್ಥಾನ ಮಠದ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ‌ ಮಹಾಸ್ವಾಮಿ, ಶ್ರೀ ಸಿದ್ಧಗಂಗಾ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮಿ, ಶ್ರೀ ಸುತ್ತೂರು ಮಠದ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿ, ಶ್ರೀ ಗುರುಗುಂಡ ಬ್ರಹ್ಮೇಶ್ವರ ಮಠದ ಶ್ರೀ ನಂಜಾವದೂತ ಮಹಾಸ್ವಾಮಿ ಹಾಗೂ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿ ಅವರು ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿದ್ದರು.

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ಘನ ಉಪಸ್ಥಿತಿಯಲ್ಲಿ, ಉಪ ಮುಖ್ಯಮಂತ್ರಿ ಹಾಗೂ ನಾಡಪ್ರಭು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷ ಡಾ. ಸಿ.ಎನ್.ಅಶ್ವತ್ಥನಾರಾಯಣ, ಉಪ ಮುಖ್ಯಮಂತ್ರಿಗಳಾದ ಗೋವಿಂದ.ಎಂ.ಕಾರಜೋಳ, ಲಕ್ಷ್ಮಣ್ ಸಂಗಪ್ಪ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಆರ್.ಅಶೋಕ್, ಸಚಿವರುಗಳಾದ ಕೆ.ಗೋಪಾಲಯ್ಯ, ಬಿ.ಎ ಬಸವರಾಜು(ಬೈರತಿ), ಕೆ.ಸಿ.ನಾರಾಯಣಗೌಡ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್.ಆರ್.ವಿಶ್ವನಾಥ್, ಬಿಬಿಎಂಪಿ ಮಹಾಪೌರ ಎಂ.ಗೌತಮ್ ಕುಮಾರ್, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಜಯಮ್ಮ, ಸಂಸದರುಗಳಾದ ಬಿ.ಎನ್.ಬಚ್ಚೇಗೌಡ, ಡಿ.ಕೆ.ಸುರೇಶ್, ತೇಜಸ್ವಿ ಸೂರ್ಯ, ಶಾಸಕರುಗಳಾದ  ಡಿ.ಕೆ.ಶಿವಕುಮಾರ್, ಎಲ್.ಎನ್.ನಿಸರ್ಗ ನಾರಾಯಣಸ್ವಾಮಿ, ಟಿ.ವೆಂಕಟರಮಣಯ್ಯ, ಶರತ್‌ ಕುಮಾರ್ ಬಚ್ಚೇಗೌಡ, ವಿಧಾನ ಪರಿಷತ್ ಸದಸ್ಯರಾದ ಹೆಚ್.ಎಂ.ರೇವಣ್ಣ, ಎಸ್.ರವಿ, ಪುಟ್ಟಣ್ಣ, ಅ.ದೇವೇಗೌಡ, ಸಿನೆಮಾ ನಟರಾದ ಪುನೀತ್‌ ರಾಜ್‌ಕುಮಾರ್, ಜಗ್ಗೇಶ್‌, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ..ಎನ್.ರವೀಂದ್ರ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಎಂ.ನಾಗರಾಜ ಮತ್ತಿತ್ತರರು ಉಪಸ್ಥಿತರಿದ್ದರು.

ರಾಜಕೀಯ

ಕಸ ಗುಡಿಸುವ ಮಷಿನ್‌ ಬಾಡಿಗೆ 613 ಕೋಟಿ ಖರ್ಚು, ಬಾಡಿಗೆ ಬದಲು ಖರೀದಿಗೆ 1.3-3ಕೋಟಿ: ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ

ಕಸ ಗುಡಿಸುವ ಮಷಿನ್‌ ಬಾಡಿಗೆ 613 ಕೋಟಿ ಖರ್ಚು, ಬಾಡಿಗೆ ಬದಲು ಖರೀದಿಗೆ

ರಾಜ್ಯ ಸರ್ಕಾರದ ಕ್ಯಾಬಿನೆಟ್ ನಲ್ಲಿ 46 ಕಸ ಗುಡಿಸುವ ಯಂತ್ರಗಳನ್ನು 7 ವರ್ಷದವರೆಗೂ ಬಾಡಿಗೆ ಆಧಾರದ ಮೇಲೆ ಪಡೆಯಲು ಒಪ್ಪಿಗೆ ನೀಡಿದೆ.ಬಾಡಿಗೆ ನೆಪದಲ್ಲಿ ಕಮೀಷನ್ ಗೋಲ್ ಮಾಲ್ ಎಂದು ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="116356"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ: ದೊಡ್ಡಬಳ್ಳಾಪುರ ಬಾಲಕ ರಾಷ್ಟ್ರ ಮಟ್ಟಕ್ಕೆ ಆಯ್ಕೆ..!

ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ: ದೊಡ್ಡಬಳ್ಳಾಪುರ ಬಾಲಕ ರಾಷ್ಟ್ರ ಮಟ್ಟಕ್ಕೆ ಆಯ್ಕೆ..!

ರಾಜ್ಯಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ (Shuttle Badminton Tournament) ಅಂಡರ್ 17 ಬಾಲಕರ ವಿಭಾಗದಲ್ಲಿ ದೊಡ್ಡಬಳ್ಳಾಪುರದ ಬಾಲಕ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

[ccc_my_favorite_select_button post_id="116353"]
ಪತ್ನಿಗೆ ವಿಡಿಯೊ ಕಾಲ್ ಮಾಡಿ ಪತಿ ಆತ್ಮಹತ್ಯೆ

ಪತ್ನಿಗೆ ವಿಡಿಯೊ ಕಾಲ್ ಮಾಡಿ ಪತಿ ಆತ್ಮಹತ್ಯೆ

ಜೈಲು ಪಾಲಾಗಿದ್ದ ಯುವಕ ಜಾಮೀನಿನಲ್ಲಿ ಹೊರಗೆ ಬಂದ ಎರಡು ವಾರಗಳ ನಂತರ ಪತ್ನಿಗೆ ಲೈವ್ ವಿಡಿಯೊ ಮಾಡಿ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ (Suicide) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ

[ccc_my_favorite_select_button post_id="116294"]
ದೊಡ್ಡಬಳ್ಳಾಪುರ; ಭೀಕರ ಅಪಘಾತ.. ಎಂಬಿಎ ವಿದ್ಯಾರ್ಥಿ ದುರ್ಮರಣ

ದೊಡ್ಡಬಳ್ಳಾಪುರ; ಭೀಕರ ಅಪಘಾತ.. ಎಂಬಿಎ ವಿದ್ಯಾರ್ಥಿ ದುರ್ಮರಣ

ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಫಘಾತಕ್ಕೆ (Accident) ಒಳಗಾಗಿ ದೊಡ್ಡಬಳ್ಳಾಪುರ ನಗರದ ನಿವಾಸಿ, ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ ಘಟನೆ ನಾರನಹಳ್ಳಿ ಬಳಿ ಸಂಭವಿಸಿದೆ.

[ccc_my_favorite_select_button post_id="116301"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!