ರಾಜ್ಯಗಳ ಸಂವಿಧಾನ ಬದ್ದ ಅಧಿಕಾರವನ್ನು ಕೇಂದ್ರ ಸರ್ಕಾರ ಕಸಿದುಕೊಳ್ಳುತ್ತಿದೆ

ದೊಡ್ಡಬಳ್ಳಾಪುರ: ಕೇಂದ್ರ ಸರ್ಕಾರ ಎಲ್ಲಾ ಶಾಸನಗಳನ್ನು ಸಹ ಸುಗ್ರೀವಾಜ್ಞೆ ಮೂಲಕ ತರಲು ಮುಂದಾಗಿದೆ. ಅಲ್ಲದೆ ರಾಜ್ಯಗಳಿಗೆ ಸಂವಿಧಾನ ಬದ್ದವಾಗಿ ಇರುವ ಅಧಿಕಾರವನ್ನು ಕಸಿದುಕೊಳ್ಳುವ ಕೆಲಸವನ್ನು ಮಾಡುತ್ತಿದೆ. ಭೂ ಸೂಧಾರಣ ಮಸೂದೆ ತಿದ್ದುಪಡಿ, ಎಪಿಎಂಸಿ ಕಾಯ್ದೆಯನ್ನು ರಾಜ್ಯ ಸರ್ಕಾರದ ಮೇಲೆ ಒತ್ತಡ ತರುವ ಮೂಲಕ ಜಾರಿಗೊಳಿಸಲಾಗುತ್ತಿದೆ ಎಂದು ಕೆಪಿಸಿಸಿ ಸದಸ್ಯ ಮಂಜುನಾಥ ಎಂ.ಅದ್ದೆ  ದೂರಿದರು. 

ಜು.2 ರಂದು ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಪದಗ್ರಹಣ ಕಾರ್ಯಕ್ರಮ ಸಿದ್ದೆಗಳ ಅಂಗವಾಗಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರ ಶಾಸನ ಸಭೆಯನ್ನೇ ಮೂಲೆಗುಂಪು ಮಾಡಲು ಹೊರಟಿದೆ. ಸಧನದಲ್ಲಿ ಚರ್ಚಿಸಿ ಜಾರಿಗೆ ತರಬೇಕಾದಂತಹ ಕಾಯ್ದೆಗಳನ್ನು ಸಹ  ಇಂದು ಸುಗ್ರೀವಾಜ್ಞೆಯ ಮೂಲಕ ಜಾರಿಮಾಡುತ್ತಿರುವುದು ಪ್ರಜಾಪ್ರಭುತ್ವ ವಿರೋಧಿ ನೀತಿಯಾಗಿದೆ ಎಂದರು.   

ಕೆಪಿಸಿಸಿ ಅಧ್ಯಕ್ಷರು, ಕಾರ್ಯಾಧ್ಯಕ್ಷರು ಸೇರಿದಂತೆ ಎಲ್ಲಾ ಪಧಾದಿಕಾರಿಗಳು ಸಹ ಸಂವಿಧಾನ ಪೀಠಿಕೆಯನ್ನು ಓದಿದ ನಂತರ ಪದಗ್ರಹಣ ವಚನ ಸ್ವೀಕರಿಸಲಿದ್ದಾರೆ. ಇದಲ್ಲದೆ ಕಾರ್ಯಕರ್ತರು ಸಹ ಪದಗ್ರಹಣ ವಚನ ಸ್ವೀಕರಿಸಲಿದ್ದಾರೆ ಎಂದರು. 

ಡಿ.ಕೆ.ಶಿವಕುಮಾರ್ ಅವರು ಡೈನಮಿಕ್ ನಾಯಕ ಎಂದು ಹೆಸರಿಗಷ್ಟೇ ಕರೆಸಿಕೊಳ್ಳದೆ ತಮ್ಮ ಕೆಲಸದಲ್ಲೂ ಮಾಡಿ ತೋರಿಸುವಂತಹವರು. ಹೀಗಾಗಿಯೇ ಇಡೀ ದೇಶದಲ್ಲಿ ಇದೇ ಪ್ರಥಮ ಬಾರಿಗೆ ಕೆಪಿಸಿಸಿ ಅಧ್ಯಕ್ಷರ ಪದಗ್ರಹಣವನ್ನು ಡಿಜಿಟಲ್ ತಂತ್ರಜ್ಞಾನ ಮೂಲಕ ಕಾರ್ಯಕರ್ತರು ಇರುವಲ್ಲಿಯೇ ಕುಳಿತು ವೀಕ್ಷಣೆ ಮಾಡುವ ಹಾಗೂ ಅಧ್ಯಕ್ಷರೊಂದಿಗೆ ನೇರವಾಗಿ ಮಾತನಾಡುವ ಸವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಅಧಿಕಾರ ವಿಕೇಂದ್ರಿಕರಣ ಪರಿಕಲ್ಪನೆ ಮೂಲಕ ಪ್ರಜಾಪ್ರಭುತ್ವದಲ್ಲಿ ಅಧಿಕಾರ ಅಂತಿಮವಾಗಿ ಪ್ರತಿಯೊಬ್ಬರಿಗು ದೊರೆಯುವಂತೆ ಆಗಬೇಕಿದೆ. ಈ ಪರಿಕಲ್ಪನೆ ಆಧಾರದ ಮೇಲೆಯೇ ಎಲ್ಲರನ್ನು ಒಂದೆಡೆ ಸೇರಿಸಿ ಪದಗ್ರಹಣ ಸಮಾರಂಭ ನಡೆಸದೆ ರಾಜ್ಯದ 7,800 ಸ್ಥಳಗಳಲ್ಲಿ ನೇರಪ್ರಸಾರ ನಡೆಯಲಿದೆ. ಪದಗ್ರಹಣ ಸಮಾರಂಭದ ಪೂರ್ವ ಸಿದ್ದತೆಯ ಕೆಲಸಗಳು ಅಂತಿಮಗೊಂಡಿವೆ ಎಂದರು. 

