ಕರೊನಾ ಹಿನ್ನೆಲೆ ದೊಡ್ಡಬಳ್ಳಾಪುರದಲ್ಲಿ ಸರಳ ಸ್ವಾತಂತ್ರ್ಯ ದಿನಾಚರಣೆ – ಶಾಸಕ ಟಿ.ವೆಂಕಟರಮಣಯ್ಯ

ದೊಡ್ಡಬಳ್ಳಾಪುರ: ಕೊವಿಡ್-19 ಸೋಂಕು ಹರಡುವ ಹಿನ್ನಲೆಯಲ್ಲಿ ಸರ್ಕಾರದ ಮಾರ್ಗಸೂಚಿಯಂತೆ 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಭಗತ್‌ಸಿಂಗ್ ಕ್ರೀಡಾಂಗಣದಲ್ಲಿ ಸರಳವಾಗಿ ಆಚರಿಸಲಾಗುತ್ತಿದ್ದು,ಅಧಿಕಾರಿಗಳು ಸರ್ಕಾರದ ಸೂಚನೆಯನ್ನು ಪಾಲಿಸುವ ಮೂಲಕ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಬೇಕಿದೆ ಎಂದು ಶಾಸಕ ಟಿ.ವೆಂಕಟರಮಣಯ್ಯ ಹೇಳಿದರು.

ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ವಿವಿಧ ಇಲಾಖೆಯ ಅಧಿಕಾರಿಗೊಂದಿಗೆ ನಡೆದ ಸ್ವಾತಂತ್ರ್ಯ ದಿನಾಚರಣೆಯ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಸ್ವಾತಂತ್ರ್ಯ ದಿನಾಚರಣೆಯನ್ನು ಸಡಗರದಿಂದ ಆಚರಿಸಲಾಗುತ್ತಿತ್ತು.ಆದರೆ ಈ ಬಾರಿ ಕೊರೊನಾ ಪರಿಣಾಮದಿಂದಾಗಿ ಸೀಮಿತ ಮಟ್ಟದಲ್ಲಿ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ. ಶಾಲಾ ಮಕ್ಕಳು ಸಮಾರಂಭದಲ್ಲಿ ಭಾಗವಹಿಸುತ್ತಿಲ್ಲ.

ಅಧಿಕಾರಿಗಳು ಶಿಷ್ಟಾಚಾರದಂತೆ ಸಮಾರಂಭಕ್ಕೆ ಆಗಮಿಸಿ,ತಮ್ಮ ಹೊಣೆಗಾರಿಕೆ ನಿರ್ವಹಿಸಬೇಕು. ಮುಖ್ಯವಾಗಿ ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ ನಗರಸಭೆಗೆ ಹೆಚ್ಚಿನ ಜವಾಬ್ದಾರಿಯಿದ್ದು,ಸಮಾರಂಭದಲ್ಲಿ ಪ್ರತಿಯೊಬ್ಬರು ಮಾಸ್ಕ್ ಧರಿಸಿ,ಅಂತರ ಕಾಪಾಡಿಕೊಂಡು ಭಾಗವಹಿಸಬೇಕು.ವೇದಿಕೆ ನಿರ್ಮಾಣ ಸೇರಿದಂತೆ ಎಂದಿನಂತೆ ಕಾರ್ಯಕ್ರಮದ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಸೂಚಿಸಿದರು.

ತಾಲೂಕಿನಲ್ಲಿ ನಿತ್ಯ ಕೊವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ನಮ್ಮೆಲ್ಲರ ಹೊಣೆಗಾರಿಕೆ ಹೆಚ್ಚಿದೆ. ನಿತ್ಯವೂ ಕೊವಿಡ್-19 ಬುಲೆಟನ್ ಬಿಡುಗಡೆ ಮಾಡಲಾಗುತ್ತಿದೆ ಇಂದು ಸಹ ಕೊವಿಡ್-19 ಒಬ್ಬರು ಮೃತಪಟ್ಟು ಸಾವಿನ ಸಂಖ್ಯೆ 17ಕ್ಕೆ ಏರಿದೆ.ತಾಲೂಕಿನಲ್ಲಿ ಎಲ್ಲರಿಗೂ ಈ ಬಗ್ಗೆ ಜಾಗೃತಿ ಮೂಡಬೇಕಿದೆ ಎಂದರು.

