ಬೆಂ.ಗ್ರಾ.ಜಿಲ್ಲೆ: ಪಿಯುಸಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ದೊಡ್ಡಬಳ್ಳಾಪುರ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2020-21ನೇ ಸಾಲಿಗೆ ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಚ್ಚಹಳ್ಳಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ಕಾಲೇಜು ಹಾಗೂ ಹೊಸಕೋಟೆ ತಾಲ್ಲೂಕಿನ ಜಡಿಗೇನಹಳ್ಳಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ವಿಜ್ಞಾನ ಕಾಲೇಜುಗಳಿಗೆ ಪ್ರಥಮ ಪಿ.ಯು.ಸಿ. ಪ್ರವೇಶಕ್ಕಾಗಿ ಎಸ್.ಎಸ್.ಎಲ್.ಸಿ. ಪಾಸಾದ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಗಳಿಗೆ ಉಚಿತವಾಗಿ ಊಟ, ವಸತಿ, ಸಮವಸ್ತ್ರ, ಪಠ್ಯಪುಸ್ತಕ ಹಾಗೂ ಇನ್ನಿತರೆ ಮೂಲಭೂತ ಸೌಲಭ್ಯಗಳೊಂದಿಗೆ ಉಚಿತ ಸಿ.ಇ.ಟಿ. ಮತ್ತು ನೀಟ್ ಪ್ರವೇಶ ಪರೀಕ್ಷೆಗೆ ತರಬೇತಿ ನೀಡುವುದರ ಜೊತೆಗೆ ಉತ್ತಮ ಗುಣಮಟ್ಟದ ವಿದ್ಯಾಭ್ಯಾಸ ನೀಡಲಾಗುವುದು.

2020-21ನೇ ಸಾಲಿನಲ್ಲಿ ಪ್ರತಿ ವಸತಿ ಕಾಲೇಜಿನಲ್ಲಿ ಪ್ರಥಮ ಪಿ.ಯು.ಸಿ ತರಗತಿಯ ಪಿ.ಸಿ.ಎಂ.ಬಿ.(PCMB) ಮತ್ತು ಪಿ.ಸಿ.ಎಂ.ಸಿ.(PCMC) ಸಂಯೋಜನೆಗಳಿಗೆ ತಲಾ 40 ರಂತೆ ಒಟ್ಟು 80 ವಿದ್ಯಾರ್ಥಿಗಳನ್ನು ಸೇರಿಸಿಕೊಳ್ಳಲಾಗುವುದು.

ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಮತ್ತು ಪ್ರವರ್ಗ-1 ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯದ ಮಿತಿ ರೂ. 2,50,000/- ಹಿಂದುಳಿದ ವರ್ಗದ ಪ್ರವರ್ಗ 2ಎ, 2ಬಿ, 3ಎ, 3ಬಿ, ಗುಂಪಿಗೆ ಸೇರಿದ ವಿದ್ಯಾರ್ಥಿಗಳಿಗೆ ಆದಾಯದ ಮಿತಿ ರೂ. 1,00,000/- ಇರುತ್ತದೆ.

ಪ್ರವೇಶಕ್ಕಾಗಿ ಅರ್ಜಿಗಳನ್ನು ಉಪ ನಿರ್ದೇಶಕರ ಕಚೇರಿ,‌ ಕೊಠಡಿ ಸಂಖ್ಯೆ: 217, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ. ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ, ನೆಲಮಂಗಲ ಮತ್ತು ಜಿಲ್ಲೆಯ ವ್ಯಾಪ್ತಿಯಲ್ಲಿರುವ ಎಲ್ಲಾ ವಸತಿ ಶಾಲೆ ಹಾಗೂ ವಸತಿ ಪದವಿ ಪೂರ್ವ ಕಾಲೇಜುಗಳಲ್ಲಿ ಅರ್ಜಿಯನ್ನು ಪಡೆಯಬಹುದಾಗಿದೆ.

ಭರ್ತಿ ಮಾಡಿದ ಅರ್ಜಿಗಳನ್ನು ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ, ಹೊಸಕೋಟೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಮತ್ತು ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ಕಾಲೇಜು, ಬಚ್ಚಹಳ್ಳಿ, ದೊಡ್ಡಬಳ್ಳಾಪುರ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿಗೆ ಸಂಬಂಧಿಸಿದ ದಾಖಲಾತಿಗಳೊಂದಿಗೆ, ಸಲ್ಲಿಸಲು ಕೊನೆಯ ಆಗಸ್ಟ್ 22 ಕೊನೆಯ ದಿನವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ಕೊಠಡಿ ಸಂಖ್ಯೆ: 217, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ, ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ-562110 ಹಾಗೂ ದೂ.ಸಂ.: 080 29559987/ 9110256424/‌ 8971259724/ 7204463886/ 7259613001/ 9742893271 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಅಬಕಾರಿ ಹಗರಣದ ಬಗ್ಗೆ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ಏನೂ ಮಾತನಾಡಿಲ್ಲ. ಹೋರಾಟ ತಾರ್ಕಿಕ ಅಂತ್ಯ ಕಂಡಿಲ್ಲ. ವಿರೋಧ ಪಕ್ಷದ ವೈಫಲ್ಯದ ಲಾಭಆಡಳಿತ ಪಕ್ಷಕ್ಕೆ ಸಿಕ್ಕಿದೆ ಎಂದು ಶಾಸಕ ಬಸನಗೌಡ

[ccc_my_favorite_select_button post_id="119407"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!