ದೊಡ್ಡಬಳ್ಳಾಪುರ ತಾಲ್ಲೂಕಿನ ಆರು ಮಂದಿಗೆ ಕರೊನಾ ಸೋಂಕು ದೃಢ / ಒಂದೇ ದಿನ ವ್ಯಕ್ತಿಯೋರ್ವನಿಗೆ ಕರೊನಾ ಪಾಸಿಟಿವ್,ನೆಗೆಟಿವ್ ವರದಿ

ದೊಡ್ಡಬಳ್ಳಾಪುರ: ತಾಲೂಕಿನಲ್ಲಿ ಶನಿವಾರ ಆರು ಮಂದಿಯಲ್ಲಿ ಕರೊನಾ ಸೋಂಕು ದೃಡಪಟ್ಟಿದೆ.ಆದರೆ, ಒಂದೇ ದಿನ  ವಿಭಿನ್ನ ಆಸ್ಪತ್ರೆಯಲ್ಲಿ ಮಾಡಲಾದ ಕರೊನಾ ತಪಾಸಣೆ ವರದಿಯಲ್ಲಿ ಎರಡು ತರವಾದ ಮಾಹಿತಿ ಬಂದಿರುವುದು ಸಾರ್ವಜನಿಕ ವಲಯದಲ್ಲಿ ಅನುಮಾನ ಉಂಟುಮಾಡಿದೆ.

ತಹಶಿಲ್ದಾರ್ ಟಿ.ಎಸ್.ಶಿವರಾಜ್ ಅವರು ಬಿಡುಗಡೆ ಮಾಡಿರುವ ತಾಲೂಕಿನ ಹೆಲ್ತ್ ಬುಲೆಟಿನ ಅನ್ವಯ.ಶನಿವಾರದ ಸಂಜೆಯ ವರಗೆ ದೊಡ್ಡಬಳ್ಳಾಪುರ ತಾಲ್ಲೂಕಿನ 4 ಮಂದಿ ಗಂಡು ಹಾಗೂ ಇಬ್ಬರು  ಮಹಿಳೆಯರು ಸೇರಿ ಆರು ಜನರಿಗೆ ಕರೊನಾ ಸೋಂಕು ದೃಡಪಟ್ಟಿದೆ.

ಹರಿತಲೇಖನಿಗೆ ದೊರಕಿರುವ ವರದಿಯನ್ವಯ ಮಲ್ಲೋಹಳ್ಳಿಯಲ್ಲಿ ಇಬ್ಬರು ಸೇರಿದಂತೆ,ತಿರುಮಗೊಂಡನಹಳ್ಳಿ, ಇಸ್ತೂರು ಕಾಲೋನಿ, ಕಾಡನೂರು, ಹೊನ್ನಾವರದಲ್ಲಿ ತಲಾ ಒಬ್ಬರಿಗೆ ಕರೊನಾ ಸೋಂಕು ದೃಢಪಟ್ಟಿದೆ.

ಪ್ರಸ್ತುತ ತಾಲೂಕಿನಲ್ಲಿ 622 ಮಂದಿ ಸೋಂಕು ತಗುಲಿದ್ದು,281 ಮಂದಿ ಗುಣಮುಖರಾಗಿದ್ದರೆ 17 ಮಂದಿ ಸಾವನಪ್ಪಿದ್ದಾರೆ.

ಸೋಂಕಿಗೆ ಒಳಗಾದ 34 ಮಂದಿಯನ್ನು ದೊಡ್ಡಬಳ್ಳಾಪುರ ಕೊವಿಡ್ ಕೇರ್ ಸೆಂಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು,ಉಳಿದ 290 ಮಂದಿಯನ್ನು ದೇವನಹಳ್ಳಿ / ಹಜ್ ಭವನ/ಖಾಸಗಿ ಆಸ್ಪತ್ರೆ / ಹೊಂ ಹೈಸೋಲೇಷನ್ / ಇಸ್ತೂರಿನ ವಸತಿ ನಿಲಯ / ಬಚ್ಚಹಳ್ಳಿ ವಸತಿ ನಿಲಯ / ಬೆಂಗಳೂರಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.

