ಹಾಡೋನಹಳ್ಳಿಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ರಾಷ್ಟ್ರೀಯ ಪೌಷ್ಟಿಕ ಮಾಸ

ದೊಡ್ಡಬಳ್ಳಾಪುರ: ರಾಷ್ಟ್ರಾಭಿವೃದ್ಧಿಯಲ್ಲಿ ಅಪೌಷ್ಠಿಕತೆಯು ಒಂದು ತೊಡಕಾಗಿದ್ದು, ಇದನ್ನು ಹೋಗಲಾಡಿಸುವಲ್ಲಿ ಮಹಿಳೆಯರ ಪಾತ್ರ ಮಹತ್ವದ್ದಾಗಿದೆ. ಈ ದಿಸೆಯಲ್ಲಿ ಮಹಿಳೆಯರಿಗೆ ಪೌಷ್ಠಿಕತೆಯ ಕುರಿತಾಗಿ ಜಾಗೃತಿ ಮೂಡಬೇಕಾದ ಅಗತ್ಯವಿದೆ ಎಂದು ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅನಿತಾ ಲಕ್ಷ್ಮೀ ತಿಳಿಸಿದರು.

ತಾಲೂಕಿನ ಹಾಡೋನಹಳ್ಳಿಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಇಫ್ಕೋ, ಭಾರತೀಯ ಕೃಷಿ ಅನುಸಂಧಾನ ಪರಿಷತ್ ಸಹಯೋಗದಲ್ಲಿ ರಾಷ್ಟ್ರೀಯ ಪೌಷ್ಟಿಕ ಮಾಸದ ಅಂಗವಾಗಿ ನಡೆದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ರೈತ ಮಹಿಳೆಯರಿಗೆ ಪೌಷ್ಠಿಕ ಆಹಾರದ ಬಗ್ಗೆ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ರಾಷ್ಟ್ರದೆಲ್ಲೆಡೆ ಸೆಪ್ಟೆಂಬರ್ ತಿಂಗಳನ್ನು ರಾಷ್ಟ್ರೀಯ ಪೌಷ್ಠಿಕ ಮಾಹೆಯಾಗಿ ಆಚರಣೆಯಾಗುತ್ತಿದ್ದು, ಇಂದಿನ ಮಕ್ಕಳೇ ಮುಂದಿನ ಪ್ರಜೆಗಳಾಗಿದ್ದು, ಕುಟುಂಬಗಳಲ್ಲಿ ಅರಿವು ಮೂಡಿಸುವ ಜವಾಬ್ದಾರಿ ಹೊರುವಲ್ಲಿ ಹಾಗೂ ರೂಡಿಸುವಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಸಮರ್ಥರು ಎಂದು ಭಾವಿಸಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಕಾರ್‍ಯಕ್ರಮ ಆಯೋಜಿಸಿರುವುದು ಅರ್ಥಪೂರ್ಣವಾಗಿದೆ ಎಂದ ಅವರು ಪೌಷ್ಠಿಕ ಆಹಾರದ ಅಗತ್ಯತೆ ಬಗ್ಗೆ ಸಾರ್ವಜನಿಕರಿಗೆ ತಿಳಿಸುವ ಉದ್ಧೇಶದಿಂದ ಮಿತವಾಗಿ ತಿನ್ನಿ, ಹಿತವಾಗಿ ತಿನ್ನಿ ಎನ್ನುವುದು ಈ ವರ್ಷದ ಆಚರಣೆಯ ಧ್ಯೇಯ ವಾಕ್ಯವಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಎ.ಪಿ. ಮಲ್ಲಿಕಾರ್ಜುನ ಗೌಡ ಮಾತನಾಡಿ, ಈಗ ಆಹಾರ ಪದಾರ್ಥಗಳ ಉತ್ಪಾದನೆಯಲ್ಲಿ ದೇಶವು ಸ್ವಾವಲಂಬನೆಯನ್ನು ಹೊಂದಿದ್ದು, ಪೋಷಕಾಂಶಗಳ ಭದ್ರತೆ ಬಗ್ಗೆ ಇನ್ನು ಸಾಧಿಸಬೇಕಾಗಿರುವುದು ಬಹಳಷ್ಟಿದೆ. ಉತ್ತಮ ಆರೋಗ್ಯಕ್ಕೆ ಬೇಕಾಗುವ ಸಮತೋಲನ ಪೌಷ್ಠಿಕ ಆಹಾರದ ಸೇವನೆಯ ಅಗತ್ಯವಾಗಿದೆ. ಅಪೌಷ್ಠಿಕತೆಯಿಂದ ಕಾಡುವ ಸಮಸ್ಯೆಗಳು ಮತ್ತು ಅವುಗಳ ನಿವಾರಣೆ ಹಾಗೂ ಶರೀರದ ಅವಶ್ಯಕತೆಗಳನ್ನು ಪೂರೈಸುವ ಆಹಾರ ಪದಾರ್ಥಗಳ ಬಗ್ಗೆ ಅರಿಯಬೇಕಿದೆ ಎಂದರು.