ಕೆಪಿಸಿಸಿ ಸದಸ್ಯ ಜಿ.ಲಕ್ಷ್ಮೀಪತಿ ಮಾತನಾಡಿ, ಜು.2 ರಂದು ನಡೆಯಲಿರುವ ಪದಗ್ರಹಣ ಸಮಾರಂಭವನ್ನು ತಾಲ್ಲೂಕಿನ 24 ಗ್ರಾಮ ಪಂಚಾಯಿತಿ ಕೇಂದ್ರಗಳು ಹಾಗೂ ನಗರಸಭೆ ವ್ಯಾಪ್ತಿಯ 6 ಸ್ಥಳಗಳಲ್ಲಿ ಎಲ್ಇಡಿ ಪರದೆಗಳ ಮೂಲಕ ನೇರ ಪ್ರಸಾರವಾಗಲಿದೆ. ಕೊರೊನಾ ವೈರಸ್ ಸೋಂಕು ರಹಡುವುದನ್ನು ತಪ್ಪಿಸುವ ಸಲುವಾಗಿ ಅಂತರ ಕಾಪಾಡುವುದು ಸೇರಿದಂತೆ ಕಾರ್ಯಕ್ರಮದಲ್ಲಿ ಅಗತ್ಯ ಇರುವ ಎಲ್ಲಾ ಮುನ್ನೆಚ್ಚರಿಕೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಶಾಸಕ ಟಿ.ವೆಂಕಟರಮಣಯ್ಯ, ಕೆಪಿಸಿಸಿ ಸದಸ್ಯ ಗೋವಿಂದಪ್ಪ,ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಡಿ.ಸಿ.ಶಶಿಧರ್,ಕಾಂಗ್ರೆಸ್ ಗ್ರಾಮಾಂತರ ಬ್ಲಾಕ್ ಸಮಿತಿ ಅಧ್ಯಕ್ಷ ಎಂ.ಬೈರೇಗೌಡ, ಕಸಬಾ ಬ್ಲಾಕ್ ಅಧ್ಯಕ್ಷ ವೆಂಕಟೇಶ್,ನಗರ ಪ್ರಭಾರ ಅಧ್ಯಕ್ಷ ಅಂಜನಮೂರ್ತಿ,ಎಸ್ಸಿ ಘಟಕದ ಅಧ್ಯಕ್ಷ ಬಿ.ಮುನಿರಾಜು,ಎಸ್.ಟಿ ಘಟಕದ ಅಧ್ಯಕ್ಷ ಭೀಮಣ್ಣ ಇದ್ದರು.

ರಾಜಕೀಯ

ಮೇ 8ಕ್ಕೆ ದೊಡ್ಡಬಳ್ಳಾಪುರದಲ್ಲಿ ‘JDS 25’ ಸಂಭ್ರಮ: ಭಿನ್ನಮತ ಶಮನ

ಮೇ 8ಕ್ಕೆ ದೊಡ್ಡಬಳ್ಳಾಪುರದಲ್ಲಿ ‘JDS 25’ ಸಂಭ್ರಮ: ಭಿನ್ನಮತ ಶಮನ

ಜೆಡಿಎಸ್‌ನ (JDS) ಹಿರಿಯ ಮುಖಂಡ ಹುಸ್ಕೂರು ಆನಂದ್ ನೇತೃತ್ವದಲ್ಲಿ ಜೆಡಿಎಸ್ ಮುಖಂಡರು ನಿಖಿಲ್ ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದು, ಭಿನಮತ ಶಮನವಾಗಿರುವ ಮಾಹಿತಿ ತಿಳಿದು ಬಂದಿದೆ.

[ccc_my_favorite_select_button post_id="121822"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]