ಕರೊನಾ ಸೋಂಕಿನ ವರದಿ ಯಡವಟ್ಟು / ಎರಡು ಆಸ್ಪತ್ರೆಗಳಲ್ಲಿ ಭಿನ್ನ ವರದಿ 

ವ್ಯಕ್ತಿಯೋರ್ವರಿಗೆ ಕರೊನಾ ಸೋಂಕು ದೃಢಪಟ್ಟಿದೆ ಎಂದು ಗ್ರಾಮವನ್ನು ಸೀಲ್ ಡೌನ್ ಮಾಡಲು ಬಂದ ಕರೊನಾ ವಾರಿಯರ್ಸ್‌ಗಳ ವಿರುದ್ದ ಗ್ರಾಮಸ್ಥರು ಹರಿಹಾಯ್ದಿರುವ ಘಟನೆ ತಾಲೂಕಿನ ತಿರುಮಗೊಂಡನಹಳ್ಳಿಯಲ್ಲಿ ನಡೆದಿದೆ.

ಘಟನೆ ವಿವರ

ಸ್ಥಳೀಯ ಕರೊನಾ ವಾರಿಯರ್ಸ್‌ ಹರಿತಲೇಖನಿಗೆ ನೀಡಿರುವ ಮಾಹಿತಿ ಅನ್ವಯ.ತಿರುಮಗೊಂಡನಹಳ್ಳಿಯ ವ್ಯಕ್ತಿಯೋರ್ವರು ಅಪಘಾತಕ್ಕೆ ಒಳಗಾಗಿ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ತೆರಳಿದ್ದಾರೆ.ಚಿಕಿತ್ಸೆಗೂ ಮುನ್ನ ನಡೆಸಲಾದ ಪರೀಕ್ಷೆಯ ವರದಿಯಲ್ಲಿ ಕರೊನಾ ಸೋಂಕು ದೃಡಪಟ್ಟಿದೆ ಎಂದು ಆ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದರೆ,ಅದೇ ದಿನ ಮತ್ತೊಂದು ಆಸ್ಪತ್ರೆಗೆ ಚಿಕಿತ್ಸೆಗೆ ತೆರಳಿದಾಗ ನಡೆಸಲಾದ ಪರೀಕ್ಷೆಯಲ್ಲಿ ವರದಿಯ ಕರೊನಾ ಇಲ್ಲವೆಂದು ವರದಿ ಬಂದಿದ್ದು ಚಿಕಿತ್ಸೆ ನೀಡಿದ್ದಾರೆ.

ಆದರೆ ತಾಲೂಕು ಆಡಳಿತದ ವರದಿಯಲ್ಲಿ ಆ ವ್ಯಕ್ತಿಗೆ ಸೋಂಕು ದೃಢಪಟ್ಟಿದೆ ಎಂಬ ಕಾರಣಕ್ಕೆ,ಗ್ರಾಮವನ್ನು ಸೀಲ್ಡೌನ್ ಮಾಡಲು ತೆರಳಿದಾಗ ಸ್ಥಳಿಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು,ವಾಸ್ತವ ವರದಿ ನೀಡದೆ ಕರೊನಾ ಸೋಂಕಿನ ವಿಚಾರದಲ್ಲಿ ಅನುಮಾನ ಮೂಡುತ್ತಿದೆ ಎಂದು ಹರಿಹಾಯ್ದಿದ್ದಾರೆ.

ರಾಜಕೀಯ

ತಮಿಳುನಾಡಿಗೆ ಬೆಣ್ಣೆ, ನಮಗೆ ಸುಣ್ಣ: ಕೇಂದ್ರದ ವಿರುದ್ಧ ಎಂ ಬಿ ಪಾಟೀಲ ಅಸಮಾಧಾನ

ತಮಿಳುನಾಡಿಗೆ ಬೆಣ್ಣೆ, ನಮಗೆ ಸುಣ್ಣ: ಕೇಂದ್ರದ ವಿರುದ್ಧ ಎಂ ಬಿ ಪಾಟೀಲ ಅಸಮಾಧಾನ

ತಮಿಳುನಾಡಿನ (Tamil Nadu) ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರಕಾರವು ರಾಜ್ಯದ ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ‌ ನಿಲ್ದಾಣಗಳ ಬಗ್ಗೆ ಇಂತಹ ನಿರ್ಧಾರ ಘೋಷಿಸದೆ ಇರುವುದು

[ccc_my_favorite_select_button post_id="120142"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ ಪ್ರಮಾದ

ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ

ಮುಂದೆ ಸಾಗುತ್ತಿದ್ದ ಬೈಕ್ ಸವಾರರ ಜೀವ ಉಳಿಸಲು ಮುಂದಾದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಬೆಸ್ಕಾಂ ಕೇಂದ್ರಕ್ಕೆ ಡಿಕ್ಕಿ ಹೊಡೆದಿದ್ದು (Accident) ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ದೊಡ್ಡ ಪ್ರಮಾಣದ ಅನಾಹುತವೇ ತಪ್ಪಿದೆ.

[ccc_my_favorite_select_button post_id="120119"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!