ಇಫ್ಕೋ ಕ್ಷೇತ್ರಾಧಿಕಾರಿ ಎಚ್.ಎಂ.ಸತೀಶ್ ಕುಮಾರ್ ಮಾತನಾಡಿ,  ವಿಶ್ವದಲ್ಲಿ ಉಲ್ಬಣಗೊಳ್ಳುತ್ತಿರುವ ಕೋವಿಡ್-19 ವೈರಾಣುವನ್ನು ನಿಯಂತ್ರಿಸಲು ವೈಯುಕ್ತಿಕ ಸ್ವಚ್ಚತೆಯ ಬಗ್ಗೆ ತಿಳಿಸಿ, ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪ್ರತಿಯೊಬ್ಬರಿಗೂ ಮಾಸ್ಕ್ ಮತ್ತು ತರಕಾರಿ ಬೀಜಗಳ ಕಿಟ್‌ಗಳನ್ನು ವಿತರಿಸಿದರು.

ತಾಂತ್ರಿಕ ಸಮಾವೇಶದಲ್ಲಿ ಪೌಷ್ಟಿಕ ಕೈತೋಟದ ಮಾದರಿಗಳು, ಪೌಷ್ಟಿಕಾಂಶ ಭದ್ರತೆಗಾಗಿ ಸಮತೋಲನ ಆಹಾರ ಪದ್ಧತಿ ಮತ್ತು ಪೋಷಣೆಗಾಗಿ ಜೈವಿಕ ಬಲವರ್ಧಕಗಳು, ಹಣ್ಣು ಮತ್ತು ತರಕಾರಿ ಬೆಳೆಗಳ ಸುಧಾರಿತ ಬೇಸಾಯ ಕ್ರಮಗಳ ಬಗ್ಗೆ ಮಾಹಿತಿ ನೀಡಲಾಯಿತು. ನಂತರ ಸಿರಿಧಾನ್ಯಗಳ ಮೌಲ್ಯವರ್ಧಿತ ಉತ್ಪನ್ನಗಳ ತಯಾರಿಕೆ ಬಗ್ಗೆ ಪ್ರಾಯೋಗಿಕ ತರಬೇತಿ ನೀಡಲಾಯಿತು.

ಕಾರ್ಯಕ್ರಮದಲ್ಲಿ ಪೋಷಣ್ ಅಭಿಯಾನ ಯೋಜನಾ ಸಹಾಯಕ ಲಕ್ಷ್ಮಿಪತಿ,  ಕೃಷಿ ವಿಜ್ಞಾನ ಕೇಂದ್ರದ ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತೆಯರು ಮತ್ತು ರೈತ ಮಹಿಳೆಯರು ಭಾಗವಹಿಸಿದ್ದರು.

ರಾಜಕೀಯ

ಬೆಂಗಳೂರು ಗ್ರಾಮಾಂತರ ಜಿ.ಪಂ ಸೇರಿ 8 ಕ್ಷೇತ್ರಗಳ ಪುನರ್ ವಿಂಗಡಣೆ

ಬೆಂಗಳೂರು ಗ್ರಾಮಾಂತರ ಜಿ.ಪಂ ಸೇರಿ 8 ಕ್ಷೇತ್ರಗಳ ಪುನರ್ ವಿಂಗಡಣೆ

ಬೆಂಗಳೂರು ಗ್ರಾಮಾಂತರ ಸೇರಿದಂತೆ ಎಂಟು ಜಿಲ್ಲೆಗಳ ಜಿಲ್ಲಾ ಪಂಚಾಯಿತಿ (Z.P) ಕ್ಷೇತ್ರಗಳ (Constituencies) ಗಡಿ ಗುರುತಿಸಿ ಮತ್ತು ಚುನಾಯಿತ ಸದಸ್ಯರ ಸಂಖ್ಯೆ ನಿಗದಿಪಡಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.

[ccc_my_favorite_select_button post_id="121409"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ಗ್ರಾಮದ ಲಾಡ್ಜ್ ಒಂದರ ಮೇಲೆ ಪೊಲೀಸರು ದಾಳಿ (Police Raid) ನಡೆಸಿದ್ದು, ವೇಶ್ಯಾವಾಟಿಕೆ (Prostitution) ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿದ್ದಾರೆ. ದಾಳಿಯ ವೇಳೆ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ.

[ccc_my_favorite_select_button post_id="121407"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]