ದೊಡ್ಡಬಳ್ಳಾಪುರ: ಪ್ರಧಾನಿ ನರೇಂದ್ರ ಮೋದಿ ಅವರ 70ನೇ ಜನ್ಮ ದಿನಾಚರಣೆಯನ್ನು ಬಿಜೆಪಿ ಜಿಲ್ಲಾ ಯುವ ಮೋರ್ಚಾ ವತಿಯಿಂದ ತಾಲೂಕಿನ ರಾಜಘಟ್ಟದ ಆಂಜನೇಯ ದೇವಾಲಯದ ಆವರಣದಲ್ಲಿ ಸ್ವಚ್ಛತಾ ಕಾರ್ಯ ಮಾಡುವ ಮೂಲಕ ಆಚರಿಸಲಾಯಿತು.
ಜಿ ಯುವ ಮೋರ್ಚಾ ಉಪಾಧ್ಯಕ್ಷ ವಿಶ್ವಾಸ್ ಗೌಡ ಮಾತನಾಡಿ, ದೇಶ ಕಂಡ ಅಪ್ರತಿಮ ಪ್ರಧಾನಿ ನರೇಂದ್ರ ಮೋದಿ ಅವರು ಕೋವಿಡ್ ಸಂಕಷ್ಟದಲ್ಲಿಯೂ ದೇಶವನ್ನು ಮುನ್ನೆಡೆಸುತ್ತಿದ್ದಾರೆ. ಇವರ ಜನ್ಮ ದಿನವನ್ನು ಸೇವಾ ದಿನಾಚರಣೆಯನ್ನಾಗಿ ಆಚರಿಸುತ್ತಿರುವುದು ಅರ್ಥಪೂರ್ಣವಾಗಿದ್ದು, ಬಿಜೆಪಿ ಕಾರ್ಯಕರ್ತರು ಹಾಗೂ ಮೋದಿ ಅಭಿಮಾನಿಗಳು ವಿವಿಧ ಸೇವಾ ಕಾರ್‍ಯಗಳನ್ನು ಕೈಗೊಂಡಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ಕಿರಣ, ಅನಿಲ, ಅಜಯ, ಲೋಕೇಶ, ಚಂದನ, ವಿನಯ, ನರೇಶ, ಯಶವಂತ, ಜನಪರಮಂಜು, ಮನು, ಶಿವು ಹಾಗೂ ಯುವ ಮೋರ್ಚಾ ಪದಾಧಿಕಾರಿಗಳು ಭಾಗವಹಿಸಿದ್ದರು.

