ಡಾ.ಬಿ.ಆರ್.ಅಂಬೇಡ್ಕರ್ ನಿವಾಸದ ಮೇಲೆ ದಾಳಿಗೆ ದೊಡ್ಡಬಳ್ಳಾಪುರದಲ್ಲಿ ಖಂಡನೆ

ದೊಡ್ಡಬಳ್ಳಾಪುರ: ಮುಂಬೈನ ದಾದರ್ ಹಿಂದೂ ಕಾಲೋನಿಯಲ್ಲಿರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ನಿವಾಸದ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿರುವ ಘಟನೆ ಖಂಡಿಸಿ, ಹಾಗೂ ತಪ್ಪಿತಸ್ಥರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ, ಪ್ರಜಾ ವಿಮೋಚನಾ ಚಳವಳಿ (ಸ್ವಾಭಿಮಾನ) ಸಂಘಟನೆ ವತಿಯಿಂದ ಉಪವಿಭಾಗಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಪಿವಿಸಿ (ಸ್ವಾ) ರಾಜ್ಯಾಧ್ಯಕ್ಷ ಮುನಿಆಂಜಿನಪ್ಪ,ಜಿಲ್ಲಾಧ್ಯಕ್ಷ ಹನಮಯ್ಯ ಗೂಳ್ಯ,ಮುಂಬೈನ ದಾದರ್‌ನಲ್ಲಿರುವ ದಿ.ಡಾ.ಬಿ.ಆರ್.ಅಂಬೇಡ್ಕರ್ ಅವರ ಐತಿಹಾಸಿಕ ರಾಜ್ ಗೃಹ ನಿವಾಸಕ್ಕೆ ನುಗ್ಗಿರುವ ದುಷ್ಕರ್ಮಿಗಳು ಹಲವು ವಸ್ತುಗಳನ್ನು ನಾಶಗೊಳಿಸಿzರೆ. ಡಾ. ಅಂಬೇಡ್ಕರ್ ಅವರ ಮೊಮ್ಮಗ ಸುಜತ್ ಅವರು ಹೇಳಿರುವಂತೆ ಅಂಬೇಡ್ಕರ್ ಕುಟುಂಬಸ್ಥರು ಮನೆಯಲ್ಲಿದ್ದ ಸಂದರ್ಭದ ಕಿಡಿಗೇಡಿಗಳು ಎರಡು ಕೊಠಡಿಗಳತ್ತ ಕಲ್ಲು ತೂರಿ,ಒಂದು  ಕೊಠಡಿ ಮ್ಯೂಸಿಯಂ ಹಾಗೂ ಫೋಟೋ ಗ್ಯಾಲರಿಗೆ ಹಾನಿ ಮಾಡಿದ್ದಾರೆ.ಈ ಘಟನೆಯಿಂದ ಸಮಾಜ ಸ್ವಾಸ್ಥ್ಯ ಹಾಳಾಗುತ್ತಿದೆ.ಕೂಡಲೇ ಸರ್ಕಾರ ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು.  ದೇಶದಲ್ಲಿನ ಅಂಬೇಡ್ಕರ್ ಅವರ ಸ್ಮಾರಕಗಳು ಸೇರಿದಂತೆ ಕ್ಷೇತ್ರಗಳನ್ನು ಸಂರಕ್ಷಿಸುವ ಯೋಜನೆ ರೂಪಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಪಿವಿಸಿ (ಸ್ವಾ) ಜಿಲ್ಲಾ ನಗರಾಧ್ಯಕ್ಷ ಆಯೂಬ್ ಖಾನ್,ಕಾರ್ಯದರ್ಶಿ ಕಾರಹಳ್ಳಿ ಕೆಂಪಣ್ಣ,ತಾಲೂಕು ಅಧ್ಯಕ್ಷ ಪುನೀತ್,ನಗರಾಧ್ಯಕ್ಷ ಶಿವಶಂಕರ್,ಮಹಿಳಾ ಘಟಕದ ಅಧ್ಯಕ್ಷೆ ಹಮಾಮ್ ರತ್ನಮ್ಮ, ಮುಖಂಡರಾದ ವಡ್ಡಹಳ್ಳಿ ರಾಜೇಖರ್,ಮುನಿಕೃಷ್ಣಪ್ಪ, ರಾಮು, ಶ್ರೀನಿವಾಸಮೂರ್ತಿ, ಅರ್ಜುನ್ ಮತ್ತಿತರರು ಭಾಗವಹಿಸಿದ್ದರು.

