ಬೆಂಗಳೂರು: ಭೂ ಸುಧಾರಣಾ ಕಾಯ್ದೆ ಎಪಿಎಂಸಿ ಕಾಯ್ದೆ ಹಾಗೂ ವಿದ್ಯುತ್ ಕಾಯ್ದೆಗೆ ತಿದ್ದುಪಡಿ ವಿರೋಧಿಸಿ ಸಾವಿರಾರು ರೈತರು ನಗರದಲ್ಲಿ ಬೃಹತ್ ಪ್ರತಿಭಟನೆ ಆರಂಭಿಸಿದ್ದಾರೆ.
ನಗರದ ಸ್ವಾತಂತ್ರ್ಯ ಉದ್ಯಾನ ಎದುರಿನ ರಸ್ತೆಯಲ್ಲಿ ಕುಳಿತು ರಾಜ್ಯ ಸರ್ಕಾರದ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ,ಸೋಮವಾರ ಬೆಳಿಗ್ಗೆ ನಗರ ರೈಲು ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನದವರೆಗೂ ರೈತರು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಈ ವೇಳೆ ಮಾತನಾಡಿದ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ರೈತರು ಹಾಗೂ ಕೃಷಿ ವಿರೋಧಿ ನೀತಿಗಳನ್ನು ಅನುಸರಿಸುತ್ತಿವೆ. ಇದರ ವಿರುದ್ಧ ನಮ್ಮ ಈ ಪ್ರತಿಭಟನೆ ಎಂದರು.
ರೈತರ ಪ್ರತಿಭಟನೆ ಹಿನ್ನೆಲೆ ಸಿಲಿಕಾನ್ ಸಿಟಿಯಲ್ಲಿ ಹೆಜ್ಜೆ ಹೆಜ್ಜೆಗೂ ಪೊಲೀಸರನ್ನ ನಿಯೋಜನೆ ಮಾಡಲಾಗಿದ್ದು,ಮೆಜೆಸ್ಟಿಕ್ ರೈಲ್ವೇ ನಿಲ್ದಾಣದಿಂದ ಫ್ರೀಡಂ ಪಾರ್ಕ್ ವರೆಗೆ 5೦೦ಕ್ಕೂ ಹೆಚ್ಚು ಪೊಲೀಸರ ನಿಯೋಜಿಸಿದೆ.

