ಆಡಳಿತ ನ್ಯಾಯಾಧೀಕರಣ ಯೋಜನೆಯಡಿ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

ದೊಡ್ಡಬಳ್ಳಾಪುರ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2020-21ನೇ ಸಾಲಿಗೆ ಕಾನೂನು ಪದವೀಧರರಿಗೆ ಆಡಳಿತ ನ್ಯಾಯಾಧೀಕರಣ ಯೋಜನೆಯಡಿ ತರಬೇತಿಯೊಂದಿಗೆ ಶಿಷ್ಯವೇತನ ನೀಡುವ ಸಲುವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ, ಮತ್ತು ನೆಲಮಂಗಲ ತಾಲ್ಲೂಕುಗಳ ವ್ಯಾಪ್ತಿಗೆ ಒಳಪಡುವ ಅರ್ಹ ಅಭ್ಯರ್ಥಿಗಳು ಮಾತ್ರ ಸಮಾಜ ಕಲ್ಯಾಣ ಇಲಾಖೆ ವೆಬ್‌ಸೈಟ್: www.sw.kar.nic.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು 2020ರ ನವೆಂಬರ್ 11 ಕೊನೆಯ ದಿನವಾಗಿದೆ.

ಅಭ್ಯರ್ಥಿಗಳು 40 ವರ್ಷ ವಯೋಮಿತಿಯೊಳಗಿರಬೇಕು. ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕಕ್ಕೆ ಎರಡು ವರ್ಷದ ಒಳಗೆ ಕಾನೂನು ಪದವಿಯನ್ನು ಪಡೆದಿರಬೇಕು. ಕಾನೂನು ಪದವೀಧರರ ಕುಟುಂಬದ ವಾರ್ಷಿಕ ಆದಾಯ ರೂ. 2 ಲಕ್ಷ ಮೀರಿರಬಾರದು. 

ತರಬೇತಿ ಅವಧಿ 2 ವರ್ಷಗಳಾಗಿದ್ದು, ಮಾಸಿಕ ರೂ.10,000/-ಗಳ ಶಿಷ್ಯ ವೇತನ ನೀಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳನ್ನು ಜಿಲ್ಲಾ ಪಬ್ಲಿಕ್ ಪ್ರಾಸಿಕ್ಯೂಟರ್ ಅಥವಾ 20 ವರ್ಷಕ್ಕಿಂತ ಹೆಚ್ಚಿನ ಅನುಭವ ಹೊಂದಿರುವ ಹಿರಿಯ ವಕೀಲರಲ್ಲಿ ತರಬೇತಿ ನಿಯೋಜಿಸಲಾಗುವುದು.

ಆಯ್ಕೆಯಾದ ಅಭ್ಯರ್ಥಿಗಳು ಯಾವುದೇ ಕಾರಣಕ್ಕೂ  ತರಬೇತಿಯನ್ನು ಪೂರ್ಣಗೊಳಿಸದೆ ಮಧ್ಯಂತರದಲ್ಲಿ ಬಿಟ್ಟು ಹೋಗಬಾರದು ಹಾಗೆ ಬಿಟ್ಟು ಹೊದ ಪಕ್ಷದಲ್ಲಿ ತರಬೇತಿ ಅವಧಿಯಲ್ಲಿ ಪಾವತಿಸಿದ ಶಿಷ್ಯವೇತನ ವಾಪಸ್ಸು ಪಡೆಯಲಾಗುವುದು ಹಾಗೂ ಈ ನಿಯಮ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಉದ್ದಿಮೆಯಲ್ಲಿ ನೇಮಕ ಹೊಂದುವವರಿಗೆ ಅನ್ವಯಿಸುವುದಿಲ್ಲ. ಸುಳ್ಳು ದಾಖಲೆ ಮಾಹಿತಿಯನ್ನು ಒದಗಿಸಿ ಆಯ್ಕೆಯಾದ ಅಭ್ಯರ್ಥಿಗಳನ್ನು ಕಾನೂನಿನ ಅನ್ವಯ ಶಿಕ್ಷೆಗೆ ಗುರಿ ಪಡಿಸಲಾಗುವುದು ಹಾಗೂ ತರಬೇತಿ ಅವಧಿಯಲ್ಲಿ ಪಾವತಿಸಿದ ಶಿಷ್ಯವೇತನ ಶೇ.10 ರಂತೆ ಬಡ್ಡಿಯೊಂದಿಗೆ ವಸೂಲಿ ಮಾಡಲಾಗುವುದು.

ಅರ್ಜಿಯಲ್ಲಿನ ಮಾಹಿತಿಯು ಅಪೂರ್ಣವಾಗಿದ್ದಲ್ಲಿ ಅಂತಹ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಆಯ್ಕೆ ಸಮಿತಿಯ ತೀರ್ಮಾನವೇ ಅಂತಿಮ ತೀರ್ಮಾನವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ: 217, 2ನೇ ಮಹಡಿ,  ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು-562110, ದೂ.ಸಂ.: 080-29787447 ಅಥವಾ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ದೇವನಹಳ್ಳಿ ದೂ.ಸಂ.: 27681784, ದೊಡ್ಡಬಳ್ಳಾಪುರ ದೂ.ಸಂ.: 27623681, ಹೊಸಕೋಟೆ ದೂ.ಸಂ.: 27931528 ಮತ್ತು ನೆಲಮಂಗಲ ದೂ.ಸಂ.: 27723172, ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ಅಡುಗೆ ಅನಿಲ ಕೊರತೆ; ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ: ಡಿಸಿಎಂ ಡಿ.ಕೆ. ಶಿವಕುಮಾರ್

ಅಡುಗೆ ಅನಿಲ ಕೊರತೆ; ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ: ಡಿಸಿಎಂ

"ಬೇರೆ ವಿಚಾರಗಳಲ್ಲಿ ಮಾತನಾಡುವ ಸಂಸದರು ಅಡುಗೆ ಅನಿಲ ಕೊರತೆ ವಿಚಾರವಾಗಿ ಸಂಸತ್ತಿನಲ್ಲಿ ಮಾತನಾಡಬೇಕು. ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="120157"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ ಪ್ರಮಾದ

ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ

ಮುಂದೆ ಸಾಗುತ್ತಿದ್ದ ಬೈಕ್ ಸವಾರರ ಜೀವ ಉಳಿಸಲು ಮುಂದಾದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಬೆಸ್ಕಾಂ ಕೇಂದ್ರಕ್ಕೆ ಡಿಕ್ಕಿ ಹೊಡೆದಿದ್ದು (Accident) ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ದೊಡ್ಡ ಪ್ರಮಾಣದ ಅನಾಹುತವೇ ತಪ್ಪಿದೆ.

[ccc_my_favorite_select_button post_id="120119"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!