ರಾಜಕೀಯ

ರಾಜ್ಯ ಸರ್ಕಾರದ ವಿರುದ್ಧ ದೊಡ್ಡಬಳ್ಳಾಪುರದಲ್ಲಿ ಛಲವಾದಿ ನಾರಾಯಣಸ್ವಾಮಿ ಟೀಕೆ

ರಾಜ್ಯ ಸರ್ಕಾರದ ವಿರುದ್ಧ ದೊಡ್ಡಬಳ್ಳಾಪುರದಲ್ಲಿ ಛಲವಾದಿ ನಾರಾಯಣಸ್ವಾಮಿ ಟೀಕೆ

ಕೇಂದ್ರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ 2025-26ನೇ ಸಾಲಿನ ಬಜೆಟ್‌ನಲ್ಲಿ ಯಾರನ್ನೂ ಓಲೈಕೆ ಮಾಡದೇ ಎಲ್ಲಾ ವರ್ಗದವರ ಎಲ್ಲಾ ಕ್ಷೇತ್ರಗಳ ಅಭಿವೃದ್ಧಿಗಾಗಿ ಬಜೆಟ್ ಮಂಡನೆ ಮಾಡಲಾಗಿದೆ. ಕಾಂಗ್ರೆಸ್ ಬಜೆಟ್ ಮಾಡಿದ್ದರೆ ತಾರತಮ್ಯ ಹಾಗೂ

[ccc_my_favorite_select_button post_id="119201"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB: ಮತ್ತೆ ಕಪ್ ನಮ್ದು

RCB: ಮತ್ತೆ ಕಪ್ ನಮ್ದು

4ನೇ ಆವೃತ್ತಿಯ ಮಹಿಳಾ ಪ್ರೀಮಿ ಯರ್ ಲೀಗ್ (ಡಬ್ಲ್ಯೂಪಿ ಎಲ್) ಟೂರ್ನಿಯಲ್ಲಿ ಸ್ಮೃತಿ ಮಂಧಾನಾ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ಸಿಎಂ ಸಿದ್ದರಾಮಯ್ಯ (Cmsiddaramaiah), ಡಿಸಿಎಂ

[ccc_my_favorite_select_button post_id="119174"]
ದೊಡ್ಡಬಳ್ಳಾಪುರ: ಹುಲ್ಲಿನ ಬಣವೆಗೆ ಬೆಂಕಿ..  ರೈತರಿಗೆ ಅಪಾರ ನಷ್ಟ

ದೊಡ್ಡಬಳ್ಳಾಪುರ: ಹುಲ್ಲಿನ ಬಣವೆಗೆ ಬೆಂಕಿ.. ರೈತರಿಗೆ ಅಪಾರ ನಷ್ಟ

ಸಹೋದರರು ಒಂದೇ ಕಡೆ ಹಾಕಿದ್ದ ಬಣವೆಗೆ (Haystack) ಆಕಸ್ಮಿಕವಾಗಿ ಬೆಂಕಿ (Fire) ತಗುಲಿ, ಹುಲ್ಲು ಸಂಪೂರ್ಣವಾಗಿ ಭಸ್ಮವಾಗಿರುವ ಘಟನೆ ತಾಲೂಕಿನ ***** ಗ್ರಾಮದಲ್ಲಿ ಗುರುವಾರ ರಾತ್ರಿ ಸಂಭವಿಸಿದೆ.

[ccc_my_favorite_select_button post_id="119190"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!