ದೊಡ್ಡಬಳ್ಳಾಪುರ: ಸುಗ್ರೀವಾಜ್ಞೆ ಮೂಲಕ ರೈತ ವಿರೋಧಿ ಕಾಯ್ದೆ ಜಾರಿಯ ವಿರುದ್ದ ವಿಧಾನ ಸೌಧ ಮುತ್ತಿಗೆ

ದೊಡ್ಡಬಳ್ಳಾಪುರ: ಇಡೀ ದೇಶದ ಜನ ಕೊರೊನಾ ಮಹಾಮಾರಿಯ ಸಂಕಷ್ಟದಲ್ಲಿ ಸಿಲುಕಿರುವ ಸಂದರ್ಭದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತ ವಿರೋಧಿ ಶಾಸನಗಳನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿರುವುದು ಪ್ರಜಾಪ್ರಭುತ್ವ ವಿರೋಧಿ ಆಡಳಿತವಾಗಿದೆ ಎಂದು ರಾಜ್ಯ ರೈತ ಸಂಘದ ಜಿಲ್ಲಾ ಅಧ್ಯಕ್ಷ ಆರ್.ಪ್ರಸನ್ನ ದೂರಿದ್ದಾರೆ.

ಅವರು ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ ವಿರೋಧಿ ಕಾಯ್ದೆಗಳನ್ನು ಹಿಂದಕ್ಕೆ ಪಡೆಯುವಂತೆ ಆಗ್ರಹಿಸಿ ಸ.21 ರಂದು ವಿವಿಧ ಸಂಘಟನೆಗಳೊಂದಿಗೆ ವಿಧಾನ ಸೌಧ ಮುತ್ತಿಗೆ ಹಾಕಲಾಗುವುದು. ನಮ್ಮ ಮನವಿಗೆ ಸರ್ಕಾರ ಸ್ಪಂಧಿಸದೇ ಇದ್ದರೆ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಹೇಳಿದರು.

ಚೀನಾ ಸೈನಿಕರು ನಮ್ಮ ಗಡಿಯಲ್ಲಿ ನುಗ್ಗಿ ನಮ್ಮ ಯೋಧರನ್ನು ಕೊಂದಾಗ ದೇಶದ ಭದ್ರತೆಯ ಕಡೆಗೆ ಇಡೀ ದೇಶದ ಜನ ಚಿಂತಿಸುತ್ತಿದ್ದರು. ಆದರೆ ಪ್ರಧಾನ ಮಂತ್ರಿ ನರೇಂದ್ರಮೋದಿ ಮಾತ್ರ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಕಾರ್ಪೋರೇಟ್ ಕಂಪನಿಗಳಿಗೆ ಲಾಭ ಮಾಡಿಕೊಡುವ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರುವಲ್ಲಿ ಉತ್ಸುಕರಾಗಿದ್ದರು. ಇದೇ ರೀತಿ ರಾಜ್ಯ ಸರ್ಕಾರ ಭೂ ಸೂಧಾರಣ  ತಿದ್ದುಪಡಿ ಕಾಯ್ದೆ ಸಹ ರೈತರನ್ನು ಕೃಷಿಯಿಂದ ಒಕ್ಕಲೆಬ್ಬಿಸುವುದೇ ಆಗಿದೆ ಎಂದರು.