ತಹಸೀಲ್ದಾರ್ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷ ಟಿ.ಎಸ್.ಶಿವರಾಜ್ ಮಾತನಾಡಿ,ಈ ಬಾರಿ ಆರೋಗ್ಯ ಇಲಾಖೆ ಸಿಬ್ಬಂದಿ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರು ಮೊದಲಾಗಿ ಕೊವಿಡ್ ವಾರಿಯರ್‍ಸ್‌ಗಳಿಗೆ ಸನ್ಮಾನ ಮಾಡಲಾಗುವುದು.ಸಮಾರಂಭದಲ್ಲಿ ರಾಷ್ಟ್ರಗೀತೆ ಹಾಗೂ ನಾಡಗೀತೆ ಹಾಡಲು ಶಾಲಾ ಮಕ್ಕಳನ್ನು ಕರೆಸಿಕೊಳ್ಳುವ ಕುರಿತು ಪರಿಶೀಲಿಸಿ ನಿರ್ಧರಿಸಿಸೋಣ ಎಂದರು.

ಸಭೆಯಲ್ಲಿ ಡಿವೈಎಸ್‌ಪಿ ಟಿ.ರಂಗಪ್ಪ,ತಾಲೂಕು ಪಂಚಾಯಿತಿ ಪ್ರಭಾರಿ ಅಧ್ಯಕ್ಷೆ ಪದ್ಮಾವತಿ ಅಣ್ಣಯ್ಯಪ್ಪ, ಕಾರ್ಯನಿರ್ವಹಣಾಕಾರಿ ಮುರುಡಯ್ಯ, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ತಾಪಂ ಸಹಾಯಕ ನಿರ್ದೇಶಕಿ ಸಿ.ಗೀತಾಮಣಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

ರಾಜಕೀಯ

ಕಾಂಗ್ರೆಸ್ ಸರ್ಕಾರದ ವಿರುದ್ಧ ಶಾಸಕರ ಬಂಡಾಯವೆಂದು ಜೆಡಿಎಸ್ ಪ್ರತಿಭಟನೆ

ಕಾಂಗ್ರೆಸ್ ಸರ್ಕಾರದ ವಿರುದ್ಧ ಶಾಸಕರ ಬಂಡಾಯವೆಂದು ಜೆಡಿಎಸ್ ಪ್ರತಿಭಟನೆ

ರಾಜ್ಯ ಕಾಂಗ್ರೆಸ್ ಸರ್ಕಾರ (Congress government) ಅತೀವ ಬ್ರಷ್ಟಾಚಾರದ ಮುಳುಗಿದ್ದು, ವಿಧಾನಸಭೆ ಕ್ಷೇತ್ರಗಳ ಅಭಿವೃದ್ಧಿಗೆ ಬಿಡಿಗಾಸು ಕೊಡಲು ಹಣವಿಲ್ಲದ ದುಸ್ಥಿತಿಯಲ್ಲಿ ಇದೆ ಎಂದು ಜೆಡಿಎಸ್ (JDS)

[ccc_my_favorite_select_button post_id="110424"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಬಳಿ ಗೋಣಿ ಚೀಲದಲ್ಲಿ ಅಪರಿಚಿತ ಪುರುಷನ ಶವ (Unknown corpse) ಪತ್ತೆಯಾಗಿದೆ. ಬಾಶೆಟ್ಟಿಹಳ್ಳಿಯ ಪೆಟ್ರೋಲ್ ಬಂಕ್ ಹಿಂಭಾಗದ ಕಾಂಪ್ಲೆಕ್ಸ್‌ ಬಳಿ ಮೂಟೆ ಕಟ್ಟಿ ಎಸೆದಿರುವ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ, ಡಿವೈಎಸ್

[ccc_my_favorite_select_button post_id="110342"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]