ಸೆ.23 ರೊಳಗೆ ವಿಧಾನಸಭಾ ಅಧಿವೇಶನ / ಸಭಾಧ್ಯಕ್ಷರಿಂದ ಸದನದಲ್ಲಿನ ವ್ಯವಸ್ಥೆಗಳ ಪರಿಶೀಲನೆ

ಬೆಂಗಳೂರು: ಕಳೆದ ಮಾರ್ಚ್‍ನಲ್ಲಿ ರಾಜ್ಯ ವಿಧಾನ ಸಭಾ ಅಧಿವೇಶನವು ನಡೆದಿದ್ದು, ಸಂವಿಧಾನಬದ್ದವಾಗಿ ಆರು ತಿಂಗಳ ಒಳಗೆ ಅಂದರೆ ಸೆಪ್ಟೆಂಬರ್ 23 ರೊಳಗೆ, ಮತ್ತೊಮ್ಮೆ ಸಮಾವೇಶಗೊಳ್ಳಬೇಕಿರುವ ಹಿನ್ನೆಲೆಯಲ್ಲಿ ಸದನದಲ್ಲಿ ರಾಜ್ಯ ಸಚಿವ ಸಂಪುಟದ ಸದಸ್ಯರು ಮತ್ತು ಸದನದ ಸದಸ್ಯರು, ಸದನದಲ್ಲಿ ಹಾಜರಿರುವ ಅಧಿಕಾರಿಗಳು ಹಾಗೂ ಮಾಧ್ಯಮದವರ ಆರೋಗ್ಯಕ್ಕೆ ಕೋವಿಡ್-19 ರ ಸೋಂಕು ತಗುಲದಂತೆ ಕ್ರಮ ವಹಿಸುವುದು ಹೇಗೆ ? ಎಂಬುದರ ಕುರಿತು ರಾಜ್ಯ ವಿಧಾನ ಸಭೆಯ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಇಲ್ಲಿ ಇಂದು ಸದನದಲ್ಲಿನ ವ್ಯವಸ್ಥೆಗಳನ್ನು ಖುದ್ದು ಪರಿಶೀಲಿಸಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು.  

ಕೋವಿಡ್-19 ರ ಉಪಟಳ ಎಲ್ಲೆಡೆ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ವಿಧಾನ ಸಭಾ ಅಧಿವೇಶನವನ್ನು ನಡೆಸುವುದು ಹೇಗೆ ? ಎಂಬ ಬಗ್ಗೆ  ವಿವಿಧ ಸ್ತರಗಳಲ್ಲಿ ವಿಸ್ತøತ ಚರ್ಚೆಗಳು ನಡೆಯುತ್ತಿವೆ.  ರಾಜ್ಯದ ರಾಜಧಾನಿಯ ವಿಧಾನ ಸೌಧ ಹೊರತುಪಡಿಸಿ ಬೇರೆಲ್ಲಾದರೂ ಅಧಿವೇಶನ ನಡೆಸಲು ಸೂಕ್ತ ಸ್ಥಳ ಇದೆಯೇ ? ಎಂಬ ಬಗ್ಗೆಯೂ  ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.  

ವಿಧಾನ ಸೌಧದ ಮೊದಲನೇಯ ಮಹಡಿಯಲ್ಲಿರುವ ವಿಧಾನ ಸಭಾ ಸಭಾಂಗಣದಲ್ಲಿ ಪ್ರಸ್ತುತ ಇರುವ ಆಸನ ವ್ಯವಸ್ಥೆಗಳ ನಡುವೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಗಾಜಿನ ಕವಚಗಳನ್ನು ಅಳವಡಿಸಿದರೆ ಹೇಗೆ ? ಸದನಕ್ಕೆ ಆಗಮಿಸುವ  ಮುಖ್ಯಮಂತ್ರಿಗಳೂ ಒಳಗೊಂಡಂತೆ ಅವರ ಸಂಪುಟದ ಎಲ್ಲಾ ಸದಸ್ಯರು, ಪ್ರತಿಪಕ್ಷ ನಾಯಕರೂ ಒಳಗೊಂಡಂತೆ ಸದನದ ಎಲ್ಲಾ ಸದಸ್ಯರೂ ಅಧಿವೇಶನವು ನಡೆಯುವ ದಿನಗಳಂದು ಕಡ್ಡಾಯವಾಗಿ ಮುಖಗವಸು ಒದಗಿಸುವುದು ಹಾಗೂ ಮುಖ ರಕ್ಷಕಗಳನ್ನು ಧರಿಸಿಬರಬೇಕೆಂದು ವಿನಂತಿಸುವುದರ ಬಗ್ಗೆ ಅಧಿಕಾರಿಗಳು ತಮಗೆ ಸಲಹೆ ನೀಡಿದ್ದಾರೆ ಎಂದು ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಪರಿಶೀಲನೆ ನಂತರ ಮಾಧ್ಯಮದವರಿಗೆ ಮಾಹಿತಿ ನೀಡಿದರು.

ಲೋಕಸಭೆ ಮತ್ತು ರಾಜ್ಯ ಸಭೆ ಹಾಗೂ ಇತರೆ ರಾಜ್ಯಗಳಲ್ಲಿನ ವಿಧಾನ ಸಭೆ ಮತ್ತು ವಿಧಾನ ಪರಿಷತ್ತು ಸಮಾವೇಶಗೊಳ್ಳಲು ಹೇಗೆ ಸಿದ್ದತೆಗಳನ್ನು ನಡೆಸುತ್ತಿವೆ ? ಎಂಬುದರ ಬಗ್ಗೆಯೂ ಮಾಹಿತಿ ಕಲೆ ಹಾಕಲು ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಅವರು ಹೇಳಿದರು.  

ಮುಂದಿನ ವಾರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರು ಹಾಗೂ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಇನ್ನಿತರ ಹಿರಿಯ ಅಧಿಕಾರಿಗಳ ಜೊತೆಗೆ ಸಮಾಲೋಚನೆ ನಡೆಸಿ ಸ್ಥಳ ನಿಷ್ಕರ್ಷೆ ಮಾಡುವುದಾಗಿಯೂ ಸಭಾಧ್ಯಕ್ಷರು ತಿಳಿಸಿದರು. 

ರಾಜಕೀಯ

ಸೋನಿಯಾ ಗಾಂಧಿಗೆ ಪತ್ರ ಬರೆದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ..!

ಸೋನಿಯಾ ಗಾಂಧಿಗೆ ಪತ್ರ ಬರೆದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ..!

ಸಂಸತ್ ಅಧಿವೇಶನದಲ್ಲಿ ವಿಪಕ್ಷಗಳಿಂದ, ಅದರಲ್ಲಿಯೂ ಕಾಂಗ್ರೆಸ್ ಸದಸ್ಯರಿಂದ ಕಲಾಪಕ್ಕೆ ತೀವ್ರ ಅಡ್ಡಿ ಉಂಟಾಗುತ್ತಿರುವುದು ಪ್ರಧಾನಿ ಮೋದಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಈ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ರಾಜ್ಯಸಭೆ ಸದಸ್ಯರೂ ಆಗಿರುವ ಮಾಜಿ ಪ್ರಧಾನಿ

[ccc_my_favorite_select_button post_id="120266"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!