ರಾಜ್ಯ ರೈತ ಸಂಘದ ರಾಜ್ಯ ಘಕದ ಉಪಾಧ್ಯಕ್ಷ ವೆಂಕಟನಾರಾಯಣಪ್ಪ ಮಾತನಾಡಿ, ವಿದ್ಯುತ್ ಕಂಪನಿಗಳನ್ನು ಸಂಪೂರ್ಣವಾಗಿ ಖಾಸಗಿ ಕಂಪನಿಗಳಿಗೆ ವಹಿಸುವ ಮೂಲಕ ಕೃಷಿಗೆ ಉಚಿತ ವಿದ್ಯುತ್ ಪೂರೈಕೆ ನಿಲ್ಲಿಸಲು ಸರ್ಕಾರ ಸಿದ್ದತೆಗಳನ್ನು ನಡೆಸಿದೆ. ರೈತ ವಿರೋಧಿ ಕಾಯ್ದೆಗಳ ಜಾರಿ ಮೂಲಕ ರೈತರು ಕೃಷಿಯಿಂದ ತಾವಾಗಿಯೇ ವಿಮುಖರಾಗುವಂತೆ ಮಾಡಲಾಗುತ್ತಿದೆ. ಇಂತಹ ರೈತ ವಿರೋಧಿ ನೀತಿಗಳ ವಿರುದ್ದ ರಾಜ್ಯದ ಎಲ್ಲಾ ಸಂಘಟನೆಗಳು ಒಟ್ಟುಗೂಡಿ ಬೆಂಗಳೂರಿನಲ್ಲಿ ಸೆ.21 ರಂದು ನಡೆಸುತ್ತಿರುವ ಐತಿಹಾಸಿಕ ಹೋರಾಟಕ್ಕೆ ರೈತರಷ್ಟೇ ಅಲ್ಲದೆ ಎಲ್ಲಾ ವರ್ಗದ ಜನರು ಬೆಂಬಲಿಸಬೇಕಿದೆ ಎಂದು ಮನವಿ ಮಾಡಿದರು. 

ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಸತೀಶ್, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಆರ್.ಎಸ್.ಸತೀಶ್, ತಾಲ್ಲೂಕು ಕಾರ್ಯದರ್ಶಿ ಶಿವರಾಜ್ ಶಿವಪುರ, ದೇವನಹಳ್ಳಿ ರೈತ ಸಂಘದ ಪ್ರಧಾನ ಕಾರ್ಯದರ್ಶಿ ರಮೇಶ್, ತೂಬಗೆರೆ ಹೋಬಳಿ ಘಟಕದ ಅಧ್ಯಕ್ಷ ಮುನಿನಾರಾಯಣಪ್ಪ, ಮುಖಂಡರಾದ ವಸಂತ್, ವಾಸು, ಶಿರವಾರರವಿ, ಕಾಂತರಾಜ್,ಮಹದೇವ್,ಕುಮಾರ್ ಇದ್ದರು.

ರಾಜಕೀಯ

ಅಣ್ಣಾವ್ರ ಹೆಸರು ಹೇಳೋಕೆ ಚೇತನ್‌ಗೆ ಯೋಗ್ಯತೆ ಇಲ್ಲ: ನಿಖಿಲ್ ಕುಮಾರಸ್ವಾಮಿ ಕಿಡಿ

ಅಣ್ಣಾವ್ರ ಹೆಸರು ಹೇಳೋಕೆ ಚೇತನ್‌ಗೆ ಯೋಗ್ಯತೆ ಇಲ್ಲ: ನಿಖಿಲ್ ಕುಮಾರಸ್ವಾಮಿ ಕಿಡಿ

ಅಣ್ಣಾವ್ರ ಹೆಸರು ಹೇಳೋದಕ್ಕೆ ಚೇತನ್ (Chethan) ಅವರಿಗೆ ಯೋಗ್ಯತೆ ಇಲ್ಲ, ಅವರೊಬ್ಬ ಪ್ರಚಾರ ಪ್ರಿಯರು. ಡಾ. ರಾಜ್ ಕುಮಾರ್ (Dr. Rajkumar) ಅವರ ಸ್ಮಾರಕ ಬಗ್ಗೆ ಮಾತನಾಡಲು ಅವರು ಯೋಗ್ಯರಲ್ಲ" ಎಂದು ಯುವ ಜನತಾದಳ

[ccc_my_favorite_select_button post_id="121430"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ಗ್ರಾಮದ ಲಾಡ್ಜ್ ಒಂದರ ಮೇಲೆ ಪೊಲೀಸರು ದಾಳಿ (Police Raid) ನಡೆಸಿದ್ದು, ವೇಶ್ಯಾವಾಟಿಕೆ (Prostitution) ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿದ್ದಾರೆ. ದಾಳಿಯ ವೇಳೆ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ.

[ccc_my_favorite_select_button post_id="121407"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]