ಬೆಂಗಳೂರು: ಶಿರಾ ಬೈ ಎಲೆಕ್ಷನ್ ಸಂಬಂಧ ಕೆಪಿಸಿಸಿ ಕಚೇರಿಯಲ್ಲಿ ತುಮಕೂರು ಜಿಲ್ಲೆಯ ಕಾಂಗ್ರೆಸ್ ಮುಖಂಡರ ಜೊತೆ ಡಿ.ಕೆ.ಶಿವಕುನಾರ್ ಸಭೆ ನಡೆಸಿದರು.
ಸಭೆಯಲ್ಲಿ ಮಾಜಿ ಸಚಿವ ಟಿಬಿ ಜಯಚಂದ್ರ, ಕೆ.ಎನ್ ರಾಜಣ್ಣ, ಷಡಾಕ್ಷರಿ, ಚಂದ್ರಪ್ಪ ಅವರು ಭಾಗವಹಿಸಿದ್ದರು.
ಈ ಸಭೆಯಲ್ಲಿ ಶಿರಾ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಟಿ.ಬಿ ಜಯಚಂದ್ರ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್, ತುಮಕೂರು ಜಿಲ್ಲೆಯ ನಾಯಕರ ಜೊತೆ ಸಭೆ ನಡೆಸಲಾಗಿದೆ. ಶಿರಾ ಉಪ ಚುನಾವಣೆಯನ್ನು ಪರಮೇಶ್ವರ್ ನೇತೃತ್ವತ್ವದಲ್ಲಿ ನಡೆಸುತ್ತೇವೆ. ರಾಜಣ್ಣ ಕೋ ಚೇರ್ಮನ್ ಆಗಿ ಸಾಥ್ ಕೊಡುತ್ತಾರೆ. ಪಕ್ಷದ ಅಭ್ಯರ್ಥಿಯಾಗಿ ಜಯಚಂದ್ರ ಇರುತ್ತಾರೆ. ರಾಜಣ್ಣನವರೇ ಜಯಚಂದ್ರ ಹೆಸರು ಸೂಚಿಸಿದ್ದಾರೆ. ಅವರ ಅಭಿಪ್ರಾಯವನ್ನು ನಾವು ಪಡೆದಿದ್ದೇವೆ. ನಮ್ಮ ವರಿಷ್ಠರಿಗೆ ಇದನ್ನೇ ಕಳಿಸಿಕೊಡುತ್ತೇವೆ. ಇಂದಿನಿಂದಲೇ ಚುನಾವಣೆ ಕಾರ್ಯ ಪ್ರಾರಂಭ ಮಾಡುತ್ತೇವೆ ಎಂದು ತಿಳಿಸಿದರು.
ಸಭೆಯಲ್ಲಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮಾಜಿ ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ ,ಮಾಜಿ ಸಚಿವ ಟಿ.ಬಿ ಜಯಚಂದ್ರ, ಬಿ.ಎನ್ ಚಂದ್ರಪ್ಪ , ಕೆ.ಎನ್ ರಾಜಣ್ಣ ಸೇರಿ ಹಲವು ನಾಯಕರಿದ್ದರು.

